Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕರ್ನಾಟಕ ಸರ್ಕಾರದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ವಿಕಲಚೇತನರ ಕುಂದು ಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಕಲಂ-23(1) ರಲ್ಲಿ “ಸರ್ಕಾರದ ಪ್ರತಿಯೊಂದು ಸಂಸ್ಥೆಯು, 19ನೇ ಪ್ರಕರಣದ ಉದ್ದೇಶಕ್ಕಾಗಿ ಒಬ್ಬರು ಕುಂದುಕೊರತೆಗಳ ನಿವಾರಣಾಧಿಕಾರಿಯನ್ನು ನೇಮಕ ಮಾಡತಕ್ಕದ್ದು ಮತ್ತು ಅಂಥ ಅಧಿಕಾರಿಯ ನೇಮಕದ ಬಗ್ಗೆ ಸಂದರ್ಭಾನುಸಾರ ಚೀಫ್ ಕಮಿಷನರ್ರಿಗೆ ಅಥವಾ ಸ್ಟೇಟ್ ಕಮಿಷನರ್ರಿಗೆ ತಿಳಿಸತಕ್ಕದ್ದು.” ಎಂದು ನಮೂದಿಸಲಾಗಿರುತ್ತದೆ. ಅದರಂತೆ ಸುತ್ತೋಲೆ ಸಂಖ್ಯೆ: ಮಮಇ 131 ಪಿಹೆಚ್ಪಿ 2019, ದಿನಾಂಕ: 10.10.2019, ಮತ್ತು ದಿನಾಂಕ:09.01.2023ರ ಸುತ್ತೋಲೆಗಳಲ್ಲಿ ಎಲ್ಲಾ ಇಲಾಖೆಗಳು, ಸಂಸ್ಥೆ, ನಿಗಮ, ಮಂಡಳಿ ಹಾಗೂ ಆಯೋಗಗಳು ಅಂಗವಿಕಲರ ಕುಂದುಕೊರತೆ ನಿವಾರಿಸಲು ಅಧಿಕಾರಿಯೊಬ್ಬರನ್ನು ನೇಮಿಸುವಂತೆಯೂ ಹಾಗೂ ಈ ರೀತಿ ನೇಮಕ ಮಾಡಿದ ಅಧಿಕಾರಿಗಳ ಹೆಸರು, ಪದನಾಮ, ವಿಳಾಸ ಹಾಗೂ ದೂರವಾಣಿ ಸಂಖ್ಯೆ ಇತ್ಯಾದಿ ವಿವರವನ್ನು ರಾಜ್ಯ ಆಯುಕ್ತರು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಇವರಿಗೆ ತಿಳಿಸಲು ಕ್ರಮವಹಿಸುವಂತೆ…
ಫ್ರಾನ್ಸ್ : ಫ್ರಾನ್ಸ್ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೋರ್ನು ಈಗ ದೇಶದ ಹೊಸ ಪ್ರಧಾನಿಯಾಗಲಿದ್ದಾರೆ. ಫ್ರಾಂಕೋಯಿಸ್ ಬೇರೂ ಅವರ ರಾಜೀನಾಮೆಯ ನಂತರ, ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಂಗಳವಾರ ರಾತ್ರಿ ತಡವಾಗಿ ಲೆಕೋರ್ನು ಅವರನ್ನು ಪ್ರಧಾನಿಯಾಗಿ ನೇಮಿಸಿದರು. ಸುಮಾರು ಒಂದು ವರ್ಷದಲ್ಲಿ ಅವರು ದೇಶದ ನಾಲ್ಕನೇ ಪ್ರಧಾನಿ. 39 ವರ್ಷದ ಲೆಕೋರ್ನು ಫ್ರಾನ್ಸ್ ಇತಿಹಾಸದಲ್ಲಿ ಅತ್ಯಂತ ಕಿರಿಯ ರಕ್ಷಣಾ ಸಚಿವರಾಗಿದ್ದರು.ಅಧ್ಯಕ್ಷ ಮ್ಯಾಕ್ರನ್ ಅವರ ಹಿಂದಿನ ಪ್ರಧಾನಿ ಫ್ರಾಂಕೋಯಿಸ್ ಬೇರೂ ಸಂಸತ್ತಿನಲ್ಲಿ ವಿಶ್ವಾಸ ಮತವನ್ನು ಕಳೆದುಕೊಂಡಾಗ ಈ ನೇಮಕಾತಿಯನ್ನು ಮಾಡಿದರು. ಬೇರೂ ಸಾರ್ವಜನಿಕ ವೆಚ್ಚವನ್ನು ಕಡಿತಗೊಳಿಸಲು ಪ್ರಯತ್ನಿಸುತ್ತಿದ್ದರು, ಅದಕ್ಕೆ ಅವರು ಸಂಸತ್ತಿನಲ್ಲಿ ಬೆಂಬಲವನ್ನು ಪಡೆಯಲಿಲ್ಲ. ಈಗ ಲೆಕೋರ್ನು ಸಂಸತ್ತಿನಲ್ಲಿ ಬಜೆಟ್ ಅನ್ನು ಅಂಗೀಕರಿಸುವ ಸವಾಲನ್ನು ಎದುರಿಸಬೇಕಾಗುತ್ತದೆ. ಕಳೆದ ವರ್ಷ ಕನ್ಸರ್ವೇಟಿವ್ ನಾಯಕ ಮತ್ತು ಮಾಜಿ ಬ್ರೆಕ್ಸಿಟ್ ಸಮಾಲೋಚಕ ಮೈಕೆಲ್ ಬಾರ್ನಿಯರ್ ಅವರನ್ನು ಹುದ್ದೆಯಿಂದ ತೆಗೆದುಹಾಕಿದಾಗ ಬೈರೋ ಅವರನ್ನು ಪ್ರಧಾನಿಯನ್ನಾಗಿ ಮಾಡಲಾಯಿತು. ಆದರೆ ಬೇರೋ ಅವರ ವಿವಾದಾತ್ಮಕ 2026 ರ ಬಜೆಟ್ ಯೋಜನೆಯ ಮೇಲೆ ಅಭೂತಪೂರ್ವ…
ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್ಬುೋಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಸಂದರ್ಭದಲ್ಲಿ ಘರ್ಜಿಸಲು 9 DJ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆ’ ಎಂದು ಸ್ಟೇಟಸ್ ಹಾಕಿದ್ದನು. ಈಗಾಗಲೇ ಜಿಲ್ಲಾಧಿಕಾರಿಗಳು ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿ.ಜೆ. ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಆದರೆ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದ ಆರ್.ಮಂಜುನಾಥ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಐಡಿ manju achar prince ನಲ್ಲಿ ‘ಇತಿಹಾಸ ಸೃಷ್ಠಿಸಲು ಸಿದ್ದವಾಗಿದೆ ಚಿತ್ರದುರ್ಗ ಬೃಹತ್ ಶೋಭಾಯಾತ್ರೆ, 13-09-2025 ಶನಿವಾರ ಪ್ರಪಥಮ ಬಾರಿಗೆ ಚಿತ್ರದುರ್ಗ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ…
ಬೆಂಗಳೂರು: ಬೆಂಗಳೂರಿನ ಜನತೆಗೆ ಸಿಹಿಸುದ್ದಿ ಸಿಕ್ಕಿದ್ದು, ಇಂದಿನಿಂದ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ. ರಸ್ತೆ- ಬೊಮ್ಮಸಂದ್ರ ಮಾರ್ಗದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಸಂಚಾರ ಆರಂಭಿಸಲಿದೆ. ರೈಲುಗಳ ಸಂಚಾರದ ವೇಳಾಪಟ್ಟಿ ಬದಲಾವಣೆಯಾಗಿದ್ದು, ರೈಲುಗಳ ನಡುವಿನ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಿದೆ. ಆಗಸ್ಟ್ 10 ರಿಂದ ಮೂರು ರೈಲುಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಮೂರು ವಾರದ ಹಿಂದೆ ಕೊಲ್ಕತ್ತಾದ ತೀತಾಗಢ್ ರೈಲು ಫ್ಯಾಕ್ಟರಿಯಿಂದ ಈ ರೈಲು ಸೆಟ್ ಗಳು ಬೆಂಗಳೂರಿಗೆ ಬಂದು ಹೆಬ್ಬಗೋಡಿ ಡಿಪೋದಲ್ಲಿ ಜೋಡಣೆ ಮಾಡಲಾಗಿದೆ. ಕಳೆದ ವಾರದಿಂದ ರಾತ್ರಿ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಿ ಇದೀಗ ಪ್ರಯಾಣಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಹಳದಿ ಮಾರ್ಗದಲ್ಲಿ ಸೋಮವಾರದಿಂದ ಶನಿವಾರದವರೆಗೆ ಮೊದಲ ವಾಣಿಜ್ಯ ಸೇವೆ ಬೆಳಗ್ಗೆ 6 ಗಂಟೆಗೆ ಆರಂಭವಾಗಲಿದೆ. ಭಾನುವಾರ ಮೊದಲ ರೈಲು ಸೇವೆ ಬೆಳಗ್ಗೆ 7 ಗಂಟೆಗೆ ಶುರುವಾಗಲಿದೆ. ರಾತ್ರಿ ಕೊನೆಯ ರೈಲು ಸಮಯ ಎಂದಿನಂತೆ ಇರಲಿದ್ದು, ಆರ್.ವಿ. ರಸ್ತೆಯಿಂದ ರಾತ್ರಿ 11:55 ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ…
ಬೆಂಗಳೂರು: ನೂತನವಾಗಿ ರಚಿಸಿದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 1,200 ಚದರ ಅಡಿ ವಿಸ್ತೀರ್ಣಗಳಲ್ಲಿ ನೆಲ ಮತ್ತು ಎರಡು ಅಂತಸ್ತು ಕಟ್ಟಡಕ್ಕೆ ಸ್ವಾಧೀನಾನುಭವ ಪತ್ರ(ಒಸಿ)ಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1)ರಂತೆ ಮಾನ್ಯ ಮುಖ್ಯ ಮಂತ್ರಿಯವರು ಅಧ್ಯಕ್ಷತೆ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಯವರು ಮತ್ತು ಸಂಬಂಧಿಸಿದ ಇತರೆ ಮಾನ್ಯ ಸಚಿವರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ, ಅನ್ವಯವಾಗುವ ಎಲ್ಲಾ ಕಾಯ್ದೆಗಳಲ್ಲಿಯೂ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ, ಸಮಾನ ಅವಕಾಶಗಳಿರುವುದು ಸೂಕ್ತವೆಂದು ಅಭಿಪ್ರಾಯಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಮೇಲೆ ಓದಲಾದ ಕ್ರಮ ಸಂಖ್ಯೆ (2) ರನ್ವಯ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7), ಕರ್ನಾಟಕ ಮುನಿಸಿಪಲ್ ಕಾಯ್ದೆ, 1976 ಹಾಗೂ ಗ್ರಾಮೀಣಾಭಿವೃದ್ಧಿ…
ಬೆಂಗಳೂರು : ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ ತುರ್ತು ಸಂದರ್ಭದಲ್ಲಿಯೂ ವೈದ್ಯಕೀಯ ಸಂಸ್ಥೆ ಅಥವಾ ವೈದ್ಯರು ಮುಂಗಡ ಹಣ ಪಾವತಿಗೆ ಬೇಡಿಕೆ ಇಡದೆ, ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡಬೇಕು. ಇದನ್ನು ಉಲ್ಲಂಘಿಸಿದಲ್ಲಿ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ಗಾಯಗೊಂಡ ವ್ಯಕ್ತಿಯ ಆರೋಗ್ಯ ಸ್ಥಿತಿ ಸುಧಾರಿಸಲು ಪ್ರತಿಯೊಂದು ಆಸ್ಪತ್ರೆಯೂ ತಕ್ಷಣದ ವೈದ್ಯಕೀಯ ತಪಾಸಣೆ ಸೇವೆ ಮತ್ತು ಪ್ರಾಥಮಿಕ ಚಿಕಿತ್ಸೆಯನ್ನು ಉಚಿತವಾಗಿ ಹಾಗೂ ಅಗತ್ಯವೆಂದು ಪರಿಗಣಿಸಿ ಒದಗಿಸಬೇಕು. ಸೌಲಭ್ಯಗಳ ಕೊರತೆಯಿರುವ ಆಸ್ಪತ್ರೆಗಳು, ರೋಗಿಯನ್ನು ಇತರೆ ಆಸ್ಪತ್ರೆಗಳಿಗೆ ವರ್ಗಾವಣೆ ಮಾಡುವ ಮೊದಲು ಪ್ರಥಮ ಚಿಕಿತ್ಸೆ ನೀಡಬೇಕು. ವೈದ್ಯಕೀಯ ವಿವರಗಳೊಂದಿಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು, ಅಪಘಾತದ ದಿನಾಂಕದಿಂದ ಏಳು ದಿನಗಳವರೆಗೆ ₹1.50 ಲಕ್ಷದವರೆಗೆ ಯಾವುದೇ ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆಗೆ ಅರ್ಹರಾಗಿರುತ್ತಾರೆ. ರಾಜ್ಯ ರಸ್ತೆ…
ಬೆಂಗಳೂರು: ಬೃಹತ್ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚದರಡಿ ವಿಸ್ತೀರ್ಣ ಮೀರದಂತಹ ನಿವೇಶನಗಳಲ್ಲಿ ನೆಲ ಮತ್ತು 2 ಅಂತಸ್ತು ಅಥವಾ ಸ್ಟಿಲ್ಟ್ ಮತ್ತು 3 ಅಂತಸ್ತಿನ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ (ಓಸಿ) ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿ ಸದ, ಓಸಿ ಹೊಂದಿಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್, ಒಳಚರಂಡಿ ಸಂಪರ್ಕ ನೀಡದಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಹೀಗಾಗಿ ಲಕ್ಷಾಂತರ ಜನರು ಸಮಸ್ಯೆಗೆ ಸಿಲುಕಿದ್ದರು. ಈ ಸಮಸ್ಯೆಗೆ ಸರ್ಕಾರ ಪರಿಹಾರ ನೀಡಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಕಳೆದ ವರ್ಷದಿಂದ ನಂಬಿಕೆ ನಕ್ಷೆ ವ್ಯವಸ್ಥೆ ಜಾರಿ ಮಾಡಲಾಗಿದೆ. ಇದರಡಿ ಆಟೋಮೇಮೀಟರ್ ಆನ್ಲೈನ್ ತಂತ್ರಾಂಶದ ಮೂಲಕ 50*80(ನಾಲ್ಕು ಸಾವಿರ ಚದರಡಿ) ವಿಸ್ತೀರ್ಣವರೆಗಿನ ಸ್ಥಳದಲ್ಲಿ ನಿರ್ಮಿಸುವ ವಸತಿ ಕಟ್ಟಡಗಳಿಗೆ ಅರ್ಜಿ ಸಲ್ಲಿಸಿದ ದಿನವೇ ಕರಡು ನಕ್ಷೆ ಹಾಗೂ 15 ದಿನದಲ್ಲಿ ಅಂತಿಮ ನಕ್ಷೆ ಮಂಜೂರಾತಿಗೆ ಅವಕಾಶ ನೀಡಲಾಗಿದೆ. ಈ ನಂಬಿಕೆ ನಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಸಣ್ಣ ಪ್ರಮಾಣದ ನಿವೇಶನದಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ…
ಬೆಂಗಳೂರು: ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಲೋಗೋ, ಲಾಂಛನ ಹಾಕುವುದನ್ನು ನಿಷೇಧಿಸಲಾಗಿದ್ದು, ಒಂದು ವೇಳೆ ಕಂಡು ಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. 2019 ರಿಂದ ಕರ್ನಾಟಕ ಸಾರಿಗೆ ಇಲಾಖೆಯು ವಾಹನಗಳ ಮೇಲೆ ಸರ್ಕಾರಿ ಲಾಂಛನಗಳು, ಹೆಸರುಗಳು ಮತ್ತು ಲೋಗೋಗಳನ್ನು ಅನಧಿಕೃತವಾಗಿ ಬಳಸಿದ್ದಕ್ಕಾಗಿ ಸುಮಾರು 15,000 ವಾಹನ ಚಾಲಕರಿಗೆ ದಂಡ ವಿಧಿಸಿದೆ. ಅಧಿಕೃತ ದತ್ತಾಂಶದ ಪ್ರಕಾರ, ಡಿಸೆಂಬರ್ 28, 2019 ಮತ್ತು ಜುಲೈ 31, 2025 ರ ನಡುವೆ, ಒಟ್ಟು 14,982 ವಾಹನಗಳಿಗೆ ದಂಡ ವಿಧಿಸಲಾಗಿದೆ, 1,20,61,097 ದಂಡವನ್ನು ಸಂಗ್ರಹಿಸಲಾಗಿದೆ. ವಾಹನ ಚಾಲಕರು ಅನುಮತಿಯಿಲ್ಲದೆ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ಸಂಘಗಳ ಲಾಂಛನಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ನೋಂದಣಿ ಫಲಕಗಳನ್ನು ಹೆಚ್ಚಾಗಿ ದುರುಪಯೋಗಪಡಿಸಿಕೊಳ್ಳುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವಾರು ಸಂದರ್ಭಗಳಲ್ಲಿ, ವಾಹನಗಳ ಮರು-ಸೂಚನೆ ವಿವರಗಳಿಗೆ ಸಂಬಂಧವಿಲ್ಲದ ಹೆಸರುಗಳು, ಪದನಾಮಗಳು ಅಥವಾ ಚಿಹ್ನೆಗಳನ್ನು ಹೊಂದಿರುವ ನಂಬರ್ ಪ್ಲೇಟ್‌ಗಳು ಕಂಡುಬಂದಿವೆ.ಇಂತಹ ಉಲ್ಲಂಘನೆಗಳನ್ನು ತಡೆಯಲು ಕರ್ನಾಟಕದಾದ್ಯಂತ…
ಬೆಂಗಳೂರು :ಆದಾಯ ಪ್ರಮಾಣಪತ್ರವು ವ್ಯಕ್ತಿಯ ಅಥವಾ ಕುಟುಂಬದ ಆದಾಯವನ್ನು ಪ್ರಮಾಣೀಕರಿಸುವ ಅತ್ಯಗತ್ಯ ದಾಖಲೆಯಾಗಿದೆ. ಸರ್ಕಾರಿ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸುವುದು, ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಮತ್ತು ಸಬ್ಸಿಡಿಗಳನ್ನು ಪಡೆಯುವುದು ಮುಂತಾದ ವಿವಿಧ ಉದ್ದೇಶಗಳಿಗಾಗಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೆಚ್ಚಿನ ಭಾರತೀಯ ರಾಜ್ಯಗಳು ನಾಗರಿಕರು ತಮ್ಮ ಅಧಿಕೃತ ಪೋರ್ಟಲ್ಗಳ ಮೂಲಕ ಆನ್ಲೈನ್ನಲ್ಲಿ ಆದಾಯ ಪ್ರಮಾಣಪತ್ರಗಳಿಗೆ ಅರ್ಜಿ ಸಲ್ಲಿಸಲು ಸುಲಭವಾಗುವಂತೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿವೆ. ನಿಮ್ಮ ಆಯಾ ರಾಜ್ಯ ಸರ್ಕಾರಿ ಪೋರ್ಟಲ್ನಿಂದ ಡಿಜಿಟಲ್ ರೂಪದಲ್ಲಿ ಆದಾಯ ಪ್ರಮಾಣಪತ್ರಕ್ಕಾಗಿ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗದರ್ಶಿಯನ್ನು ಒದಗಿಸುತ್ತದೆ, ಇದು ಪ್ರಕ್ರಿಯೆಯನ್ನು ತ್ವರಿತ, ಅನುಕೂಲಕರ ಮತ್ತು ಕಾಗದರಹಿತವಾಗಿಸುತ್ತದೆ. ಆದಾಯ ಪ್ರಮಾಣಪತ್ರ ಎಂದರೇನು? ಆದಾಯ ಪ್ರಮಾಣಪತ್ರವು ನಿಮ್ಮ ವಾರ್ಷಿಕ ಆದಾಯವನ್ನು ಪರಿಶೀಲಿಸುವ ಸರ್ಕಾರವು ನೀಡುವ ಕಾನೂನು ದಾಖಲೆಯಾಗಿದೆ. ಇದು ಸಾಮಾನ್ಯವಾಗಿ ವಿದ್ಯಾರ್ಥಿಗಳು, ರೈತರು, ನಿರುದ್ಯೋಗಿ ವ್ಯಕ್ತಿಗಳು ಮತ್ತು ಸರ್ಕಾರಿ ಯೋಜನೆಗಳು ಮತ್ತು ಪ್ರಯೋಜನಗಳಿಗಾಗಿ ಅರ್ಜಿ ಸಲ್ಲಿಸುವ ಜನರಿಗೆ ಅಗತ್ಯವಾಗಿರುತ್ತದೆ. ಆದಾಯ ಪ್ರಮಾಣಪತ್ರಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಪ್ರಯೋಜನಗಳು…
ಧಾರವಾಡ : ರಾಜ್ಯದಲ್ಲಿ ಮೂರು ಸಾವಿರ ಲೈನ್‌ಮನ್ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ವಿದ್ಯುತ್ ಕಂಪನಿಗಳಿಗೂ (ಮೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಸೆಸ್ಕ್..) ಲೈನ್‌ಮನ್‌ಗಳನ್ನು ಒದಗಿಸಲಾಗುವುದು.ನೇಮಕವಾದವರು 10 ವರ್ಷ ಒಂದೇ ಕಂಪನಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಿಯಮ ರೂಪಿಸಲಾಗಿದೆ’ ಎಂದರು. ಇಂಧನ ಇಲಾಖೆಯು ಅಗತ್ಯವಿರುವ 1,500 ಜೆ.ಇ, ಎಇ ಮತ್ತು 3 ಸಾವಿರ ಲೈನ್ಮ ನ್ಗಿಳ ನೇಮಕಾತಿ ಮಾಡಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲಾಗುತ್ತಿದೆ ಎಂದರು. ಗ್ರಾಮೀಣ ಪ್ರದೇಶಗಳಲ್ಲಿ ಆಗಾಗ ವಿದ್ಯುತ್ ಕಡಿತ, ಕಡಿಮೆ ಓಲ್ಟೇಜ್ನಂುತಹ ಸಮಸ್ಯೆಗಳು ವರದಿಯಾಗುತ್ತಿದ್ದು, ಇವುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇಲಾಖೆಯ ಆಂತರಿಕ ಕಾರ್ಯವಿಧಾನಗಳಲ್ಲಿನ ಸಣ್ಣಪುಟ್ಟ ತೊಡಕುಗಳು ಯೋಜನೆಗಳ ಅನುμÁ್ಠನಕ್ಕೆ ಅಡ್ಡಿಯಾಗಬಾರದು ಎಂದು ಅವರು ಹೇಳಿದರು. ಅಧಿಕಾರಿಗಳು ಮತ್ತು ಸಿಬ್ಬಂದಿ ನಡುವೆ ಉತ್ತಮ ಸಮನ್ವಯ ಇರಬೇಕು. ಯಾವುದೇ ಕಡತಗಳು ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿದರು. ಜನರಿಗೆ ವಿದ್ಯುತ್ ಬಿಲ್ ಸಂಬಂಧಿತ ಸಮಸ್ಯೆಗಳು,…














