Author: kannadanewsnow57

ಗಾಝಾ : ಹಮಾಸ್ ಜೊತೆಗಿನ ಯುದ್ಧ ಪ್ರಾರಂಭವಾದ ನಂತರ ಒತ್ತೆಯಾಳುಗಳನ್ನು ರಕ್ಷಿಸಲು ಇಸ್ರೇಲ್ ಶನಿವಾರ ತನ್ನ ಅತಿದೊಡ್ಡ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮಧ್ಯ ಗಾಝಾದಲ್ಲಿ ನಡೆದ ಭೀಕರ ಹೋರಾಟದ ಮಧ್ಯೆ ಅಪಹರಣಕಾರರ ಬಂಧನದಿಂದ ನಾಲ್ವರು ಇಸ್ರೇಲಿಗಳನ್ನು ರಕ್ಷಿಸಲಾಗಿದೆ. ಗಾಜಾದ ಆರೋಗ್ಯ ಸಚಿವಾಲಯದ ಪ್ರಕಾರ, ಒತ್ತೆಯಾಳುಗಳನ್ನು ರಕ್ಷಿಸಿದ ಕೇಂದ್ರ ಗಾಜಾದ ಸ್ಥಳದಲ್ಲಿ ಶನಿವಾರ ನಡೆದ ಭೀಕರ ಹೋರಾಟದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 210 ಪ್ಯಾಲೆಸ್ಟೀನಿಯಾದವರು ಸಾವನ್ನಪ್ಪಿದ್ದಾರೆ. ಅಕ್ಟೋಬರ್ 7ರಂದು ಫೆಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ದಾಳಿ ನಡೆಸಿ ಈ ವ್ಯಕ್ತಿಗಳನ್ನು ಅಪಹರಿಸಿತ್ತು. ನುಸಿರಾತ್ನಲ್ಲಿ ನಡೆದ ಸಂಕೀರ್ಣ ಕಾರ್ಯಾಚರಣೆಯಲ್ಲಿ ನೋವಾ ಅರ್ಗಮಾನಿ (25), ಅಲ್ಮೋಗ್ ಮಿರ್ (21), ಆಂಡ್ರೆ ಕೊಜ್ಲೋವ್ (27) ಮತ್ತು ಶ್ಲೋಮಿ ಜಿವ್ (40) ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ನುಸ್ಸೀರತ್ ನ ಮಧ್ಯಭಾಗದಲ್ಲಿರುವ ಎರಡು ಪ್ರತ್ಯೇಕ ಸ್ಥಳಗಳಿಂದ ಒತ್ತೆಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಅವರೆಲ್ಲರೂ ಚೆನ್ನಾಗಿದ್ದಾರೆ ಎಂದು ಅದು ಹೇಳಿದೆ. ರಕ್ಷಿಸಲಾದ ನಾಲ್ವರು ಒತ್ತೆಯಾಳುಗಳನ್ನು ವೈದ್ಯಕೀಯ ಪರೀಕ್ಷೆಗಳಿಗಾಗಿ ಹೆಲಿಕಾಪ್ಟರ್…

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಗಡಿ ಭದ್ರತಾ ಪಡೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗಡಿ ಭದ್ರತಾ ಪಡೆಯಲ್ಲಿ 1526 ಹೆಡ್‌ ಕಾನ್‌ ಸ್ಟೇಬಲ್ಸ್‌, ASI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರೀಯ ಪೊಲೀಸ್‌ ಪಡೆಗಳಲ್ಲಿ ಎಎಸ್‌ ಐ ಹಾಗೂ ಹೆಡ್‌ ಕಾನ್‌ ಸ್ಟೇಬಲ್ಸ್‌ ಹುದ್ದೆಗಳಿಗಾಗಿ ನೇಮಕಾತಿ ನಡೆಸಲಾಗುತ್ತಿದೆ. ಇವು ಸೈನೋಗ್ರಾಫರ್‌ ಹಾಗೂ ಗುಮಸ್ತಾ ಹುದ್ದೆಗಳಾಗಿದ್ದು, ಒಟ್ಟಾರೆಯಾಗಿ 1526 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಜೂ.9ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅರ್ಜಿ ಸಲ್ಲಿಕೆಗೆ ಅಂದಿನಿಂದಲೇ ಅವಕಾಶ ಇರಲಿದೆ. ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪಿಯು ವಿದ್ಯಾರ್ಹತೆ ಹಾಗೂ ಟೈಪಿಂಗ್ ಹಾಗೂ ಸ್ಟೆನೋಗ್ರಾಫಿ ತಿಳಿದವರು ಅರ್ಹತೆ ಪಡೆದಿದ್ದಾರೆ. 12ನೇ ತರಗತಿ ತೇರ್ಗಡೆಯಾದ 1526 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ನೇಮಕಾತಿಗಳನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ನಡೆಸುತ್ತಿದೆ. ಇದಕ್ಕಾಗಿ, ಅಧಿಕೃತ ವೆಬ್ಸೈಟ್ ಪೋರ್ಟಲ್ನಲ್ಲಿ ನೋಟಿಸ್ ನೀಡಲಾಗಿದೆ. ಹುದ್ದೆ ಹೆಸರು: ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಸಂಖ್ಯೆ: ಒಟ್ಟು 1526 ಪ್ರಮುಖ ದಿನಾಂಕಗಳು ಅರ್ಜಿ…

Read More

ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ‌ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್‌ ಯೋಜನೆಯಡಿ ಸೌರ ಪಂಪ್‌ಸೆಟ್‌ ಪಡೆಯಲು ರಾಜ್ಯದ 18 ಸಾವಿರ ಲಕ್ಷ ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ ಹೇಳಿದ್ದಾರೆ. ಪಿಎಂ ಕುಸುಮ್ ಯೋಜನೆಯ ಸಮಪರ್ಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (ಕುಸುಮ್‌) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು. “ಕುಸುಮ್‌ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್‌ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18 ಲಕ್ಷ ರೈತರು ಸೌರಪಂಪ್‌ ಸೆಟ್‌ ಪಡೆಯಲು ‘ಸೌರಮಿತ್ರ’ ವೆಬ್‌ಸೈಟ್‌/…

Read More

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಮತ್ತು ನಾಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ನಾಳೆ ಧಾರವಾಡ, ಹಾವೇರಿ ಜಿಲ್ಲೆಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಇಂದು ಬೆಳಗಾವಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬಾಗಲಕೋಟೆ, ವಿಜಯನಗರ, ಚಿಕ್ಕಬಳ್ಳಾಪುರ, ಯಾಚೂರು, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮುನ್ಸೂಚನೆ ನೀಡಲಾಗಿದೆ.

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎನ್ನುತ್ತಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ ಸರ್ಕಾರ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇದರಿಂದ ಬಡ, ಮಧ್ಯಮ ವರ್ಗದವರಿಗೆ ಸಹಾಯ ಆಗಿದೆ ಎಂದರು. ಗ್ಯಾರಂಟಿ ಯೋಜನೆಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ ಎನ್ನುವುದಕ್ಕೂ ಸಂಬಂಧವಿಲ್ಲ. ಗ್ಯಾರಂಟಿಗಳನ್ನು ಮತ ಪಡೆಯಲು ನಾವು ನೀಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಲ್ಲ ಅಂತ ತಿಳಿಸಿದರು. ಸಿಎಂ ಸಿದ್ಧರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ 5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಾಂಗ್ರೆಸ್…

Read More

ನವದೆಹಲಿ : 293ಸ್ಥಾನ ಗೆದ್ದಿರುವ ಬಿಜೆಪಿ ನೇತೃತ್ವದ ಎನ್‌ ಡಿಎ ಕೂಟದ ಕೇಂದ್ರ ಸರ್ಕಾರ ಇಂದಿನಿಂದ ಅಸ್ವಿತ್ವಕ್ಕೆ ಬರಲಿದೆ. ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಮಂತ್ರಿ ಮಂಡಲದ ಸದಸ್ಯರು ಇಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾನುವಾರ ಸಂಜೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಬಹುಮತವಿಲ್ಲದ ಕಾರಣ ಮತ್ತು ಅದು ಮೈತ್ರಿಕೂಟದ ಬಹುಮತದೊಂದಿಗೆ ಸರ್ಕಾರ ರಚಿಸುತ್ತಿರುವುದರಿಂದ, ಈ ಸರ್ಕಾರದಲ್ಲಿ ಮಿತ್ರಪಕ್ಷಗಳ ಸಂಖ್ಯೆ ಹೆಚ್ಚಾಗುತ್ತದೆ, ಮಂತ್ರಿಮಂಡಲದ ಗಾತ್ರವೂ ಹಿಂದಿನ ಎರಡು ಬಾರಿಗಿಂತ ದೊಡ್ಡದಾಗಿರುತ್ತದೆ. ಅರ್ಧಕ್ಕಿಂತ ಹೆಚ್ಚು ಹೊಸ ಮುಖಗಳು ಸರ್ಕಾರದಲ್ಲಿ ಇರಲಿವೆ ಮೂಲಗಳ ಪ್ರಕಾರ, ಹೊಸ ಮಂತ್ರಿಮಂಡಲವನ್ನು ಭಾನುವಾರ ಬೆಳಿಗ್ಗೆ ಅಂತಿಮಗೊಳಿಸಲಾಗುವುದು. ನಂತರ ಪಟ್ಟಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುವುದು. ಆದಾಗ್ಯೂ, ಈ ಬಾರಿ ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ಸಚಿವ ಸ್ಥಾನಗಳು ಬರಬಹುದು, ಅಲ್ಲಿ ಬಿಜೆಪಿ ಅನೇಕ ಮಿತ್ರಪಕ್ಷಗಳನ್ನು ಬೆಳೆಸಬೇಕಾಗಿದೆ. ಉತ್ತರಪ್ರದೇಶದಲ್ಲಿ…

Read More

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಇಂದು ನವದೆಹಲಿಯಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕನ ಹೆಸರನ್ನು ಘೋಷಣೆ ಮಾಡುವ ಸಾ‍ಧ್ಯತೆ. ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕು ಎಂದು ಅನೇಕ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದು, ರಾಹುಲ್‌ ಗಾಂಧಿಯೇ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿನ ಸಾಧನೆಯ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಸಿಡಬ್ಲ್ಯುಸಿ ಸದಸ್ಯರು ಭಾಗವಹಿಸಿದ್ದರು. ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಬೇಕು: ಕಾಂಗ್ರೆಸ್ ನಾಯಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಗೂ ಮುನ್ನ ಮಾತನಾಡಿದ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್, “ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಬೇಕು ಎಂಬುದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿದೆ” ಎಂದು ಹೇಳಿದರು. “ರಾಹುಲ್…

Read More

ಬೆಂಗಳೂರು : ತಿ.ನರಸೀಪುರ ತಾಲೂಕಿನಲ್ಲಿ ಆಂಬುಲೆನ್ಸ್‌ ಸೇವೆ ಸ್ಥಗಿತ; ರೋಗಿಗಳ ಪರದಾಟʼ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಮಾಧ್ಯಮ ವರದಿಯನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ. ಅದರಂತೆ, ತಾಲೂಕಿನ 4 ಹೋಬಳಿ ಮಟ್ಟದಲ್ಲಿ ತಲಾ ಒಂದು 108 ತುರ್ತು ವಾಹನಗಳನ್ನು ಕಾಯ್ದಿರಿಸಿ, ಅಗತ್ಯ ಸೇವೆಗಳನ್ನು ನೀಡಲಾಗುತ್ತಿದೆ. ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಯ್ದಿರಿಸಿದ್ದ ಆಂಬುಲೆನ್ಸ್‌ ಅನ್ನು ತುರ್ತು ನಿರ್ವಹಣೆಯ ಕಾರಣ ಕಾರ್ಯಗಾರಕ್ಕೆ ಕಳುಹಿಸಲಾಗಿದ್ದು, ಪರ್ಯಾಯವಾಗಿ ಬದಲಿ ತುರ್ತು ವಾಹನವನ್ನು ನಿಯೋಜಿಸಿ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲಾಗಿರುತ್ತದೆ. ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ.

Read More

ನವದೆಹಲಿ : ನರೇಂದ್ರ ಮೋದಿ ಅವರು ಜೂನ್ 9 ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರ ರಚನೆಯಾಗುವ ಮೊದಲು, ಎನ್ಡಿಎಯಲ್ಲಿನ ಬಿಜೆಪಿಯ ಮಿತ್ರಪಕ್ಷಗಳು ಒತ್ತಡ ಹೇರಲು ಪ್ರಾರಂಭಿಸಿವೆ ಎಂದು ಹೇಳಲಾಗುತ್ತಿದೆ. ಟಿಡಿಪಿ ತನಗೆ ನಾಲ್ಕು ಖಾತೆಗಳಿಗೆ ಬೇಡಿಕೆ ಇಟ್ಟಿದೆ. ಟಿಡಿಪಿಗೆ ಬಂದರುಗಳು, ಹಡಗು ಮತ್ತು ಜಲಮಾರ್ಗಗಳು, ಜಲಶಕ್ತಿ, ನಗರಾಭಿವೃದ್ಧಿ ಸಚಿವಾಲಯ, ಮಾಹಿತಿ ತಂತ್ರಜ್ಞಾನ ಸಚಿವಾಲಯಗಳು ಬೇಕಾಗಿವೆ. ಇದಕ್ಕೆ ಪ್ರತಿಯಾಗಿ, ಆಂಧ್ರಪ್ರದೇಶ ಸರ್ಕಾರದಲ್ಲಿ ಬಿಜೆಪಿಗೆ 4 ಸಚಿವ ಸ್ಥಾನಗಳನ್ನು ನೀಡಲು ಟಿಡಿಪಿ ಸಿದ್ಧವಾಗಿದೆ. ಇದಲ್ಲದೆ, ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಮತ್ತು ರಾಜಧಾನಿ ಅಮರಾವತಿ ನಿರ್ಮಾಣಕ್ಕೆ ವಿಶೇಷ ಆರ್ಥಿಕ ನೆರವು ರಾಜಿ ಮಾಡಿಕೊಳ್ಳಲಾಗದ ಬೇಡಿಕೆಗಳಾಗಿವೆ. ನಿತೀಶ್ ಕುಮಾರ್ ಕೂಡ ಒತ್ತಾಯಿಸಿದರು ಹೊಸ ಕ್ಯಾಬಿನೆಟ್ ರಚನೆಯಾಗುವ ಮೊದಲೇ ಟಿಡಿಪಿ ಮತ್ತು ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಬಿಜೆಪಿ ಮೇಲೆ ಒತ್ತಡ ಹೇರಲು ಪ್ರಾರಂಭಿಸಿವೆ. ಟಿಡಿಪಿ ತನ್ನ ಸಚಿವಾಲಯಗಳಿಗೆ ಬೇಡಿಕೆ ಇಟ್ಟಿರುವ ರೀತಿ. ಅಂತೆಯೇ, ನಿತೀಶ್ ಕುಮಾರ್ ಅವರು ಯಾವ ಸಚಿವಾಲಯಗಳನ್ನು ಬಯಸುತ್ತಾರೆ…

Read More

ಬೆಂಗಳೂರು : ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಲಿಂಗ ಪತ್ತೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ನಮ್ಮ ಆರೋಗ್ಯ ಇಲಾಖೆ ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಮಾತ್ರೆ ಮಾರಾಟದ ಲೆಕ್ಕ ನೀಡದ ಸಗಟು ಔಷಧ ಮಾರಾಟಗಾರರು ಹಾಗೂ ಚಿಲ್ಲರೆ ಔಷಧ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 4 ಔಷಧ ಅಂಗಡಿಗಳನ್ನು ಬಂದ್‌ ಮಾಡಿಸಲಾಗಿದ್ದು 30 ಅಂಗಡಿಗಳ ಲೈಸೆನ್ಸ್‌ ಸಸ್ಪೆಂಡ್‌ ಮಾಡಲಾಗಿದೆ. ಜೊತೆಗೆ ನಾಲ್ವರು ಔಷಧ ವಿತರಕರ ವಿರುದ್ಧ ಕೇಸ್‌ ದಾಖಲಿಸಲಾಗುತ್ತಿದೆ ಎಂದರು. ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ ಮಂಡ್ಯ ಜಿಲ್ಲೆಯಲ್ಲಿ ಔಷಧ ಸಗಟು ವರ್ತಕರು, ಮೆಡಿಕಲ್‌ ಸ್ಟೋರ್‌ಗಳ ಕಳ್ಳದಂಧೆಗಳನ್ನು ಬೆಳಕಿಗೆ ತಂದಿದ್ದಾರೆ. ರಾಜ್ಯಾದ್ಯಂತ ಭ್ರೂಣಲಿಂಗ ಪತ್ತೆ ಸಂಪೂರ್ಣ ತಡೆಗೆ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಹಲವಾರು ಪ್ರಕರಣಗಳನ್ನು ಬಯಲಿಗೆಳೆದಿದ್ದಾರೆ. ಜೊತೆಗೆ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗೆ ಆಸ್ಪತ್ರೆಗಳು, ಸ್ಕ್ಯಾನಿಂಗ್‌…

Read More