Author: kannadanewsnow57

ನವದೆಹಲಿ : ಭಾರತೀಯ ಚುನಾವಣಾ ಆಯೋಗವು (ECI) ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಂತ-2ಕ್ಕೆ ಬಹುನಿರೀಕ್ಷಿತ ವೇಳಾಪಟ್ಟಿಯನ್ನ ಪ್ರಕಟಿಸಿದ ಸೋಮವಾರ, ಆಧಾರ್ ಕಾರ್ಡ್ ಜನ್ಮ ದಿನಾಂಕ ಅಥವಾ ನಿವಾಸದ ಪುರಾವೆಯಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಪುನರುಚ್ಚರಿಸಿದರು. ಆಧಾರ್ ಕಾರ್ಡ್ ಪೌರತ್ವದ ಪುರಾವೆಯಲ್ಲ, ಆದರೆ SIR ನ ಹಂತ 2 ರ ಸಮಯದಲ್ಲಿ ನಾಗರಿಕರು ಅದನ್ನು ಗುರುತಿನ ಪುರಾವೆಯಾಗಿ ಬಳಸಬಹುದು ಎಂದು CEC ಹೇಳಿದರು. “ಆಧಾರ್‌’ಗೆ ಸಂಬಂಧಿಸಿದಂತೆ, ಅದರ ಬಳಕೆಯು ಆಧಾರ್ ಕಾಯ್ದೆಗೆ ಅನುಗುಣವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಕಾಯ್ದೆಯ ಸೆಕ್ಷನ್ 9 ಆಧಾರ್ ನಿವಾಸ ಅಥವಾ ಪೌರತ್ವದ ಪುರಾವೆಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳುತ್ತದೆ. ಅದೇ ರೀತಿ, ಸುಪ್ರೀಂ ಕೋರ್ಟ್‌ನ ಹಲವಾರು ತೀರ್ಪುಗಳು ಆಧಾರ್ ಜನ್ಮ ದಿನಾಂಕದ ಪುರಾವೆಯಲ್ಲ ಎಂದು ದೃಢಪಡಿಸಿವೆ. ಇದಕ್ಕೆ ಅನುಗುಣವಾಗಿ, ಆಧಾರ್ ಪ್ರಾಧಿಕಾರವು ಈ ಅಂಶವನ್ನು ಒತ್ತಿಹೇಳುವ ಅಧಿಸೂಚನೆಗಳನ್ನು ಹೊರಡಿಸಿದೆ…” ಎಂದು ಸಿಇಸಿ ಜ್ಞಾನೇಶ್ ಕುಮಾರ್ ಹೇಳಿದರು.…

Read More

ಬೆಂಗಳೂರು : ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಿಹಿಸುದ್ದಿಯೊಂದು ನೀಡಿದ್ದು, ಫೇಲಾದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (NIOS) ಮಾದರಿ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ. ಎಸ್‌ ಎಸ್‌ ಎಲ್‌ ಸಿ ಮತ್ತು ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯುವುದಕ್ಕೆ ಒಂದು ವರ್ಷ ಕಾಯುವುದನ್ನು ತಪ್ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ತಲಾ ಒಂದೂವರೆಯಿಂದ ಎರಡು ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆದರೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಾರೆ. ಇಂತಹ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಮುಂದುವರೆವರೆಸಲು ಅನುಕೂಲವಾಗುವಂತೆ ಮಾಡಲು ಮುಕ್ತ ಶಾಲಾ ಮಾದರಿಯನ್ನು ಅಳವಡಿಸಿಕೊಳ್ಳಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.01 ರಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಪದೇ ಪದೇ ಕೇಳಲಾಗುವ ಪ್ರಶ್ನೆಗಳು ಫಲಾನುಭವಿಗಳಿಗೆ ಸಂಬಂಧಿಸಿದ ಪ್ರಶ್ನೆಗಳು. 1. KASS ಸೌಲಭ್ಯಗಳಿಗೆ ಯಾರು ಅರ್ಹರು? ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು, ವೈದ್ಯಕೀಯ ಹಾಜರಾತಿ ನಿಯಮಗಳು 1963 ರನ್ವಯ ಕೆಲವೊಂದು ಇಲಾಖೆ/ಗುಂಪುಗಳನ್ನು ಹೊರತುಪಡಿಸಿ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ. 2. ಯೋಜನೆಗೆ ಅರ್ಹ ಅವಲಂಬಿತರು ಯಾರು? ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ನಿಯಮ 2ರಲ್ಲಿನ “”(Familly) ដƠ, a. ಸರ್ಕಾರಿ ನೌಕರರ ಪತಿ ಅಥವಾ ಪತ್ನಿ b. ತಂದೆ ಮತ್ತು ತಾಯಿ (ಮಲತಾಯಿಯನ್ನೊಳಗೊಂಡಂತೆ) ಅವರು ಸರ್ಕಾರಿ ನೌಕರನೊಂದಿಗೆ ಸಾಮನ್ಯವಾಗಿ ವಾಸವಾಗಿದ್ದಲ್ಲಿ ಮತ್ತು…

Read More

ಶಿವಮೊಗ್ಗ: ಕೇಂದ್ರದ ನಿಯಮಾವಳಿಯಂತೆ ಆದಾಯ ತೆರಿಗೆ ಪಾವತಿದಾರರು, ಸ್ವಂತ ಕಾರು ಇದ್ದವರ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿ ಎಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ. ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ. ಅನರ್ಹರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂಬುದಾಗಿ ತಿಳಿಸಿದರು. ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ದಾರರರಷ್ಟೇ ರದ್ದು ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಯಾನ್ಸಲ್ ಮಾಡಲಾಗಿದೆ. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ, ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ ಎಂದರು. ಪಡಿತರ ವಿತರಕರಿಗೆ ಮೇ ತಿಂಗಳಿಂದ ಕಮಿಷನ್ ಬಾಕಿ ಇದೆ ಎಂಬ ಪ್ರಶ್ನೆಗೆ, ಕೇಂದ್ರ ಮತ್ತು…

Read More

ನವದೆಹಲಿ : ದೇಶದಲ್ಲಿ ಬೀದಿ ನಾಯಿಗಳ ಹಾವಳಿಯ ಕುರಿತು ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಿ ಅಫಿಡವಿಟ್ ಸಲ್ಲಿಸದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ನವೆಂಬರ್ 3 ರಂದು ವೈಯಕ್ತಿಕವಾಗಿ ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ದೆಹಲಿ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣದ ಎಂಸಿಡಿಗಳು ಮಾತ್ರ ಅಫಿಡವಿಟ್ ಸಲ್ಲಿಸಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ ಮತ್ತು ಈ ಮೂರು ರಾಜ್ಯಗಳನ್ನು ಹೊರತುಪಡಿಸಿ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಬೆಳಿಗ್ಗೆ 10.30 ಕ್ಕೆ ನ್ಯಾಯಾಲಯದ ಮುಂದೆ ಹಾಜರಾಗಬೇಕು ಮತ್ತು ಅನುಸರಣಾ ಅಫಿಡವಿಟ್ಗಳನ್ನು ಏಕೆ ಸಲ್ಲಿಸಲಾಗಿಲ್ಲ ಎಂಬ ವಿವರಣೆಯನ್ನು ನೀಡಬೇಕು ಎಂದು ನಿರ್ದೇಶಿಸಿದೆ. ದೆಹಲಿ ಸರ್ಕಾರವೂ ಅಫಿಡವಿಟ್ ಸಲ್ಲಿಸಿಲ್ಲ, ಮತ್ತು ಅದರ ಮುಖ್ಯ ಕಾರ್ಯದರ್ಶಿಯನ್ನು ಸಹ ಅದರ ಮುಂದೆ ಹಾಜರಾಗುವಂತೆ ಕೇಳಲಾಗಿದೆ. https://twitter.com/ANI/status/1982680695681012125?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆಗಾಗಿ ಕರ್ನಾಟಕ ಮೋಟಾ‌ರ್ ವಾಹನ (ತಿದ್ದುಪಡಿ) ನಿಯಮಗಳು 2025ರ ಅಡಿ ರಚಿಸಲಾಗಿದ್ದ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ ಜಾರಿ ಸಂಬಂಧ ರಾಜ್ಯ ಪತ್ರ ಹೊರಡಿಸಿದೆ.  ಈ ಸಮಿತಿ ಅಧ್ಯಕ್ಷರಾಗಿ ರಾಜ್ಯ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಥವಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಇರಲಿದ್ದಾರೆ. ಇಬ್ಬರು ಸದಸ್ಯರಲ್ಲಿ ಒಬ್ಬರು ಕಾನೂನು ಅರ್ಹತೆಯ ನಿವೃತ್ತ ಕಾರ್ಯದರ್ಶಿ, ಇನ್ನೊಬ್ಬರು ಕೈಗಾರಿಕಾ ಅಥವಾ ಹಣಕಾಸು ತಜ್ಞರಾಗಿರಲಿದ್ದಾರೆ. ಸಾರಿಗೆ ಸಂಸ್ಥೆಗಳನ್ನು ಅರ್ಥಿಕವಾಗಿ ಬಲಪಡಿಸಲು ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿ ಸೆ.9ರಂದು ಕರಡು ಅಧಿಸೂಚನೆ ಹೊರಡಿಸಿ, ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಿತ್ತು. ಅದರಂತೆ ಬಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಗಣಿಸಿ ಇದೀಗ ಅಂತಿಮ ಅಧಿಸೂಚನೆಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಿದಂತೆ ಆಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ :04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ…

Read More

ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆಯು ವಾಹನ ಚಾಲಕರು,ಮಾಲೀಕರಿಗೆ ಸಿಹಿಸುದ್ದಿಯೊಂದು ನೀಡಿದ್ದು, ಇನ್ಮುಂದೆ ರಾಜ್ಯ ಸಾರಿಗೆ ಇಲಾಖೆಯ ಈ 30 ಸೇವೆಗಳು ಆನ್ ಲೈನ್ ನಲ್ಲಿ ಸಿಗಲಿವೆ. ಆನ್‌ಲೈನ್‌ನಲ್ಲಿ ಲಭ್ಯ ಸೇವೆಗಳು – ಕಲಿಕಾ ಚಾಲನಾ ಅನುಜ್ಞಾ ಪತ್ರ ಕಲಿಕಾ ಚಾಲನಾ ಅನುಜ್ಞಾ ಪತ್ರದಲ್ಲಿ ವಿಳಾಸ ಬದಲಾವಣೆ ಕಲಿಕಾ ಚಾಲನಾ ಅನುಜ್ಞಾ ಪತ್ರದಲ್ಲಿ ಹೆಸರು ಬದಲಾವಣೆ ನಕಲು ಕಲಿಕಾ ಚಾಲನಾ ಅನುಜ್ಞಾ ಪತ್ರ ನೀಡುವಿಕೆ ನಕಲು ಚಾಲನಾ ಅನುಜ್ಞಾ ಪತ್ರ ನೀಡುವಿಕೆ ಚಾಲನಾ ಅನುಜ್ಞಾ ಪತ್ರ ನವೀಕರಣ ಚಾಲನಾ ಅನುಜ್ಞಾ ಪತ್ರದಲ್ಲಿ ವಿಳಾಸ ಬದಲಾವಣೆ ಚಾಲನಾ ಅನುಜ್ಞಾ ಪತ್ರದಲ್ಲಿ ಹೆಸರು ಬದಲಾವಣೆ ಚಾಲನಾ ಅನುಜ್ಞಾ ಪತ್ರ ವಹಿ ಪಡೆಯುವಿಕೆ ಅಂತರರಾಷ್ಟ್ರೀಯ ಚಾಲನಾ ಪರವಾನಗಿ ನೀಡುವಿಕೆ ನಿರ್ವಾಹಕ ಚಾಲನಾ ಅನುಜ್ಞಾ ಪತ್ರ ನವೀಕರಣ ನಕಲು ನಿರ್ವಾಹಕ ಚಾಲನಾ ಅನುಜ್ಞಾ ಪತ್ರ ನೀಡುವಿಕೆ ನಿರ್ವಾಹಕ ಚಾಲನಾ ಅನುಜ್ಞಾ ಪತ್ರದಲ್ಲಿ ವಿಳಾಸ ಬದಲಾವಣೆ ನಿರ್ವಾಹಕ ಚಾಲನಾ ಅನುಜ್ಞಾ ಪತ್ರದಲ್ಲಿ ಹೆಸರು ಬದಲಾವಣೆ ಮೋಟಾರು ವಾಹನದ ತಾತ್ಕಾಲಿಕ…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ ಸ್ಟೇಬಲ್‌ಗಳು ಇಂದಿನಿಂದ ತೆಲಂಗಾಣ ಮಾದರಿಯ ಹೊಸ ‘ಪಿ ಕ್ಯಾಪ್’ ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಚೋಚ್ ಕ್ಯಾಪ್‌ಗೆ ಪೊಲೀಸ್‌ ಇಲಾಖೆ ಅಂತಿಮ ವಿದಾಯ ಹೇಳಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಬ್ಯಾಂಕ್ವೆಟ್ ಹಾಲ್, ವಿಧಾನ ಸೌಧ, ಬೆಂಗಳೂರು ಇಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಗೃಹ ಸಚಿವರಿಂದ ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯೆಯಲ್ಲಿ ಅಚ್ಚೊತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಎಎಸ್‌ಐ, ಪಿಎಸ್‌ಐ, ಸರ್ಕಲ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಮೇಲಧಿಕಾರಿಗಳು ಈ ಹಿಂದಿನಂತೆಯೇ ಖಾಕಿ ಬಣ್ಣದ ಕ್ಯಾಪ್‌ ಧರಿಸಲಿದ್ದಾರೆ.

Read More

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ ಹಾಗೂ ಒಡಿಶಾಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು,…

Read More