Author: kannadanewsnow57

ನವದೆಹಲಿ : ಆಗ್ನೇಯ ರೈಲ್ವೆಯು ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟ್ರಾನ್ಸ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜೂನ್ 12, 2024 ರ ಇಂದು ಕೊನೆಯ ದಿನವಾಗಿದೆ. ಒಟ್ಟು 1202 ಹುದ್ದೆಗಳು ಖಾಲಿ ಇವೆ. ಅದರಲ್ಲಿ 827 ಸಹಾಯಕ ಲೋಕೋ ಪೈಲಟ್ ಮತ್ತು ಟ್ರಾನ್ಸ್ ಮ್ಯಾನೇಜರ್ ಹುದ್ದೆಗಳು ಸೇರಿವೆ. ಆಗ್ನೇಯ ರೈಲ್ವೆಯು ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟ್ರಾನ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 12, 2024 ರವರೆಗೆ ಅರ್ಜಿ ಸಲ್ಲಿಸಬಹುದು. ಒಟ್ಟು 1202 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಅಸಿಸ್ಟೆಂಟ್ ಲೋಕೋ ಪೈಲಟ್ 827 ಮತ್ತು ಟ್ರಾನ್ಸ್ ಮ್ಯಾನೇಜರ್ 375 ಹುದ್ದೆಗಳು ಖಾಲಿ ಇವೆ. ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳನ್ನು ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪರೀಕ್ಷೆ ಜಿಡಿಸಿಇ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಇದು ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಹೊಂದಿರುತ್ತದೆ. ಶೈಕ್ಷಣಿಕ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ.  ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ…

Read More

ನವದೆಹಲಿ : ವಾಹನ ಸವಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ತರಲು ಕೇಂದ್ರವು ಪ್ರಯತ್ನಗಳನ್ನು ಮಾಡುತ್ತದೆ ಎಂದು‌ ಪೆಟ್ರೋಲಿಯಂ ಸಚಿವ ಹರ್‌ ದೀಪ್ ಸಿಂಗ್ ಪುರಿ ಮಂಗಳವಾರ ಹೊಸ ಕ್ಯಾಬಿನೆಟ್ನಲ್ಲಿ ಅಧಿಕಾರ ವಹಿಸಿಕೊಂಡಾಗ ಹೇಳಿದ್ದಾರೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಸ್ವಾಧೀನ ಪ್ರಕ್ರಿಯೆಗೆ ಹಣವನ್ನು ಜೋಡಿಸಲು ಸಾಧ್ಯವಾಗದ ಕಾರಣ ಇತರ ಇಬ್ಬರು ಕಣದಿಂದ ಹೊರಗುಳಿದ ನಂತರ ಕೇವಲ ಒಬ್ಬ ಬಿಡ್ಡರ್ ಮಾತ್ರ ಉಳಿದಿದ್ದರಿಂದ ಸರ್ಕಾರವು 2022 ರಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಷೇರು ಮಾರಾಟ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಒಎಂಸಿಗಳಲ್ಲಿನ ಷೇರು ಮಾರಾಟದ ಬಗ್ಗೆ ಬೆಳವಣಿಗೆಗಳು ನಡೆದಿವೆ.‌ ಭಾರತೀಯ ಸಂಸ್ಥೆಗಳು ರಷ್ಯಾದೊಂದಿಗೆ ಟರ್ಮ್ ಆಯಿಲ್ ಒಪ್ಪಂದಕ್ಕಾಗಿ ಮಾತುಕತೆ ನಡೆಸುತ್ತಿವೆ ಎಂದು ಅವರು ಹೇಳಿದರು. ಪೆಟ್ರೋಲ್,ಡಿಸೇಲ್‌ ಗಳನ್ನು ಜಿಎಸ್‌ ಟಿ ವ್ಯಾಪ್ತಿಗೆ ತರಲು ನಾವು ಪ್ರಯತ್ನಿಸುತ್ತೇವೆ. ರಾಜ್ಯ ಸಚಿವ (ಸುರೇಶ್ ಗೋಪಿ)…

Read More

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಹುಬ್ಬಳ್ಳಿ ಭಾಗದಲ್ಲಿ ಕಾಂಗ್ರೆಸ್‌ ಹಿನ್ನಡೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಮುಖ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಡಿ.ಕೆ.ಸುರೇಶ್ ಅವರು ಸೋತಿದ್ದಾರೆ ಎನ್ನುವುದು ನಿಜ. ಆದರೆ ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕೋಡಿ, ದಾವಣಗೆರೆ, ಕಲ್ಬುರ್ಗಿ, ಮತ್ತು ರಾಯಚೂರುಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನೂ ನಮ್ಮ ಪಕ್ಷದ ಅಭ್ಯರ್ಥಿಗಳು ಸೋಲಿಸಿದ್ದಾರೆ. ಹುಬ್ಬಳ್ಳಿಯ ಅಮಾಯಕ ಹೆಣ್ಣೊಬ್ಬಳ ಹತ್ಯೆಯನ್ನು ನಿಮ್ಮ ಪಕ್ಷ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡ ಕಾರಣಕ್ಕಾಗಿ ನಮಗೆ ಆ ಭಾಗದಲ್ಲಿ ಹಿನ್ನಡೆಯಾಯಿತು. ಇಲ್ಲದೆ ಇದ್ದರೆ ನಿಮ್ಮ ಪಕ್ಷ ಒಂದಂಕಿಗೆ ಇಳಿಯುತ್ತಿತ್ತು. ನಿಮ್ಮ ದೆಹಲಿ ನಾಯಕರ ರೀತಿಯಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಹೇಳಿದ್ದಾರೆ. ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ. ಕೇಂದ್ರ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

Read More

ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಇದೀಗ ಟೊಮೆಟೊ ಬೆಲೆ ಗಗನಕ್ಕೇರಿದೆ. ಶೀಘ್ರವೇ ಕೆಜಿ ಟೊಮೆಟೊ ಬೆಲೆ 100ರೂ. ಗಡಿ ದಾಟುವ ಸಾಧ್ಯತೆ ಇದೆ. ಹೌದು, ಮಾರುಕಟ್ಟೆಯಲ್ಲಿ ಟೊಮಟೋ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಮಂಗಳವಾರ ಗರಿಷ್ಠ 80 ರೂ. ನಂತೆ ಮಾರಾಟವಾಗಿದೆ. ಶೀಘ್ರವೇ 100-120 ರೂ.ಗೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರ್ತಕರು ತಿಳಿಸಿದ್ದಾರೆ. ಮಳೆ ಹಾಗೂ ರೋಗಬಾಧ ಕಾರಣದಿಂದ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಕುಸಿದಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಬೆಂಗಳೂರಿನ ಚಿಲ್ಲರೆ ಮಾರುಕಟ್ಟೆಗಳಲ್ಲಿ ಟೊಮೇಟೊ ಬೆಲೆ ಕೆಜಿಗೆ 40ರೂ. ಇತ್ತು. ಆದರೆ ಈಗ 80 ರೂ.ಗೆ ಏರಿಕೆಯಾಗಿದ್ದು, ಶೀಘ್ರವೇ 100 ರೂ.ಗಡಿ ದಾಟುವ ಸಾಧ್ಯತೆ ಇದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಇನ್‌ ಸ್ಟಾಗ್ರಾಂನಲ್ಲಿ ನಟ ದರ್ಶನ್‌ ಗೆಳತಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಮರ್ಮಾಂಗದ ಫೋಟೋ ಕಳಿಸಿ ಲೈಂಗಿಕ ಕ್ರಿಯೆಗೆ ಬರುವಂತೆ ಆಹ್ವಾನಿಸಿದ್ದೇ ದರ್ಶನ್‌ ಸಿಟ್ಟಿಗೆ ಕಾರಣ ಎನ್ನಲಾಗಿದೆ. ಇನ್‌ ಸ್ಟಾಗ್ರಾಂನಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಪವಿತ್ರಾ ಗೌಡ ಪರೋಕ್ಷವಾಗಿ ಪೋಸ್ಟ್‌ ಹಾಕಿದ್ದು ವಿವಾದವಾಗಿತ್ತು. ಆ ವಿವಾದದ ಬಳಿಕ ಪವಿತ್ರಾಗೌಡರಿಗೆ ರೇಣುಕಾಸ್ವಾಮಿ ಕಾಟ ಶುರುವಾಗಿದೆ. ತನ್ನನ್ನು ದರ್ಶನ್‌ ಅಭಿಮಾನಿ ಎಂದು ಹೇಳಿಕಂಡಿದ್ದ ಆತ ಇನ್‌ ಸ್ಟಾಗ್ರಾಂನಲ್ಲಿ ಪವಿತ್ರಾಗೌಡರ ಫೋಟೋಗಳಿಗೆ ಅವಹೇಳನಕಾರಿಯಾಗಿ ಕಮೆಂಟ್‌ ಹಾಕಿದ್ದ ಎನ್ನಲಾಗಿದೆ. ಪವಿತ್ರಾಗೌಡಗೆ ಖಾಸಗಿಯಾಗಿ ಆತ ನಿರಂತರವಾಗಿ ಅಶ್ಲೀಲ ಮೆಸೇಜ್‌ ಗಳನ್ನು ಕಳುಹಿಸಿದ್ದ. ಇದು ಅತಿರೇಕಕ್ಕೆ ಹೋಗಿ ಮರ್ಮಾಂಗದ ಫೋಟೋ ಕಳುಹಿಸಿ ಆತ ವಿಕೃತಿ ಮೆರೆದಿದ್ದ. ಈ ಮೆಸೇಜ್‌ ಬಗ್ಗೆ ದರ್ಶನ್‌ ಗೆ ಪವಿತ್ರಾಗೌಡ ತಿಳಿಸಿದ್ದಳು. ಆಗ ಕೆರಳಿದ ದರ್ಶನ್‌, ರೆಡ್ಡಿ ಹೆಸರಿನ ಖಾತೆ ಬಗ್ಗೆ ವಿಚಾರಿಸಿದಾಗ ರೇಣುಕಾಸ್ವಾಮಿ ಎಂಬುದು ಗೊತ್ತಾಗಿದೆ. ಬಳಿಕ ಬೆದರಿಸಿ ಎಚ್ಚರಿಕೆ…

Read More

ಚಿತ್ರದುರ್ಗ : ಸ್ಯಾಂಡಲ್‌ ವುಡ್‌ ನಟ ದರ್ಶನ್‌ ಹಾಗೂ ಸಹಚರರಿಂದ ಹತ್ಯೆಯಾದ ರೇಣುಕಾಸ್ವಾಮಿ ಅಂತ್ಯಕ್ರಿಯೆಯನ್ನು ಚಿತ್ರದುರ್ಗದಲ್ಲಿ ತಡರಾತ್ರಿ ವೀರಶೈವ ಸಂಪ್ರದಾಯದಂತೆ ನಡೆಸಲಾಯಿತು. ರೇಣುಕಾಸ್ವಾಮಿ ಪಾರ್ಥಿವ ಶರೀರರವನ್ನು ಮಂಗಳವಾರ ರಾತ್ರಿ ಚಿತ್ರದುರ್ಗಕ್ಕೆ ತರಲಾಗಿದ್ದು, ಪಾರ್ಥಿವ ಶರೀರ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ವೀರಶೈವ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಿತು. ಅಂತ್ಯಸಂಸ್ಕಾರದಲ್ಲಿ ಕುಟುಂಬಸ್ಥರು, ಸಂಬಂಧಿಕರು ಸೇರಿದಂತೆ ಸಾವಿರಾರು ಜನರು ಭಾಗಿಯಾಗಿದ್ದರು. ರೇಣುಕಾಸ್ವಾಮಿ ಕೊಲೆ ಖಂಡಿಸಿ ಇಂದು ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಟಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಆತನ ಆಪ್ತರು ಸೇರಿ ರೇಣುಕಾಸ್ವಾಮಿ ಕೊಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಚಿತ್ರದುರ್ಗದಲ್ಲಿ ವೀರಶೈವ ಸಮಾಜ, ವೀರಶೈವ ಲಿಂಗಾಯತ ಮಹಾಸಭಾ, ಜಂಗಮ ಸೇರಿದಂತೆ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿವೆ. ಚಿತ್ರದುರ್ಗದ ನೀಲಕಂಠೇಶ್ವರ ದೇಗುಲದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದ್ದು, ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿ…

Read More

ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ಇಂದು ಕೊನೆಯ ದಿನವಾಗಿದ್ದು,  ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಅಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್‌ಪಿ) ಅಳವಡಿಸುವುದು ಕಡ್ಡಾಯವಾಗಿದೆ. ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ • https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ. • ನಿಮ್ಮವಾಹನ ತಯಾರಕರನ್ನು…

Read More

ನವದೆಹಲಿ : ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿವಿಧ ಸೌಲಭ್ಯಗಳ ಜೊತೆಗೆ ಆಹಾರ ಧಾನ್ಯಗಳನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿ ಬೇಕು. ಪಡಿತರ ಚೀಟಿ ಇಲ್ಲದೆ, ಯಾವುದೇ ಪಡಿತರ ವಿತರಕರು ಪಡಿತರ ವಿತರಣೆ ಮಾಡುವುದಿಲ್ಲ.  ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿಯನ್ನು ಕಾರ್ಡ್ನೊಂದಿಗೆ ಮಾಡುವುದು ಸಹ ಅಗತ್ಯವಾಗಿದೆ. ಅದು ಇಲ್ಲದೆ, ನೀವು ಉಚಿತ ಪಡಿತರವನ್ನು ಪಡೆಯುತ್ತೀರಾ ಅಥವಾ ಇಲ್ಲವೇ? ಪಡಿತರ ಚೀಟಿಯ ಇ-ಕೆವೈಸಿಯನ್ನು ನೀವು ಎಲ್ಲಿ ಪಡೆಯಬಹುದು? ಅದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ನೀವು ಪಡಿತರ ಚೀಟಿಯ ಮೂಲಕ ಉಚಿತ ಪಡಿತರ ಸೌಲಭ್ಯವನ್ನು ಪಡೆಯುತ್ತಿದ್ದರೆ ತಪ್ಪದೇ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಆದರೆ ಪಡಿತರ ಚೀಟಿಗಾಗಿ ಇ-ಕೆವೈಸಿ ಪ್ರಕ್ರಿಯೆಯನ್ನು ನೀವು ಇನ್ನೂ ಪೂರ್ಣಗೊಳಿಸದಿದ್ದರೆ, ಈ ಕೆಲಸವನ್ನು ಶೀಘ್ರದಲ್ಲೇ ಮಾಡಿ. ನಿಯಮದ ಪ್ರಕಾರ, ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಿಕೊಳ್ಳುವುದು ಅವಶ್ಯಕ. ಇದಕ್ಕಾಗಿ, ಎಲ್ಲಾ ಸದಸ್ಯರ ಬೆರಳಚ್ಚು ಪರಿಶೀಲನೆ ಅವಶ್ಯಕ. ಪಡಿತರ ಚೀಟಿಯಲ್ಲಿ ಹೆಸರು ಇರುವ ಸದಸ್ಯರ ಇ-ಕೆವೈಸಿ ಹೊಂದಿರುವುದು ಅವಶ್ಯಕ. ಸದಸ್ಯರ ಇ-ಕೆವೈಸಿ ಮಾಡದಿದ್ದರೆ,…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾದ ಬಳಿಕ ನಟ ದರ್ಶನ್‌ ಅವರು ಪವಿತ್ರಾಗೌಡ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಬೆನ್ನಲ್ಲೇ ಕೋಪಗೊಂಡಿದ್ದ ನಟ ದರ್ಶನ್‌ ಅವರು, ಪವಿತ್ರಾ ಗೌಡ ಅವರ ಮೇಲೆಯೂ ಹಲ್ಲೆ ನಡೆಸಿದ್ದರು. ಹಲ್ಲೆಗೊಳಗಾದ ಪವಿತ್ರಾಗೌಡ ಆರ್.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದರು ಎನ್ನಲಾಗಿದೆ. ನಟಿ ಪವಿತ್ರ ಗೌಡಗೆ ಅಶ್ಲೀಲವಾಗಿ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬಿಗ್ ಶಾಕ್ ಎದುರಾಗಿದ್ದು, ದರ್ಶನ್, ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ.

Read More