Author: kannadanewsnow57

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೊತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ. ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯೋಧ ದಿವಿನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಆಲೂರು ನಿವಾಸಿ ದಿವಿನ್ ಹುತಾತ್ಮರಾಗಿದ್ದಾರೆ. ಈ ಮೂಲಕ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್‌ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ.

Read More

ನವದೆಹಲಿ : ಭಾರತದ ‘ಸ್ಪಾಡೆಕ್ಸ್’ ಮಿಷನ್ ಅನ್ನು ಪ್ರಾರಂಭಿಸಲು ಇಸ್ರೋ ಸಂಪೂರ್ಣ ಸಿದ್ಧತೆ ನಡೆಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸೋಮವಾರ ರಾತ್ರಿ 9:58 ಕ್ಕೆ PSLV-C60 ರಾಕೆಟ್‌ನಿಂದ ಎರಡು ಸಣ್ಣ ಬಾಹ್ಯಾಕಾಶ ನೌಕೆಗಳನ್ನು ಏಕಕಾಲದಲ್ಲಿ ಉಡಾವಣೆ ಮಾಡಲಾಗುವುದು. ಈ ಕಾರ್ಯಾಚರಣೆಯ ಯಶಸ್ಸಿನೊಂದಿಗೆ, ಭಾರತವು ಅಮೆರಿಕ, ರಷ್ಯಾ ಮತ್ತು ಚೀನಾದ ನಂತರ ಬಾಹ್ಯಾಕಾಶ ‘ಡಾಕಿಂಗ್’ ತಂತ್ರಜ್ಞಾನದ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಅದೇ ಸಮಯದಲ್ಲಿ, ಈ ಮಿಷನ್ ಯಶಸ್ವಿಯಾದರೆ, ಭಾರತವು ತನ್ನ ಮುಂದಿನ ಕಾರ್ಯಾಚರಣೆಗಳಾದ ಚಂದ್ರಯಾನ-4, ತನ್ನದೇ ಆದ ಬಾಹ್ಯಾಕಾಶ ನಿಲ್ದಾಣ ಮತ್ತು ಚಂದ್ರನ ಮೇಲೆ ಇಳಿಯುವ ಭಾರತೀಯ ಕನಸನ್ನು ಸಾಕಾರಗೊಳಿಸಲು ಸಹಾಯ ಮಾಡುತ್ತದೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್, “ಈ ಕಾರ್ಯಾಚರಣೆಯು ಬಾಹ್ಯಾಕಾಶ ಡಾಕಿಂಗ್ ಅನ್ನು ಕರಗತ ಮಾಡಿಕೊಳ್ಳುವ ಸಾಮರ್ಥ್ಯವಿರುವ ದೇಶಗಳ ಪಟ್ಟಿಯಲ್ಲಿ ಭಾರತವನ್ನು ಇರಿಸುತ್ತದೆ. ಈ ತಂತ್ರಜ್ಞಾನವು ಚಂದ್ರನಿಂದ ಮಾದರಿಗಳನ್ನು ಮರಳಿ ತರುವುದು, ಭಾರತೀಯ ಬಾಹ್ಯಾಕಾಶ ನಿಲ್ದಾಣ (ಬಿಎಎಸ್) ಉಡಾವಣೆ ಮುಂತಾದ…

Read More

ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ದಿನಾಂಕ: 31.12.2024 ರಂದು ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಲ್ಲಿ ತಡರಾತ್ರಿ 2ರವರೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ ಎಂದಿದೆ. ಈ ಕೆಳಕಂಡ ಮಾರ್ಗದಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್ ಸಂಚಾರದ ವ್ಯವಸ್ಥೆ 1          G-3       ಬ್ರಿಗೇಡ್ ರಸ್ತೆ    ಎಲೆಕ್ಟ್ರಾನಿಕ್ಸ್ ಸಿಟಿ 2          G-4                 ಜಿಗಣಿ 3          G-2     ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ       ಸರ್ಜಾಪುರ 4          G-6                 ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್ 5          G-7                 ಜನಪ್ರಿಯ ಟೌನ್ ಶಿಪ್ 6         …

Read More

ಬೆಂಗಳೂರು: ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗುತ್ತಿದೆ. ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ದೃಷ್ಟಿಯಿಂದ ಪೊಲೀಸರು ಸಕಲ ಸಿದ್ಧತೆಯನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಇತರೆ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಕಮೀಷನರ್ ಇಬ್ಬರು, ಜಂಟಿ ಪೊಲೀಸ್ ಕಮೀಷನರ್ ಒಬ್ಬರು, ಡಿಸಿಪಿ 15, ಎಸಿಪಿ 45, ಪಿಐ 135, ಪಿಎಸ್ಐ 530, ಎಎಸ್ಐ 655, ಹೆಚ್ ಸಿ, ಪಿಸಿ – 4,833, ಮಹಿಳಾ ಪೊಲೀಸ್ ಸಿಬ್ಬಂದಿ 1048, ಮಫ್ತಿ ಸಿಬ್ಬಂದಿ 597, ಹೋಂ ಗಾರ್ಡ್ 3170, ಸಿವಿಲ್ ಡಿಫೆನ್ಸ್ 800 ಸೇರಿದಂತೆ ಒಟ್ಟು 11,830 ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದಲ್ಲದೇ ಕೆ ಎಸ್ ಆರ್ ಪಿಯ 72 ತುಕಡಿ, ಕೆ ಎಸ್ ಆರ್ ಪಿ ಬೆಳಗಿನ ಗಸ್ತಿಗೆ 17 ತುಕಡಿ, ಸಿಎಎರ್ ರಾತ್ರಿ ಗಸ್ತಿಗೆ 21 ತುಕಡಿ,…

Read More

ಬೆಂಗಳೂರು: ಸಾರಿಗೆ ನೌಕರರು ಕರೆ ನೀಡಿದ್ದ ಡಿ.31ರ ಮುಷ್ಕರವನ್ನು ಕೈಬಿಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದ್ದು ಸಂಕ್ರಾಂತಿಯ ಬಳಿಕ ಸಭೆ ನಡೆಸಿ ಬೇಡಿಕೆಗಳ ಪರಿಶೀಲನೆ ಮಾಡುವ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಬಹುತೇಕ ಸಂಘಟನೆಗಳು ಮುಷ್ಕರವನ್ನು ಮುಂದೂಡಿವೆ. ಸಾರಿಗೆ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ ಹಿಂಪಡೆದಿದ್ದು,. ಡಿಸೆಂಬರ್.31ರಂದು ನಡೆಸಲು ನಿರ್ಧರಿಸಿದ್ದಂತ ಪ್ರತಿಭಟನೆಯನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಮಂಗಳವಾರದಂದು ಎಂದಿನಂತೆ ಸಾರಿಗೆ ಬಸ್ಸುಗಳು ರಾಜ್ಯಾಧ್ಯಂತ ಸಂಚಾರ ನಡೆಸಲಿದ್ದಾವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಾರಿಗೆ ಜಂಟಿ ಕ್ರಿಯಾ ಸಮಿತಿಯೊಂದಿಗೆ ಮಹತ್ವದ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಸಾರಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಸುವಂತ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಸರ್ಕಾರ ಹಾಗೂ ಸಾರಿಗೆ ಸಿಬ್ಬಂದಿಗಳ ಜೊತೆಗಿನ ಸಂಧಾನ ಸಕ್ಸಸ್ ಆಗಿದ್ದು, ಡಿಸೆಂಬರ್.31ರಂದು ನಡೆಸಲು ನಿರ್ಧರಿಸಿದ್ದಂತ ಮುಷ್ಕರವನ್ನು ಹಿಂಪಡೆದಿರುವುದಾಗಿ ತಿಳಿದು ಬಂದಿದೆ. ಸಂಕ್ರಾಂತಿ ಬಳಿಕ ಮುಷ್ಕರ ನಡೆಸೋ ಬಗ್ಗೆ ನಿರ್ಧಾರವನ್ನು ಕೈಗೊಳ್ಳೋದಾಗಿ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ ಎನ್ನಲಾಗಿದೆ.

Read More

ನವದೆಹಲಿ : ಹೊಸ ವರ್ಷಕ್ಕೆ ವಾಹನ ಸವಾರರಿಗೆ ಸಿಹಿಸುದ್ದಿ ಸಿಗಲಿದ್ದು, ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಮತ್ತು ಬಳಕೆಯನ್ನು ಹೆಚ್ಚಿಸಲು ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಕನಿಷ್ಠ ವೇತನವನ್ನು ಹೆಚ್ಚಿಸಲು ಸಲಹೆ ನೀಡಿದೆ. CII 2025-26 ರ ಆರ್ಥಿಕ ವರ್ಷದ ಸಾಮಾನ್ಯ ಬಜೆಟ್‌ಗೆ ತನ್ನ ಸಲಹೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆ ಮಾಡಲು ಮನವಿ ಮಾಡಿದೆ. ಇಂಧನ ಬೆಲೆಗಳು ಹಣದುಬ್ಬರವನ್ನು ಗಣನೀಯವಾಗಿ ಹೆಚ್ಚಿಸುವುದರಿಂದ, ವಿಶೇಷವಾಗಿ ಕಡಿಮೆ ಆದಾಯದ ಮಟ್ಟದಲ್ಲಿ ಬಳಕೆಯನ್ನು ಹೆಚ್ಚಿಸಲು ಈ ಸಡಿಲಿಕೆಯನ್ನು ನೀಡಬೇಕು ಎಂದು ಉದ್ಯಮ ಸಂಸ್ಥೆ ಹೇಳಿದೆ. ವರದಿಗಳ ಪ್ರಕಾರ, ವಾರ್ಷಿಕ 20 ಲಕ್ಷ ರೂಪಾಯಿವರೆಗಿನ ವೈಯಕ್ತಿಕ ಆದಾಯದ ಕನಿಷ್ಠ ತೆರಿಗೆ ದರಗಳನ್ನು ಕಡಿಮೆ ಮಾಡಲು ಬಜೆಟ್ ಪರಿಗಣಿಸಬಹುದು ಎಂದು CII ಹೇಳಿದೆ. ಇದು ಬಳಕೆಯ ಚಕ್ರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಹೆಚ್ಚಿನ ಬೆಳವಣಿಗೆ ಮತ್ತು ಹೆಚ್ಚಿನ ತೆರಿಗೆ ಆದಾಯ. ವ್ಯಕ್ತಿಗಳಿಗೆ ಗರಿಷ್ಠ ಕನಿಷ್ಠ ದರವಾದ 42.74…

Read More

ವಿಜಯಪುರ : ಡಾ. ಬಿ.ಆರ್.ಅಂಬೇಡ್ಕರ್‌ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿವಿಧ ಸಂಘಟನೆಗಳ ಒಕ್ಕೂಟದಿಂದ ವಿಜಯಪುರ ಬಂದ್ ಗೆ ಕರೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಅಹಿಂದ, ಪ್ರಗತಿಪರ, ದಲಿತ ಸಂಘಟನೆಗಳ ಒಕ್ಕೂಟದಿಂದ ಡಿ.30ರಂದು ಬಂದ್‌ಗೆ ಕರೆ ನೀಡಿದ್ದು, ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರ ವ್ಯಾಪ್ತಿಯಲ್ಲಿ ಶಾಲಾ– ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿಜಯಪುರ ನಗರ ಸಾರಿಗೆ ಸಂಚಾರವನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಇಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಸೋಲಾಪೂರ ಕಡೆಯಿಂದ ಜಮಖಂಡಿ ಕಡೆಗೆ ತೆರಳುವ ವಾಹನಗಳು ಬಿ.ಎಂ. ಪಾಟೀಲ ಸರ್ಕಲ್, ಇಟಂಗಿಹಾಳ ಕ್ರಾಸ್, ಇಟಗಿ ಪೆಟ್ರೋಲ್ ಪಂಪ್, ರಿಂಗ್ ರೋಡ್ ಬಳಸಿಕೊಂಡು ತೆರಳಲು ಅವಕಾಶ ಕಲ್ಪಿಸಲಾಗಿದೆ. ಇಂಡಿ ಕಡೆಯಿಂದ ಜಮಖಂಡಿ ಕಡೆಗೆ ತೆರಳುವ ವಾಹನಗಳು ಸಿಂದಗಿ ಬೈಪಾಸ್, ಬೆಂಗಳೂರು ಬೈಪಾಸ್, ರಿಂಗ್ ರೋಡ್ ಮಾರ್ಗ ಬಳಸಿ ಸಂಚಾರಕ್ಕೆ ಅನುವು ಕಲ್ಪಿಸಲಾಗಿದ್ದು,…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ನಿರ್ಧರಿಸಿದ್ದು, ಗೃಹ ಇಲಾಖೆ ಇದಕ್ಕೆ ಅನುಮತಿ ನೀಡಿದೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಸೇರಿ ಪ್ರಮುಖ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದ್ದು, ಈ ಜಾಮೀನು ರದ್ದು ಮಾಡುವಂತೆ ಪೊಲೀಸರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ. ಹೈಕೋರ್ಟ್ ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಹೈಕೋರ್ಟ್ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ ಆದರೆ ಗೃಹ ಇಲಾಖೆ ಈ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪ್ರಕರಣ ಸಂಬಂಧ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂ ಕೋರ್ಟ್…

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಖಂಡ ಕರ್ನಾಟಕ ರಾಜ್ಯಕ್ಕೆ ʼಕರ್ನಾಟಕʼ ಎಂಬ ಹೆಸರು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ʼಹೆಸರಾಯಿತು ಕರ್ನಾಟಕʼ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಮೊದಲು ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ರೈಲ್ವೆ ಇಲಾಖೆ ಪರೀಕ್ಷೆ ನಡೆಯುತ್ತಿದ್ದವು. ನಾನು ಸಚಿವನಾದ ಬಳಿಕ ಕನ್ನಡ ಸೇರಿ ಪ್ರಾದೇಶಿಕ ಭಾಷೆಗಳಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡರ ನಿರಂತರ ಹೋರಾಟವೂ ಕಾರಣವಾಗಿದೆ. ರೈಲ್ವೇ ನೇಮಕಾತಿ ಪರೀಕ್ಷೆ ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಯಲಿವೆ. ಇದನ್ನು ಬಳಸಿಕೊಂಡು ಶೇಕಡ 20ರಿಂದ 25ರಷ್ಟು ಕನ್ನಡಿಗರು…

Read More

ವಿಶ್ವದಲ್ಲಿ ಕ್ಷಿಪ್ರ ತಾಂತ್ರಿಕ ಬೆಳವಣಿಗೆ ನಡೆಯುತ್ತಿದೆ. ಮಾನವರು ತಮ್ಮ ಅಗತ್ಯಗಳಿಗಾಗಿ ಮನರಂಜನೆಯಿಂದ ಹಿಡಿದು ಪಾವತಿಯವರೆಗೆ ಇಂಟರ್ನೆಟ್ ಮತ್ತು ಆಧುನಿಕ ವಸ್ತುಗಳ ಮೇಲೆ ಅವಲಂಬಿತರಾಗುತ್ತಿದ್ದಾರೆ. ಅಭಿವೃದ್ಧಿಯ ಜೊತೆಗೆ, ಸೈಬರ್ ಅಪರಾಧ ಪ್ರಕರಣಗಳು ಕೂಡ ವೇಗವಾಗಿ ಹೆಚ್ಚುತ್ತಿವೆ. ಹೊಸ ವರ್ಷ ಪ್ರಾರಂಭವಾಗಲು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಜನರನ್ನು ವಂಚಿಸಲು ಸೈಬರ್ ಅಪರಾಧಿಗಳು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಹೊಸ ವರ್ಷದ ಶುಭಾಶಯ ಸಂದೇಶಗಳ ಮೂಲಕ ವಂಚಕರು ಜನರನ್ನು ವಂಚಿಸುತ್ತಿದ್ದಾರೆ. ಸೈಬರ್ ಅಪರಾಧಿಗಳು ಆಹ್ವಾನ ಮತ್ತು ಅಭಿನಂದನೆಗಳ ಹೆಸರಿನಲ್ಲಿ ಜನರಿಗೆ APK ಫೈಲ್‌ಗಳು ಮತ್ತು ಲಿಂಕ್‌ಗಳನ್ನು ಕಳುಹಿಸುತ್ತಾರೆ. ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ಎಲ್ಲಾ ಡೇಟಾ ವಂಚಕರಿಗೆ ಹೋಗುತ್ತದೆ. ಅದರ ದುರುಪಯೋಗದಿಂದ ಅವರು ನಿಮ್ಮ ಬ್ಯಾಂಕ್ ಖಾತೆಯ ಮೇಲೆ ದಾಳಿ ಮಾಡುತ್ತಾರೆ. ನೀವು ಏನನ್ನಾದರೂ ಅರ್ಥಮಾಡಿಕೊಳ್ಳುವ ಮೊದಲು, ಹಣವನ್ನು ಕಡಿತಗೊಳಿಸುವುದು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಜಾಗರೂಕರಾಗಿರುವುದು ಹೆಚ್ಚು ಮುಖ್ಯವಾಗಿದೆ. ಹೊಸ ವರ್ಷದ ಹಗರಣದ ಇತರ ವಿಧಾನಗಳನ್ನು ತಿಳಿಯಿರಿ ಉಡುಗೊರೆ ಅಥವಾ ಆಫರ್‌ಗಳ ಆಮಿಷ…

Read More