Author: kannadanewsnow57

ಮಂಗಳೂರು: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ 11ಗಂಟೆಗೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಪೊಲೀಸರ ಜೊತೆಗೆ ಜಿ ಪರಮೇಶ್ವರ್ ಅವರು ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪರಮೇಶ್ವರ್ ಸಭೆ ನಡೆಸಲಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಜಿಲ್ಲಾ…

Read More

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈ ವರ್ಷ ಮುಂಗಾರುಪೂರ್ವದಲ್ಲಿಯೇ ಡೆಂಘ ಪ್ರಕರಣಗಳು ಹೆಚ್ಚಾಗಿದ್ದು, 4 ತಿಂಗಳಲ್ಲಿ ಬರೋಬ್ಬರಿ 1,201 ಮಂದಿಯಲ್ಲಿ ಜ್ವರ ದೃಢಪಟ್ಟಿದೆ. ಹೌದು, ರಾಜ್ಯಾದ್ಯಂತ ಇದುವರೆಗೂ 24,296 ಮಂದಿಯ ರಕ್ತದ ಮಾದರಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿಹೆಚ್ಚು 485 ಪ್ರಕರಣ ದೃಢಪಟ್ಟಿದ್ದು, ತುಮಕೂರು 78, ಕಲಬುರಗಿ 65, ಶಿವಮೊಗ್ಗ 49, ಧಾರವಾಡ 47, ಚಿತ್ರದುರ್ಗ 43, ಬಳ್ಳಾರಿ 41 ಸೇರಿ ರಾಜ್ಯದ ಎಲ್ಲ # 4 ತಿಂಗಳಲ್ಲಿ 1,201 ಜಿಲ್ಲೆಗಳಲ್ಲೂ ಡೆಂಘ ‌ ವರದಿಯಾಗಿದ್ದು, ಪ್ರಕರಣಗಳು ದೃಢ 1,201 ಮಂದಿ ಸೋಂಕಿನಿಂದ ಬಳಲಿದ್ದಾರೆ. ಕಳೆದ ವರ್ಷಾಂತ್ಯಕ್ಕೆ 32 ಸಾವಿರಕ್ಕೂ ಅಧಿಕ ಡೆಂಘಿ ಪ್ರಕರಣ ವರದಿಯಾಗಿತ್ತು. 16 ಮಂದಿ ಮೃತಪಟ್ಟಿದ್ದರು. ಈ ವರ್ಷ ಏಪ್ರಿಲ್‌ನಲ್ಲಿ ಸುರಿದ ಮಳೆಯಿಂದಾಗಿ ಮುಂಗಾರು ಪೂರ್ವದಲ್ಲಿಯೇ ಪ್ರಕರಣಗಳು ಹೆಚ್ಚಳವಾಗುವಾಗಿದ್ದು, ಈಗಾಗಲೆ ಆರೋಗ್ಯ ಇಲಾಖೆಯು ಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಲಾರ್ವ ಪತ್ತೆ ಮತ್ತು ನಾಶ ಪಡಿಸುವ ಕಾರ್ಯ ಕೈಗೊಂಡಿದೆ. ಸಾರ್ವಜನಿಕರೇ ತಪ್ಪದೇ ಈ…

Read More

ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು ಹೊಸದಾಗಿ ಮದುವೆಯಾದ…

Read More

ಕೋಝಿಕ್ಕೋಡ್ : ಕೇರಳದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಈ ವೇಳೆ ದಟ್ಟ ಹೊಗೆಯಿಂದ ಉಸಿರುಗಟ್ಟಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ, ಮೃತರ ಕುಟುಂಬದವರೊಂದಿಗೆ ಮಾತನಾಡಿದ್ದು, ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಶಾಸಕ ಟಿ ಸಿದ್ದಿಕ್ ಮಾಹಿತಿ ನೀಡಿದ್ದಾರೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ತುರ್ತು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುರ್ತು ಚಿಕಿತ್ಸಾ ವಿಭಾಗದಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕೆಯಾಗಿ 200 ಕ್ಕೂ ಹೆಚ್ಚು ರೋಗಿಗಳನ್ನು ತುರ್ತು ಚಿಕಿತ್ಸಾ ವಿಭಾಗದಿಂದ ತುರ್ತು ವೈದ್ಯಕೀಯ ಉಪಕರಣಗಳೊಂದಿಗೆ ಸ್ಥಳಾಂತರಿಸಲಾಗಿದ್ದು, ಸದ್ಯ ಗಾಯಗೊಂಡವರಿಗೆ ಚಿಕಿತ್ಸೆ ಮುಂದುವರೆದಿದೆ.

Read More

ಬೆಂಗಳೂರು : ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ಸಂಬಂಧ ರೈತರಿಗೆ ಅನುಕೂಲವಾಗುವಂತೆ ಜಾರಿಗೊಳಿಸುವ ಬಗ್ಗೆ “ನವೀಕೃತ ಶೀಘ್ರು ಸಂಪರ್ಕ ಯೋಜನೆ” ಜಾರಿಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ, ರೈತರ ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ನಿಟ್ಟಿನಲ್ಲಿ ದಿನಾಂಕ 14.7.2014 ರ ಸುತ್ತೋಲೆಯಲ್ಲಿ ಶೀಘ್ರ ಸಂಪರ್ಕ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಅದರಂತೆ ರೂ.10,000 ಮತ್ತು ಠೇವಣಿ ಹಣ ಪಾವತಿಯೊಂದಿಗೆ, ರೈತರು ಇಚ್ಚಿಸಿದಲ್ಲಿ, ಸ್ವಯಂ ಕಾರ್ಯ ನಿರ್ವಹಣೆ ಅಡಿಯಲ್ಲಿ ಮೂಲಸೌಕರ್ಯ ರಚಿಸಿಕೊಳ್ಳುವಂತೆ ಮತ್ತು ಅವಶ್ಯಕತೆಗೆ ತಕ್ಕಂತೆ 25 KVA ಪರಿವರ್ತಕವನ್ನು ವಿಸಕಂಗಳು ಒದಗಿಸಲು ಅವಕಾಶ ಕಲ್ಪಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿ, ನೀರಾವರಿ ಪಂಪ್ ಸೆಟ್ ಗಳನ್ನು ವ್ಯವಸ್ಥಿತವಾಗಿ ವಿದ್ಯುತ್ ಜಾಲಕ್ಕೆ ಸೇರ್ಪಡಿಸಲು ಮತ್ತು ಹಗಲಿನ ವೇಳೆಯಲ್ಲಿಯೇ ನೀರಾವರಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸುವ ದೃಷ್ಟಿಯಿಂದ ದಿನಾಂಕ 22.9.2023ರ ಅಂತ್ಯಕ್ಕೆ ನೋಂದಣಿಗೊಂಡು…

Read More

ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, , ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ…

Read More

ಬೆಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಪಟ್ಟಂತೆ ನಿನ್ನೆಯೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರಿಗೆ ಮಂಗಳೂರಿಗೆ ಹೋಗಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಕೊಲೆ ಯಾರದ್ದೇ ಆಗಿರಲಿ, ಯಾವ ಕಾರಣಕ್ಕೆ ಆಗಿರಲಿ, ನಮಗೆ ಪ್ರತಿ ಜೀವವೂ ಮುಖ್ಯ. ಈ ಹೀನ ಕೃತ್ಯ ಎಸಗಿರುವ ಅಪರಾಧಿಗಳ ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಹೇಳಿದ್ದಾರೆ. ಬಿಜೆಪಿಯವರು ಸದಾಕಾಲ ಸಾವಿನಲ್ಲಿ ರಾಜಕಾರಣ ಮಾಡುತ್ತಾರೆ. ಇಂದು ಅವರು ಮಂಗಳೂರಿಗೆ ಹೊರಟಿದ್ದಾರೆ, ಕಳೆದ ವಾರ ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ಕೃತ್ಯಕ್ಕೆ 26 ಜನರು ಸಾವಿಗೀಡಾದರು, ಅಲ್ಲಿಗೆ ಇವರು ಹೋಗಿದ್ರಾ?ಅದು ಕೂಡ ಭದ್ರತಾ ವೈಫಲ್ಯವಲ್ಲವಾ? ಎಂದು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. https://twitter.com/i/status/1918210624095699020

Read More

ಇಸ್ಲಾಮಾಬಾದ್ : ಪಾಕಿಸ್ತಾನದ ವಾಯುಪ್ರದೇಶವನ್ನು ಮುಚ್ಚುವುದರಿಂದ ಒಂದು ವರ್ಷದ ಅವಧಿಯಲ್ಲಿ ಏರ್ ಇಂಡಿಯಾಕ್ಕೆ ಸುಮಾರು $600 ಮಿಲಿಯನ್ ನಷ್ಟವಾಗಲಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ, ವಿಮಾನಯಾನ ಸಂಸ್ಥೆಯು ಸರ್ಕಾರವನ್ನು ಪರಿಹಾರ ನೀಡುವಂತೆ ಒತ್ತಾಯಿಸಿದ ಕಂಪನಿಯ ಪತ್ರವನ್ನು ಉಲ್ಲೇಖಿಸಿದೆ. ಪಾಕಿಸ್ತಾನವು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ ನಂತರ ಭಾರತೀಯ ವಿಮಾನಯಾನ ಸಂಸ್ಥೆಗಳು ಹೆಚ್ಚಿದ ಇಂಧನ ವೆಚ್ಚ ಮತ್ತು ವಿಸ್ತೃತ ಹಾರಾಟದ ಅವಧಿಗೆ ಸಿದ್ಧತೆ ನಡೆಸುತ್ತಿವೆ, ಇದು ಕಳೆದ ವಾರ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯ ನಂತರ ಪ್ರತೀಕಾರದ ಕ್ರಮವಾಗಿದೆ. ಏಪ್ರಿಲ್ 27 ರಂದು, ವಾಯುಪ್ರದೇಶ ಮುಚ್ಚುವಿಕೆಯ ಆರ್ಥಿಕ ಪರಿಣಾಮಕ್ಕೆ ಅನುಗುಣವಾಗಿ “ಸಬ್ಸಿಡಿ ಮಾದರಿ”ಯನ್ನು ಜಾರಿಗೆ ತರಲು ಏರ್ ಇಂಡಿಯಾ ಸರ್ಕಾರವನ್ನು ವಿನಂತಿಸಿತು. ವಾಯುಪ್ರದೇಶ ನಿಷೇಧವು ಜಾರಿಯಲ್ಲಿರುವ ಪ್ರತಿ ವರ್ಷ 50 ಶತಕೋಟಿ ಭಾರತೀಯ ರೂಪಾಯಿಗಳನ್ನು (ಸುಮಾರು $591 ಮಿಲಿಯನ್) ಮೀರಿದ ನಷ್ಟವನ್ನು ಏರ್ ಇಂಡಿಯಾ ಅಂದಾಜಿಸಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾದ ಪತ್ರವನ್ನು ಉಲ್ಲೇಖಿಸಿ ರಾಯಿಟರ್ಸ್ ತನ್ನ…

Read More

ಬೆಂಗಳೂರು : ಕರ್ನಾಟಕ ‘ಎಸ್ ಎಸ್ ಎಲ್ ಸಿ’ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 66,14 ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಪರೀಕ್ಷೆಗೆ ಹಾಜರಾದ 842173 ವಿದ್ಯಾರ್ಥಿಗಳ ಪೈಕಿ 524984 ವಿದ್ಯಾರ್ಥಿಗಳು ಪಾಸಾಗಿದ್ದಾರೆ.ಪರೀಕ್ಷೆಗೆ ಹಾಜರಾದ 390311 ಬಾಲಕರ ಪೈಕಿ 226637 ಬಾಲಕರು ಪಾಸಾಗಿದ್ದರೆ, ಪರೀಕ್ಷೆಗೆ ಹಾಜರಾದ 400579 ಬಾಲಕಿಯರ ಪೈಕಿ 296438 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 625 ಕ್ಕೆ 625 ಅಂಕಗಳನ್ನು 22 ವಿದ್ಯಾರ್ಥಿಗಳು ಪಡೆದಿದ್ದಾರೆ. 624 ಅಂಕಗಳನ್ನು 65 ವಿದ್ಯಾರ್ಥಿಗಳು, 623 ಅಂಕಗಳನ್ನು 108 ವಿದ್ಯಾರ್ಥಿಗಳು, 622 ಅಂಕಗಳನ್ನು 189 ವಿದ್ಯಾರ್ಥಿಗಳು ಪಡೆದಿದ್ದಾರೆ.

Read More

ಬೆಂಗಳೂರು : ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಖಾದರ್ ಗೆ ಇದೀಗ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಹೌದು, ಶಾಸಕ ಯತ್ನಾಳ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ್ ಪಾಟೀಲ್ ಧಿಡೀರ್ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿರುವ ಶಿವಾನಂದ್ ಪಾಟೀಲ್ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಗೆ ಶಾಸಕ ಶಿವನಾಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

Read More