Author: kannadanewsnow57

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ಇಂದು ಬೆಂಗಳುರಿನ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌, ಬನಶಂಕರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಎನ್‌ ಐಎ ಅಧಿಕಾರಿಗಳ ತಂಡವು ಬೆಂಗಳೂರು ಮಾತ್ರವಲ್ಲದೇ ಕೊಯಮತ್ತೂರು ವೈದ್ಯ ಜಾಫರ್‌ ಇಕ್ಬಾಲ್‌ ಮತ್ತು ನಯನ್‌ ಸಾದಿಕ್‌ ಮನೆಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ನವದೆಹಲಿ : ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮೇ.31 ರವರೆಗೆ ವಿಸ್ತರಿಸಿ ದೆಹಲಿಯ ರೂಸ್‌ ಅವೆನ್ನೂ ನ್ಯಾಯಾಲಯ ಆದೇಶ ಹೊರಡಿಸಿದೆ. ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಹ ಬಂಧಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಅವರು ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ. ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ದಾಖಲಿಸಿರುವ ಮನಿ ಲಾಂಡರಿಂಗ್ ಮತ್ತು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಸಿಸೋಡಿಯಾ ಅವರ ಜಾಮೀನು ಅರ್ಜಿಗಳ ಬಗ್ಗೆ ದೆಹಲಿ ಹೈಕೋರ್ಟ್ ತನ್ನ ತೀರ್ಪನ್ನು ನೀಡುವ ನಿರೀಕ್ಷೆಯಿದೆ.

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಬೇಸಿಗೆ ರಜಾ ಅವಧಿಯಲ್ಲೂ ತರಗತಿ ನಡೆಸುತ್ತಿರೋ ಬಗ್ಗೆ ಮಹತ್ವದ ಆದೇಶವನ್ನು ಹೊರಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ. ಪರಿಶೀಲಿಸಲಾಗಿ, ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು ಸೇರಿದಂತೆ ಶೈಕ್ಷಣಿಕ ಮಾರ್ಗಸೂಚಿ ಮತ್ತು ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದ ಅದರಂತೆ ಶಾಲೆಗಳನ್ನು ಪ್ರಾರಂಭಿಸಿ ಮುಂದುವರೆಸಲು ಕ್ರಮವಹಿಸುವಂತೆ…

Read More

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ  ಪ್ರಜ್ವಲ್‌ ರೇವಣ್ಣರ ರಾಜತಾಂತ್ರಿಕ ಪಾಸ್‌ ಪೋರ್ಟ್‌ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ  ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣಗೆ ಈಗಾಗಲೇ ಬಂಧನ ವಾರೆಂಜ್‌ ಜಾರಿ ಮಾಡಲಾಗಿದೆ. ಅವರ ರಾಜತಾಂತ್ರಿಕ ಪಾಸ್‌ ಪೋರ್ಟ್‌ ರದ್ದುಕೋರಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪಾಸ್‌ ಪೋರ್ಟ್‌ ರದ್ದು ಮಾಡಿದ್ರೆ  ಪ್ರಜ್ವಲ್‌  ರೇವಣ್ಣ ಬರಬೇಕಾಗುತ್ತದೆ ಎಂದು ಹೇಳಿದ್ದಾರೆ. ಇನ್ನು ವಿದೇಶದಲ್ಲಿ ಅಜ್ಞಾತವಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ ಪೋರ್ಟ್‌ ರದ್ದುಗೊಳಿಸುವಂತೆ ಕೋರಿ ವಿದೇಶಾಂಗ ಇಲಾಖೆಗೆ ಎಸ್‌ ಐಟಿ ಪತ್ರ ಬರೆದಿದೆ. ಲೈಂಗಿಕ ಹಗರಣ ಬೆಳಿಕಗೆ ಬಂದ ನಂತರ ತಮ್ಮ ರಾಜತಾಂತ್ರಿಕ ಪಾಸ್‌ ಪೋರ್ಟ್‌ ಬಳಸಿಕೊಂಡು ಏಪ್ರಿಲ್‌ 26 ರಂದು ಜಮರ್ನಿಯ ಮ್ಯೂನಿಕ್‌ ನಗರಕ್ಕೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಂದಿನಿಂದ ಬಹಿರಂತವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಪ್ರಸ್ತುತ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ…

Read More

ಬೆಂಗಳೂರು ;  ಸಂಸದ ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ ಸಂಬಂದ ಪೆನ್‌ ಡ್ರೈವ್‌ ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.  ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ಧ ಕ್ರಮಕ್ಕೆ ಕಾನೂನು ಹೋರಾಟ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ವಕೀಲರ ಜೊತೆಗೆ  ಚರ್ಚಿಸಿದ್ದು, ಕೋರ್ಟ್‌ ಗೆ ಕ್ರಮ ವಹಿಸುವಂತೆ  ಮನವಿ ಮಾಡಲಿದ್ದಾರೆ  ಎಂದು ಹೇಳಲಾಗುತ್ತಿದೆ. ಪೆನ್‌ ಡ್ರೈವ್‌ ಮೂಲಕ ವಿಡಿಯೋ ಹರಿಬಿಟ್ಟಿದ್ದಕ್ಕೆ ಮಹಿಳೆಯರ ಮಾನಹಾನಿಯಾಗಿದೆ. ಹೀಗಾಗಿ ಇಂತಹ ವಿಡಿಯೋಗಳನ್ನು ಹರಿಬಿಟ್ಟವರ ವಿರುದ್ದ ಕೋರ್ಟ್‌ ಮೂಲಕ ಕಠಿಣ ಕ್ರಮಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ  ಎನ್ನಲಾಗಿದೆ. ಇನ್ನೂ ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ದೂರಿದ್ದದು,  ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ…

Read More

ಮಡಿಕೇರಿ : ಮಗಳನ್ನು ಪ್ರೀತಿಸಿದ್ದಕ್ಕೆ ತಂದೆಯೊಬ್ಬ ಯುವಕನ ಮೇಲೆ ಬಿಸಿನೀರು ಎರಚಿ ವಿಕೃತಿ ಮೆರೆದಿರುವ ಘಟನೆ ಮಡಿಕೇರಿ ತಾಲೂಕಿನಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಮದೆನಾಡು ಗ್ರಾಮದಲ್ಲಿ ಸುಹೈಲ್‌ ಎಂಬಾತನ ಮೇಲೆ ಬಿಸಿನೀರು ಎರಚಿ ವಿಕೃತ ಮೆರೆದಿದ್ದು, ಯುವಕನ ಮುಖ, ಕುತ್ತಿಗೆ ಭಾಗದಲ್ಲಿ ಗಂಭೀರವಾದ ಗಾಯವಾಗಿದ್ದು, ಗಾಯಗೊಂಡ ಸುಹೈಲ್‌ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ. ಮಡಿಕೇರಿಯ ಗಣಪತಿ ಬೀದಿ ನಿವಾಸಿಯಾದ ಸುಹೈಲ್‌ ಕಳೆದ ಕೆಲ ವರ್ಷಗಳಿಂದ ಮದೆನಾಡು ಗ್ರಾಮದ ಸಾಧಿಕ್‌ ಎಂಬುವರ ಪುತ್ರಿಯನ್ನು ಪ್ರೀತಿಸುತ್ತಿದ್ದ. ಈ ವೇಳೆ ಮನೆಯಲ್ಲಿ ಹಿಂಸೆಯಾಗುತ್ತಿದೆ ಎಂದು ಯುವತಿ ಫೋನ್‌ ಕರೆ ಮಾಡಿದ್ದಾಳೆ. ಹೀಗಾಗಿ ಪ್ರೇಯಸಿಯ ಮನೆಗೆ ಹೋಗಿದ್ದ ವೇಳೆ ಪ್ರೇಯಸಿಯ ತಂದೆ ಸಾದಿಕ್‌ ಬಿಸಿನೀರು ಎರಚಿರುವ ಘಟನೆ ನಡೆದಿದೆ.

Read More

ಜಪಾನ್‌ : ಜಪಾನ್‌ ನ ಟೋಕಿಯೊದ ದಕ್ಷಿಣಕ್ಕೆ ಪೆಸಿಫಿಕ್ ಮಹಾಸಾಗರದ ಒಗಸಾವರ ದ್ವೀಪಗಳ ಬಳಿ ಮಂಗಳವಾರ ಬೆಳಿಗ್ಗೆ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ತಿಳಿಸಿದೆ. ಇದರ ಕೇಂದ್ರಬಿಂದುವು ಸುಮಾರು 50 ಕಿಲೋಮೀಟರ್ (31 ಮೈಲಿ) ಆಳದಲ್ಲಿತ್ತು, ಇದು ಹಹಾಜಿಮಾ ದ್ವೀಪದಲ್ಲಿ ಜಪಾನಿನ ಭೂಕಂಪನ ತೀವ್ರತೆಯ ಮಾಪಕದಲ್ಲಿ 7 ರಷ್ಟಿತ್ತು ಎಂದು ಸಂಸ್ಥೆ ತಿಳಿಸಿದೆ. ಯಾವುದೇ ಸುನಾಮಿ ಎಚ್ಚರಿಕೆ ಇಲ್ಲ ಎಂದು ತಿಳಿಸಿದೆ.

Read More

ನವದೆಹಲಿ : ಆಧಾರ್ ಕಾರ್ಡ್ ಭಾರತದ ಜನರಿಗೆ ಒಂದು ಪ್ರಮುಖ ದಾಖಲೆಯಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಅಗತ್ಯವಿದೆ. ಆಧಾರ್ ಕಾರ್ಡ್ ಅನ್ನು ಇತರ ಉದ್ದೇಶಗಳಿಗಾಗಿಯೂ ಬಳಸಲಾಗುತ್ತದೆ. ಆದರೆ ಆಧಾರ್ ಕಾರ್ಡ್ನಲ್ಲಿನ ತಪ್ಪಿನಿಂದಾಗಿ, ನಿಮ್ಮನ್ನು ಜೈಲಿಗೆ ಹಾಕಬಹುದು ಎಂದು ನಿಮಗೆ ತಿಳಿದಿದೆಯೇ? ಈ ತೊಂದರೆಯ ಬಗ್ಗೆ ನಿಮಗೆ ತಿಳಿದಿಲ್ಲದಿದ್ದರೆ, ಈ ಸುದ್ದಿಯನ್ನೊಮ್ಮೆ ಓದಿ. ನಿಮ್ಮ ಆಧಾರ್ ಕಾರ್ಡ್ನಲ್ಲಿ ನೀಡಲಾದ ಮೊಬೈಲ್ ಸಂಖ್ಯೆಯನ್ನು ನೀವು ಪರಿಶೀಲಿಸಬೇಕು. ಅಲ್ಲದೆ, ನಿಮ್ಮ ಆಧಾರ್ ಕಾರ್ಡ್ನಲ್ಲಿ ತಪ್ಪು ಮೊಬೈಲ್ ಸಂಖ್ಯೆಯನ್ನು ನಮೂದಿಸಲಾಗಿದೆಯೇ ಎಂದು ಪರಿಶೀಲಿಸಿ. ನಿಮ್ಮ ಆಧಾರ್ ಕಾರ್ಡ್ನಲ್ಲಿ ಬೇರೊಬ್ಬರ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ್ದರೆ, ಅದನ್ನು ತಕ್ಷಣ ತೆಗೆದುಹಾಕಿ. ನಿಮ್ಮ ಆಧಾರ್ ಕಾರ್ಡ್ಗೆ ತಪ್ಪು ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ, ನೀವು ಜೈಲಿಗೆ ಹೋಗಬೇಕಾಗಬಹುದು. ಆಧಾರ್ ಕಾರ್ಡ್ ಭಾರತದ ಜನರಿಗೆ ಒಂದು ಪ್ರಮುಖ ದಾಖಲೆಯಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಅಗತ್ಯವಿದೆ. ಆಧಾರ್ ಕಾರ್ಡ್ ಅನ್ನು ಇತರ ಉದ್ದೇಶಗಳಿಗಾಗಿಯೂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಹಾಡುಹಗಲೇ ಭಯಾನಕ ಅಪಘಾತ ಸಂಭವಿಸಿದ್ದು, ಕಾರು ಚಾಲಕನೊಬ್ಬ ಎಣ್ಣೆ ನಶೆಯಲ್ಲಿ ಕಾರು ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಬೆಂಗಳೂರಿನ ಮಲ್ಲೇಶ್ವರಂನ ಈಸ್ಟ್‌ ವೆಸ್ಟ್‌ ಪಬ್ಲಿಕ್‌ ಶಾಲೆ ಸಮೀಪದಲ್ಲಿ ಈ ಅಪಘಾತ ಸಂಭವಿಸಿದ್ದು, ಮದ್ಯ ಸೇವನೆ ಮಾಡಿದ್ದ ಕಾರು ಚಾಲಕ ಸರಣಿ ಅಪಘಾತ ಮಾಡಿದ್ದಾನೆ. ಈ ವೇಳೆ ಬೈಕ್‌ ಸವಾರ  ವಿನಯ್‌ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಆರೋಪಿ ಹರಿನಾಥ್‌ ಹಾಡಹಗಲೇ ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದು, ಮಲ್ಲೇಶ್ವರಂ ಸಂಚಾರಿ ಠಾಣೆ  ಪೊಲೀಸರು ಆರೋಪಿ ಹರಿನಾಥ್‌ ನನ್ನು ಬಂಧಿಸಿದ್ದಾರೆ.

Read More

ನವದೆಹಲಿ : ಹಾಂಕಾಂಗ್ ಮತ್ತು ಸಿಂಗಾಪುರ ಭಾರತೀಯ ಸಾಂಬಾರ ಪದಾರ್ಥಗಳನ್ನು ನಿಷೇಧಿಸಿವೆ ಎಂಬ ಆರೋಪವನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ. ಕೆಲವು ಮಾಧ್ಯಮ ವರದಿಗಳಿಗೆ ವ್ಯತಿರಿಕ್ತವಾಗಿ, ಉಭಯ ದೇಶಗಳಲ್ಲಿ ಭಾರತೀಯ ಮಸಾಲೆಗಳ ಮೇಲೆ ಸಂಪೂರ್ಣ ನಿಷೇಧವಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಸರ್ಕಾರಿ ಮೂಲಗಳ ಪ್ರಕಾರ, ನೇಪಾಳದಲ್ಲಿನ ಭಾರತೀಯ ಮಿಷನ್ನ ಅಧಿಕಾರಿಗಳು ನೇಪಾಳದ ಅಧಿಕಾರಿಗಳೊಂದಿಗೆ ಈ ವಿಷಯದ ಬಗ್ಗೆ ಸಮಗ್ರ ತನಿಖೆ ನಡೆಸಿದರು, ಅವರು ಸ್ವತಂತ್ರ ಮೌಲ್ಯಮಾಪನಗಳಿಗಿಂತ ಸುದ್ದಿ ವರದಿಗಳ ಆಧಾರದ ಮೇಲೆ ಕಾರ್ಯನಿರ್ವಹಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ನಿರ್ದೇಶನಗಳಿಗೆ ಅನುಗುಣವಾಗಿ, ಸಾಂಬಾರ ಪದಾರ್ಥಗಳ ಮಂಡಳಿಯು ಆಯಾ ಕಂಪನಿಗಳ ಉತ್ಪನ್ನಗಳ ಮೇಲೆ ಎಚ್ಚರಿಕೆಯಿಂದ ತಪಾಸಣೆ ಮತ್ತು ಮಾದರಿ ಅಭ್ಯಾಸವನ್ನು ಕೈಗೊಂಡಿತು. ಎಂಡಿಎಚ್ ಗಾಗಿ ಪರೀಕ್ಷಿಸಲಾದ ಎಲ್ಲಾ 18  ಮಾದರಿಗಳು ಮಾನದಂಡದ ಪ್ರಕಾರ ಇರುವುದು ಕಂಡುಬಂದಿದೆ. ಆದಾಗ್ಯೂ, ಎವರೆಸ್ಟ್ನ 12 ಮಾದರಿಗಳಲ್ಲಿ ಕೆಲವು ಅನುಸರಣೆಯಲ್ಲ ಎಂದು ಪರಿಗಣಿಸಲ್ಪಟ್ಟವು, ಇದು ಸರಿಪಡಿಸುವ ಕ್ರಮ ಮತ್ತು ನಿರ್ದೇಶನಗಳನ್ನು ಅಗತ್ಯಗೊಳಿಸಿತು. ಕಂಪನಿಗಳು ತಮ್ಮ ಉತ್ಪನ್ನಗಳ ಸಂಗ್ರಹಣೆ, ಸಂಗ್ರಹಣೆ,…

Read More