Author: kannadanewsnow57

ವಿಕಾರಾಬಾದ್ : ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ಕುಲ್ಕಚರ್ಲದಲ್ಲಿ ಭೀಕರ ಘಟನೆ ನಡೆದಿದೆ. ಕುಟುಂಬದ ಮುಖ್ಯಸ್ಥ ಯಾದಯ್ಯ ತನ್ನ ಪತ್ನಿ, ಮಗಳು ಮತ್ತು ಅತ್ತಿಗೆಯನ್ನು ಚಾಕುವಿನಿಂದ ಕೊಲೆ ಮಾಡಿದ್ದಾನೆ.ನಂತರ, ಅವನು ಆತ್ಮಹತ್ಯೆ ಮಾಡಿಕೊಂಡನು. ಹಿರಿಯ ಮಗಳು ತನ್ನ ತಂದೆಯ ದಾಳಿಯಿಂದ ಬದುಕುಳಿದಳು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪರಿಗಿ ಡಿಎಸ್ಸಿ ಶ್ರೀನಿವಾಸ್ ಸ್ಥಳ ಪರಿಶೀಲನೆ ನಡೆಸಿದರು. ಘಟನೆಗೆ ಕಾರಣಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಯಾದಯ್ಯ ಮತ್ತು ಅಲವೇಲು ಗಂಡ ಮತ್ತು ಹೆಂಡತಿ. ಅವರಿಗೆ ಅಪರ್ಣ ಮತ್ತು ಶ್ರಾವಣಿ ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ದಿನಗೂಲಿ ಕಾರ್ಮಿಕಳಾಗಿರುವ ಯಾದಯ್ಯನ ಪತ್ನಿ ನಿರಂತರವಾಗಿ ಅಳವೇಲು ಬಗ್ಗೆ ಅನುಮಾನ ವ್ಯಕ್ತಪಡಿಸಿ ಜಗಳವಾಡುತ್ತಿದ್ದಳು ಎಂದು ಸ್ಥಳೀಯರು ಹೇಳುತ್ತಾರೆ. ಒಂದು ವಾರದಿಂದ ಗಂಡ ಮತ್ತು ಹೆಂಡತಿಯ ನಡುವೆ ಜಗಳ ತೀವ್ರಗೊಂಡಾಗ, ತಾಯಿ ಇಬ್ಬರನ್ನೂ ರಾಜಿ ಮಾಡಿಕೊಳ್ಳಲು ಬಂದರು. ಇದರಿಂದಾಗಿ ಶನಿವಾರ ರಾತ್ರಿ ಅವರ ನಡುವೆ ಮಾತುಕತೆ ನಡೆಯಿತು. ನಂತರ, ಮಧ್ಯರಾತ್ರಿಯ ನಂತರ, ಎಲ್ಲರೂ ಮಲಗಿದ್ದಾಗ, ಯಾದಯ್ಯ ತನ್ನ ಪತ್ನಿ,…

Read More

ಬೆಂಗಳೂರು : ರಾಜ್ಯದ ಎಲ್ಲ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕನ್ನಡ ರಾಜ್ಯೋತ್ಸವದ ಮಹತ್ವ ಸಾರುವ ದೃಷ್ಟಿ ಯಿಂದ ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡಬಾವುಟ ಹಾರಿಸುವ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು ತಿಳಿಸಿದ್ದಾರೆ. ಕನ್ನಡ ಮತ್ತು ಕರ್ನಾಟಕ ಬಗ್ಗೆ ಎಲ್ಲರಿಗೂ ತಿಳಿಯುವಂತೆ ಮಾಡಲು ಖಾಸಗಿ ಮತ್ತು ಸರ್ಕಾರಿ ಕಟ್ಟಡಗಳಲ್ಲಿ ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಿಸುವಂತೆ ಆದೇಶಿಸುವ ಚಿಂತನೆಯಿದೆ. ಈ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. https://twitter.com/DKShivakumar/status/1984482632986738893

Read More

ಮಂಡ್ಯ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿಯ ರಾಮ ಸ್ವಾಮಿ ನಾಲೆಯಲ್ಲಿ ಬಟ್ಟೆ ಒಗೆಯಲು ಬಂದಿದ್ದ 7 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಮೂವರನ್ನು ಸ್ಥಳೀಯರು ಕಾಲುವೆಯಿಂದ ರಕ್ಷಿಸಿದ್ದಾರೆ. ಮೈಸೂರಿನ ಉದಯಗಿರಿ ಹಜಿರ ನಿಶ್ವಾನ್ ಅರೇಬಿಕ್ ಶಾಲೆಯ ವಿದ್ಯಾರ್ಥಿಗಳು ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ವೇಳೆ ಘಟನೆ ಸಂಭವಿಸಿದೆ. ಒಬ್ಬ ಹುಡುಗ ನೀರಿನಲ್ಲಿ ಮುಳುಗಿ ಕೊಚ್ಚಿ ಹೋಗಿದ್ದಾನೆ ಈ ವೇಳೆ ಆತನನ್ನು ರಕ್ಷಿಸಲು ಪ್ರಯತ್ನಿಸಿ ಆರು ವಿದ್ಯಾರ್ಥಿಗಳು ನಾಲೆಗೆ ಇಳಿದು, ಕೊಚ್ಚಿಕೊಂಡು ಹೋಗಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಮೂವರನ್ನು ರಕ್ಷಿಸಿದ್ದಾರೆ.

Read More

ಪಾಟ್ನಾ : ಜನ ಸುರಾಜ್ ಕಾರ್ಯಕರ್ತ ದುಲಾರ್ಚಂದ್ ಯಾದವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಶನಿವಾರ ಮೋಕಾಮಾದ ಜೆಡಿ(ಯು) ಅಭ್ಯರ್ಥಿ ಅನಂತ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಪಾಟ್ನಾ ಎಸ್ಎಸ್ಪಿ ನೇತೃತ್ವದಲ್ಲಿ ಪೊಲೀಸರು ಬರ್ಹ್‌ನಲ್ಲಿರುವ ಅನಂತ್ ಸಿಂಗ್ ಅವರ ಕಾರ್ಗಿಲ್ ಮಾರುಕಟ್ಟೆ ನಿವಾಸಕ್ಕೆ ತಲುಪಿ ನಂತರ ಅವರನ್ನು ವಶಕ್ಕೆ ಪಡೆದರು. ಸಿಂಗ್ ಅವರನ್ನು ವಿಚಾರಣೆಗಾಗಿ ಪಾಟ್ನಾಗೆ ಕರೆತರಲಾಗುತ್ತಿದೆ. ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ್ ಯಾದವ್, ಪಾಟ್ನಾದ ಮೋಕಾಮಾದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ಶ್ವಾಸಕೋಶ ಛಿದ್ರಗೊಂಡು ಮತ್ತು ಬಹು ಪಕ್ಕೆಲುಬು ಮುರಿತದಿಂದ ಸಾವನ್ನಪ್ಪಿದರು. ಬಿಹಾರ ವಿಧಾನಸಭಾ ಚುನಾವಣೆಯ ನಡುವೆ ರಾಜಕೀಯ ಉದ್ವಿಗ್ನತೆಯನ್ನು ಹುಟ್ಟುಹಾಕಿದ ಶವಪರೀಕ್ಷೆಯು ಸಾವಿಗೆ ಗುಂಡೇಟಿನ ಕಾರಣವನ್ನು ತಳ್ಳಿಹಾಕಿದೆ.

Read More

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ) 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಅವರು ವಿವರಿಸಿದ್ದಾರೆ. ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆಯಲಿವೆ. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ…

Read More

ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರಿಗೆ ತಿಂಗಳ 5 ನೇ ತಾರೀಖಿನ ಒಳಗಾಗಿ ತಪ್ಪದೇ ವೇತನ ಪಾವತಿ ಮಾಡಬೇಕು. ಇ.ಎಸ್.ಐ. ಪಿಫ್ ಜಮಾ ಕುರಿತು ಸಂಬಂಧಪಟ್ಟ ಏಜೆನ್ಸಿಯಿಂದ ಮಾಹಿತಿ ಪಡೆದುಕೊಳ್ಳಬೇಕು. ಪೌರ ಕಾರ್ಮಿಕರಿಗೆ ವೇತನ ಪ್ರಮಾಣ ಪತ್ರವನ್ನು ನೀಡಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೊಗದ ಅಧ್ಯಕ್ಷ ರಘು.ಪಿ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸ್ವಚ್ಛತಾ ಹಾಗೂ ಪೌರ ಕಾರ್ಮಿಕರಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪೌರ ಕಾರ್ಮಿಕರಿಗೆ ನಿವೇಶನ ನೀಡಲು ಜಾಗ ಗುರುತಿಸಿ ಮೀಸಲು ಇಡಬೇಕು. ಪೌರ ಕಾರ್ಮಿರೊಂದಿಗಿನ ಸಂವಾದಲ್ಲಿ ಸಾಕಷ್ಟು ಸಮಸ್ಯೆಗಳು ಕೇಳಿಬಂದಿವೆ. ನಗರಸಭೆಗಳಲ್ಲಿ ಸರಿಯಾಗಿ ವೇತನ ಪಾವತಿಯಾಗುತ್ತಿಲ್ಲ. ಸಮವಸ್ತ್ರಗಳನ್ನು ವಿತರಣೆ ಮಾಡಿಲ್ಲ. ನೇಮಕಾತಿಗೊಂಡು ಎರಡು ವರ್ಷಗಳಾದವರಿಗೆ ಪ್ರೊಬೆಷನರಿ ಅವಧಿ ಘೋಷಿಸಿಲ್ಲ. ವೈದ್ಯಕೀಯ ತಪಾಸಣೆ ವರದಿ ಪೌರ ಕಾರ್ಮಿಕರ ಕೈಗೆ ನೀಡುತ್ತಿಲ್ಲ. ಪೌಷ್ಠಿಕ ಉಪಹಾರ, ಶುದ್ಧ ಕುಡಿಯುವ ನೀರು ಸಹ ನೀಡದೆ ಅಸಡ್ಡೆ ಮಾಡುತ್ತಿರುವುದಾಗಿ ಸಾಕಷ್ಟು ಪೌರಕಾರ್ಮಿಕರು…

Read More

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ) 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಅವರು ವಿವರಿಸಿದ್ದಾರೆ. ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆಯಲಿವೆ. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ…

Read More

ಮೈಸೂರು : ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನೆರಡು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ತಾಯಿಯನ್ನು ಸಂಬ್ರನ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಿಳೆ ತನ್ನ 10 ದಿನದ ಹೆಣ್ಣು ಮಗು ಹಾಗೂ 5 ವರ್ಷದ ಹೆಣ್ಣು ಮಗುವಿನ ಕತ್ತು ಕೊಯ್ದು ಕೊಲೆ ಮಾಡಿದ್ದಾಳೆ. ಬಳಿಕ ತಾನು ಕೂಡ ಅದೇ ಚಾಕುವಿನಿಂದ ಆಕೆಯ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಬೆಟ್ಟದಪುರ ಪೊಲೀಸ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು ನ1: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಂಬುಲೆನ್ಸ್ ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ್ ಆಂಬುಲೆನ್ಸ್ ರೆಡ್ ಸಿಗ್ನಲ್ ಇದ್ದ ಕಾರಣ ಬೈಕ್ ಗಳನ್ನು ಸವಾರರು ನಿಲ್ಲಿಸಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಬೈಕ್ ಗಳಿಗೆ ಆಂಬುಲೆನ್ಸ್ ಚಾಲಕ ಗುದ್ದಿದ್ದಾನೆ. ಬೈಕ್ ನ್ನು 50 ಮೀಟರ್ ದೂರು ಎಳೆದೊಯ್ದಿದ್ದಾನೆ. ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಇಸ್ಮಾಯಿಲ್(40), ಸಮೀನಾಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಸಿದ್ದಿಖಿ ಸೇರಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಗಳಿಗೆ ಡಿಕ್ಕಿ ಹೊಡೆದು ಪೊಲೀಸ್ ಚೌಕಿಗೆ ಆಂಬುಲೆನ್ಸ್ ಡಿಕ್ಕಿಯಾಗಿದೆ. ಅತಿವೇಗ, ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಳಿಕ ಆಕ್ರೋಶಗೊಂಡ ಜನ ಆಂಬುಲೆನ್ಸ್ ದೂಡಿ ಪಲ್ಟಿ ಹೊಡೆಸಿದ್ದಾರೆ.

Read More