Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಹಾವೇರಿ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌ ಆಲರ್ಟ್‌ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಗದಗ, ರಾಯಚೂರು, ಯಾದಿಗಿರಿ, ಕಲಬುರಗಿ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಸೇರಿದಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Read More

ಬೆಂಗಳೂರು : ಜೂನ್‌ 14ರಿಂದ ಜೂನ್‌ 22ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 2ರ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಲಾಗಿನ್‌ನಲ್ಲಿರುವ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು ತಮ್ಮ ವಿದ್ಯಾರ್ಥಿಗಳಿಗೆ ವಿತರಣೆ ಮಾಡಬೇಕು. ಒಂದು ವೇಳೆ ಏನಾದರೂ ವ್ಯತ್ಯಯ ಉಂಟಾದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಮಂಡಳಿ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ.

Read More

ನವದೆಹಲಿ :ದ್ವೈಮಾಸಿಕ ಹಣಕಾಸು ನೀತಿಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ಪ್ರಕಟಿಸಿದ್ದು, ಬಡ್ಡಿ ದರಗಳನ್ನು ಯಥಾಸ್ಥಿತಿ ಕಾಯ್ದುಕೊಂಡಿದೆ. ಹೀಗಾಗಿ ಸಾಲ, ಠೇವಣಿ ಬಡ್ಡಿ ದರಗಳಲ್ಲಿ ಪರಿಷ್ಕರಣೆಯಾಗುವುದಿಲ್ಲ. ಮೂವರು ಆರ್‌ಬಿಐ ಮತ್ತು ಅಷ್ಟೇ ಸಂಖ್ಯೆಯ ಬಾಹ್ಯ ಸದಸ್ಯರನ್ನು ಒಳಗೊಂಡಿರುವ ಹಣಕಾಸು ನೀತಿ ಸಮಿತಿಯು ಸತತ ಎಂಟನೇ ಬಾರಿಗೆ ರೆಪೊ ದರವನ್ನು ಶೇಕಡಾ 6.50ರ ಯಥಾಸ್ಥಿತಿಯಲ್ಲಿ ಇರಿಸಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಪ್ರಗತಿ ದರವನ್ನು ಆರ್‌ಬಿಐ ಶೇ.7.2 ಎಂದು ಅಂದಾಜಿಸಿದೆ. ಈ ಹಿಂದೆ ಅದನ್ನು ಶೇ.7 ಎಂದು ಅಂದಾಜಿಸಲಾಗಿತ್ತು. ಹಣದುಬ್ಬರದ ಅಂದಾಜನ್ನು ಶೇ.4.5 ರಲ್ಲೇ ಮುಂದುವರಿಸಲಾಗಿದೆ.

Read More

ಬೆಂಗಳೂರು : ಇಇಡಿಎಸ್ (EEDS) ತಂತ್ರಾಂಶದಲ್ಲಿ ಶಿಕ್ಷಕರ ಹಾಗೂ ನೌಕರರ ಸೇವಾ ವಿವರಗಳನ್ನು ತಿದ್ದುಪಡಿ ಕೋರಿ ಸಲ್ಲಿಸಿರುವ ಪ್ರಸ್ತಾವನೆಗಳ ಕುರಿತು ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಇಇಡಿಎಸ್ ತಂತ್ರಾಂಶದಲ್ಲಿ ಕೆಜಿಐಡಿ ಸಂಖ್ಯೆ ತಿದ್ದುಪಡಿ, ಹೆಸರು ತಿದ್ದುಪಡಿ, ಜನ್ಮ ದಿನಾಂಕ ತಿದ್ದುಪಡಿಗೆ ಸಂಬಂಧಿಸಿದಂತೆ ಉಲ್ಲೇಖದನ್ವಯ ಪ್ರಸ್ತಾವನೆಗಳು ಸ್ವೀಕೃತಗೊಂಡಿದ್ದು, ಪ್ರಸ್ತುತ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಈ ಹಂತದಲ್ಲಿ ಯಾವುದೇ ತಿದ್ದುಪಡಿಗಳಿಗೆ ಅವಕಾಶವಿರುವುದಿಲ್ಲವೆಂದು ತಿಳಿಸಿದೆ.

Read More

ನವದೆಹಲಿ: ನರೇಂದ್ರ ಮೋದಿಯವರು ಮತ್ತೊಮ್ಮೆ ಸರ್ಕಾರ ರಚಿಸೋದಕ್ಕೆ ರಾಷ್ಟ್ರಪತಿ ಭೇಟಿಯಾಗಿ ಹಕ್ಕು ಮಂಡನೆ ಮಾಡಿದ್ದರು. ಈ ಬೆನ್ನಲ್ಲೇ ಮೋದಿ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜೂನ್.9ರಂದು ಸಂಜೆ 7.15ಕ್ಕೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕುರಿತಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಜೂನ್ 09, 2024 ರಂದು ಸಂಜೆ 7.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟದ ಇತರ ಸದಸ್ಯರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದೇನೆ ಎಂದು ತಿಳಿಸಿದ್ದಾರೆ. https://twitter.com/ANI/status/1799066842935497062 ಶುಕ್ರವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಸಂಸದರ ಬೆಂಬಲದ ಪತ್ರದೊಂದಿಗೆ ಸರ್ಕಾರ ರಚಿಸೋದಕ್ಕೆ ಮೋದಿಯವರು ಹಕ್ಕು ಮಂಡನೆ ಮಾಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 3ನೇ ಸಲ ದೇಶದ ಸೇವೆ ಮಾಡಲು ಅವಕಾಶ ಸಿಕ್ಕಿದೆ. 3ನೇ ಸಲ ಅವಕಾಶ ನೀಡಿದ್ದಕ್ಕೆ ದೇಶದ ಜನತೆಗೆ ಧನ್ಯವಾದಗಳು ಅಂತ ತಿಳಿಸಿದರು. ದೇಶದ ಜನತೆಗೆ…

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ದಿನಾಂಕ: 01.04.2006 ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ಕೆಲ ಷರತ್ತುಗಳನ್ನು ವಿಧಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧ ಈ ಕಳಕಂಡ ಷರತ್ತುಗಳಿಗೆ ಒಳಪಟ್ಟು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸೂಚನೆಗಳನ್ನು ನೀಡಲಾಗಿರುತ್ತದೆ. ಹಳೆಯ ಪಿಂಚಣಿಗೆ ಈ ಷರತ್ತುಗಳು ಅನ್ವಯ 1. ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ…

Read More

ಬೆಂಗಳೂರು : ಲೋಕಸಭೆ ಚುನಾವಣೆಯ ಬೆನ್ನಲ್ಲೇ ರಾಜ್ಯ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಬಿಗ್‌ ಶಾಕ್‌ ನೀಡಿದೆ. ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ವರ್ಷದಿಂದ ವರ್ಷಕ್ಕೆ ಡೀಸೆಲ್‌, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ. ಸಾರಿಗೆ ಬಸ್‌ ಪ್ರಯಾಣ ದರ ಏಇಕೆಗೆ ಸಂಬಂಧಿಸಿದಂತೆ ಚರ್ಚೆಗಳು ಶುರುವಾಗಿದ್ದು, ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

Read More

ನವದೆಹಲಿ: ನೀಟ್-ಯುಜಿ ಪ್ರವೇಶ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳು ಮೊದಲ ರ್ಯಾಂಕ್ ಪಡೆಯಲು ಕಾರಣವಾದ ಅಂಕಗಳ ಬಗ್ಗೆ ವಿವಾದದ ಮಧ್ಯೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಗುರುವಾರ ಉತ್ತರ ಕೀಯಲ್ಲಿನ ಪರಿಷ್ಕರಣೆ ಮತ್ತು ಸಮಯದ ನಷ್ಟಕ್ಕೆ ನೀಡಲಾದ ಪರಿಹಾರ ಅಂಕಗಳ ಕಾರಣದಿಂದಾಗಿ ಎಂದು ಹೇಳಿದೆ. ಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಸಮಯ ಕಳೆದುಕೊಳ್ಳಲು ಗ್ರೇಸ್ ಅಂಕಗಳು ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಗಳಿಸಲು ಕೆಲವು ಕಾರಣಗಳಾಗಿವೆ ಎಂದು ಎನ್ಟಿಎ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ. “720/720 ಅಂಕಗಳನ್ನು ಪಡೆದ 67 ಅಭ್ಯರ್ಥಿಗಳಲ್ಲಿ, 44 ಅಭ್ಯರ್ಥಿಗಳು ಭೌತಶಾಸ್ತ್ರದ ಒಂದು ಉತ್ತರ ಕೀಲಿಯಲ್ಲಿನ ಪರಿಷ್ಕರಣೆಯಿಂದಾಗಿ ಮತ್ತು ಆರು ವಿದ್ಯಾರ್ಥಿಗಳು ಸಮಯದ ನಷ್ಟಕ್ಕೆ ಸರಿದೂಗಿಸುವ ಅಂಕಗಳ ಕಾರಣದಿಂದಾಗಿ” ಎಂದು ಎನ್ಟಿಎ ಹೇಳಿದೆ. ಆರು ಟಾಪರ್ ಗಳು ಹರಿಯಾಣದ ಒಂದೇ ಕೇಂದ್ರದಿಂದ ಬಂದವರು ಎಂಬ ಆರೋಪಗಳನ್ನು ಎನ್ ಟಿಎ ನಿರಾಕರಿಸಿದೆ. “ಟಾಪರ್ಗಳು ದೇಶಾದ್ಯಂತ ಇದ್ದಾರೆ ಎಂದು ಉಲ್ಲೇಖಿಸುವುದು ಸೂಕ್ತವಾಗಿದೆ” ಎಂದು ಎನ್ಟಿಎ ಹೇಳಿದೆ. ಮೇ 5 ರಂದು…

Read More

ನವದೆಹಲಿ : ನಮ್ಮ ದೇಶದಲ್ಲಿ, ಸರ್ಕಾರವು ಕಾಲಕಾಲಕ್ಕೆ ಅನೇಕ ರೀತಿಯ ಯೋಜನೆಗಳನ್ನು ಪ್ರಾರಂಭಿಸುತ್ತದೆ. ಇಂದಿನ ಕಾಲದಲ್ಲಿ, ಸಣ್ಣ ಮನೆಯನ್ನು ಖರೀದಿಸಲು ಸಹ ಲಕ್ಷಾಂತರ ರೂಪಾಯಿಗಳು ಬೇಕಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಹೆಚ್ಚಿನ ಜನರು ತಮ್ಮ ಮನೆಯನ್ನು ಗೃಹ ಸಾಲದ ಸಹಾಯದಿಂದ ಮಾತ್ರ ಪಡೆಯಲು ಸಾಧ್ಯವಾಗುತ್ತದೆ. ಆದರೆ ಸಾಲ ತೆಗೆದುಕೊಳ್ಳಲು ಸಹ ಸಾಧ್ಯವಾಗದ ಅನೇಕ ಜನರಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಭಾರತ ಸರ್ಕಾರವು ಜನರಿಗೆ ಸಹಾಯ ಮಾಡುತ್ತದೆ. ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 25 ಜೂನ್ 2015 ರಂದು ಪ್ರಾರಂಭಿಸಲಾಯಿತು. ದೇಶದ ಪ್ರತಿಯೊಬ್ಬ ಬಡ ವ್ಯಕ್ತಿಗೆ ಸ್ವಂತ ಮನೆ ನಿರ್ಮಿಸಲು ಆರ್ಥಿಕ ನೆರವು ನೀಡುವುದು ಈ ಯೋಜನೆಯನ್ನು ಪ್ರಾರಂಭಿಸುವ ಉದ್ದೇಶವಾಗಿತ್ತು. ಈ ಯೋಜನೆಯಡಿ, ಫಲಾನುಭವಿಗೆ ಮನೆ ನಿರ್ಮಿಸಲು ಸಬ್ಸಿಡಿ ನೀಡಲಾಗುತ್ತದೆ ಮತ್ತು ಈ ಮೊತ್ತವನ್ನು ಸಹ ವಿಭಿನ್ನವಾಗಿ ನಿಗದಿಪಡಿಸಲಾಗುತ್ತದೆ. ಈ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅನೇಕ ಜನರಿಗೆ ಸಹಾಯ ಮಾಡಲಾಗಿದೆ ಆದರೆ ಎಲ್ಲರೂ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಿಲ್ಲ. ಈ ಯೋಜನೆಗೆ…

Read More

ಬೆಂಗಳೂರು : ತಮ್ಮ ಕಛೇರಿ ವ್ಯಾಪ್ತಿಗೆ ಬರುವ ಎಲ್ಲಾ ಸಾರ್ವಜನಿಕ ಕಟ್ಟಡಗಳಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಅಡೆ ತಡೆ ರಹಿತ ಒದಗಿಸುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಮಾನ್ಯ ಸರ್ವೇಚ್ಚ ನ್ಯಾಯಾಲಯದ ಆದೇಶದನ್ವಯ ಎಲ್ಲಾ ಸಾರ್ವಜನಿಕ ಕಟ್ಟಡಗಳಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಅಡೆ ತಡೆ ರಹಿತ(Barries free enverolment) ಒದಗಿಸುವ ಸಲುವಾಗಿ ನಿಟ್ಟಿನಲ್ಲಿ ತಮ್ಮ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ಕಟ್ಟಡಗಳು/ಸ್ಥಳಗಳು, ಪಾರ್ಕ್, ಪ್ರವಾಸೋದ್ಯಮ ಸ್ಥಳಗಳು, ಸರ್ಕಾರದ ಎಲ್ಲಾ ಕಛೇರಿಗಳು website ಗಳು, ಸಾರಿಗೆ ಇಲಾಖೆಯ ಸಾರ್ವಜನಿಕ ವಾಹನಗಳು ಸಮಂಜಸ ಸೌಕರ್ಯವನ್ನು ಹೊಂದಿರುವ ಬಗ್ಗೆ ವಿವರವಾದ ಮಾಹಿತಿಯನ್ನು ಆದ್ಯತೆ ಮೇರೆಗೆ ರಾಜ್ಯ ಆಯುಕ್ತರು, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ ಕಛೇರಿಗೆ ಸಲ್ಲಿಸಿ ಪ್ರತಿಯನ್ನು ರಾಜ್ಯ ಕಛೇರಿಗೆ ಸಲ್ಲಿಸಲು ತಿಳಿಸಿದೆ.

Read More