Subscribe to Updates
Get the latest creative news from FooBar about art, design and business.
Author: kannadanewsnow57
ಚಾಮರಾಜನಗರ : ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆಯಲ್ಲಿ, ಪೋಷಕರು ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿರುವ ಘಟನೆ ಹೊಮ್ಮ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಇದೀಗ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಒಂದಕ್ಕೆ ಕುಸಿತವಾಗಿದೆ. ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಟಿಸಿ ಪಡೆದು ಪೋಷಕರು ಮಕ್ಕಳನ್ನು ಬೇರೆ ಬೇರೆ ಶಾಲೆಗೆ ಸೇರಿಸಿದ್ದಾರೆ. ಹಾಗಾಗಿ ಇದೀಗ ಹೊಮ್ಮ ಸರ್ಕಾರಿ ಪ್ರಾಥಮಿಕ ಶಾಲೆ ಮುಚ್ಚುವ ಹಂತಕ್ಕೆ ಬಂದಿದೆ. ಕಳೆದ 2024 25 ನೇ ಶೈಕ್ಷಣಿಕ ವರ್ಷದಲ್ಲಿ 22 ವಿದ್ಯಾರ್ಥಿಗಳಿದ್ದರು. ಈಗಾಗಲೇ ಪೋಷಕರು 12 ವಿದ್ಯಾರ್ಥಿಗಳ ಟಿಸಿ ಪಡೆದಿದ್ದಾರೆ ಉಳಿದವರಿಂದಲೂ ಟಿಸಿ ಪಡೆಯಲು ಶಾಲೆಗೆ ಅರ್ಜಿ ಸಲ್ಲಿಕೆಯಾಗಿದೆ. ಶಾಲೆಯಲ್ಲಿ ಇದೀಗ ಕೇವಲ ಒಬ್ಬ ವಿದ್ಯಾರ್ಥಿ ಮತ್ತು ಇಬ್ಬರು ಶಿಕ್ಷಕರು ಮಾತ್ರ ಇದ್ದಾರೆ. ಈ ಹಿಂದೆ ಶಿಕ್ಷಕರು ಸರಿಯಾಗಿ ಪಾಠ ಮಾಡುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು. ಸರ್ಕಾರಿ ಶಾಲೆ ಶಿಕ್ಷಕರ ವಿರುದ್ಧ ಪೋಷಕರು ಪ್ರತಿಭಟನೆ ಮಾಡಿದ್ದರು. ಆದರೆ ಇದೀಗ ಮುಖ್ಯ ಅಡುಗೆ ಸಿಬ್ಬಂದಿಯಾಗಿ…
ಬೆಳಗಾವಿ : ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. ಮೊದಲು ಶಿಕ್ಷಕರು ಗಂಭೀರತೆಯನ್ನು ಅರ್ಥಮಾಡಿಕೊಳ್ಳದಿದ್ದರೂ, ಹೃದಯಾಘಾತದ ಲಕ್ಷಣಗಳು ಕಾಣುತ್ತಿದ್ದಂತೆಯೇ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಮುಂದಾದರು ಪೋಷಕರ ಸಹಕಾರದಿಂದ ಕೂಡಲೇ ಅಥಣಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಯಿತು. ಆದರೆ ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವಲ್ಲಿಯೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಬೇಡರ ಹಟ್ಟಿ ಗ್ರಾಮದ ವಿದ್ಯಾರ್ಥಿನಿ ರೇಣುಕಾ ಸಾವನ್ನಪ್ಪಿದ್ದಾಳೆ. ಘಟನೆ ಕುರಿತಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ : ಕಲಬುರಗಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಲಬುರಗಿ ನಗರದ ಹೊರವಲಯದ ಪಟ್ನಾ ಗ್ರಾಮದ ಬಳಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಿದ್ಧಾರೂಢ(32), ಜಗದೀಶ(25), ರಾಮಚಂದ್ರ(35) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಲೆಯಾದ ಮೂವರು ವ್ಯಕ್ತಿಗಳು ಸಂಬಂಧಿಕರಾಗಿದ್ದಾರೆ. ಸ್ಥಳಕ್ಕೆ ಸಬ್ ಅರ್ಬನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನವದೆಹಲಿ : ದೇಶಕ್ಕೆ ಜಿಎಸ್ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ.ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಷ್ಟ್ರಪತಿಗಳು ಹಾಗೂ ಕೇಂದ್ರ ವಿತ್ತ ಸಚಿವರ ಭೇಟಿಯ ನಂತರ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಸಿಎಂ ಸಿದ್ದರಾಮಯ್ಯ,ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಗಳ ಬಗ್ಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಇಂದು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದು, ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14ನೇ ಹಣಕಾಸು ಆಯೋಗದಲ್ಲಿ 4.7% ತೆರಿಗೆ ಹಂಚಿಕೆಯಾಗಿತ್ತು. 15ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ…
ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25 ರ ಇಂದಿನಿಂದ ಜೂನ್ 29 ರವರೆಗೆ UGC NET ಜೂನ್ 2025 ಪರೀಕ್ಷೆಯನ್ನು ನಡೆಸಲು ಸಜ್ಜಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯು ಪ್ರತಿದಿನ ಎರಡು ಪಾಳಿಗಳಲ್ಲಿ ನಡೆಯಲಿದೆ: ಮೊದಲನೆಯದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಎರಡನೆಯದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ನಡೆಯಲಿದ್ದು, ಅಭ್ಯರ್ಥಿಗಳು ಪರೀಕ್ಷಾ ದಿನದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪರೀಕ್ಷೆಯ ರಚನೆ ಮತ್ತು ನಮೂನೆ UGC NET ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿದೆ – ಪೇಪರ್ I ಮತ್ತು ಪೇಪರ್ II – ಯಾವುದೇ ವಿರಾಮವಿಲ್ಲದೆ ಒಂದೇ ಮೂರು ಗಂಟೆಗಳ ಅವಧಿಯಲ್ಲಿ ನಡೆಸಲಾಗುತ್ತದೆ. ಎರಡೂ ಪತ್ರಿಕೆಗಳಲ್ಲಿ ಬಹು ಆಯ್ಕೆಯ ಪ್ರಶ್ನೆಗಳು (MCQಗಳು) ಸೇರಿವೆ: ಪತ್ರಿಕೆ I: 50 ಪ್ರಶ್ನೆಗಳು, 100 ಅಂಕಗಳು – ಸಾಮಾನ್ಯ ಬೋಧನೆ ಮತ್ತು ಸಂಶೋಧನಾ ಯೋಗ್ಯತೆಯ ಪರೀಕ್ಷೆಗಳು ಪತ್ರಿಕೆ II: 100 ಪ್ರಶ್ನೆಗಳು, 200 ಅಂಕಗಳು…
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ…
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಗ್ರಾಮಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹಾಗೂ 2, ಮತ್ತು ದ್ವಿತೀಯ ದರ್ಜೆ ಲೆಕ್ಕಸಹಾಯಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ನಿಗದಿಯಾಗಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ಶೇ.9 ಕಡ್ಡಾಯ ಸಾರ್ವಜನಿಕ ಹಿತಾಸಕ್ತಿ, ಸಾಮಾನ್ಯ ಕೋರಿಕೆ ವರ್ಗಾವಣೆ ಹಾಗೂ ಶೇ.6 ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ಜೂ.23ರಿಂದ ಜು.28ರವರೆಗೆ ನಡೆಯಲಿದೆ ಎಂದಿದ್ದಾರೆ. ವರ್ಗಾವಣೆ ಹಾಗೂ ವಿಸ್ತರಣೆಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ ಜೂ.23. ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಜೂ.24ಕ್ಕೆ ಪ್ರಕಟವಾಗಲಿದೆ. ಅರ್ಹರು ಹಾಗೂ ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿಗೆ ಆಯಾ ಜಿಪಂ ಸಿಇಒಗೆ ಅಪೀಲ್ ಸಲ್ಲಿಸಲು ಜೂ.26 ಕಡೇ ದಿನವಾಗಿದ್ದು, ಅಂತಿಮ ಪಟ್ಟಿ ಜೂ.30ಕ್ಕೆ ಪ್ರಕಟವಾಗಲಿದೆ. ತಿರಸ್ಕೃತ ವರ್ಗಾವಣೆ, ವಿಸ್ತರಣೆ ಅರ್ಜಿಗಳಿಗೆ ಅಪೀಲು ಸಲ್ಲಿಸಲು ಜು.9 ಕೊನೇ ದಿನ. ಸಾರ್ವಜನಿಕ ಹಿತಾಸಕ್ತಿಯ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿ ಹಾಗೂ ವಿಶೇಷ ಪ್ರಕರಣಗಳ…
ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯ ಮನೆಗೆ ಗುತ್ತಿಗೆದಾರನ ಸಂಬಂಧಿಕರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಗುತ್ತಿಗೆದಾರ ಶಿವನಾಂದ ಕುನ್ನೂರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಸಂಬಂಧಿಕರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಗ್ಗಾಂವಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಆರೋಪಿ ನಾಗರಾಜ್ ಮನೆಗೆ ಸಂಬಂಧಿಕರು ಬೆಂಕಿ ಹಚ್ಚಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ…
ಮಂಗಳವಾರ ನಡೆದ ಏಕದಿನ ಸ್ಪರ್ಧೆಯಲ್ಲಿ 85.29 ಮೀಟರ್ ದೂರ ಎಸೆಯುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಒಸ್ಟ್ರಾವಾ ಗೋಲ್ಡನ್ ಸ್ಪೈಕ್ 2025 ರ ಕೂಟದಲ್ಲಿ ಜಾವೆಲಿನ್ ಥ್ರೋ ಪ್ರಶಸ್ತಿಯನ್ನು ಗೆದ್ದರು. ಆರು ಸುತ್ತುಗಳ ನಂತರ 85.29 ಮೀಟರ್ ದೂರ ಎಸೆದು ಅಜೇಯರಾಗಿ ಉಳಿದ ನೀರಜ್, ಈ ಋತುವಿನಲ್ಲಿ ಮತ್ತೊಂದು ಅತ್ಯುತ್ತಮ ಪೋಡಿಯಂ ಫಿನಿಶ್ ಗಳಿಸುವ ಮೂಲಕ ಪ್ರತಿಷ್ಠಿತ ಕೂಟದಲ್ಲಿ ಒಂದು ಎಸೆತ ಬಾಕಿ ಇರುವಾಗಲೇ ಗೆಲುವು ಸಾಧಿಸಿದರು. ಕೆಲವು ದಿನಗಳ ಹಿಂದೆ ಪ್ಯಾರಿಸ್ ಡೈಮಂಡ್ ಲೀಗ್ ಕೂಟದಲ್ಲಿ ಗೆದ್ದ ನಂತರ ನೀರಜ್ ಅವರಿಗೆ ಇದು ಎರಡನೇ ಪ್ರಶಸ್ತಿಯಾಗಿದೆ. ಹರ್ಯಾಹದ 27 ವರ್ಷದ ನೀರಜ್ ತಮ್ಮ ಮೂರನೇ ಸರದಿಯಲ್ಲಿ ಮೊದಲ ಸ್ಥಾನ ಪಡೆದು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಿದರು, ಆದರೆ ದಕ್ಷಿಣ ಆಫ್ರಿಕಾದ ಡೌವ್ ಸ್ಮಿಟ್ 84.12 ಮೀ ಮತ್ತು ಗ್ರಾನಡಾದ ಆಂಡರ್ಸನ್ ಪೀಟರ್ಸ್ 83.63 ಮೀ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದರು. ಟೋಕಿಯೊ…
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರು ರಾಜ್ಯದ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು 2025-26ನೇ ಸಾಲಿನ ವರ್ಗಾವಣೆಗೆ ಜೂ.25ರ ಇಂದಿನಿಂದ ಕೌನ್ಸೆಲಿಂಗ್ ಆರಂಭವಾಗಲಿದೆ. ಕಡಿಮೆ ಮಕ್ಕಳ ದಾಖಲಾತಿ ಇರುವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನೂ ವರ್ಗಾವಣೆಗೆ ಲಭ್ಯವಿರುವ ಪಟ್ಟಿಯಲ್ಲಿ ತೋರಿಸದಿದ್ದರೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಾಕಷ್ಟು ಸಮಸ್ಯೆಯಾಗಬಹುದು. ಹಾಗಾಗಿ ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಮತ್ತು ಶೂನ್ಯ ದಾಖಲಾತಿ ಹೊಂದಿರುವ ಕಾಲೇಜಿನ ಉಪನ್ಯಾಸಕರ, ಕೋರಿಕೆ ವರ್ಗಾವಣೆ ಯಲ್ಲಿ 40ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಗ್ರಾಮೀಣ ಪ್ರದೇಶದ ಕಾಲೇಜಿನ ಖಾಲಿ ಹುದ್ದೆ ವರ್ಗಕ್ಕೆ ಆಯ್ಕೆ ಮಾಡಿಕೊಳ್ಳಲು ಅವಕಾಶಕ್ಕಾಗಿ ಸಂಘ ಆಗ್ರಹಿಸಿದೆ. ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳಲ್ಲಿಖಾಲಿ ಹುದ್ದೆಗಳನ್ನೂ ವರ್ಗಾವಣೆಗೆ ಪರಿಗಣಿಸುವಂತೆ ರಾಜ್ಯ ಪಿಯು ಉಪನ್ಯಾಸಕರ ಸಂಘ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದೆ.