Author: kannadanewsnow57

ದಾವಣಗೆರೆ : ರಾಜ್ಯದ ಅಂಗನವಾಡಿ ಶಿಕ್ಷಕಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎಸ್‌ ಎಸ್‌ ಎಲ್‌ ಸಿ ಪಾಸಾದ ಅಭ್ಯರ್ಥಿಗಳು ದೂರ ಶಿಕ್ಷಣದಲ್ಲಿ ನೇರವಾಗಿ ಪಿಯುಸಿ, ಡಿಗ್ರಿ ಪರೀಕ್ಷೆ ಕಟ್ಟಲು ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ರಾಜ್ಯದಲ್ಲಿರುವ ಅಂಗನವಾಡಿಗಳು ಮತ್ತು ಶಿಶು ವಿಹಾರಗಳು ಮತ್ತು ಬಾಲಮಂದಿರಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಎಸ್‍ಎಸ್‍ಎಲ್‍ಸಿ ಪಾಸಾದ ಅಭ್ಯರ್ಥಿಗಳಿಗೆ ದೂರ ಶಿಕ್ಷಣದಲ್ಲಿ ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಕಟ್ಟಲು ಮತ್ತು ದ್ವಿತೀಯ ಪಿಯುಸಿ ಪಾಸಾದವರಿಗೆ ಬಿ.ಎ. , ಬಿ.ಕಾಂ., ಬಿ.ಎಸ್ಸಿ, ಪರೀಕ್ಷೆಗಳನ್ನು ಬರೆಯಲು ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಮತ್ತು ಪದವಿ ಪರೀಕ್ಷೆಗಳನ್ನು ಬರೆಯಲು ಆಸಕ್ತ ಶಿಕ್ಷಕಿಯರು ಕನಕ ಕರೆಸ್ಟಾಂಡೆನ್ಸ್ ಕಾಲೇಜು, 2ನೇ ಮಹಡಿ, ಕುರುಬರ ಹಾಸ್ಟೆಲ್ ಕಾಂಪ್ಲೆಕ್ಸ್, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ ಇಲ್ಲಿನ ವಿಳಾಸಕ್ಕೆ ಅಥವಾ ಮೊ. 7022936433, 9886678178 ಸಂಪರ್ಕಿಸಿ ಮಾಹಿತಿ ಪಡೆಯಲು ತಿಳಿಸಲಾಗಿದೆ.

Read More

ರಾಯಚೂರು : ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತರು ದಿನಾಂಕ:03-07-2004 ರಿಂದ 03-01-2008ರ ನಡುವೆ ಜನಿಸಿರುವ ಅ-ವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕಿಖ ಅoಜe ಅಥವಾ ವೆಬ್ ಸೈಟ್ https//agnipathvayu.cdac.in. ಮುಖಾಂತರ ನೋಂದಾಯಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2024ರ ಜು.28ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ https//careerindianairforce.in / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 7795195171, 8073610442ಗೆ ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ ಪ್ರಧಾನಿಗಳ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಹೆಚ್ಚು ತೆರಿಗೆ ಸಂಗ್ರಹವಾದರೆ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಆಯೋಜಿಸಿದ್ದ ಜಿ.ಎಸ್.ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು.ಕರ್ನಾಟಕ ಸರ್ಕಾರ ಜಿ. ಎಸ್.ಟಿ ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ ವಸೂಲು ಮಾಡುತ್ತಿತ್ತು. ಜಿ.ಎಸ್.ಟಿ ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ. ಪ್ರಸ್ತುತ 16ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ ಹಂಚಿಕೆಯಾಗಬೇಕೆಂದು ನಾವು ಪ್ರತಿಪಾದಿಸುತ್ತಿದ್ದೇವೆ. 15ನೇ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯ ಸರ್ಕಾರಕ್ಕೆ ಶೇ.1.7%…

Read More

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸುವ ಪ್ರಕ್ರಿಯೆ (ಜುಲೈ 1 ರಿಂದ) ಜಾರಿಗೆ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ನೋಂದಣಿ ಹೇಗೆ? * 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ * 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ ₹2 ಶುಲ್ಕ * 30 ದಿನಗಳ ಬಳಿಕ ಒಂದು ವರ್ಷದೊಳಗಾದರೆ ತಹಶೀಲ್ದಾರರ ಪತ್ರ ಲಗತ್ತಿನ ಜೊತೆ ₹5 ಶುಲ್ಕ * 1 ವರ್ಷ ನಂತರವಾದರೆ ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾಪ್ರಾಂತ ದಂಡಾಧಿಕಾರಿ ಆದೇಶ ಪತ್ರ ಲಗತ್ತು 10 ಶುಲ್ಕ

Read More

ಬೆಂಗಳೂರು : ಸುಳ್ಳು ಸುದ್ದಿಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ಪ್ರೆಸ್ ಕ್ಲಬ್ , ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು. ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್,…

Read More

ಬೆಂಗಳೂರು : 2024-25 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಶಾಲೆಗಳಿಗೆ2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಉಲ್ಲೇಖಗಳನ್ವಯ ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ. 1. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:29-05-2024 ರಿಂದ ಶೈಕ್ಷಣಿಕ ವರ್ಷವು ಪ್ರಾರಂಭವಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ’ ಉಪಕ್ರಮವನ್ನು ಮತ್ತು 2023-24 ನೇ ಸಾಲಿನಲ್ಲಿ ‘ಕಲಿಕಾ ಬಲವರ್ಧನೆ’ ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ…

Read More

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರದ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬದಲಾವಣೆ, ಡಿಸಿಎಂ ನೇಮಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್‌, ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರದ ಪ್ರಕಾರ ನಾವೆಲ್ಲ ನಡೆದುಕೊಳ್ಳುತ್ತೇವೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದೆ. ಈ ವಿಚಾರಗಳು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದರು. ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಪ್ರಣವಾನಂದ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Read More

ಬೆಂಗಳೂರು : ನೈಋತ್ಯ ರೈಲ್ವೆ ಇಲಾಖೆಯು ಕನ್ನಡಿಗ ನೌಕರರಿಗೆ ಬಿಗ್‌ ಶಾಕ್‌ ನೀಡಿದೆ. ನೈಋತ್ಯ ರೈಲ್ವೆ ನಡೆಸುತ್ತಿರುವ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೇವಲ ಹಿಂದಿ, ಇಂಗ್ಲಿಷ್‌ ನಲ್ಲಿ ಬರೆಯುವ ಅವಕಾಶ ನೀಡಿದ್ದು, ಕನ್ನಡಿಗರಿಗೆ ಉನ್ನತ ಹುದ್ದೆಗಳು ಕೈತಪ್ಪುವಂತಾಗಿದೆ. ನೈಋತ್ಯ ರೈಲ್ವೆ ಬೆಂಗಳೂರು ವಿಭಾಗಿಯ ಎಲೆಕ್ಟ್ರಿಕಲ್‌ ಸೆಕ್ಷನ್‌ ನಿಂದ ಬಡ್ತಿ ಮೀಸಲಿಗೆ ಕಿರಿಯ ಎಂಜಿನಿಯರ್‌ ಹುದ್ದೆಗಳಿಗೆ ಪರೀಕ್ಷೆಗೆ ಅಧಿಸೂಚನೆ ಪ್ರಕಟವಾಗಿದ್ದು, ಪರೀಕ್ಷೆಯು ಕೇವಲ ಹಿಂದಿ, ಇಂಗ್ಲಿಷ್‌ ನಲ್ಲಿ ಬರೆಯಲು ಮಾತ್ರ ಅವಕಾಶ ನೀಡಲಾಗಿದೆ. ಕನ್ನಡಿಗರಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯುವ ಅವಕಾಶವಿಲ್ಲ. ಹೀಗಾಗಿ ಕನ್ನಡಿಗ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಲಾಗಿದೆ. ರೈಲ್ವೆ ಇಲಾಖೆಯೊಳಗೆ ಬಡ್ತಿ ಮೀಸಲು ಹುದ್ದೆಗಳ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತವೆ. ಈ ವೇಳೆ ಕಡಾಯವಾಗಿ ಕನ್ನಡದಲ್ಲಿ ಪರೀಕ್ಷೆ ಬರೆಯುವ ಆಯ್ಕೆ ನೀಡಬೇಕು ಎಂಬ ಒತ್ತಾಯ ಹೆಚ್ಚಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ವಸತಿ ರಹಿತ ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 38,000 ಮನೆ ಹಂಚಿಕೆಗೆ ಸಿದ್ಧತೆ ನಡೆಸಿದೆ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಹೇಳಿದ್ದಾರೆ. ಸೋಮವಾರ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ರಾಜ್ಯದೆಲ್ಲೆಡೆ ಬಡ ಕುಟುಂಬಗಳಿಗೆ ಎರಡನೇ ಹಂತದಲ್ಲಿ 38,000 ಮನೆಗಳನ್ನು ಜುಲೈ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಹಂಚಿಕೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 1,80,253 ಮನೆಗಳ ನಿರ್ಮಾಣ ಮಾಡಲಾಗುತ್ತಿದ್ದು, ಕಳೆದ ಮಾರ್ಚ್‌ ತಿಂಗಳಲ್ಲಿ ೩೬,೭೮೯ ಮನೆಗಳನ್ನು ಸಿಎಂ ಸಿದ್ದರಾಮಯ್ಯ ಹಂಚಿಕೆ ಮಾಡಿದ್ದರು, ಇದೀಗ ಎರಡನೇ ಹಂತದಲ್ಲಿ 38,000 ಮನೆ ಮುಖ್ಯಮಂತ್ರಿಯವರಿಂದಲೇ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು. ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು. ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು…

Read More