Author: kannadanewsnow57

ಬೆಂಗಳೂರು : ಸಿಇಟಿ -2024ರ ಸಿಬಿಎಸ್‌ಇ, ಸಿ.ಐ.ಎಸ್.ಸಿ.ಇ., ಐಜಿಸಿಎಸ್‌ಇ ಅಂಕಗಳನ್ನು ಮೇ 28ರ ಸಂಜೆ 5:30 ರೊಳಗೆ ದಾಖಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. 12ನೇ ತರಗತಿಯನ್ನು ಸಿಬಿಎಸ್‌ ಇ, (ಜಮ್ಮು ಮತ್ತು ಕಾಶ್ಮೀರ ಸೇರಿ) ಸಿಐಎಸ್ಸಿಇ, 10+2, ಐಜಿಸಿಎಸ್‌ಇ ಮತ್ತಿತರ ಬೋರ್ಡುಗಳಲ್ಲಿ 2024 ರಲ್ಲಿ ಪೂರೈಸಿದವರು ಮತ್ತು ಕರ್ನಾಟಕ ದ್ವಿತೀಯ ಪಿಯುಸಿ / 12ನೇ ತರಗತಿಯನ್ನು 2024 ಕ್ಕಿಂತ ಮೊದಲೇ ಉತ್ತೀರ್ಣರಾಗಿರುವ ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ 12ನೇ ತರಗತಿಯ ಅಂಕಗಳ ವಿವರಗಳನ್ನು ದಿನಾಂಕ 28-05-2024 (ಇಲ್ಲಿಯವರೆಗೆ ದಾಖಲಿಸದೇ ಇರುವವರು) ಸಂ.5.30 ರ ವರೆಗೆ ದಾಖಲಿಸುವುದು. ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024 ರ ನಾಟಾ ಪರೀಕ್ಷೆಯ ಅಂಕಗಳನ್ನು ಅರ್ಹತೆಯ ಅನುಗುಣವಾಗಿ ಈ ಮೇಲೆ ತಿಳಿಸಿರುವ ದಿನಾಂಕದೊಳಗೆ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಲು ಕೋರಿದೆ.

Read More

ಬೆಂಗಳೂರು : 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ:29.05.2024 ರಿಂದ 13.06.2024ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಈ ಕಛೇರಿ ಜ್ಞಾಪನಾದಲ್ಲಿ 2024ರ ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ໖. ಲ್.ಎಲ್.ಸಿ.ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ. ಪರೀಕ್ಷೆ-2 ತೆಗೆದುಕೊಳ್ಳಲು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸುವುದು. 2. 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ c, c+. ಶ್ರೇಣಿ…

Read More

ಬೆಂಗಳೂರು : ಮೇ. 29ರ ನಾಳೆಯಿಂದ 2024-25 ಸಾಲಿನ ಶಾಲೆಗಳು ಪ್ರಾರಂಭವಾಗಲಿದ್ದು, 2024-25 ನೇ ಸಾಲಿನಲ್ಲಿ ಪಿ.ಎಂ.ಪೋಷಣ್ (ಮಧ್ಯಾಹ್ನ ಉಪಾಹಾರ ಯೋಜನೆ) ಮತ್ತು ಕ್ಷೀರಭಾಗ್ಯ ಯೋಜನೆಯನ್ನು ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಪ್ರೌಢಶಾಲೆಗಳ 1-10 ನೇ ತರಗತಿಯ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಪೂರ್ವ ಸಿದ್ಧತೆಗಳೊಂದಿಗೆ ಶಾಲಾ ಪ್ರಾರಂಭೋತ್ಸವವನ್ನು ಕೈಗೊಳ್ಳುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನಲ್ಲಿ ಪಿ.ಎಂ.ಪೋಷಣ್(ಮಧ್ಯಾಹ್ನ ಉಪಾಹಾರ ಯೋಜನ), ಕ್ಷೀರಭಾಗ್ಯ ಯೋಜನೆ ಪೂರಕ ಪೌಷ್ಠಿಕ ಆಹಾರ ವಿತರಣೆಯನ್ನು ವಾರ್ಷಿಕವಾಗಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 1-10 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡು ಬಿಸಿಯೂಟದೊಂದಿಗೆ ದಿನಾಂಕ 29.05.2024 ರಿಂದ ಪ್ರಾರಂಭಿಸುವುದು. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿಕೆಯೊಂದಿಗೆ ಸಂಭ್ರಮದಿಂದ ಬಿಸಿಯೂಟ ಕಾರ್ಯಕ್ರಮವನ್ನು ಕೈಗೊಳ್ಳುವಂತೆ ಸಂಬಂಧಿಸಿದ ಶಾಲೆಗಳ ಮುಖ್ಯಸ್ಥರಿಗೆ ಹಾಗೂ ಸ್ವಯಂಸೇವಾ ಸಂಸ್ಥೆಗಳ…

Read More

ನವದೆಹಲಿ: ಜೂನ್ 1 ರಿಂದ ದೇಶದಲ್ಲಿ ಡ್ರೈವಿಂಗ್‌ ಲೈಸೆನ್ಸ್‌ ನಿಯಮದಲ್ಲಿ ಹಲವು ಬದಲಾವಣೆಗಳು ಆಗಲಿದ್ದು, ರಸ್ತೆ ಸಾರಿಗೆ ಸಚಿವಾಲಯವು ಡ್ರೈವಿಂಗ್‌ ಲೈಸೆನ್ಸ್‌ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಮತ್ತು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್ಟಿಒ) ಉದ್ದನೆಯ ಸರತಿ ಸಾಲುಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ನಿಯಮಗಳನ್ನು ಪ್ರಕಟಿಸಿದೆ. ಜೂನ್ 1 ರಿಂದ, ಅರ್ಜಿದಾರರು ಸರ್ಕಾರಿ ಸ್ವಾಮ್ಯದ ಆರ್ಟಿಒಗಳಿಗೆ ಹೋಗುವ ಬದಲು ಖಾಸಗಿ ಚಾಲನಾ ತರಬೇತಿ ಕೇಂದ್ರಗಳಲ್ಲಿ ಚಾಲನಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. ಈ ಬದಲಾವಣೆಯು ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ ಮತ್ತು ಹೆಚ್ಚಿನ ಜನಸಂಖ್ಯೆಗೆ ಹೆಚ್ಚು ಪ್ರವೇಶಿಸುವಂತೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಪರವಾನಗಿ ಪ್ರಕ್ರಿಯೆಯಲ್ಲಿ ಪ್ರಮುಖ ಬದಲಾವಣೆಗಳು ಅತ್ಯಂತ ಗಮನಾರ್ಹ ಬದಲಾವಣೆಯೆಂದರೆ ಅರ್ಜಿದಾರರು ಈಗ ಖಾಸಗಿ ತರಬೇತಿ ಕೇಂದ್ರಗಳಲ್ಲಿ ತಮ್ಮ ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು, ಇದು ಪರವಾನಗಿ ಅರ್ಹತೆಗಾಗಿ ಪ್ರಮಾಣಪತ್ರಗಳನ್ನು ನೀಡಲು ಸಹ ಅಧಿಕಾರ ನೀಡುತ್ತದೆ. ಈ ಕ್ರಮವು ಸರ್ಕಾರಿ ಸ್ವಾಮ್ಯದ ಆರ್ಟಿಒಗಳ ಮೇಲಿನ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಮತ್ತು ಅನೇಕರಿಗೆ ಹತಾಶೆಯ ಮೂಲವಾಗಿರುವ…

Read More

ಬೆಂಗಳೂರು : ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೆ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್‍ಸೈಟ್‍ನಲ್ಲಿ ಪ್ರಕಟಿಸಿದೆ. ಈ ನಡುವೆ ಕೇಂದ್ರವು ಶಾಲೆಗೆ ಸೇರಲು 6 ವರ್ಷ ಕಡ್ಡಾಯವಾಗಿರಬೇಕು ಎಂದು ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಇದರ ನಡುವೆಯೂ ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ ನಿಯಮವನ್ನು ಸಡಿಲಿಸಿದ್ದು, ತಿದ್ದುಪಡಿಯನ್ನೇ ಮಾರ್ಗಸೂಚಿಯಲ್ಲಿ ಪ್ರಕಟಿಸಲಾಗಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಉಲ್ಲೇಖ 01 ರನ್ವಯ ಆರ್.ಟಿ.ಇ ಕಾಯಿದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತೆ ಶೈಕ್ಷಣಿಕ ವರ್ಷದ ಜೂನ್ 01 ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಲಾಗಿದೆ. ಉಲ್ಲೇಖ 02 ರನ್ವಯ “ಶೈಕ್ಷಣಿಕ…

Read More

ದಾವಣಗೆರೆ : ಚನ್ನಗಿರಿ ಲಾಕಪ್‌ ಡೆತ್‌ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಝ್ಯ ಸರ್ಕಾರವು ಮೂವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈ ಎಸ್‌ಪಿ ಪ್ರಶಾಂತ್‌ ಮುನ್ನೋಳ್ಳಿ, ಇನ್ಸಪೆಕ್ಟರ್‌ ಬಿ. ನಿರಂಜನ್‌, ಎಸ್‌. ಐ ಅಕ್ತರ್‌ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಚನ್ನಗಿರಿಯಲ್ಲಿ ಆದಿಲ್‌ ಎಂಬ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೆ ಪೊಲೀಸ್‌ ಠಾಣೆಗೆ ಕರೆದುಕೊಂಡ ಸಂದರ್ಭದಲ್ಲಿ ಕುಸಿದು ಬದ್ದು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇದು ಲಾಕಪ್‌ ಡೆತ್‌ ಎಂದು ಆರೋಪಿಸಿದ್ದರು. ಬಳಿಕ ಸ್ಥಳೀಯರು ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಹಲವು ಪೊಲೀಸರು ಗಾಯಗೊಂಡಿದ್ದರು.

Read More

ಬೆಂಗಳೂರು : ಮೇ. 29 ರಿಂದ 2024-25 ಸಾಲಿನ ಶಾಲೆಗಳು ಪ್ರಾರಂಭವಾಗಲಿದ್ದು, ರಾಜ್ಯದ ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಶಾಲಾ ಪ್ರವೇಶ ಶುಲ್ಕದ ವಿವರಗಳನ್ನು ಶಿಕ್ಷಣ ಇಲಾಖೆ ಪ್ರಟಿಸಿದೆ. ರಾಜ್ಯದ ಶಾಲೆಗಳಾದ್ಯಂತ ಚಟುವಟಿಕೆಗಳ ಏಕರೂಪದ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಈ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಯಲ್ಲಿ ತಿಂಗಳ ವಾರು ಪಾಠ ವಿತರಣೆ, ಪಠ್ಯೇತರ ಚಟುವಟಿಕೆಗಳು, ಫಲಿತಾಂಶ-ಆಧಾರಿತ ಚಟುವಟಿಕೆಗಳು, ವಿಶೇಷ ಶನಿವಾರ (ಬ್ಯಾಗ್ ಮುಕ್ತ ದಿನ), ಪಾಠ ಸಂಬಂಧಿತ ಚಟುವಟಿಕೆಗಳು, ಬ್ಯಾಂಕ್ ನಿರ್ವಹಣೆ, ಪರೀಕ್ಷೆಗಳು ಮತ್ತು ಮೌಲ್ಯಮಾಪನ ವಿಶ್ಲೇಷಣೆಗೆ ಸಮಯ ನೀಡಿದೆ. ಶುಲ್ಕ ವಿನಾಯಿತಿ 1) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳಿಗೆ 2) ಎಲ್ಲಾ ಹೆಣ್ಣು ಮಕ್ಕಳಿಗೆ 3) ರೂ 2 ಲಕ್ಷ ಮಿತಿಯೊಳಗೆ ಪ್ರವರ್ಗ- ರಡಿಯಲ್ಲಿ ಬರುವ ವಿದ್ಯಾರ್ಥಿಗಳಿಗೆ 4) ರೂ 44,500/- ಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ : 1. ಸೇವಾದಳ, ಸೌಟ್ಸ್ ಮತ್ತು ಗೈಡ್ಸ್…

Read More

ನವದೆಹಲಿ: ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಭಾನುವಾರ ತೀವ್ರವಾದ ಚಂಡಮಾರುತ ‘ರೆಮಲ್’ ಅಪ್ಪಳಿಸಿದ ನಂತರ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರೆಮಲ್ ಚಂಡಮಾರುತದ ಭೂಕುಸಿತ ಪ್ರಕ್ರಿಯೆಯು ಭಾನುವಾರ ರಾತ್ರಿ 8: 30 ಕ್ಕೆ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಪಕ್ಕದ ಕರಾವಳಿಗಳಾದ ಸಾಗರ್ ದ್ವೀಪ ಮತ್ತು ಖೇಪುಪಾರಾ ನಡುವೆ ನೆರೆಯ ದೇಶದ ಮೊಂಗ್ಲಾದ ನೈಋತ್ಯ ಬಳಿ ಪ್ರಾರಂಭವಾಯಿತು. ರೆಮಲ್ ಚಂಡಮಾರುತವು ಎರಡೂ ದೇಶಗಳಲ್ಲಿ ಹರಡಿರುವ ಪ್ರದೇಶಗಳಲ್ಲಿ ವಿನಾಶದ ಹಾದಿಯನ್ನು ಬಿಟ್ಟಿದೆ, ಮರಗಳು ಬುಡಮೇಲಾಗಿವೆ, ವಿದ್ಯುತ್ ಕಂಬಗಳು ತಿರುಚಲ್ಪಟ್ಟಿವೆ ಮತ್ತು ದುರ್ಬಲ ಮನೆಗಳನ್ನು ನೆಲಸಮಗೊಳಿಸಿವೆ. ಚಂಡಮಾರುತದಿಂದಾಗಿ ಸುಮಾರು 2,00,000 ಜನರು ಸ್ಥಳಾಂತರಗೊಂಡಿದ್ದರೆ, ಪಶ್ಚಿಮ ಬಂಗಾಳದ ಇಬ್ಬರು ಮತ್ತು ಬಾಂಗ್ಲಾದೇಶದ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲ್ಕತಾದ ಎಂಟಲಿ ಪ್ರದೇಶದ ಮೊಹಮ್ಮದ್ ಸಾಜಿದ್ (50) ಎಂಬ ವ್ಯಕ್ತಿಯ ಮೇಲೆ ಕಾಂಕ್ರೀಟ್ ತುಂಡು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ದಕ್ಷಿಣ 24 ಪರಗಣದ ಫ್ರೇಜರ್ಗಂಜ್ನಲ್ಲಿ ಬೇರುಸಹಿತ ಮರ ಬಿದ್ದು…

Read More

ನವದೆಹಲಿ : ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಇನ್ ಆಯುರ್ವೇದಿಕ್ ಸೈನ್ಸಸ್ (ಸಿಸಿಆರ್ಎಎಸ್) ಮೇ 28ರಂದು ನವದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್ನಲ್ಲಿ ‘ಫಾರ್ಮಾ ರಿಸರ್ಚ್ ಇನ್ ಆಯುರ್ವೇದ್ ಅಂಡ್ ಟೆಕ್ನೋ ಇನ್ನೋವೇಶನ್ (ಪ್ರಗತಿ-2024)’ ಕಾರ್ಯಕ್ರಮವನ್ನು ಆಯೋಜಿಸಿದೆ. “ಈ ಕಾರ್ಯಕ್ರಮವು ಸಂಶೋಧನಾ ಅವಕಾಶಗಳನ್ನು ಅನ್ವೇಷಿಸುವುದು ಮತ್ತು ಸಿಸಿಆರ್ಎಎಸ್ ಮತ್ತು ಆಯುರ್ವೇದ ಔಷಧ ಉದ್ಯಮದ ನಡುವಿನ ಸಹಯೋಗವನ್ನು ಬೆಳೆಸುವತ್ತ ಗಮನ ಹರಿಸುತ್ತದೆ” ಎಂದು ಆಯುಷ್ ಸಚಿವಾಲಯ ತಿಳಿಸಿದೆ. ಸಿಸಿಆರ್ಎಎಸ್ ಅಭಿವೃದ್ಧಿಪಡಿಸಿದ ಸಂಶೋಧನಾ ಫಲಿತಾಂಶಗಳು ಮತ್ತು ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಬಗ್ಗೆಯೂ ಸಭೆ ಗಮನ ಹರಿಸಲಿದೆ. ಆಯುರ್ವೇದ ಸೂತ್ರೀಕರಣಗಳು ಮತ್ತು ತಾಂತ್ರಿಕ ಆವಿಷ್ಕಾರಗಳ ತಯಾರಿಕೆಯಲ್ಲಿ ತೊಡಗಿರುವ ಕೈಗಾರಿಕಾ ಪಾಲುದಾರರೊಂದಿಗೆ ಸಂಶೋಧಕರನ್ನು ಸಂಪರ್ಕಿಸುವ ಮೂಲಕ ಔಷಧ ಮತ್ತು ಸಾಧನ ಅಭಿವೃದ್ಧಿಯಲ್ಲಿ ಆಯುರ್ವೇದ ಮಧ್ಯಸ್ಥಗಾರರ ಸಾಮರ್ಥ್ಯವನ್ನು ಗರಿಷ್ಠಗೊಳಿಸುವುದು ಪ್ರಾಥಮಿಕ ಗುರಿಯಾಗಿದೆ. ಗುಣಮಟ್ಟ ನಿಯಂತ್ರಣ, ಔಷಧ ಪ್ರಮಾಣೀಕರಣ, ಉತ್ಪನ್ನ ಅಭಿವೃದ್ಧಿ ಮತ್ತು ಪ್ರಮಾಣೀಕರಣದಲ್ಲಿ ಸಹಯೋಗದ ಸಂಶೋಧನೆಗಾಗಿ ದೃಢವಾದ ನೆಟ್ ವರ್ಕ್ ಗಳನ್ನು ಸ್ಥಾಪಿಸುವುದು ಪ್ರಮುಖ ಚರ್ಚೆಯ ಅಂಶಗಳಾಗಿವೆ. ಈ ಕಾರ್ಯಕ್ರಮವು ಆಂತರಿಕ…

Read More

ಚಿತ್ರದುರ್ಗ : ಪೋಕ್ಸೋ ಪ್ರಕರಣದ ವಿಚಾರಣೆ ಸಂಬಂಧ ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆಯನ್ನು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮೇ.31 ಕ್ಕೆ ಮುಂದೂಡಿದೆ.  ಪೋಕ್ಸೋ ಪ್ರಕರಣ ಸಂಬಂಧ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಗೆ ಹಾಜರಾದ ಮುರುಘಾ ಶ್ರೀ ವಿಚಾರಣೆ ನಡೆಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ. 31 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. 2022ರ ಅಕ್ಟೋಬರ್ 13ರಂದು ಮುರುಘಾ ಸ್ವಾಮೀಜಿ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆ ಎರಡನೇ ಪೋಕ್ಸೋ ಕೇಸ್​ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಎರಡೂ ಕೇಸ್​ನಲ್ಲಿ ಸ್ವಾಮೀಜಿಗೆ ಜಾಮೀನು ಚಿತ್ರದುರ್ಗ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಜಾಮೀನಿಗಾಗಿ ಮುರುಘಾ ಸ್ವಾಮೀಜಿ ಹೈಕೋರ್ಟ್​ ಮೊರೆ ಹೋಗಿದ್ದರು.

Read More