Author: kannadanewsnow57

ಪ್ರಸಕ್ತ 2024-25 ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ 100 ರೂ. ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ…

Read More

ನವದೆಹಲಿ : ಪತ್ನಿ ಮದ್ಯ ಸೇವಿಸುತ್ತಾಳೆ ಎಂಬ ಕಾರಣಕ್ಕಾಗಿ ವಿಚ್ಛೇದನ ನೀಡುವಾಗ, ಮದ್ಯ ಸೇವಿಸಿದ ನಂತರ ಅಸಭ್ಯವಾಗಿ ವರ್ತಿಸದ ಹೊರತು, ಅದನ್ನು ಕ್ರೌರ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮದ್ಯಪಾನವು ಅನುಚಿತ ಮತ್ತು ಅನಾಗರಿಕ ನಡವಳಿಕೆಯನ್ನು ಅನುಸರಿಸದಿದ್ದರೆ ಅದನ್ನು ಕ್ರೌರ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಪೀಠ ಹೇಳಿದೆ. ಮಧ್ಯಮ ವರ್ಗದ ಸಮಾಜದಲ್ಲಿ ಮದ್ಯಪಾನ ಇನ್ನೂ ನಿಷಿದ್ಧವಾಗಿದ್ದು, ಅದು ಸಂಸ್ಕೃತಿಯ ಭಾಗವಲ್ಲದಿದ್ದರೂ, ಪತಿ/ಮೇಲ್ಮನವಿದಾರರಿಗೆ ಮದ್ಯಪಾನವು ಹೇಗೆ ಕ್ರೌರ್ಯಕ್ಕೆ ಕಾರಣವಾಯಿತು ಎಂಬುದನ್ನು ತೋರಿಸಲು ಯಾವುದೇ ಪುರಾವೆಗಳು ದಾಖಲೆಯಲ್ಲಿಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ಜೋಡಿಗಳ ವಿವಾಹವು 2015 ರಲ್ಲಿ ನಡೆಯಿತು. ಅದಾದ ನಂತರ, ಹೆಂಡತಿಯ ವರ್ತನೆಯಲ್ಲಿ ತೀವ್ರ ಬದಲಾವಣೆಯಾಯಿತು. ಇತರ ವಿಷಯಗಳ ಜೊತೆಗೆ, ಪ್ರತಿವಾದಿ-ಪತ್ನಿ ಮೇಲ್ಮನವಿದಾರನನ್ನು ತನ್ನ ಹೆತ್ತವರನ್ನು ಬಿಟ್ಟು ಕೋಲ್ಕತ್ತಾಗೆ ಹೋಗುವಂತೆ ಒತ್ತಾಯಿಸಲು ಪ್ರಯತ್ನಿಸಿದರು, ಆದರೆ ಅವನು ಒಪ್ಪಲಿಲ್ಲ. ಕೊನೆಗೆ, ಪತ್ನಿ ತನ್ನ ಅಪ್ರಾಪ್ತ ಮಗನೊಂದಿಗೆ ಕೋಲ್ಕತ್ತಾಗೆ ಹೋದರು ಮತ್ತು ಪತಿಯ ವಿನಂತಿಗಳ ಹೊರತಾಗಿಯೂ ಹಿಂತಿರುಗಲು ನಿರಾಕರಿಸಿದರು. ಮೇಲ್ಮನವಿದಾರ-ಪತಿ ಲಕ್ನೋದಲ್ಲಿ…

Read More

ಬೆಂಗಳೂರು : ವಿವಿಧ ತಾಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ,ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸಿರುವ ಬಗ್ಗೆ ಆರ್ಥಿಕ ಇಲಾಖೆಯಿಂದ ಹೊರಡಿಸಿರುವ ಆದೇಶ. ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2401, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ. ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.2819.45ಲಕ್ಷಗಳನ್ನು ಲೆಕ್ಕ ಶೀರ್ಷಿಕ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ…

Read More

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಬ್ಯಾಂಕಾಕ್ ನಿಂದ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು 23 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಅನಾರೋಗ್ಯದಿಂದ ನಿನ್ನೆ ನಿಧನರಾಗಿರುವ ಸ್ಯಾಂಡಲ್ ವುಡ್ ಹಿರಿಯ ಹಾಸ್ಯ ನಟ ಸರಿಗಮ ವಿಜಿ ಅವರ ಅಂತ್ಯಕ್ರಿಯೆ ಇಂದು ಚಾಮರಾಜಪೇಟೆ ಬಳಿಯ ಚಿತಾಗಾರದಲ್ಲಿ ನಡೆದಿದೆ. ಶ್ವಾಸಕೋಶದ ಸೋಂಕಿನಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಜಿ ಅವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ನಿಧನರಾಗಿದ್ದಾರೆ. ಹಿರಿಯ ಕಲಾವಿದನ ನಿಧನಕ್ಕೆ ರಾಜಕೀಯ, ಸಿನಿಮಾ ರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸರಿಗಮ ವಿಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆಕ್ಕೆ ಮಾಡಲಾಗಿತ್ತು. ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಪುತ್ರ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತ್ಯಕ್ರಿಯೆ ನಡೆಸಿದ್ದಾರೆ. ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಕೆಎಸ್ ಆರ್ ಟಿಸಿ ಬಸ್ ಹರಿದ ಪರಿಣಾಮ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ವೆಂಕಟೇಶ್ (29) ಹಾಗೂ ಮೋಕ್ಷಿತಾ (8) ಸ್ಥಳದಲ್ಲೇ ಸಾವನ್ನಪ್ಪಿದ್ದು, ಲಾವಣ್ಣ ಹಾಗೂ ನರಸಮ್ಮ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

Read More

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕ ಹತ್ತಿರವಾಗುತ್ತಿದ್ದಂತೆ, ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರವು ನಿರಂತರವಾಗಿ ವೇಗವನ್ನು ಪಡೆಯುತ್ತಿದೆ. ಈ ಚುನಾವಣಾ ಪ್ರಚಾರದ ಸಮಯದಲ್ಲಿ, ಕೃತಕ ಬುದ್ಧಿಮತ್ತೆ ಅಂದರೆ AI ತಂತ್ರಜ್ಞಾನವನ್ನು ಬಳಸಿಕೊಂಡು ತಯಾರಿಸಲಾದ ಬಹಳಷ್ಟು ಪ್ರಚಾರ ಸಾಮಗ್ರಿಗಳು ಸಹ ಹೊರಬರುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಚುನಾವಣಾ ಆಯೋಗವು ಈಗ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಬಳಕೆಯ ಕುರಿತು ರಾಜಕೀಯ ಪಕ್ಷಗಳಿಗೆ ಮಾರ್ಗಸೂಚಿಗಳನ್ನು ನೀಡಿದೆ. ಕೇಂದ್ರ ಚುನಾವಣಾ ಆಯೋಗ ಮಾರ್ಗಸೂಚಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಮಾರ್ಗಸೂಚಿಗಳನ್ನು ನೀಡುತ್ತಾ, ಕೇಂದ್ರ ಚುನಾವಣಾ ಆಯೋಗವು, ಕೆಲವು ಸಮಯದಿಂದ ರಾಜಕೀಯ ಪಕ್ಷಗಳು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಸಹಾಯದಿಂದ ಪ್ರಚಾರಕ್ಕಾಗಿ ವಿಷಯವನ್ನು ರಚಿಸುತ್ತಿರುವುದು ಕಂಡುಬಂದಿದೆ ಎಂದು ಹೇಳಿದೆ. ಚುನಾವಣಾ ಆಯೋಗವು ಎಲ್ಲಾ ರಾಜಕೀಯ ಪಕ್ಷಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದೆ, ಕೃತಕ ಬುದ್ಧಿಮತ್ತೆ (AI) ಬಳಸಿ ಯಾವುದೇ ವಿಷಯವನ್ನು ಬಿಡುಗಡೆ ಮಾಡಬಾರದು ಎಂದು ಸ್ಪಷ್ಟವಾಗಿ ಗುರುತಿಸಬೇಕು. ಅದನ್ನು ಸಿದ್ಧಪಡಿಸಲಾಗಿದೆ. ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಇದು ಅವಶ್ಯಕವಾಗಿದೆ. ಈ ಮಾರ್ಗಸೂಚಿಗಳನ್ನು ಹೊರಡಿಸುವಾಗ, ಚುನಾವಣಾ…

Read More

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸುತ್ತಮುತ್ತ ಅನಧಿಕೃತ ಕ್ಲಿನಿಕ್‌ ಮತ್ತು ಮೆಡಿಕಲ್‌ಗಳು ಕಂಡು ಬಂದ ಕುರಿತು ವರದಿಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಹಲವು ನಕಲಿ ಕ್ಲಿನಿಕ್ ಗಳನ್ನು ಸೀಜ್ ಮಾಡಿದ್ದಾರೆ. ಬೇರೆ ರಾಜ್ಯಗಳಿಂದ ನಕಲಿ ವೈದ್ಯಕೀಯ ಪ್ರಮಾಣಪತ್ರ ಪಡೆದು ಬೆಂಗಳೂರಿನಲ್ಲಿ ಬಂದು ಕಾರ್ಯನಿರ್ವಹಿಸುತ್ತಿದ್ದ ನಕಲಿ ಕ್ಲಿನಿಕ್‌ಗಳನ್ನು ಸೀಜ್‌ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಜನರ ಜೀವದ ಜೊತೆಗೆ ಆಟವಾಡುವ ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನಕಲಿ ವೈದ್ಯರ ತಡೆಗೆ ಕಾನೂನು ತಿದ್ದುಪಡಿ ಮಾಡಿ ಕಠಿಣ ಕಾಯ್ದೆ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಜನರ ಆರೋಗ್ಯ ಸುರಕ್ಷತೆಗೆ ಪ್ರಾಮುಖ್ಯತೆ ನೀಡುವ ನಮ್ಮ ಸರ್ಕಾರ ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯುವುದು ನಮ್ಮ ಆದ್ಯತೆಯಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಕೂಡ ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Read More

ಬೆಂಗಳೂರು : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಮುದಾಯ ಕಾಮಗಾರಿಯಲ್ಲಿ ಪಾರದರ್ಶಕತೆ ತರಲು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಾಂಶವನ್ನು ಅಳವಡಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಮುದಾಯ ಕಾಮಗಾರಿಗಳಲ್ಲಿ ಎಷ್ಟು ಮಂದಿ ಭಾಗವಹಿಸಿದ್ದಾರೆ ಎಂಬ ನಿಖರವಾದ ಲೆಕ್ಕವನ್ನು ಹೆಡ್‌ ಕೌಂಟ್ ವ್ಯವಸ್ಥೆ ಮೂಲಕ ಎಐ ತಂತ್ರಾಂಶವೇ ದಾಖಲಿಸಿಕೊಳ್ಳುತ್ತದೆ. ಇಲಾಖೆಯ ಈ ಪ್ರಯತ್ನದ ಫಲವಾಗಿ ಮನರೇಗಾದ ಕೂಲಿ ಹಣ ಸೋರಿಕೆಯಾಗುವ ಸಮಸ್ಯೆಗೆ ಕಡಿವಾಣ ಬೀಳಲಿದೆ ಎಂದು ಹೇಳಿದ್ದಾರೆ. ಮನರೇಗಾ ಯೋಜನೆ ಮೂಲಕ ಗ್ರಾಮೀಣ ಭಾಗದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಜತೆಗೆ, ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುವಲ್ಲಿ ಕರ್ನಾಟಕ ದೇಶದಲ್ಲಿಯೇ ಗಮನ ಸೆಳೆಯುತ್ತಿದೆ. ಅಧಿಕ ಉದ್ಯೋಗ ಸೃಷ್ಟಿ ಹಾಗೂ ಹೆಚ್ಚಿನ ಕೂಲಿ ದರ ಒದಗಿಸುವುದರಲ್ಲಿ ಮುಂಚೂಣಿ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಈಗ ಹಾಜರಾತಿ ಲೋಪಗಳು, ಕೂಲಿ ಹಣ ದುರ್ಬಳಕೆಯ ಸಾಧ್ಯತೆಗಳನ್ನು ತಪ್ಪಿಸಲು ಎಐ ತಂತ್ರಾಂಶ ಜಾರಿ ಮೂಲಕ ನಮ್ಮ ಇಲಾಖೆ ಮಾದರಿ…

Read More

ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ. ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೇರಿ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. https://twitter.com/ANI/status/1879725407731404839?ref_src=twsrc%5Egoogle%7Ctwcamp%5Eserp%7Ctwgr%5Etweet ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ…

Read More