Author: kannadanewsnow57

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಜೋರಾಗಿದ್ದು, ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಟ್ಟ ಕಮೆಂಟ್ಸ್ ಮಾಡಿದ ಹಿನ್ನಲೆಯಲ್ಲಿ ದೂರು ದಾಖಲಿಸಿದ್ದಾರೆ. ಹೌದು, ನಟ ದರ್ಶನ್ ಪತ್ನಿಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ಸ್ ಮಾಡಿದವರ ವಿರುದ್ಧ ವಿಜಯಲಕ್ಷ್ಮೀ ಅವರು ಕಮಿಷನರ್ ಗೆ ದೂರು ನೀಡಿದ್ದಾರೆ. ಕೆಟ್ಟ ಕಮೆಂಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಜಯಲಕ್ಷ್ಮೀ ಅವರು ದೂರು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಲ್ಲಿ ಮಾತನಾಡಿರುವಂತ ಅವರು, ನಮ್ಮ ಅಭಿಮಾನಿಗಳು ನೀವು ಸುಮ್ಮನೇ ಇರಬೇಡಿ. ಈ ಕಾರ್ಯಕ್ರಮ ಯಾಕೆ ಹುಬ್ಬಳ್ಳಿಯಲ್ಲಿ ಮಾಡುತ್ತಿದ್ದೀವಿ ಅಂದ್ರೆ ಇಲ್ಲಿಂದ ಮಾತನಾಡಿದ್ರೆ ಕೆಲವೊಬ್ಬರಿಗೆ ತಟ್ಟುತ್ತೆ ಎಂದರು. ಈ ನಡುವೆ ಈ ನಡುವೆ ಸ್ಯಾಂಡಲ್ ವುಡ್ ನಲ್ಲಿ ಇದೀಗ ಮತ್ತೆ ಸ್ಟಾರ್ ವಾರ್ ಆರಂಭವಾಗಿದ್ದು ಕಿಚ್ಚನ ಯುದ್ಧದ ಮಾತಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇದೀಗ ಎಂಟ್ರಿ ಕೊಟ್ಟಿದ್ದು. ದರ್ಶನ್ ಜೈಲಲ್ಲಿ ಇದ್ದಾಗ ಇವರು ವೇದಿಕೆ ಮೇಲೆ ಫ್ಯಾನ್ಸ್ ಬಗ್ಗೆ ಮಾತನಾಡುತ್ತಾರೆ. ಆದರೆ…

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ…

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಕುರ್ಚಿ ಫೈಟ್ ಮಧ್ಯೆ ಅಹಿಂದ ಸಮಾವೇಶಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಜನವರಿ 25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸಲು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಘೋಷಣೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯಗಳು ನಿಂತಿದ್ದು, ಸಿದ್ದರಾಮಯ್ಯರನ್ನು ಬದಲಾಯಿಸದಂತೆ ಒತ್ತಡ ಹೇರಲು ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಅಹಿಂದ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಅಹಿಂದ ಸಮಾವೇಶಕ್ಕೆ ಮಹೂರ್ತಕ್ಕೆ ದಿನಾಂಕ ಫಿಕ್ಸ್ ಆಗಿದ್ದು ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತುಕೊಳ್ಳುವುದಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ. ಕುರ್ಚಿ ಕದನದ ನಡುವೆ ಸಿದ್ದರಾಮಯ್ಯ ಬೆಂಬಲಿಗರ ಹೊಸ ಅಸ್ತ್ರ ಪ್ರಯೋಗ ಮಾಡಲಿದ್ದು, ಜನವರಿ 25 ಕ್ಕೆ ಅಹಿಂದ ಸಮಾವೇಶ ನಡೆಲಿದೆ ಎನ್ನಲಾಗಿದೆ. ಇಂದು ಅಹಿಂದ ಸಮಾವೇಶ ನಡೆಸಲು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಸಿದ್ದತೆ ನಿಟ್ಟಿನಲ್ಲಿ ಪೂರ್ವಭಾವಿ ನಡೆಯಿತು, ಸಭೆಯಲ್ಲಿ ಎಲ್ಲರೂ ಕೂಡ ಜನವರಿ 25 ರಂದು ಅಹಿಂದ ಸಮಾವೇಶವನ್ನು…

Read More

ಕೊಪ್ಪಳ : ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ನಡೆದಿರುವ ಜಗಳ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಎನ್ನುವವರೇ ಹೀಗೆ ಕಿತ್ತಾಡಿಕೊಂಡಿರುವವರು ಎನ್ನಲಾಗಿದೆ. ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಜಗಳ ಶುರುವಾಗಿದ್ದು, ಬಳಿಕ ಇಬ್ಬರು ಹೊಡೆದಾಡಿಕೊಂಡಿದ್ದಾರೆ.ಆದರೆ ಪೂಜಾ ಸಮಯದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಲಾಗಿದೆ ಎಂದು ವಿದ್ಯಾದಾಸ ಬಾಬಾ ಅವರು ಆರೋಪ ಮಾಡಿದ್ದಾರೆ. ಇನ್ನೂ ಇಬ್ಬರ ನಡುವೆ ವಾಗ್ವಾದ ಸುದ್ದಿ ಪೊಲೀಸರಿಗೆ ತಿಳಿಸಿದೆ. ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿಸದ ವೇಳೇಯಲ್ಲಿ ಕೂಡ ಇಬ್ಬರು ಕೂಡ ಪೋಲಿಸರ ಮುಂದೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಇಬ್ಬರ ಜಗಳದ ವಿಡಿಯೋ ಈಗ ವೈರಲ್ ಆಗಿದೆ. ವಿದ್ಯಾದಾಸ ಬಾಬಾ ಸ್ವಾಮೀಜಿ ಗ್ರಾಮೀಣ ಪೊಲೀಸ್ ಠಾಣೆಗೆ ಘಟನೆ ಸಂಬಂಧಪಟ್ಟ ದೂರು ನೀಡಿದ್ದು, ದೂರಿನಲ್ಲಿ ನನಗೆ ದೇವಸ್ತಾನದಲ್ಲಿ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ನಿಂದನೆ ಮಾಡಿದ್ದಾರೆ ಅಂತ ತಿಳಿಸಿದ್ದಾರೆ. https://twitter.com/meavinashr/status/2003722254535008596?s=20

Read More

ಜಕಾರ್ತಾ: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಮುಂಜಾನೆ ನಡೆದ ಬಸ್ ಅಪಘಾತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಸೆಮರಾಂಗ್ ನಗರದ ಕ್ರಾಪ್ಯಕ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಪ್ರಾಚೀನ ನಗರವಾದ ಯೋಗ್ಯಕರ್ತಾದಿಂದ ರಾಜಧಾನಿ ಜಕಾರ್ತಾಗೆ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಯಿತು. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ತಿರುವಿನಲ್ಲಿ ಕಾಂಕ್ರೀಟ್ ಗೋಡೆಗೆ ಡಿಕ್ಕಿ ಹೊಡೆದು ಉರುಳಿತು. ಆ ಪ್ರದೇಶವು ಪ್ರಯಾಣಿಕರ ಕಿರುಚಾಟದಿಂದ ಪ್ರತಿಧ್ವನಿಸಿತು. ಸುಮಾರು 40 ನಿಮಿಷಗಳ ನಂತರ ಪೊಲೀಸರು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಬಂದರು. ಅಪಘಾತದ ತೀವ್ರತೆಗೆ ನಜ್ಜುಗುಜ್ಜಾದ ಬಸ್ಸಿನಲ್ಲಿ ಪ್ರಯಾಣಿಕರು ಸಿಲುಕಿಕೊಂಡರು. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, 10 ಜನರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದರು. ಗಾಯಗೊಂಡವರಲ್ಲಿ ಐದು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಮತ್ತು 13 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ ಚಲಾಯಿಸುತ್ತಿದ್ದ ಸಹಾಯಕ ಚಾಲಕ ಕೂಡ ಗಾಯಗೊಂಡವರಲ್ಲಿ ಸೇರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. https://twitter.com/_AAhmed004/status/2002984382240583879?s=20

Read More

ರಾಯಚೂರು : ರಾಯಚೂರಿನಲ್ಲಿ ರೋಡ್ ರೋಲರ್ ಗೆ ನೇಣು ಬಿಗಿದುಕೊಡು ರಿಮ್ಸ್ ಆಸ್ಪತ್ರೆ ನರ್ಸಿಂಗ್ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರಿನ ಹಟ್ಟಿ ಪಟ್ಟಣದಲ್ಲಿ 32 ವರ್ಷದ ಜ್ಯೋತಿ ರೋಡ್ ರೋಲರ್ ಗೆ ನೇಣುಬಿಗಿದುಕೊಂಡ ಶವ ಪತ್ತೆಯಾಗಿದೆ. ಹಟ್ಟಿ-ಪಾಮನಕಲ್ಲೂರು ಗ್ರಾಮದ ರಸ್ತೆ ಕಾಮಗಾರಿ ಬಳಿ ಡಿ.22 ರಂದು ಶವ ಪತ್ತೆಯಾಗಿದೆ. ಜ್ಞಾನಮೂರ್ತಿ ಎಂಬುವರನ್ನು ಜ್ಯೋತಿ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕೆಲದಿನಗಳಿಂದ ಜ್ಯೋತಿಯನ್ನು ಜ್ಞಾನಮೂರ್ತಿ ಅವಾಯ್ಡ್ ಮಾಡಿದ್ದ. ಇದರಿಂದ ಮನನೊಂದು ಜ್ಯೋತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ನವದೆಹಲಿ: ವಿಜಯ್ ಹಜಾರೆ ಟ್ರೋಫಿಯಲ್ಲಿ ಅರುಣಾಚಲ ಪ್ರದೇಶ ವಿರುದ್ಧ ಬಿಹಾರ ಪರ 190 ರನ್ ಗಳಿಸಿದ ವೈಭವ್ ಸೂರ್ಯವಂಶಿ ಇತಿಹಾಸ ನಿರ್ಮಿಸಿದರು ಮತ್ತು ಎಬಿ ಡಿವಿಲಿಯರ್ಸ್ ದಾಖಲೆಯನ್ನು ಮುರಿದರು. ಬಿಹಾರ ಪರ ಇನ್ನಿಂಗ್ಸ್ ಆರಂಭಿಸಿದ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 190 ರನ್ ಗಳಿಸಿದರು.  ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ, ಬಿಹಾರ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ವೈಭವ್ ಸೂರ್ಯವಂಶಿ ಆರಂಭದಿಂದಲೂ ಆಕ್ರಮಣಕಾರಿಯಾಗಿ ಆಡಿದರು ಮತ್ತು ಅರುಣಾಚಲ ಪ್ರದೇಶದ ಬೌಲರ್‌ಗಳ ಮೇಲೆ ತೀವ್ರವಾಗಿ ದಾಳಿ ಮಾಡಿದರು. ಅವರು ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿದರು ಮತ್ತು ಅಂತಿಮವಾಗಿ 84 ಎಸೆತಗಳಲ್ಲಿ 190 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದ ನಂತರ ಔಟಾದರು. ಈ ಇನ್ನಿಂಗ್ಸ್‌ನಲ್ಲಿ, ಅವರು 16 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಬಾರಿಸಿದರು. ಅವರ ಸ್ಟ್ರೈಕ್ ರೇಟ್ 226.19 ಆಗಿತ್ತು. 226.19 ಸ್ಟ್ರೈಕ್ ರೇಟ್‌ನೊಂದಿಗೆ ಬ್ಯಾಟಿಂಗ್ ಮಾಡಿದ ಸೂರ್ಯವಂಶಿ 15 ಸಿಕ್ಸರ್‌ಗಳು ಮತ್ತು 16 ಬೌಂಡರಿಗಳನ್ನು ಬಾರಿಸಿದರು.…

Read More

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವಿಠ್ಠಲ ಕೊರಾಡೆ (29) ಎಂಬುವರನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪದ ನಿವಾಸಿಯಾಗಿದ್ದು, ಹುಣಸಿಕಟ್ಟಿ ಗ್ರಾಮದಲ್ಲಿರುವ ಪತ್ನಿ ಮನೆಗೆ ಬಂದಿದ್ದ ವಿಠ್ಠಲ ಕೊರಾಡೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿಗೆ ಲೋಕಾಯಕ್ತು ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಸರ್ಫರಾಜ್ ಗೆ ಸೇರಿದ ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರಿನ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್, ಹೆಚ್.ಡಿ.ಕೋಟೆಯ ಒಂದು ರೆಸಾರ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

Read More

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿಗೆ ಲೋಕಾಯಕ್ತು ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಸರ್ಫರಾಜ್ ಗೆ ಸೇರಿದ ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರಿನ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್, ಹೆಚ್.ಡಿ.ಕೋಟೆಯ ಒಂದು ರೆಸಾರ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.

Read More