Author: kannadanewsnow57

ನವದೆಹಲಿ: “ದುಡ್ಡಿಲ್ಲ ಎಂಬ ಕಾರಣಕ್ಕೆ ಬಡವರಿಗೆ ಚಿಕಿತ್ಸೆ ಸಿಗದೇ ಇರಬಾರದು. ಸಾಮಾನ್ಯ ಜನರ ಆರೋಗ್ಯದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ” ಎಂದು ಸುಪ್ರೀಂ ಕೋರ್ಟ್ ಖಾಸಗಿ ಆಸ್ಪತ್ರೆಗಳ ವಿರುದ್ಧ ಗುಡುಗಿದೆ. ಸರ್ಕಾರದಿಂದ ಕಡಿಮೆ ಬೆಲೆಗೆ ಜಾಗ (ಭೂಮಿ) ಪಡೆದುಕೊಂಡು, ಈಗ ಬಡವರಿಗೆ ಉಚಿತ ಸೇವೆ ನೀಡಲು ಹಿಂದೇಟು ಹಾಕುತ್ತಿರುವ ಆಸ್ಪತ್ರೆಗಳ ಆಡಳಿತ ಮಂಡಳಿಗೆ ನ್ಯಾಯಾಲಯ ಗಂಭೀರ ಎಚ್ಚರಿಕೆ ನೀಡಿದೆ. ನಿಯಮಗಳನ್ನು ಗಾಳಿಗೆ ತೂರಿ ಮನಬಂದಂತೆ ವರ್ತಿಸುತ್ತಿರುವ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಉಚಿತ ಚಿಕಿತ್ಸೆಯ ನಿಯಮಗಳೇನು? ನ್ಯಾಯಾಲಯದ ಆದೇಶದ ಪ್ರಕಾರ, ಸರ್ಕಾರದ ಸಬ್ಸಿಡಿ ದರದಲ್ಲಿ ಜಾಗ ಪಡೆದ ಎಲ್ಲಾ ಕಾರ್ಪೊರೇಟ್ ಮತ್ತು ಖಾಸಗಿ ಆಸ್ಪತ್ರೆಗಳು ಈ ಕೆಳಗಿನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು: 25% ಒಪಿಡಿ ಉಚಿತ: ಹೊರರೋಗಿ ವಿಭಾಗಕ್ಕೆ (OPD) ಬರುವ ಶೇ. 25 ರಷ್ಟು ಬಡ ರೋಗಿಗಳಿಗೆ ಸಂಪೂರ್ಣ ಉಚಿತ ತಪಾಸಣೆ ನಡೆಸಬೇಕು. 10% ಬೆಡ್‌ಗಳು ಮೀಸಲು: ಒಳರೋಗಿ ವಿಭಾಗದಲ್ಲಿ (IPD) ಶೇ.…

Read More

ಬೆಂಗಳೂರು: ಆರ್ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಬಡ ಮಕ್ಕಳಿಗಾಗಿ ಮೀಸಲಾದ ಶೇಕಡಾ 25 ರಷ್ಟು ಸೀಟುಗಳ ಮೂಲಕ ಪ್ರವೇಶ ಪಡೆದು ಓದುತ್ತಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ವಿದ್ಯಾರ್ಥಿಗಳು ಇನ್ಮುಂದೆ ಅದೇ ಶಾಲೆಯಲ್ಲಿ 10ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ಮುಂದುವರಿಸಲು ಶಿಕ್ಷಣ ಇಲಾಖೆಯು ಅವಕಾಶ ಕಲ್ಪಿಸಿಕೊಟ್ಟಿದೆ. ಇಲ್ಲಿಯವರೆಗೆ ನಿಯಮದ ಪ್ರಕಾರ, 8ನೇ ತರಗತಿಯವರೆಗಿನ ಶಿಕ್ಷಣದ ಶುಲ್ಕವನ್ನು ಮಾತ್ರ ಸರ್ಕಾರವೇ ಸಂಬಂಧಿಸಿದ ಖಾಸಗಿ ಶಾಲೆಗಳಿಗೆ ಮರುಪಾವತಿಸುತ್ತಾ ಬಂದಿತ್ತು. ಆದರೆ ಈಗ ಹೊಸ ನಿರ್ಧಾರದ ಅನ್ವಯ, ಎಸ್ಸಿ ಮತ್ತು ಎಸ್ಟಿ ಸಮುದಾಯದ ಮಕ್ಕಳು ಅದೇ ಖಾಸಗಿ ಶಾಲೆಗಳಲ್ಲಿ 9 ಮತ್ತು 10ನೇ ತರಗತಿಯವರೆಗೆ ಉಚಿತವಾಗಿ ಶಿಕ್ಷಣ ಮುಂದುವರಿಸಲು ಇಚ್ಛಿಸಿದರೆ, ಆ ತರಗತಿಗಳ ಶುಲ್ಕವನ್ನು ಕೂಡ ಸರ್ಕಾರವೇ ಸಂಪೂರ್ಣವಾಗಿ ಭರಿಸಲಿದೆ.

Read More

ಬೆಂಗಳೂರು : ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇದೇ ಮೊದಲ ಬಾರಿಗೆ ಫಲಿತಾಂಶದ ದಿನವೇ ‘ಡಿಜಿ ಲಾಕರ್’ ಮೂಲಕ ಡಿಜಿಟಲ್ ಅಂಕಪಟ್ಟಿ ನೀಡಿದ್ದ ಶಾಲಾ ಶಿಕ್ಷಣ ಇಲಾಖೆ, ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳಿಗೆ ಡಿಜಿಟಲ್ ವರ್ಗಾವಣೆ ಪ್ರಮಾಣಪತ್ರ (ಟಿಸಿ – Transfer Certificate) ನೀಡಲು ಇಲಾಖೆ ಮುಂದಾಗಿದೆ. ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ (Pilot Basis), ದ್ವಿತೀಯ ಪಿಯುಸಿ ತೇರ್ಗಡೆಯಾದ ಸರ್ಕಾರಿ ಪಿಯು ಕಾಲೇಜುಗಳ ನಿಯಮಿತ ವಿದ್ಯಾರ್ಥಿಗಳಿಗೆ ಡಿಜಿಟಲ್ ಟಿಸಿ ನೀಡಲು ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯಕ್ಕೆ ಅನುಮತಿ ನೀಡಲಾಗಿದೆ. ಏನಿದು ಹೊಸ ವ್ಯವಸ್ಥೆ? ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶದ ದತ್ತಾಂಶವನ್ನು ಬಳಸಿಕೊಂಡು ಸ್ವಯಂಚಾಲಿತವಾಗಿ (Automatically) ಡಿಜಿಟಲ್ ಟಿಸಿಯನ್ನು ಸೃಜಿಸಲಾಗುತ್ತದೆ. ವಿದ್ಯಾರ್ಥಿಗಳು ನೇರವಾಗಿ ತಮ್ಮ ಡಿಜಿಲಾಕರ್ ಖಾತೆಯ ಮೂಲಕ ಇದನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಸಿಗುವ ಅನುಕೂಲಗಳೇನು? ಅಲೆಯುವುದು ತಪ್ಪುತ್ತದೆ: ಫಲಿತಾಂಶ ಪ್ರಕಟವಾದ ತಕ್ಷಣವೇ ಡಿಜಿಲಾಕರ್ನಲ್ಲಿ ಟಿಸಿ…

Read More

ಬೆಂಗಳೂರು: ರಾಜ್ಯದಲ್ಲಿರುವ ಒಟ್ಟು 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್ (Pre-school Education Kit) ಒದಗಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು, “ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ (ICDS) ಈ ಶಾಲಾಪೂರ್ವ ಶಿಕ್ಷಣ ಕಿಟ್ಗಳನ್ನು ವಿತರಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು. ರಾಜ್ಯದ ಒಟ್ಟು 69,922 ಅಂಗನವಾಡಿ ಕೇಂದ್ರಗಳಿಗೆ ಈ ಕಿಟ್ಗಳು ತಲುಪಲಿವೆ. ಪ್ರತಿ ಅಂಗನವಾಡಿ ಕೇಂದ್ರಕ್ಕೆ ತಲಾ ₹3,000 ವೆಚ್ಚದ ಕಿಟ್ ನೀಡಲಾಗುತ್ತದೆ. ಈ ಯೋಜನೆಗಾಗಿ ಸರ್ಕಾರ ಒಟ್ಟು ₹20.98 ಕೋಟಿ ವೆಚ್ಚ ಮಾಡಲು ತೀರ್ಮಾನಿಸಿದೆ.ಈ ಶಾಲಾಪೂರ್ವ ಶಿಕ್ಷಣ ಕಿಟ್ಗಳು ಅಂಗನವಾಡಿ ಮಕ್ಕಳ ಉನ್ನತ ಅಭ್ಯಾಸ ಹಾಗೂ ಉತ್ತಮ ಕಲಿಕೆಗೆ ಕಲಿಕಾ ಪೂರಕವಾಗಿ ನೆರವಾಗಲಿವೆ,” ಎಂದು ಸಚಿವ ಎಚ್.ಕೆ. ಪಾಟೀಲ್ ಅವರು ಆಶಯ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ರಾಜ್ಯದ ಭೂಮಿ ಮಾಲೀಕರಿಗೆ ಸಂಬಂಧಿಸಿದ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಮತ್ತು ತಾಂತ್ರಿಕ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಲು ಕಂದಾಯ ಆಯುಕ್ತಾಲಯವು ಮಹತ್ವದ ಅಧಿಕೃತ ಆದೇಶ ಹಾಗೂ ಮಾರ್ಗಸೂಚಿಯನ್ನು ಹೊರಡಿಸಿದೆ. ಕಂದಾಯ ಇಲಾಖೆಯ ಭೂಮಿ ಉಸ್ತುವಾರಿ ಕೋಶದ ವತಿಯಿಂದ ರಾಜ್ಯದ ಎಲ್ಲಾ ಉಪವಿಭಾಗಾಧಿಕಾರಿಗಳು (AC) ಮತ್ತು ತಹಶೀಲ್ದಾರರುಗಳಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ಪಹಣಿಯ ವಿವಿಧ ಕಾಲಂಗಳನ್ನು ತಿದ್ದುಪಡಿ ಮಾಡಲು ಯಾವ ನಿರ್ದಿಷ್ಟ ಸಾಫ್ಟ್ವೇರ್ ಮಾಡ್ಯೂಲ್ ಬಳಸಬೇಕು ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಭೌತಿಕವಾಗಿ (Physical) ಅರ್ಜಿಗಳನ್ನು ನಿರ್ವಹಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಇನ್ಮುಂದೆ ಕೇವಲ ಆನ್ಲೈನ್ ತಂತ್ರಾಂಶದ ಮೂಲಕವೇ ನಿಯಮಾನುಸಾರ ದಾಖಲೆಗಳನ್ನು ಪರಿಶೀಲಿಸಿ, ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಪಹಣಿ (RTC) ಕಾಲಂಗಳು ಮತ್ತು ತಿದ್ದುಪಡಿಗೆ ನಿಗದಿಪಡಿಸಿದ ಮಾಡ್ಯೂಲ್ಗಳು: ಯಾವ ಕಾಲಂನ ತಿದ್ದುಪಡಿಗೆ ಯಾವ ತಾಂತ್ರಿಕ ಅವಕಾಶವಿದೆ ಎಂಬ ವಿವರ ಈ ಕೆಳಗಿನಂತಿದೆ: RTC ಕಾಲಂ ವಿವರ (Description) ಬಳಸಬೇಕಾದ ಸಾಫ್ಟ್‌ವೇರ್ / ಮಾಡ್ಯೂಲ್ ಕಾಲಂ-1 ಸsurvey ನಂಬರ್…

Read More

ನವದೆಹಲಿ: ಆಫ್ರಿಕಾ ಖಂಡದ ಕೆಲವು ಭಾಗಗಳಲ್ಲಿ ಎಬೋಲಾ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ವಾರ ನವದೆಹಲಿಯಲ್ಲಿ ನಡೆಯಬೇಕಿದ್ದ ಬಹುನಿರೀಕ್ಷಿತ ‘ನಾಲ್ಕನೇ ಭಾರತ-ಆಫ್ರಿಕಾ ಫೋರಂ ಶೃಂಗಸಭೆ’ಯನ್ನು (India–Africa Forum Summit) ಮುಂದೂಡಲಾಗಿದೆ. ಭಾರತ ಸರ್ಕಾರ, ಆಫ್ರಿಕನ್ ಯೂನಿಯನ್ನ ಅಧ್ಯಕ್ಷರು ಮತ್ತು ಆಫ್ರಿಕನ್ ಯೂನಿಯನ್ ಕಮಿಷನ್ ಪರಸ್ಪರ ಮಾತುಕತೆ ನಡೆಸಿದ ಬಳಿಕ ಶೃಂಗಸಭೆ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಸದ್ಯಕ್ಕೆ ಮುಂದೂಡುವ ಜಂಟಿ ತೀರ್ಮಾನಕ್ಕೆ ಬರಲಾಗಿದೆ. ಸಾರ್ವಜನಿಕ ಆರೋಗ್ಯಕ್ಕೆ ಆದ್ಯತೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಆಫ್ರಿಕಾದಲ್ಲಿ ದಿನದಿಂದ ದಿನಕ್ಕೆ ಬದಲಾಗುತ್ತಿರುವ ಆರೋಗ್ಯ ಪರಿಸ್ಥಿತಿಯ ಬಗ್ಗೆ ಭಾರತ ಮತ್ತು ಆಫ್ರಿಕನ್ ಯೂನಿಯನ್ ಸುದೀರ್ಘ ಚರ್ಚೆ ನಡೆಸಿವೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯದ ಸಿದ್ಧತೆ ಮತ್ತು ರೋಗ ನಿಯಂತ್ರಣ ಸಾಮರ್ಥ್ಯವನ್ನು ಬಲಪಡಿಸಲು ಪರಸ್ಪರ ಸಹಕಾರ ಮುಂದುವರಿಸುವುದು ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದೆ. “ಆಫ್ರಿಕಾ ಸಿಡಿಸಿ (Africa CDC) ಮತ್ತು ಅಲ್ಲಿನ ಸ್ಥಳೀಯ ರಾಷ್ಟ್ರೀಯ…

Read More

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಭೀಕರ ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಗುರುವಾರ ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ಸಂಸ್ಥೆಯ AI2651 ವಿಮಾನವು ಬೆಂಗಳೂರು ವಿಮಾನ ನಿಲ್ದಾಣದ ರನ್ವೇ ಸ್ಪರ್ಶಿಸುವ ಸಂದರ್ಭದಲ್ಲಿ, ಅದರ ಹಿಂಭಾಗ ನೆಲಕ್ಕೆ ಜೋರಾಗಿ ಉಜ್ಜಿದೆ (Tail Strike). ಸುರಕ್ಷಿತ ಪ್ರಯಾಣಿಕರು: ವಿಮಾನದ ಹಿಂಭಾಗ ನೆಲಕ್ಕೆ ತಗುಲಿದ ತಕ್ಷಣವೇ ಎಚ್ಚೆತ್ತ ಪೈಲಟ್ಗಳು ಸಮಯಪ್ರಜ್ಞೆ ಮೆರೆದು ವಿಮಾನವನ್ನು ಸುರಕ್ಷಿತವಾಗಿ ರನ್ವೇ ಮೇಲೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ವರ್ಗದವರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ತಾಂತ್ರಿಕ ಅಡಚಣೆಗೆ ನಿಖರ ಕಾರಣವೇನು ಎಂಬ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More

ನವದೆಹಲಿ: ಸಾಮಾನ್ಯ ಶಸ್ತ್ರಚಿಕಿತ್ಸೆಯೊಂದರಲ್ಲಿ ನಡೆದ ಘೋರ ಯಡವಟ್ಟಿನಿಂದಾಗಿ 56 ವರ್ಷದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು (NCDRC) ಸಂತ್ರಸ್ತ ಕುಟುಂಬಕ್ಕೆ 2 ಕೋಟಿ ರೂಪಾಯಿ ಭಾರಿ ಪರಿಹಾರವನ್ನು ಘೋಷಿಸಿದೆ. ಮಹಿಳೆಗೆ ತೊಂದರೆ ಇದ್ದ ಬಲ ಕಿಡ್ನಿಯನ್ನು ತೆಗೆಯುವ ಬದಲಾಗಿ ವೈದ್ಯರು ಆರೋಗ್ಯವಾಗಿದ್ದ ಎಡ ಕಿಡ್ನಿಯನ್ನೇ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದರು. ಇದು ನ್ಯಾಯಾಂಗ ಇತಿಹಾಸದಲ್ಲೇ ಅತ್ಯಂತ ಅಪರೂಪದ ಮತ್ತು ಗಂಭೀರ ಸ್ವರೂಪದ ವೈದ್ಯಕೀಯ ನಿರ್ಲಕ್ಷ್ಯ ಎಂದು ಆಯೋಗವು ತೀವ್ರ ಕಳವಳ ವ್ಯಕ್ತಪಡಿಸಿದೆ. ಘಟನೆಯ ಹಿನ್ನೆಲೆ: ಉತ್ತರ ಪ್ರದೇಶದ ಅಲಿಗಢದ ನಿವಾಸಿ ರೋಗಿ ಮಹಿಳೆಗೆ 2012ರ ಏಪ್ರಿಲ್‌ನಲ್ಲಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅವರು ಸ್ಥಳೀಯ ಆಶೀರ್ವಾದ್ ನರ್ಸಿಂಗ್ ಹೋಮ್‌ನ ವೈದ್ಯರಾದ ಡಾ. ರಾಜೀವ್ ಲೋಚನ್ ಅವರ ಬಳಿ ತಪಾಸಣೆಗೆ ಒಳಗಾಗಿದ್ದರು. ತಪಾಸಣೆ ನಡೆಸಿದ ವೈದ್ಯರು, ಮಹಿಳೆಯ ಬಲ ಕಿಡ್ನಿಯಲ್ಲಿ ಮೂತ್ರದ ಶೇಖರಣೆಯಿಂದಾಗಿ ಊತ ಕಾಣಿಸಿಕೊಂಡಿದೆ (Hydronephrosis) ಎಂದು ಪತ್ತೆಹಚ್ಚಿ, ಅದನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಬೇಕೆಂದು…

Read More

ಮುಜಾಫರಾಬಾದ್: ಭಾರತದ ಇತಿಹಾಸದಲ್ಲೇ ಅತ್ಯಂತ ಭೀಕರ ಉಗ್ರರ ದಾಳಿಗಳಲ್ಲಿ ಒಂದಾದ ಪುಲ್ವಾಮಾ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನಾಗಿದ್ದ ಹಮ್ಜಾ ಬುರ್ಹಾನ್ ಎಂಬಾತನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ನಂಬಲರ್ಹ ಮೂಲಗಳ ಪ್ರಕಾರ, ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ತಲೆಮರೆಸಿಕೊಂಡಿದ್ದ ಹಮ್ಜಾ ಬುರ್ಹಾನ್ ಮೇಲೆ ಹಠಾತ್ ದಾಳಿ ನಡೆಸಿದ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಆತನನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದೆ. ಪಾಕಿಸ್ತಾನದಲ್ಲಿ ಅಡಗಿರುವ ಭಾರತ ವಿರೋಧಿ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಸರಣಿ ‘ಅಪರಿಚಿತ’ ದಾಳಿಗಳ ಭಾಗವಾಗಿಯೇ ಈ ಹತ್ಯೆಯೂ ನಡೆದಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪುಲ್ವಾಮಾ ಕನೆಕ್ಷನ್: 2019ರಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ಪಿಎಫ್ (CRPF) ಯೋಧರ ವಾಹನದ ಮೇಲೆ ನಡೆದ ಆತ್ಮಹತ್ಯಾ ಬಾಂಬ್ ದಾಳಿಯ ಸಂಚಿನಲ್ಲಿ ಈತ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ. ಈ ದಾಳಿಯಲ್ಲಿ ಭಾರತದ 40 ವೀರ ಯೋಧರು ಹುತಾತ್ಮರಾಗಿದ್ದರು. ಪಾಕಿಸ್ತಾನದ ಮೌನ: ಜೈಶ್-ಎ-ಮೊಹಮ್ಮದ್ ಸೇರಿದಂತೆ ವಿವಿಧ ಉಗ್ರಗಾಮಿ ಸಂಘಟನೆಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಹಮ್ಜಾ…

Read More

ಅನಂತಪುರ: ಪ್ರೇಮದ ಹೆಸರಿನಲ್ಲಿ ವಿವಾಹಿತ ಮಹಿಳೆಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ, ಗ್ರಾಮಸ್ಥರು ಯುವಕನೊಬ್ಬನಿಗೆ ತೀವ್ರವಾಗಿ ಥಳಿಸಿ, ಅರೆಬೋಳು ತಲೆ ಮಾಡಿ, ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಮೆರವಣಿಗೆ ಮಾಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅನಂತಪುರ ಜಿಲ್ಲೆಯ ಗಡೇಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಮೂಲಗಳ ಪ್ರಕಾರ, ಭಾಸ್ಕರ್ ಎಂಬ ಯುವಕ ಕಳೆದ ಕೆಲವು ದಿನಗಳಿಂದ ವಿವಾಹಿತ ಮಹಿಳೆಯೊಬ್ಬಳಿಗೆ ಪ್ರೇಮದ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಗ್ರಾಮಸ್ಥರು ಮತ್ತು ಆಕೆಯ ಕುಟುಂಬಸ್ಥರು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಆತನ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿರಲಿಲ್ಲ. ಇದರಿಂದ ಆಕ್ರೋಶಗೊಂಡ ಮಹಿಳೆಯ ಕಡೆಯವರು ಮತ್ತು ಗ್ರಾಮಸ್ಥರು ಸೇರಿ ಈ ಕೃತ್ಯ ಎಸಗಿದ್ದಾರೆ. ಸಂಸಾರ ಹಾಳು ಮಾಡಿದನೆಂಬ ಆಕ್ರೋಶ: ಸ್ಥಳೀಯರ ಮಾಹಿತಿಯ ಪ್ರಕಾರ, ಭಾಸ್ಕರ್ ಮತ್ತು…

Read More