Author: kannadanewsnow57

ಬೆಂಗಳೂರು: ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System) ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ದೃಢ ಹೆಜ್ಜೆಯನ್ನು ಇಟ್ಟಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಎಲ್ಲಾ ಸಂಬಂಧಿಸಿದ (ಕಂದಾಯ, ನಗರಾಭಿವೃದ್ಧಿ, ನೋಂದಣಿ, ಲೋಕೋಪಯೋಗಿ, ನೀರಾವರಿ, ವಸತಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಇತ್ಯಾದಿ ಇಲಾಖೆಗಳ) ಹಿರಿಯ ಅಧಿಕಾರಿಗಳ ಸಭೆಯನ್ನು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ULMS ಗಣಕೀಕೃತ ಏಕ ವ್ಯವಸ್ಥೆಯಡಿ ಸರ್ವೆ, ಭೂ ಪರಿವರ್ತನೆ, ಬಡಾವಣೆ ಪ್ಲಾನ್‌ ಮಂಜೂರಿ, ಮನೆ ಪ್ಲಾನ್‌ ಮಂಜೂರಿ, ನಿವೇಶನ ಮಾರಾಟ, ಇ-ಖಾತಾ ಸೃಜನೆ (ಸ್ಥಳೀಯ ಸಂಸ್ಥೆಯಲ್ಲಿ), ಆಸ್ತಿ ತೆರಿಗೆ ಸಂಗ್ರಹ, ಭೂಸ್ವಾಧೀನ ಹಾಗೂ ಇನ್ನೂ ಅನೇಕ ಭೂ ಸಂಬಂಧಿತ ಚಟುವಟಿಕೆಗಳನ್ನು ಸರಾಗ, ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾದ ಒಂದೇ ಆನ್‌ಲೈನ್‌ ವ್ಯವಸ್ಥೆಗೆ ತರುವ ಯೋಜನೆಯಾಗಿದೆ. ಇದರಿಂದ ಜನರಿಗೆ ಬೇರೆ ಬೇರೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಭೂಮಿಗೆ ಸಂಬಂಧಿಸಿದ ಸೇವೆಗಳನ್ನು…

Read More

ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್, ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿ ಖಾಸಗಿ ಶಾಲೆಗಳಲ್ಲಿ ಶೇಕಡ 25 ರಷ್ಟು ಉಚಿತ ಸೀಟು ಪಡೆಯಲು ಶಾಲಾ ಶಿಕ್ಷಣ ಇಲಾಖೆ 2026- 27 ನೇ ಸಾಲಿನ ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆಗೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 10ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ, ಎಲ್‌ಕೆಜಿ ಮತ್ತು ಒಂದನೇ ತರಗತಿಗೆ ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 25ರ ಪ್ರಮಾಣದಲ್ಲಿ ಲಭ್ಯವಿರುವ ಸೀಟು ಹಾಗೂ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಶಾಲಾವಾರು ಸೀಟುಗಳ ಸಂಖ್ಯೆಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು. ಮಾರ್ಚ್ 11ರಿಂದ 12ರವರೆಗೆ ಅರ್ಜಿ ಸಲ್ಲಿಸಲು ಪ್ರಯೋಗಾರ್ಥ ಅವಧಿ ಇರಲಿದೆ. ಮಾರ್ಚ್ 16 ರಿಂದ ಏಪ್ರಿಲ್ 15 ರವರೆಗೆ ಆರ್‌.ಟಿ.ಇ. ಆಡಿ ದಾಖಲಾತಿ ಕೋರಿ ಪೋಷಕರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 21ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.…

Read More

ದಕ್ಷಿಣಕನ್ನಡ : ಲೂಡೋ ಬೋರ್ಡ್ ಕಾಯಿನ್ ನುಂಗಿ ಬಾಲಕಿ ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ಲಾಸ್ಟಿಕ್ ಕಾಯಿನ್ ನುಂಗಿ 8 ವರ್ಷದ ತನುಷ್ಕ ಸಾವನ್ನಪ್ಪಿದ್ದಾಳೆ ಸಹೋದರರ ಜೊತೆ ಲೂಡೋ ಆಡುವಾಗ ಈ ಒಂದು ಘಟನೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮದಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಯಾಗಿರುವ ತನುಷ್ಕ ಗಂಟಲಲ್ಲಿ ಲೂಡೋ ಕಾಯಿನ್ ಸಿಲುಕಿ ಸಾವನ್ನಪ್ಪಿದ್ದಾಳೆ. ಆಟ ಆಡುವ ಸಂದರ್ಭದಲ್ಲಿ ಲೂಡೋ ಕಾಯಿನ್ ಬಾಯಲ್ಲಿ ಇಟ್ಟುಕೊಂಡಿರುತ್ತಾಳೆ. 20 ನಿಮಿಷಗಳ ಕಾಲ ಗಂಟಲಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೆ ನರಳಾಡಿದ್ದಾಳೆ. ತಕ್ಷಣ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಗಲಿ ಆಕೆಯ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.! ಮನೆಯಲ್ಲಿ ಆಟವಾಡುವಾಗ ಚಿಕ್ಕ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಒಂದು ಕ್ಷಣ ಗಮನ ಹರಿಸದಿರುವುದು ಕೂಡ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ವಿಶೇಷವಾಗಿ ಒಂದು…

Read More

ಬೆಂಗಳೂರು : HRMS ತಂತ್ರಾಂಶದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಗೆ ಹೊರ ಉಳಿಯಲು ಇಚ್ಛಿಸುವ ಸರ್ಕಾರಿ ನೌಕರರಿಗೆ/ ಡಿಡಿಒ ಗಳಿಗೆ ಸರಳೀಕರಿಸಿಲಾದ ನೂತನ ಮಾರ್ಗಸೂಚಿ ಪ್ರಕಟಿಸಲಾಗಿದೆ.  ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಹಾಗೂ ಉಲ್ಲೇಖಿತ ಪತ್ರದಲ್ಲಿ ಸರ್ಕಾರದ ಆದೇಶದನ್ವಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಯಿಂದ ಸರ್ಕಾರಿ ನೌಕರರು ಹೊರಗುಳಿಯಲು ಇಚ್ಚಿಸಿದ್ದಲ್ಲಿ, ಹೊರಗುಳಿಯಲು ಫೆಬ್ರವರಿ ಮಾಹೆಯ ಅಂತ್ಯದವರೆವಿಗೂ ಮಾತ್ರವೇ HRMS-1 KASS ತಂತ್ರಾಂಶದಲ್ಲಿ ಈ ಅವಕಾಶ ಕಲ್ಪಿಸಿಕೊಡಲಾಗಿವುದರಿಂದ ಸದರಿ DDO ರವರುಗಳು ತಮ್ಮ ಕಛೇರಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ/ ಅಧಿಕಾರಿಗಳ ಫಬ್ರವರಿ ವೇತನದ ಬಿಲ್ಲುಗಳನ್ನು HRMS-2 ತಂತ್ರಾಂಶದಲ್ಲಿ ಸೃಜಿಸುವ ಮೊದಲೇ ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸುವುದು. HRMS-1 (KASS) KASS ಆಯ್ಕೆ-ಹೊರಗು (KASS ವೆಬ್ ಅಪ್ಲಿಕೇಶನ್ ಯೋಜನೆಯಿಂದ ಹೊರಗುಳಿಯಲು) ಅನುಮೋದನೆ ಪ್ರಕ್ರಿಯೆ: 1. ಲಾಗಿನ್ ಮತ್ತು ಸಂಚರಣೆ HRMS & 2: https://hrms.karnataka.gov.in DDO ತನ್ನ ಲಾಗಿನ್ ವಿವರಗಳನ್ನು ಬಳಸಿ HRMS-1 ಗೆ ಲಾಗಿನ್ ಮಾಡುತ್ತಾರೆ. : ಸೇವಾ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯವನ್ನು ಕಲ್ಪಿಸಿರುವ ರಾಜ್ಯ ಸರ್ಕಾರವು ಇದೀಗ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಈ ಷರತ್ತುಗಳ ಪಾಲನೆ ಕಡ್ಡಾಯವಾಗಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯನ್ನು ಪಡೆದುಕೊಳ್ಳಲು ಇರುವ ನಿಬಂಧನೆಗಳು ಉಲ್ಲೇಖ (2) ರ ಮತ್ತು ಸರ್ಕಾರದ ಆದೇಶ ದಿನಾಂಕ:12.11.2025ರಲ್ಲಿ ಪ್ರಸ್ತಾಪಿಸಿರುವಂತೆ ಇರುತ್ತದೆ. ಷರತ್ತುಗಳು: 1. ಮಹಿಳಾ ನೌಕರರು ಆಯಾ ತಿಂಗಳ “ಋತುಚಕ್ರ ರಜೆ”ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ “ಋತುಚಕ್ರ ರಜೆ”ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (CARRY OVER) ಅವಕಾಶವಿರುವುದಿಲ್ಲ. 2. ಪ್ರತಿ ತಿಂಗಳು ಒಂದು ದಿನದ “ಋತುಚಕ್ರ ರಜೆ” ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ”.…

Read More

ಯಾದಗಿರಿ : ಗಾಂಧೀಜಿ ನಮ್ಮ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುರುಮಠಕಲ್ ನಲ್ಲಿ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ನಮ್ಮ ದೇಶದ ರಾಷ್ಟ್ರಪಿತ ಎಂದು ನಾನು ಒಪ್ಪುವುದೇ ಇಲ್ಲ, ನೆಹರು ನಮ್ಮ ದೇಶದ ಮೊದಲ ಪ್ರಧಾನಮಂತ್ರಿ ಎಂದು ನಾನು ಒಪ್ಪುವುದೇ ಇಲ್ಲ, ಇವರೆಲ್ಲ ತಮ್ಮ ತಮ್ಮ ಚಟಕ್ಕೆ ದೇಶ ಹಾಳು ಮಾಡಿದವರು ಎಂದರು. ಗಾಂಧಿಯನ್ನು ನಾನು ನಮ್ಮ ಭಾರತದ ರಾಷ್ಟ್ರಪಿತ ಎಂದು ಎಂದಿಗೂ ಒಪ್ಪಲ್ಲ, ನೆಹರು ಮೊದಲ ಪ್ರಧಾನಿ ಅಲ್ಲ. ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಶ್ಚಂದ್ರ ಬೋಸ್. ಆಜಾದ್, ತಾತ್ಯಾ ಟೋಪಿ, ಸಾವರ್ಕರ್, ಲಾಲಾ ಲಜಪತ ರಾಯ್, ತಿಲಕ್, ಅಂಬೇಡ್ಕ‌ರ್ ರಂಥವರು ಸ್ವಾತಂತ್ರ್ಯಕ್ಕಾಗಿ ಕಷ್ಟಪಟ್ಟವರು ಎಂದು ಹೇಳಿದ್ದಾರೆ.

Read More

ಕಾರವಾರ : ಮುಂದಿನ ಜೂನ್ ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನಲ್ಲಿ ಭಾನುವಾರ ಮಂಜಗುಣಿ-ಗಂಗಾವಳಿಸೇತುವೆಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಗೋಕರ್ಣ ವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಬೇಡಿಕೆ ಇದೆ. ಚುನಾವಣೆಗಳು ಮುಗಿದ ನಂತರ ಗೋಕರ್ಣವನ್ನು ಪಟ್ಟಣ ಪಂಚಾಯಿತಿ ಯಾಗಿ ಮೇಲ್ದರ್ಜೆಗೇ ಮೇಲ್ದರ್ಜೆಗೇರಿಸಲಾಗುವುದು ಎಂದು ಭರವಸೆ ನೀಡಿದರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಪುನರ್‌ಪ್ರಸ್ತಾವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ “450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ, ಯಲ್ಲಾಪುರ ತಾಲ್ಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ 93 ರಲ್ಲಿನ ನೂತನ ಸೇತುವೆ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ಹಾಗೂ ಮುಂಡಗೋಡ ತಾಲ್ಲೂಕಿನ ಹೊಸ ಪ್ರವಾಸಿ…

Read More

ಬೆಂಗಳೂರು : ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ ಮೊಬೈಲ್ ಗೀಳು ತಡೆಯಲು ಹೆಚ್ಚುತ್ತಿರುವುದನ್ನು 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಇಡೀ ದಿನ ನಡೆದ ಕುಲಪತಿಗಳ ಸಮ್ಮೇಳನದ ಬಳಿಕ ಸಂಜೆ ಸಮಾರೋಪದ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಆಸ್ಟ್ರೇಲಿಯಾ, ಯೂರೋಪ್ ನ ಕೆಲ ರಾಷ್ಟ್ರಗಳಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ ಮಾಡಲಾಗಿದೆ. ನಮ್ಮ ರಾಜ್ಯದಲ್ಲೂ ಬಹಳಷ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಗಳ ವೀಕ್ಷಣೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರು ತರಗತಿ ಓದಿನ ಜೊತೆ ವೈಚಾರಿಕ, ವೈಜ್ಞಾನಿಕ, ಮೌಲ್ಯಾಧಾರಿತ ಶಿಕ್ಷಣದಿಂದ ವಂಚಿತರಾಗಿ ಹಾಳಾಗುತ್ತಿರುವುದನ್ನು ಕಾಣುತ್ತಿದ್ದೇವೆ ಹೀಗಾಗಿ ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. ವಿಶ್ವವಿದ್ಯಾಲಯಗಳು ವಿಶ್ವದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಮಕ್ಕಳಿಗೆ ಪರಿಚಯಿಸಬೇಕು. ವಿದ್ಯಾರ್ಥಿಗಳನ್ನು ವಿಶ್ವಪ್ರಜೆಯನ್ನಾಗಿಸಲು ಬೇಕಾದ ವೇದಿಕೆಯನ್ನು ಸಿದ್ಧಪಡಿಸಬೇಕು. ಜಾತಿ, ಮತ, ಧರ್ಮ…

Read More

ಕಾರವಾರ : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, 10ನೇ ಗ್ಯಾರಂಟಿಯಾಗಿ ಎಲ್ಲರಿಗೂ ‘ಉಚಿತ ಆರೋಗ್ಯ ಸೇವೆ’ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಕಾರವಾರದಲ್ಲಿ ಭಾನುವಾರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟಿಸಿ ಮಾತಾಡಿದ ಅವರು, ಕರ್ನಾಟಕವು ಆರೋಗ್ಯ ಕ್ಷೇತ್ರದಲ್ಲಿ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಪ್ರತಿಪಾದಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್, ನಮ್ಮ ಕಾಂಗ್ರೆಸ್ ಸರ್ಕಾರ 10 ಗ್ಯಾರ೦ಟಿಯಾಗಿ ಎಲ್ಲರಿಗೂ ಉಚಿತ ಆರೋಗ್ಯ ಸೇವೆ ನೀಡುವ ಸಂಕಲ್ಪ ಮಾಡಿದೆ ಎಂದು ಘೋಷಿಸಿದ್ದಾರೆ. 5 ಗ್ಯಾರಂಟಿ ಕೊಟ್ಟಿದ್ದೇವೆ. ನಮ್ಮ 6ನೇ ಗ್ಯಾರಂಟಿ ಬಡವರಿಗೆ ಭೂಮಿ ಕೊಡುವುದು, 7ನೇ ಗ್ಯಾರಂಟಿ ನೀರು, ನೀರಾವರಿ ಸೌಲಭ್ಯ ಒದಗಿಸು ವುದು, 8ನೇ ಗ್ಯಾರಂಟಿ ಎಲ್ಲಾ ಬಡವರಿಗೆ ಮನೆ ನೀಡುವುದು, 9ನೇ ಗ್ಯಾರಂಟಿ ಇ-ಖಾತಾ, ಬಳಿಕ ಎಲ್ಲರಿಗೂ ‘ಆರೋಗ್ಯ ಗ್ಯಾರಂಟಿ’ ನೀಡುತ್ತೇವೆ ಎಂದರು. ಕರಾವಳಿಯ ಅಭಿವೃದ್ಧಿಗೆ ಹೊಸ ಸೇತುವೆ ಆರಂಭ! ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಸ್ಕೋಡ ಗ್ರಾಮದ ಬಳಿ, ಕರ್ನಾಟಕ ರಾಜ್ಯ…

Read More

ಬೆಂಗಳೂರು : ನಿಮ್ಮ ಜಮೀನಿಗೆ ಇ-ಖಾತಾ ಪಡೆಯುವುದು ಈಗ ಸುಲಭ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಕೃಷಿಯೇತರ ಜಮೀನಿನ ಇ-ಖಾತಾ ಪಡೆದುಕೊಳ್ಳಿ. https://eswathu.karnataka.gov.in/ ಪೋರ್ಟಲ್‌ನಲ್ಲಿಯೇ ಸಿಗಲಿದೆ ನಮೂನೆ 9 ಮತ್ತು ನಮೂನೆ 11. ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ, ಗ್ರಾಮೀಣ ಪ್ರದೇಶದ ಜನರು https://eswathu.karnataka.gov.in ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಕೃಷಿಯೇತರ ಜಮೀನಿಗೆ ಇ-ಖಾತಾ ಪಡೆಯಲು ಅವಕಾಶ ನೀಡಲಾಗಿದೆ. ಇ-ಸ್ವತ್ತು ಸಹಾಯವಾಣಿ ಸಂಖ್ಯೆ- 9483476000 ಇ-ಸ್ವತ್ತು ತಂತ್ರಾಂಶದಲ್ಲಿನ ಬದಲಾವಣೆಗಳು ಸಾರ್ವಜನಿಕರು ಮನೆಯಲ್ಲಿದ್ದೇ ಆಸ್ತಿ ದಾಖಲೆಗಳನ್ನು ಪಡೆಯಬಹುದು. ಇ-ಸ್ವತ್ತು ನಮೂನೆಗಳನ್ನು ನಿಗದಿತ ಕಾಲಾವಧಿಯೊಳಗೆ ಪಡೆಯಬಹುದು. ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ಅವಕಾಶ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅವಕಾಶ. ಇ-ಖಾತಾ ವಿತರಣೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಏಕರೂಪದ/ಮಾದರಿಯ ತೆರಿಗೆ ಹಾಗೂ ಶುಲ್ಕಗಳ ನಿಗದಿ. ಗ್ರಾಮ ಪಂಚಾಯತಿ…

Read More