Subscribe to Updates
Get the latest creative news from FooBar about art, design and business.
Author: kannadanewsnow57
ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯ ಗಾಬರಿ ಲೇಔಟ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಪತ್ನಿ ಶ್ರುತಿ(35) ಮಕ್ಕಳಾದ ಮನೀಶ್(9), ಮೂರು ತಿಂಗಳ ಮಗು ಅನೀಶ್ ನನ್ನು ಕೊಲೆ ಮಾಡಿ ಸಂತೋಷ್(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಅವರು ನೇಣು ಹಾಕಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲಿಸಿದ್ದು, ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿತ್ರದುರ್ಗ : ಆಶಾ ಕಿರಣ ಯೋಜನೆ ಅಡಿಯಲ್ಲಿ 40 ವರ್ಷ ದಾಟಿದ ದೃಷ್ಟಿ ದೋಷವಿರುವ ನಾಗರೀಕರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಮಟ್ಟದ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಆಶಾ ಕಿರಣ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಜಿ.ಓ.ನಾಗರಾಜ್ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಶಾ ಕಿರಣ ಯೋಜನೆಯಡಿ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಶಾ ಕಿರಣ ಯೋಜನೆಯಡಿ ಮೊದಲ ಹಂತದಲ್ಲಿ ಮನೆ ಮನೆ ಭೇಟಿ, ಅಂಧತ್ವ ದೃಷ್ಟಿ ದೋಷ ತಪಾಸಣೆ ನಡೆಸಿ, ಜಿಲ್ಲೆಯಲ್ಲಿ 40ವರ್ಷ ಮೇಲ್ಪಟ್ಟ ಒಟ್ಟು 55000 ಫಲಾನುಭವಿಗಳನ್ನು ಮತ್ತು ಶಾಲಾ ವಿದ್ಯಾರ್ಥಿಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 3600 ಫಲಾನುಭವಿಗಳು ಪತ್ತೆ ಹಚ್ಚಿ, ಗುರುತಿಸಿ ಗಣಕೀಕೃತ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಈಗ ಆಶಾ ಕಿರಣ ಎರಡನೇಯ ಹಂತದಲ್ಲಿ ಉಚಿತ…
ನವದೆಹಲಿ : ವಿವಿಧ ವಿರೋಧ ಪಕ್ಷಗಳ ಸದಸ್ಯರ ತೀವ್ರ ವಿರೋಧದ ನಡುವೆಯೂ ಲೋಕಸಭೆಯು ಬುಧವಾರ ವಕ್ಫ್ (ತಿದ್ದುಪಡಿ) ಮಸೂದೆ, 2025 ಅನ್ನು ಅಂಗೀಕರಿಸಿತು. ಕಳೆದ ವರ್ಷ ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಆಗಸ್ಟ್ 8, 2024 ರಂದು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಉಲ್ಲೇಖಿಸಲಾಯಿತು. ಸಂಸತ್ತಿನ ಜಂಟಿ ಸಮಿತಿ (ಜೆಪಿಸಿ) ಪ್ರಸ್ತಾಪಿಸಿದ 14 ತಿದ್ದುಪಡಿಗಳಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿತು. ಈ ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, 232 ಸಂಸದರು ಮಸೂದೆಯ ವಿರುದ್ಧವಾಗಿ ಮತ ಚಲಾಯಿಸಿದರು. ಬಿಜೆಪಿ ಸಂಸದೆ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ ವರದಿಯನ್ನು ಫೆಬ್ರವರಿ 13 ರಂದು ವಿರೋಧ ಪಕ್ಷಗಳ ಗದ್ದಲ ಮತ್ತು ಸಭಾತ್ಯಾಗದ ನಡುವೆಯೂ ಸಂಸತ್ತಿನಲ್ಲಿ ಮಂಡಿಸಲಾಯಿತು. ಕೇಂದ್ರ ಸಚಿವ ಸಂಪುಟದ ಅನುಮೋದನೆಯ ನಂತರ, ಬಜೆಟ್ ಅಧಿವೇಶನದ ಎರಡನೇ ಭಾಗದಲ್ಲಿ ಮಸೂದೆಯನ್ನು ಸಂಸತ್ತಿನಲ್ಲಿ ಪರಿಚಯಿಸುವ ಸಾಧ್ಯತೆಯಿದೆ. ಬಜೆಟ್ ಅಧಿವೇಶನದ ಎರಡನೇ ಹಂತವನ್ನು ಮಾರ್ಚ್ 10 ರಿಂದ ಏಪ್ರಿಲ್…
ಬೆಂಗಳುರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಓದಲಾದ (2) ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಪಿಂಚಣಿಯನ್ನು ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳ ಮೂಲಕ ಪಾವತಿ ಮಾಡುವ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳನ್ನು ನೀಡಲಾಗಿದೆ. ಓದಲಾದ (3)ರ ಆದೇಶದಲ್ಲಿ ಸಿಪಿಪಿಸಿ ಹೊಂದಿರುವ ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳೂಂದಿಗೆ ಅನುಕಲನದ ಮುಖಾಂತರ ಖಜಾನೆ-2 ರಲ್ಲಿ ಪಿಂಚಣಿ ದತ್ತಾಂಶವನ್ನು/ಲೆಕ್ಕ ಸಮನ್ವಯವನ್ನು ಅನ್ ಲೈನ್ ನಲ್ಲಿ ನಿರ್ವಹಿಸುವ ಉದ್ದೇಶದಿಂದ ಅರ್ಹ ರಾಜ್ಯ ಪಿಂಚಣಿ ನೌಕರರಿಗೆ ಆದೇಶದಲ್ಲಿ ನೀಡಿರುವ ಬ್ಯಾಂಕುಗಳ ಮುಖಾಂತರ ಪಾವತಿ ಮಾಡಲು ಅಭಿಮತವನ್ನು ನೀಡಬಹುದಾಗಿದೆ. ಓದಲಾದ (4) ರಲ್ಲಿ ಖಜಾನೆ ಇಲಾಖೆಯ ಕಡತದಲ್ಲಿ ಕೆ.ಸಿ.ಎಸ್.ಆರ್. ನಿಯಮ 326 ಮತ್ತು 332 (ಸಿ) ರನ್ನಯ ವಯೋ ನಿವೃತ್ತಿ/ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಅವರು ನಿವೃತ್ತಿ ಹೊಂದುವ 3 ತಿಂಗಳ ಮುಂಚಿತವಾಗಿ ಮಹಾಲೇಖಪಾಲರಿಗೆ…
ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿನ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ರವರು ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ. ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025 ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ…
ನವದೆಹಲಿ : ಅಲಹಾಬಾದ್ ಹೈಕೋರ್ಟ್ ಧಾರ್ಮಿಕ ಮತಾಂತರದ ಕುರಿತು ತನ್ನ ತೀರ್ಪು ನೀಡಿದೆ. ನಂಬಿಕೆಯ ಮೂಲಕ ಮಾತ್ರ ಮತಾಂತರ ಸಾಧ್ಯ, ವಂಚನೆ ಮತ್ತು ಒತ್ತಡದ ಅಡಿಯಲ್ಲಿ ನಡೆಯುವ ಮತಾಂತರವು ಕಾನೂನುಬಾಹಿರ ಮತ್ತು ಗಂಭೀರ ಅಪರಾಧವಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ವಯಸ್ಕ ವ್ಯಕ್ತಿಯು ಪ್ರವಾದಿ ಹಜರತ್ ಮೊಹಮ್ಮದ್ ಅವರನ್ನು ಶುದ್ಧ ಹೃದಯದಿಂದ ಮತ್ತು ಸ್ವಂತ ಇಚ್ಛೆಯಿಂದ ನಂಬಿದಾಗ ಮಾತ್ರ ಇಸ್ಲಾಂಗೆ ಮತಾಂತರಗೊಳ್ಳುವುದು ನಿಜವಾದದ್ದೆಂದು ಪರಿಗಣಿಸಬಹುದು ಎಂದು ನ್ಯಾಯಮೂರ್ತಿ ಮಂಜು ರಾಣಿ ಚೌಹಾಣ್ ಅವರ ಪೀಠ ಹೇಳಿದೆ. ಇಸ್ಲಾಂ ಧರ್ಮದ ತತ್ವಗಳಿಂದ ಪ್ರಭಾವಿತರಾಗಿ, ಅವರು ನಿಜವಾಗಿಯೂ ಹೃದಯ ಪರಿವರ್ತನೆ ಪಡೆದಿರಬಹುದು. ನಿಜವಾದ ಹೃದಯದಿಂದ, ನೀವು ಅಲ್ಲಾಹನನ್ನು ನಿಮ್ಮ ಹೃದಯದಲ್ಲಿ ಇಟ್ಟುಕೊಳ್ಳಬೇಕು ಮತ್ತು ಪ್ರವಾದಿ ಮೊಹಮ್ಮದ್ ಸಾಹೇಬರಲ್ಲಿ ನಂಬಿಕೆ ಇಡಬೇಕು ಎಂದು ನ್ಯಾಯಾಲಯ ಹೇಳಿದೆ. ಅವರ ತತ್ವಗಳನ್ನು ಪೂರ್ಣ ಹೃದಯದಿಂದ ಅನುಸರಿಸಿ ಮತ್ತು ನಿಮ್ಮ ವಿಗ್ರಹದಲ್ಲಿ ವಿಶ್ವದ ಶಕ್ತಿಗಳನ್ನು ನೋಡಿ. ಈ ವಾದಗಳ ಆಧಾರದ ಮೇಲೆ, ಮದುವೆಯ ಹೆಸರಿನಲ್ಲಿ ಸುಳ್ಳು ಹೇಳಿ ಮತಾಂತರಗೊಂಡ ಮತ್ತು ಅತ್ಯಾಚಾರ…
ಬೆಂಗಳುರು : ಖಜಾನೆ-2ರ ತಂತ್ರಾಂಶದ ಮುಖಾಂತರ ಮಹಾಲೇಖಪಾಲರಿಗೆ ವಯೋ ನಿವೃತ್ತಿ/ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಓದಲಾದ (2) ರ ಆದೇಶದಲ್ಲಿ ಕರ್ನಾಟಕ ರಾಜ್ಯದ ಪಿಂಚಣಿಯನ್ನು ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳ ಮೂಲಕ ಪಾವತಿ ಮಾಡುವ ಪ್ರಕ್ರಿಯೆ ಮತ್ತು ಅನುಸರಿಸಬೇಕಾದ ಕ್ರಮಗಳನ್ನು ನೀಡಲಾಗಿದೆ. ಓದಲಾದ (3)ರ ಆದೇಶದಲ್ಲಿ ಸಿಪಿಪಿಸಿ ಹೊಂದಿರುವ ಸಾರ್ವಜನಿಕ ಕ್ಷೇತ್ರ ಬ್ಯಾಂಕುಗಳೂಂದಿಗೆ ಅನುಕಲನದ ಮುಖಾಂತರ ಖಜಾನೆ-2 ರಲ್ಲಿ ಪಿಂಚಣಿ ದತ್ತಾಂಶವನ್ನು/ಲೆಕ್ಕ ಸಮನ್ವಯವನ್ನು ಅನ್ ಲೈನ್ ನಲ್ಲಿ ನಿರ್ವಹಿಸುವ ಉದ್ದೇಶದಿಂದ ಅರ್ಹ ರಾಜ್ಯ ಪಿಂಚಣಿ ನೌಕರರಿಗೆ ಆದೇಶದಲ್ಲಿ ನೀಡಿರುವ ಬ್ಯಾಂಕುಗಳ ಮುಖಾಂತರ ಪಾವತಿ ಮಾಡಲು ಅಭಿಮತವನ್ನು ನೀಡಬಹುದಾಗಿದೆ. ಓದಲಾದ (4) ರಲ್ಲಿ ಖಜಾನೆ ಇಲಾಖೆಯ ಕಡತದಲ್ಲಿ ಕೆ.ಸಿ.ಎಸ್.ಆರ್. ನಿಯಮ 326 ಮತ್ತು 332 (ಸಿ) ರನ್ನಯ ವಯೋ ನಿವೃತ್ತಿ/ ಸ್ವ-ಇಚ್ಛಾ ನಿವೃತ್ತಿ ಹೊಂದುವ ನೌಕರರ ಪಿಂಚಣಿ ಅರ್ಜಿಗಳನ್ನು ಅವರು ನಿವೃತ್ತಿ ಹೊಂದುವ 3 ತಿಂಗಳ ಮುಂಚಿತವಾಗಿ ಮಹಾಲೇಖಪಾಲರಿಗೆ…
ಬೆಂಗಳೂರು : ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣ ಈಗಾಗಲೇ ಘಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣ ಕೂಡ ಬಿಡುಗಡೆಯಾಗಿದ್ದು, ಶೀಘ್ರವೇ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ ತಿಂಗಳ ಹಣವನ್ನು ನಾವು ಈಗಾಗಲೇ ಕ್ಲಿಯರ್ ಮಾಡಿದ್ದೇವೆ. ಇನ್ನು ಫೆಬ್ರವರಿ ಕಂತಿನ ಹಣವನ್ನು ಕೂಡ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಾಕಲಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮೊನ್ನೆ ಫಲಾನುಭವಿಗಳ ಖಾತೆಗೆ ಜನವರಿ ತಿಂಗಳ ಹಣ ಜಮಾ ಆಗಿದೆ. 2500 ಕೋಟಿ ರೂ ಹಣ ಕ್ಲಿಯರ್ ಆಗಿದೆ. ಏಪ್ರಿಲ್ ಮೊದಲ ವಾರದಲ್ಲಿ ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಏಪ್ರಿಲ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಯಾವುದೇ ವ್ಯಕ್ತಿ ವೈಯಕ್ತಿಕವಾಗಿ ಪ್ರಾರಂಭಿಸಲು ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಮಾನ್ಯತೆ ಪಡೆದಿರುವ ವಾಣಿಜ್ಯ ಶಿಕ್ಷಣ ಸಂಸ್ಥೆಗಳಲ್ಲಿ (ಬೆರಳಚ್ಚು ಮತ್ತು ಶೀಘ್ರಲಿಪಿ) ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಏಪ್ರಿಲ್-2025ರ ಮಾಹೆಯಲ್ಲಿ ದಿನಾಂಕ: 01-04-2025 ರಿಂದ ದಿನಾಂಕ: 30-04-2025 ರೊಳಗೆ ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟಂತೆ ಸಹನಿರ್ದೇಶಕರು-1, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್.ವೃತ್ತ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಲಬುರ್ಗಿ ವಿಭಾಗಕ್ಕೆ ಸಂಬಂಧಿಸಿದಂತೆ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಅಪರ ಆಯುಕ್ತರ ಕಛೇರಿ, ಕಲಬುರ್ಗಿ ಇವರಿಗೆ, ಮತ್ತು ಬೆಳಗಾವಿ ಹಾಗೂ ಮೈಸೂರು ವಿಭಾಗಗಳಿಗೆ ಸಂಬಂಧಪಟ್ಟಂತೆ, ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಸಹನಿರ್ದೇಶಕರಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸುವುದು.. 1. ಅರ್ಜಿ ನಮೂನೆ-1 2. ಅಂತರ ದೃಢೀಕರಣ ಪ್ರಮಾಣ ಪತ್ರ: [ಬಿ.ಬಿ.ಎಂ.ಪಿ/ ನಗರಸಭೆ/ಪಟ್ಟಣ…
ನೀವು ಭೂಮಿ ಅಥವಾ ಮನೆ ಖರೀದಿಸಲು ಯೋಜಿಸುತ್ತಿದ್ದರೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅನೇಕ ಬಾರಿ ಜನರು ಯಾವುದೇ ತನಿಖೆ ನಡೆಸದೆ ಆಸ್ತಿಯನ್ನು ಖರೀದಿಸುತ್ತಾರೆ ಮತ್ತು ನಂತರ ಅವರು ವಂಚನೆಗೆ ಬಲಿಯಾಗುತ್ತಾರೆ. ಇತ್ತೀಚೆಗೆ, ನಕಲಿ ನೋಂದಣಿ ಮೂಲಕ ಆಸ್ತಿಯನ್ನು ಮಾರಾಟ ಮಾಡಿದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಖರೀದಿಸುತ್ತಿರುವ ಭೂಮಿ ಅಥವಾ ಮನೆಯ ನೋಂದಾವಣೆ ನಿಜವೋ ಅಥವಾ ನಕಲಿಯೋ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಲೇಖನದಲ್ಲಿ, ನೀವು ಭೂಮಿ ಅಥವಾ ಮನೆಯ ನೋಂದಣಿಯನ್ನು ಪರಿಶೀಲಿಸಲು ಕೆಲವು ಸುಲಭ ಮತ್ತು ಪರಿಣಾಮಕಾರಿ ಮಾರ್ಗಗಳನ್ನು ನಾವು ನಿಮಗೆ ತಿಳಿಸುತ್ತೇವೆ. 1. ಆನ್‌ಲೈನ್ ಪೋರ್ಟಲ್‌ನಿಂದ ಪರಿಶೀಲಿಸಿ ಇಂದಿನ ಡಿಜಿಟಲ್ ಯುಗದಲ್ಲಿ, ಪ್ರತಿಯೊಂದು ರಾಜ್ಯ ಸರ್ಕಾರವು ಭೂಮಿ ಮತ್ತು ಮನೆ ನೋಂದಣಿಯನ್ನು ಪರಿಶೀಲಿಸಲು ಆನ್‌ಲೈನ್ ಪೋರ್ಟಲ್ ಅನ್ನು ಒದಗಿಸಿದೆ. ನೀವು ಮನೆಯಲ್ಲಿಯೇ ಕೆಲವು ಸುಲಭ ಹಂತಗಳಲ್ಲಿ ನೋಂದಾವಣೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಬಹುದು. 2. ಖಾಸ್ರಾ ಸಂಖ್ಯೆಯ ಮೂಲಕ ಪರಿಶೀಲಿಸಿ ಖಾಸ್ರಾ ಸಂಖ್ಯೆಯು ಯಾವುದೇ ಭೂಮಿಯ…