Author: kannadanewsnow57

ಬೆಂಗಳೂರು : ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು 2024-25ನೇ ಸಾಲಿನ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟಿ ಜಾತಿ ಅಭ್ಯರ್ಥಿಗಳಿಂದ ರಾಷ್ಟೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆ (NOS)ಗೆ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪದವಿ. ಪಿಎಚ್‌ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿhttps://overseas.tribal.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 31 ರಂದು ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 8352276124 ಗೆ ಸಂಪರ್ಕಿಸಬಹುದಾಗಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ರಾಯಚೂರು : ಕೃಷ್ಣಾ ನದಿ ದಡದಲ್ಲಿ ಕುರಿ ಮೇಯಿಸುತ್ತಿದ್ದ ಬಾಲಕನನ್ನು ಮೊಸಳೆಯೊಂದು ಎಳೆದುಕೊಂಡು ಹೋಗಿರುವ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ. ಬಾಲಕನ್ನು ಗಂಜಳ್ಳಿ ಗ್ರಾಮದ ವಿಶ್ವ (12) ಎಂದು ಗುರುತಿಸಲಾಗಿದ್ದು, ಕುರಿಗಳಿಗೆ ನೀರು ಕುಡಿಸಲು ಕೃಷ್ಣಾನದಿಗೆ ಹೋದಾಗ ಮೊಸಳೆ ದಾಳಿ ಮಾಡಿ ವಿಶ್ವನನ್ನು ಎಳೆದೊಯ್ದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್‌ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಬೋಟ್‌ ಹಾಕಿ ಬಾಲಕನಿಗಾಗಿ ಶೋಧ ಕಾರ್ಯ ನಡೆಸಿದೆ.

Read More

ಬೆಂಗಳೂರು : ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕೊಠಡಿ ಒಳಗೆ ಗರ್ಭಿಣಿಯರನ್ನು ಹೊರತುಪಡಿಸಿ ಇತರೆ ಸಂಬಂಧಿಕರು ಹಾಗೂ ಹೆಚ್ಚುವರಿ ಮಾನಿಟರ್ ಅನ್ನು ನಿಷೇಧಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಗೆ ಸಂಬಂಧಿಸಿದ ಕಾರ್ಯಗಾರದಲ್ಲಿ ರೆಡಿಯಾಲಜಿಸ್ಟ್, ಸೋನಾಲಜಿಸ್ಟ್ ಹಾಗೂ ಸ್ತ್ರೀ ರೋಗ ತಜ್ಞರು ಈ ಬಗ್ಗೆ ಚರ್ಚಿಸಿದ್ದರು. ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕೊಠಡಿಯೊಳಗೆ ಗರ್ಭಿಣಿಯರ ಜೊತೆಗೆ ಇರುವ ಸಂಬಂಧಿಗಳು ಅಲ್ಟ್ರಾ ಸೌಂಡ್ ಕಾರ್ಯ ವಿಧಾನಗಳ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಲ್ಲದೆ ಕೆಲವರು ಈ ವಿಡಿಯೋ ಮತ್ತು ಫೋಟೋಗಳನ್ನ ಭ್ರೂಣಲಿಂಗ ಪತ್ತೆಗೆ ಬಳಸಿಕೊಳ್ಳುತ್ತಿರುವ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

Read More

ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಕ್ರಿಯಾ ಯೋಜನೆ ಸಲ್ಲಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗಳಿಗೆ ಅನುಬಂಧ-1ರಲ್ಲಿ ಸಾಮಾನ್ಯ ಅನುಬಂಧ-2ರಲ್ಲಿ ಎಸ್.ಸಿ ಮತ್ತು ಅನುಬಂಧ-3ರಲ್ಲಿ ಎಸ್.ಟಿ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕೆಳಕಂಡ ಷರತ್ತುಗಳನ್ವಯ ಲಗತ್ತಿಸಲಾದ ನಮೂನೆಯಲ್ಲಿ ಕ್ರಿಯಾಯೋಜನೆಯನ್ನು ದಿನಾಂಕ:28.05.2024 ಸಲ್ಲಿಸಲು ತಿಳಿಸಿದೆ. ಷರತ್ತುಗಳು: 1. 2024-25ನೇ ಸಾಲಿನ ಯು-ಡೈಸ್ ಮಾಹಿತಿ ಅನುಸಾರ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗಳಿಗೆ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಖಾತ್ರಿಪಡಿಸಿಕೊಂಡು ಆದ್ಯತೆ ನೀಡಬೇಕು ಹಾಗೂ ಶಾಲಾ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು ಖಚಿತಪಡಿಸಿಕೊಂಡು ದೃಢೀಕರಿಸಿ ದಿನಾಂಕ:28.05.2024 ರೊಳಗೆ ಕ್ರಿಯಾ ಯೋಜನೆ ಸಲ್ಲಿಸುವುದು, 2. ಈಗಾಗಲೇ ಮಾನ್ಯ ಲೋಕಾಯುಕ್ತರು, ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ…

Read More

ಬೆಂಗಳೂರು : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು (KPTCL) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಂತಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಲಾಗಿದೆ.  ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್‌(ವಿದ್ಯುತ್‌), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ…

Read More

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿ ಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆ.1ರಂದು ಪರೀಕ್ಷೆ ನಡೆಯಲಿದೆ. 402 ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು ಮತ್ತು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.

Read More

ಬೆಂಗಳೂರು : 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ:29.05.2024 ರಿಂದ 13.06.2024ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಈ ಕಛೇರಿ ಜ್ಞಾಪನಾದಲ್ಲಿ 2024ರ ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ໖. ಲ್.ಎಲ್.ಸಿ.ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ. ಪರೀಕ್ಷೆ-2 ತೆಗೆದುಕೊಳ್ಳಲು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸುವುದು. 2. 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ c, c+. ಶ್ರೇಣಿ…

Read More

ಬೆಂಗಳೂರು : ರಾಜ್ಯದ ಸರ್ಕಾರಿ / ಅನುದಾನಿತ / ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಕುರಿತು ಅರಿವು ಮೂಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ/ಅನುದಾನಿತ/ಅನುದಾನರಹಿತ ವಿಧ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಾಗೂ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಕಾಲೇಜುಗಳ ಆವರಣದಿಂದ 100 ಗಜಗಳ ಅಂತರದಲ್ಲಿ ತಂಬಾಕುಯುಕ್ತ ವಸ್ತುಗಳ ಮಾರಾಟ ನಿಷೇಧಿಸಿದೆ ಎಂದು ಶಾಲಾ/ಕಾಲೇಜುಗಳ ಆವರಣದಲ್ಲಿ ಫಲಕಗಳನ್ನು ಪ್ರದರ್ಶಿಸಲು ತಿಳಿಸಿ ಉಲ್ಲೇಖ (1) ರ ಸುತ್ತೋಲೆಯನ್ನು ಹೊರಡಿಸಲಾಗಿದೆ. ತದ ನಂತರ ಈ ಕುರಿತು ಅನುಪಾಲನ ಮಾಡಲು ಮೇಲಿಂದ ಮೇಲೆ ತಿಳಿಸಲಾಗಿದೆ. ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಹಾಗೂ ತಂಬಾಕು ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಉತ್ಪಾದಿಸುವ ಅಥವಾ ಮಾರಾಟ/ ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿರುವ ಯಾವುದೇ ಸಂಸ್ಥೆ ಅಥವಾ ಮಾರಾಟಗಾರರು ಪ್ರಾಯೋಜಿಸುವ ಯಾವುದೇ ಕಾರ್ಯದಲ್ಲಿ ಭಾಗವಹಿಸಬಾರದು. ಇಂತಹ ಸಂಸ್ಥೆಗಳು…

Read More

ನವದೆಹಲಿ : ಲೋಕಸಭೆ ಚುನಾವಣೆಯ 6 ನೇ ಹಂತದ ಮತದಾನ ಇಂದು ನಡೆಯಲಿದೆ. 6 ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೆ ವೇದಿಕೆ ಸಿದ್ಧವಾಗಿದೆ. 889 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 58 ಸ್ಥಾನಗಳಿಗೆ ಮತದಾನ ನಡೆಯಲಿದೆ. ದೆಹಲಿಯ ಎಲ್ಲಾ ಏಳು ಸ್ಥಾನಗಳಿಗೆ ಮತದಾನ ನಡೆಯಲಿದೆ. ಉತ್ತರ ಪ್ರದೇಶ (14), ಹರಿಯಾಣ (10), ಬಿಹಾರ (8), ಪಶ್ಚಿಮ ಬಂಗಾಳ (8), ಒಡಿಶಾ (6) ಮತ್ತು ಜಾರ್ಖಂಡ್ (4) ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್-ರಾಜೌರಿ ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ರಾಜ್ಯಗಳ 1.14 ಲಕ್ಷ ಮತಗಟ್ಟೆಗಳಲ್ಲಿ 11.13 ಕೋಟಿ ಮತದಾರರಿಗೆ ಸುಮಾರು 11.4 ಲಕ್ಷ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಚುನಾವಣಾ ಆಯೋಗದ ಪ್ರಕಾರ, 11.13 ಕೋಟಿ ಮತದಾರರಲ್ಲಿ…

Read More

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸಲು ರಾಜ್ಯದ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಒಂದನೇ ತರಗತಿಗೆ ಸೇರ್ಪಡೆಯಾಗುವ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ಒದಗಿಸಲಿದೆ. ವಿಷಯಕ್ಕೆ ಸಂಬಂಧಿಸಿದಂತೆ. ರಾಜ್ಯದ ಶಾಲೆಗಳಲ್ಲಿ 2024-25 ನೇ ಸಾಲಿನಲ್ಲಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಕುರಿತು ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರು ವಹಿಸಬೇಕಾದ ಕ್ರಮಗಳ ಕುರಿತು ಉಲ್ಲೇಖಿತ ಸುತ್ತೋಲೆ ಮೂಲಕ ವಿಸ್ತ್ರತವಾದ ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ. ಮುಂದುವರೆದು, ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಆಂದೋಲನವನ್ನು ದಿನಾಂಕ: 31.05.2024 ರಿಂದ ಆರಂಭಿಸಿ, ಒಂದು ವಾರದವರೆಗೆ ನಿರ್ವಹಿಸಲು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ಮುಖ್ಯವಾಹಿನಿಗೆ ತರಲು ಸಂಬಂಧಿಸಿದ ಹಾಜರಾತಿ ಅಧಿಕಾರಿ ಮತ್ತು ಸಿಬ್ಬಂದಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಸಹ ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅದರಂತೆ ಕಾರ್ಯಪ್ರವೃತ್ತರಾಗಲು ಸಂಬಂಧಿಸಿದ ಎಲ್ಲಾ ತಾಲ್ಲೂಕು, ಜಿಲ್ಲಾ ನೋಡಲ್ ಅಧಿಕಾರಿಗಳು, ಉಪನಿರ್ದೇಶಕರು(ಆಡಳಿತ) & (ಅಭಿವೃದ್ಧಿ), ಉಪಯೋಜನಾ ಸಮನ್ವಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿ,…

Read More