Author: kannadanewsnow57

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಪ್ರಯಾಣಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಬಸ್‌ ಗಳಲ್ಲಿ ರಶ್‌ ತಪ್ಪಿಸಲು 500 ಹೊಸ ಬಸ್‌ ಗಳ ನಿಯೋಜನೆಗೆ ರಾಅಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಅನೇಕ ಮಾರ್ಗಗಳಲ್ಲಿ ಬಸ್ ಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಕೆಎಸ್‌ ಆರ್‌ ಟಿಸಿ 300ಕ್ಕೂ ಹೆಚ್ಚಿನ ಹೊಸ ಮಾರ್ಗಗಳಲ್ಲಿ ಮತ್ತು ಹಳೆ ಮಾರ್ಗಗಳಲ್ಲಿ ಹೆಚ್ಚುವರಿ ಬಸ್ ಸೇವೆ ಆರಂಭಿಸಲು ತೀರ್ಮಾನಿಸಿದೆ. ಬಸ್‌ ಗಳು ಅವಶ್ಯಕತೆ ಇರುವ ಹಾಗೂ ಶಾಲಾ-ಕಾಲೇಜುಗಳು ಹೆಚ್ಚಿರುವ ಮಾರ್ಗಗಳನ್ನು ಗುರುತಿಸಿರುವ ಕೆಎಸ್‌ ಆರ್‌ ಟಿಸಿ ಅಲ್ಲಿಗೆ ಹೆಚ್ಚುವರಿ ಅಥವಾ ಹೊಸದಾಗಿ ಬಸ್‌ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಅದರಂತೆ ಈಗಾಗಲೇ ಹೊಸ ಮಾರ್ಗ ಮತ್ತು ಹೆಚ್ಚುವರಿ ಬಸ್‌ ಗಳ ಅವಶ್ಯಕತೆ ಇರುವ 300 ಕ್ಕೂ ಹೆಚ್ಚಿನ ಮಾರ್ಗಗಳನ್ನು ಗುರುತಿಸಲಾಗಿದು, ಸದ್ಯ ಕೆಎಸ್‌ ಆರ್‌ ಟಿಸಿಗೆ ಸೇರ್ಪಡೆಯಾಗಿರುವ 814 ಬಸ್‌ ಗಳ ಪೈಕಿ 500 ಬಸ್‌…

Read More

ಧಾರವಾಡ : ರಾಜ್ಯದಲ್ಲಿ ಉತ್ತಮ ಮಳೆ ಆಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಬೇಕು. ಸರಕಾರದಿಂದ ಕೃಷಿ ಸಂಬಂಧಿತ ಎಲ್ಲ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಪ್ರೂಟ್ ಐಡಿ ಹೊಂದುವುದು ಕಡ್ಡಾಯವಾಗಿದ್ದು, ರೈತರಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರೂಟ್ ಐಡಿ ಹೊಂದಲು ಜಿಲ್ಲೆಯಾದ್ಯಂತ ಅಭಿಯಾನ ಹಮ್ಮಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವರು ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಜರುಗಿಸಿ, ಮಾತನಾಡಿದರು. ಮುಂಗಾರು ಪೂರ್ವಕಾಲದಲ್ಲಿ ಮಳೆ ಚನ್ನಾಗಿ ಆಗಿದ್ದರಿಂದ ನಮ್ಮ ಜಿಲ್ಲೆಯ ರೈತರು ಮುಂಗಾರು ಆರಂಭಕ್ಕೂ ಮೊದಲೇ ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದರು.…

Read More

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್‌ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಮೊದಲು ಅನುಷ್ಠಾನಗೊಂಡ ಶಕ್ತಿ ಯೋಜನೆಗೆ ಇಂದು ಒಂದು ವರ್ಷ ಪೂರೈಸಿದೆ. ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ. ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ್ದ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು.…

Read More

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಒಟ್ಟು 18 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಚಿಕ್ಕಮಗಳುರು, ದಾವಣಗೆರೆ, ಕೊಡಗು, ಶಿವಮೊಗ್ಗ, ಬಾಗಲಕೋಟೆ, ಕಲುಬರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಅಲೆ ಅಬ್ಬರ ಹೆಚ್ಚಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Read More

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಳೆದ ವರ್ಷದ ಮುಂಗಾರು ಹಂಗಾಮಿನ ಬೆಳೆ ನಷ್ಟಕ್ಕೆ ಬಾಕಿ ಉಳಿದ ಏಳು ಲಕ್ಷ ರೈತರಿಗೆ ಬರ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿದ್ದ 3,457 ಕೋಟಿ ರೂ. ಬರಪರಿಹಾರ ಹಣವನ್ನು 27.5ಲಕ್ಷ ರೈತರಿಗೆ ಹಂಚಿಕ ಬಳಿಕ ಉಳಿದಿರುವ 808ಕೋಟಿ ರೂ. ಹಣದಲ್ಲಿ ಹೆಚ್ಚುರಿಯಾಗಿ ಏಳು ಲಕ್ಷ ರೈತರಿಗೆ ಬರಪರಿಹಾರ ಹಂಚಿಕೆ ಮಾಡಲು ತೀರ್ಮಾನಿಸಲಾಗಿದೆ. ಇನ್ನು ಎನ್‌ ಡಿಆರ್‌ ಎಫ್‌ ಅಡಿ ರಾಜ್ಯಕ್ಕೆ ಹೆಚ್ಚುರಿಯಾಗಿ ಹಂಚಿಕೆಯಾಗಿರುವ 232 ಕೋಟಿ ರೂ.ಗಳಿಗೆ ರಾಜ್ಯ ಸರ್ಕಾರ ಇನ್ನೂ 232 ಕೋಟಿ ರೂ. ಸೇರಿಸಿ 17ಲಕ್ಷ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರವಾಗಿ 2,800 ರೂ.ನಿಂದ 3000 ರೂ. ವರೆಗೆ ಹೆಚ್ಚುವರಿ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ನಾಳೆಯೇ ಕೊನೆಯ ದಿನವಾಗಿದೆ. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ. ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ. ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ • https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್…

Read More

ನವದೆಹಲಿ : ಹೊಸದಾಗಿ ರಚನೆಯಾದ ಎನ್ಡಿಎ ಸರ್ಕಾರವು ತನ್ನ ಮೊದಲ 100 ದಿನಗಳ ಕಾರ್ಯಸೂಚಿಯ ಭಾಗವಾಗಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ 2 ಕೋಟಿ ಹೆಚ್ಚುವರಿ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲು ಸಜ್ಜಾಗಿದೆ. ವರದಿಗಳ ಪ್ರಕಾರ, ಪ್ರಸ್ತುತ ಸಮಗ್ರ ಕ್ರಿಯಾ ಯೋಜನೆ (ಐಎಪಿ) ಅಡಿಯಲ್ಲಿ ಫಲಾನುಭವಿಗಳು ಬಯಲು ಪ್ರದೇಶಗಳಲ್ಲಿ 1.2 ಲಕ್ಷ ರೂ., ಗುಡ್ಡಗಾಡು ರಾಜ್ಯಗಳು, ಕಷ್ಟಕರ ಪ್ರದೇಶಗಳು ಮತ್ತು ಬುಡಕಟ್ಟು ಮತ್ತು ಹಿಂದುಳಿದ ಜಿಲ್ಲೆಗಳಲ್ಲಿ 1.30 ಲಕ್ಷ ರೂ. ಈ ನೆರವನ್ನು ಸುಮಾರು 50% ಹೆಚ್ಚಿಸಲು ಕೇಂದ್ರವು ಯೋಜಿಸಿದೆ. ಇದು ಬಯಲು ಪ್ರದೇಶಗಳಲ್ಲಿ ಪ್ರತಿ ಪಿಎಂಎವೈ-ಜಿ ಮನೆಯ ನಿರ್ಮಾಣ ವೆಚ್ಚವನ್ನು 1.8 ಲಕ್ಷ ರೂ.ಗೆ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ 2 ಲಕ್ಷ ರೂ.ಗೆ ಹೆಚ್ಚಿಸುತ್ತದೆ. ದೇಶಾದ್ಯಂತ 2.95 ಕೋಟಿ ಮನೆಗಳ ಆರಂಭಿಕ ಗುರಿಯೊಂದಿಗೆ ಪಿಎಂಎವೈ-ಜಿ ಅನ್ನು 2016 ರಲ್ಲಿ ಪ್ರಾರಂಭಿಸಲಾಯಿತು. ಈ ಪೈಕಿ 2.61 ಕೋಟಿ ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.…

Read More

ಇಸ್ಲಾಮಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಇಡೀ ಕ್ಯಾಬಿನೆಟ್ ನೊಂದಿಗೆ ಪ್ರಮಾಣವಚನ ಸ್ವೀಕರಿಸಿದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ್ದಾರೆ ಮತ್ತು ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. https://twitter.com/CMShehbaz/status/1800066706502828111?ref_src=twsrc%5Etfw%7Ctwcamp%5Etweetembed%7Ctwterm%5E1800066706502828111%7Ctwgr%5Ec5e5cad7e96220581476830b8b83a9f370d1f88e%7Ctwcon%5Es1_c10&ref_url=https%3A%2F%2Fapi-news.dailyhunt.in%2F ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ರಾಷ್ಟ್ರಪತಿ ಭವನದಲ್ಲಿ ತಮ್ಮ ಹೊಸ ಕ್ಯಾಬಿನೆಟ್ ನೊಂದಿಗೆ ಪ್ರಮಾಣವಚನ ಸ್ವೀಕರಿಸಿದರು. ಮೋದಿ ಸರ್ಕಾರ 3.0 ಸರ್ಕಾರದಲ್ಲಿ ಒಟ್ಟು 72 ಮಂತ್ರಿಗಳಿದ್ದು, ಇದರಲ್ಲಿ 30 ಮಂತ್ರಿಗಳು ಕ್ಯಾಬಿನೆಟ್ನ ಭಾಗವಾಗಲಿದ್ದಾರೆ. ಇವರಲ್ಲದೆ, 5 ಸಚಿವರಿಗೆ ಸ್ವತಂತ್ರ ಉಸ್ತುವಾರಿ ನೀಡಲಾಗಿದೆ. ಅದೇ ಸಮಯದಲ್ಲಿ, 36 ಸಂಸದರಿಗೆ ರಾಜ್ಯ ಸಚಿವ ಸ್ಥಾನವನ್ನು ನೀಡಲಾಗಿದೆ. ಮೋದಿ ಸರ್ಕಾರ 2.0 ರಲ್ಲಿ ಸಚಿವರಾಗಿದ್ದ ಇಂತಹ ಅನೇಕ ಸಚಿವರನ್ನು ಮೋದಿ…

Read More

ನವದೆಹಲಿ : ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ವಾಹನದ ಮೇಲೆ ಕುಕಿ ಬಂಡುಕೋರರು ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿತ್ತು. ಭದ್ರತಾ ಪಡೆಗಳ ವಾಹನಗಳ ಮೇಲೆ ಅನೇಕ ಗುಂಡುಗಳನ್ನು ಹಾರಿಸಲಾಗಿದೆ, ಅವರು ಪ್ರತೀಕಾರ ತೀರಿಸಿಕೊಂಡರು, ರಾಷ್ಟ್ರೀಯ ಹೆದ್ದಾರಿ -53 ರ ಕೋಟ್ಲೆನ್ ಗ್ರಾಮದ ಬಳಿ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದರು. ದಾಳಿಯ ಸಮಯದಲ್ಲಿ ಕನಿಷ್ಠ ಒಬ್ಬ ಸಿಬ್ಬಂದಿಗೆ ಗುಂಡು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ದೆಹಲಿಯಿಂದ ಇನ್ನೂ ಇಂಫಾಲ್ ತಲುಪದ ಸಿಎಂ ಬಿರೇನ್ ಸಿಂಗ್ ಅವರು ಜಿಲ್ಲೆಯ ಪರಿಸ್ಥಿತಿಯನ್ನು ಪರಿಶೀಲಿಸಲು ಜಿರಿಬಾಮ್ಗೆ ಭೇಟಿ ನೀಡಲು ಯೋಜಿಸುತ್ತಿದ್ದರು” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿರಿಬಾಮ್ನಲ್ಲಿ ಶನಿವಾರ ಶಂಕಿತ ಉಗ್ರರು ಎರಡು ಪೊಲೀಸ್ ಹೊರಠಾಣೆಗಳು, ಅರಣ್ಯ ಬೀಟ್ ಕಚೇರಿ ಮತ್ತು ಕನಿಷ್ಠ 70 ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ.

Read More

ಬೆಂಗಳೂರು : ದೊಡ್ಮನೆ ರಾಜಕುಮಾರ್‌ ಕುಟುಂಬದ ನಟ ಯುವರಾಜ್‌ ಕುಮಾರ್‌ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಆರು ತಿಂಗಳಿನಿಂದ ಪತ್ನಿ ಶ್ರೀದೇವಿಯಿಂದ ದೂರವಿರುವ ನಟ ಯುವರಾಜ್‌ ಕುಮಾರ್‌ ಅವರು ವಿಚ್ಚೇದನಕ್ಕೆ ಫ್ಯಾಮೀಲಿ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ರಾಜ್​ಕುಮಾರ್ ಅಲಿಯಾಸ್‌ ಯುವ ರಾಜ್​ಕುಮಾರ್ ಅವರು ಫ್ಯಾಮಿಲಿ ಕೋರ್ಟ್​​ನಲ್ಲಿ ಡಿವೋರ್ಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ. ಯುವ ರಾಜ್‌ಕುಮಾರ್ 2019 ಮೇ 26ರಂದು ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್‌ನಲ್ಲಿ ಶ್ರೀದೇವಿ ಭೈರಪ್ಪ ಎಂಬುವವರನ್ನು ಮದುವೆಯಾದರು. ಶ್ರೀದೇವಿ ಮೂಲತಃ ಸಾಂಸ್ಕೃತಿಕ ನಗರಿ ಮೈಸೂರಿನವರು. ಇವರಿಬ್ಬರು ಏಳು ವರ್ಷಗಳಿಂದ ಪರಸ್ಪರ ಸ್ನೇಹಿತರಾಗಿದ್ದರು. ಈ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾದರು.

Read More