Subscribe to Updates
Get the latest creative news from FooBar about art, design and business.
Author: kannadanewsnow57
ಆಧಾರ್ ಕಾರ್ಡ್ ಭಾರತದಲ್ಲಿ ಹೆಚ್ಚು ಬಳಕೆಯಾಗುವ ಗುರುತಿನ ಚೀಟಿಗಳಲ್ಲಿ ಒಂದಾಗಿದೆ. ಸರ್ಕಾರಿ ಸೇವೆಗಳು, ಬ್ಯಾಂಕಿಂಗ್ ಮತ್ತು ಇತರ ಹಲವು ದೈನಂದಿನ ಕೆಲಸಗಳಿಗೆ ಇದು ಅಗತ್ಯವಾಗಿರುತ್ತದೆ. ಸಾಮಾನ್ಯವಾಗಿ, ಆಧಾರ್ ಅನ್ನು UIDAI ಪೋರ್ಟಲ್ ಅಥವಾ ಡಿಜಿಲಾಕರ್ ಅಪ್ಲಿಕೇಶನ್ನಿಂದ ಡೌನ್ಲೋಡ್ ಮಾಡಲಾಗುತ್ತದೆ. ಇನ್ಮುಂದೆ ಇದನ್ನು WhatsApp ನಲ್ಲಿ MyGov Helpdesk ಚಾಟ್ಬಾಟ್ ಮೂಲಕವೂ ನೇರವಾಗಿ ಡೌನ್ಲೋಡ್ ಮಾಡಬಹುದು. ಈ ವೈಶಿಷ್ಟ್ಯವು ಯಾವುದೇ ಹೆಚ್ಚುವರಿ ಅಪ್ಲಿಕೇಶನ್ ಅನ್ನು ಸ್ಥಾಪಿಸದೆಯೇ ಆಧಾರ್ ಮತ್ತು ಇತರ ಪ್ರಮುಖ ದಾಖಲೆಗಳನ್ನು ಸುರಕ್ಷಿತವಾಗಿ ಪಡೆಯಲು ನಿಮಗೆ ಅನುಮತಿಸುತ್ತದೆ. WhatsApp ನಿಂದ ಆಧಾರ್ ಡೌನ್ಲೋಡ್ ಮಾಡಲು ಅಗತ್ಯವಿರುವ ವಿಷಯಗಳು ನಿಮ್ಮ ಆಧಾರ್ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆ ಸಕ್ರಿಯ ಡಿಜಿಲಾಕರ್ ಖಾತೆ (ಇಲ್ಲದಿದ್ದರೆ, ನೀವು ಅದನ್ನು ಡಿಜಿಲಾಕರ್ ವೆಬ್ಸೈಟ್ ಅಥವಾ ಅಪ್ಲಿಕೇಶನ್ನಲ್ಲಿ ರಚಿಸಬಹುದು) MyGov Helpdesk ಅಧಿಕೃತ WhatsApp ಸಂಖ್ಯೆ: +91-9013151515 (ಅದನ್ನು ನಿಮ್ಮ ಫೋನ್ನಲ್ಲಿ ಉಳಿಸಿ) WhatsApp ನಲ್ಲಿ ಆಧಾರ್ ಡೌನ್ಲೋಡ್ ಮಾಡಲು ಹಂತ-ಹಂತದ ಪ್ರಕ್ರಿಯೆ ನಿಮ್ಮ ಫೋನ್ನಲ್ಲಿ +91-9013151515 ಅನ್ನು…
ಬೆಂಗಳೂರು :ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಕಡ್ಡಾಯ 6 ವರ್ಷ ಮೇಲ್ಪಟ್ಟು ಪಡಿತರ ಚೀಟಿ ಇಲ್ಲದಿರುವ ಮತ್ತು ಪಡಿತರ ಚೀಟಿಯಲ್ಲಿ ಹೆಸರು ಇಲ್ಲದಿರುವ ಕುಟುಂಬದ ಸದಸ್ಯರ ಆಧಾರ್ ಕಾರ್ಡ ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಇಲ್ಲವೆಂದರೆ ಹತ್ತಿರದ ಆಧಾರ್ ನೊಂದಣಿ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ನೊಂದಣಿ ಮಾಡಿಸಿ, ನೊಂದಣಿ ಸಂಖ್ಯೆಯನ್ನು ಪಡೆಯಬೇಕು. ಆಧಾರ್ ಕಾರ್ಡ್ ಇದ್ದು ಲಿಂಕ್ ಆಗಿರುವ ಮೊಬೈಲ್ ಪೋನ್ ನಂಬರ್ ಇಲ್ಲದಿದ್ದರೆ…
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ತಮ್ಮಲ್ಲಿ ಕೋರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. https://twitter.com/KarnatakaVarthe/status/1965409929235517442
ಬೆಂಗಳೂರು : 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಕುರಿತು ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ…
ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ITI), GTTC, CEDOK, KSDC ವತಿಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡುತ್ತಿದ್ದು, ಯುವನಿಧಿ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡು ನೇರ ನಗದು ವರ್ಗಾವಣೆ (DBT) ಮೂಲಕ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify ಲಿಂಕನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಲು ಸೂಚಿಸಿದೆ. ಕೌಶಲ್ಕಾರ್ ಪೋರ್ಟಲ್ ನಲ್ಲಿ ಯುವನಿಧಿ ಫಲಾನುಭವಿಗಳು ತರಬೇತಿ ಪಡೆದರೆ ನಿರುದ್ಯೋಗ ಭತ್ಯೆ ತಡೆಹಿಡಿಯಲಾಗುತ್ತದೆ ಎಂದು ಭಾವಿಸಿ ಕೌಶಲ್ಕಾರ್ ಪೋರ್ಟಲ್ ನಲ್ಲಿ ನೋಂದಾಯಿಸಲು ಹಿಂಜರಿಯುತ್ತಿರುವುದಾಗಿ ತಿಳಿದು ಬಂದಿದ್ದು, ತರಬೇತಿಯನ್ನು ಪಡೆದರೂ ಸಹ ಸರ್ಕಾರ ನಿಗಧಿಪಡಿಸಿರುವ ಅವಧಿವರೆಗೆ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದೆಂದು ತಿಳಿಸುತ್ತಾ, ಯುವನಿಧಿ ಫಲಾನುಭವಿಗಳು ಕೌಶಲ್ಕಾರ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊAಡು ತಮಗೆ ಇಚ್ಛೆಯುಳ್ಳ ಕೌಶಲ್ಯ ಹಾಗೂ ಉದ್ಯಮಶೀಲತಾ ತರಬೇತಿಯನ್ನು ಪಡೆದುಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
17 ನೇ ಆವೃತ್ತಿಯ ಏಷ್ಯಾ ಕಪ್ ಸೆಪ್ಟೆಂಬರ್ 9 ರಂದು ಪ್ರಾರಂಭವಾಗಿ ಸೆಪ್ಟೆಂಬರ್ 28 ರವರೆಗೆ ನಡೆಯಲಿದೆ. ಪಂದ್ಯಾವಳಿಯು T20 ಸ್ವರೂಪದಲ್ಲಿ ನಡೆಯಲಿದ್ದು, ಎಲ್ಲಾ ಪಂದ್ಯಗಳು ಅಬುಧಾಬಿ ಮತ್ತು ದುಬೈನಲ್ಲಿ ನಡೆಯಲಿವೆ. ಮೊದಲ ಪಂದ್ಯವು ಭಾರತೀಯ ಸಮಯ ಸಂಜೆ 5:30 ರಿಂದ ಆರಂಭವಾಗಲಿದ್ದು, ಉಳಿದ ಎಲ್ಲಾ ಪಂದ್ಯಗಳು ಭಾರತೀಯ ಸಮಯ ರಾತ್ರಿ 8:00 ಗಂಟೆಗೆ ಆರಂಭವಾಗಲಿವೆ. ಏಷ್ಯಾ ಕಪ್ ಅನ್ನು ಯುಎಇಯಲ್ಲಿ ಏಕೆ ಆಡಲಾಗುತ್ತಿದೆ? ಬಿಸಿಸಿಐ ಮೂಲತಃ ಪಂದ್ಯಾವಳಿಯನ್ನು ಆಯೋಜಿಸಲು ಉದ್ದೇಶಿಸಿತ್ತು, ಆದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಸಂಬಂಧಗಳು ಹದಗೆಟ್ಟಿದ್ದರಿಂದ ಮತ್ತು ಪರಸ್ಪರ ನೆಲದಲ್ಲಿ ಕ್ರಿಕೆಟ್ ಆಡಲು ನಿರಾಕರಿಸಿದ್ದರಿಂದ ಸ್ಥಳವನ್ನು ಬದಲಾಯಿಸಬೇಕಾಯಿತು. ಈ ಕಾರಣಕ್ಕಾಗಿ, ಪಂದ್ಯಾವಳಿ ಈಗ ಯುಎಇಯಲ್ಲಿ ನಡೆಯಲಿದೆ. ಬಿಸಿಸಿಐ ಇನ್ನೂ ಈ ಸ್ಪರ್ಧೆಯ ಅಧಿಕೃತ ಆತಿಥೇಯರಾಗಿ ಉಳಿಯುತ್ತದೆಯಾದರೂ, ಎಲ್ಲಾ ಪಂದ್ಯಗಳು ದುಬೈ ಮತ್ತು ಅಬುಧಾಬಿಯಲ್ಲಿ ನಡೆಯಲಿವೆ. ಮೊದಲ ಏಷ್ಯಾ ಕಪ್ ಅನ್ನು 1984 ರಲ್ಲಿ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ನಡೆಸಲಾಯಿತು. 2008 ರಿಂದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಟ್ರಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದಂತ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದಲ್ಲಿ ಪೊಲೀಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪುಕರಣಗಳ ದಂಡದ ಬಾಕಿ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು. ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪುಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪುಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿರುತ್ತದೆ. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ. ನಿಮ್ಮ ಬಾಕಿ ದಂಡವನ್ನು…
ಹಿಂದೂ ಧರ್ಮದಲ್ಲಿ, ಒಂಬತ್ತು ಗ್ರಹಗಳ ಅಧಿಪತಿಯಾದ ಸೂರ್ಯನಿಗೆ ಜ್ಯೋತಿಷ್ಯದಲ್ಲಿ ವಿಶೇಷ ಸ್ಥಾನವಿದೆ. ಸೂರ್ಯನನ್ನು ನೇರ ದೇವತೆಯಾಗಿ ಪೂಜಿಸಲಾಗುತ್ತದೆ. ಅದಕ್ಕಾಗಿಯೇ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ನಂಬಲಾಗಿದೆ. ಇದನ್ನು ಶಕ್ತಿ ಮತ್ತು ಬೆಳಕಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ತಾಮ್ರದ ಸೂರ್ಯನನ್ನು ಇಡುವುದರಿಂದ ಮನೆಗೆ ಧನಾತ್ಮಕ ಶಕ್ತಿ ಬರುತ್ತದೆ ಎಂದು ನಂಬಲಾಗಿದೆ. ತಾಮ್ರದ ಸೂರ್ಯ ದುಷ್ಟಶಕ್ತಿಗಳನ್ನು ತಡೆಯುತ್ತದೆ ಮತ್ತು ಮನೆಗೆ ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗಿದೆ. ಇದು ಜೀವನದಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ. ಮನೆಯಲ್ಲಿ ತಾಮ್ರದ ಸೂರ್ಯನನ್ನು ಇಡುವುದರಿಂದ ಸೂರ್ಯ ಗ್ರಹದ ಪ್ರಭಾವ ಹೆಚ್ಚಾಗುತ್ತದೆ. ಕುಟುಂಬ ಜೀವನದಲ್ಲಿ ಅನೇಕ ಪ್ರಯೋಜನಗಳಿವೆ. ಅವುಗಳೆಂದರೆ.. ಸೂರ್ಯ ಗ್ರಹವನ್ನು ಬಲಪಡಿಸುತ್ತದೆ: ನಿಮ್ಮ ಜಾತಕದಲ್ಲಿ ಸೂರ್ಯನ ಸ್ಥಾನವು ಬಲಗೊಳ್ಳುತ್ತದೆ. ಇದು ಸಕಾರಾತ್ಮಕ ಪರಿಣಾಮಗಳನ್ನು ಹೆಚ್ಚಿಸುತ್ತದೆ. ಇದು ಒಟ್ಟಾರೆ ಯೋಗಕ್ಷೇಮ ಮತ್ತು ಅದೃಷ್ಟವನ್ನು ಸುಧಾರಿಸುತ್ತದೆ. ಆತ್ಮವಿಶ್ವಾಸ ಮತ್ತು ಸ್ವಾಭಿಮಾನವನ್ನು ಹೆಚ್ಚಿಸುತ್ತದೆ: ಸೂರ್ಯನು ಶಕ್ತಿ ಮತ್ತು ನಾಯಕತ್ವದ ಸಂಕೇತವಾಗಿದೆ. ಮನೆಯಲ್ಲಿ ತಾಮ್ರದ ಸೂರ್ಯನನ್ನು ಇಡುವುದರಿಂದ ಆತ್ಮವಿಶ್ವಾಸ ಮತ್ತು ಧೈರ್ಯ ಹೆಚ್ಚಾಗುತ್ತದೆ. ಮಾನಸಿಕ…
BREAKING : 2025-26ನೇ ಸಾಲಿನ `SSLC-ಅರ್ಧವಾರ್ಷಿಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ : ಸೆ.12ರಿಂದ ಎಕ್ಸಾಂ ಆರಂಭ | SSLC
ಬೆಂಗಳೂರು :2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಿದೆ. 2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ನೀಡುವಂತೆ, ಉಲ್ಲೇಖಿತ ಸುತ್ತೋಲೆಯಲ್ಲಿ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕಗಳನ್ನು ಶಾಲಾ ಮುಖ್ಯ ಶಿಕ್ಷಕರ ಲಾಗಿನ್ಗೆ ಲಭ್ಯಗೊಳಿಸಲಾಗುವುದು. ಅದರಂತೆ, 2025-26 ಸಾಲಿನ 2.2.2. ಅರ್ಧವಾರ್ಷಿಕ ಪರೀಕ್ಷೆಯನ್ನು ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ www.kseab.karnataka.gov.in ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ…
BREAKING : 2025-26ನೇ ಸಾಲಿನ ಕರ್ನಾಟಕ `SSLC-ಅರ್ಧವಾರ್ಷಿಕ ಪರೀಕ್ಷೆ’ಯ ವೇಳಾಪಟ್ಟಿ ಪ್ರಕಟ | Karnataka SSLC Exam
ಬೆಂಗಳೂರು :2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಿದೆ. 2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ನೀಡುವಂತೆ, ಉಲ್ಲೇಖಿತ ಸುತ್ತೋಲೆಯಲ್ಲಿ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕಗಳನ್ನು ಶಾಲಾ ಮುಖ್ಯ ಶಿಕ್ಷಕರ ಲಾಗಿನ್ಗೆ ಲಭ್ಯಗೊಳಿಸಲಾಗುವುದು. ಅದರಂತೆ, 2025-26 ಸಾಲಿನ 2.2.2. ಅರ್ಧವಾರ್ಷಿಕ ಪರೀಕ್ಷೆಯನ್ನು ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ www.kseab.karnataka.gov.in ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ…












