Author: kannadanewsnow57

ಬೆಂಗಳೂರು : ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಕ್ಯೂಆರ್ ಕೋಡ್ ಆಧಾರಿತ ನೋಂದಣಿ ಪ್ರಮಾಣಪತ್ರ (ಆರ್‌ಸಿ) ಮತ್ತು ಚಾಲನಾ ಅನುಜ್ಞಾಪತ್ರ (ಡಿಎಲ್) ಸ್ಮಾಟ್ ಕಾರ್ಡ್ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿದ ಈ ಕಾರ್ಡ್‌ಗೆ 200 ರು. ದರ ನಿಗದಿಪಡಿಸಲಾಗಿದೆ. ಒನ್ ನೇಷನ್ ಒನ್ ಕಾರ್ಡ್ ಯೋಜನೆಯಡಿ ನೂತನ ಸ್ಮಾರ್ಟ್ ಕಾರ್ಡ್ ವಿತರಣೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಆರ್.ಸಿ. ಮತ್ತು ಡಿಎಲ್‌ಗೆ ಅರ್ಜಿ ಸಲ್ಲಿಸಿದವರಿಗೆ ಹೊಸ ಸ್ಮಾರ್ಟ್ ಕಾರ್ಡ್ ಸಿಗಲಿದೆ. ಇದರಲ್ಲಿ ಕ್ಯೂಆರ್ ಕೋಡ್ ಅಳವಡಿಸಲಾಗಿದ್ದು, ಸ್ಕ್ಯಾನ್ ಮಾಡಿದಾಗ ವಾಹನ ಮತ್ತು ಚಾಲಕರ ಮಾಹಿತಿ ಸಿಗಲಿದೆ. ಒಂದು ಕಾರ್ಡ್ ಗೆ 200 ರೂಪಾಯಿ ಶುಲ್ಕ ನಿಗದಿಪಡಿಸಿದ್ದು, ಅದರಲ್ಲಿ 135 ರೂ. ಸರ್ಕಾರಕ್ಕೆ, 65 ರೂ. ಸೇವಾದಾರರಿಗೆ ಸಿಗಲಿದೆ ಎಂದು ತಿಳಿಸಿದ್ದಾರೆ. ಪ್ರತಿದಿನ 15000 ಕಾರ್ಡ್ ಗಳನ್ನು ಮುದ್ರಿಸಿ ವಿತರಿಸಲಾಗುವುದು. ಪಾಲಿ ಕಾರ್ಬೋನೇಟ್ ಮೆಟೀರಿಯಲ್ ನಿಂದ ಸ್ಮಾರ್ಟ್ ಕಾರ್ಡ್ ಗಳನ್ನು ತಯಾರಿಸಲಾಗುತ್ತಿದೆ. ಲೇಸನ್ ಎನ್ ಗ್ರೇವಿಂಗ್…

Read More

ಶಿವಮೊಗ್ಗ: ಸಿನಿಮಾ ಚಿತ್ರೀಕರಣ ವೇಳೆಯಲ್ಲೇ ಹೃದಯಾಘಾತದಿಂದ ಸ್ಯಾಂಡಲ್ ವುಡ್ ಸಿನಿಮಾ ನಿರ್ದೇಶಕ ಸಂಗೀತ್ ಸಾಗರ್ ನಿಧನರಾಗಿದ್ದಾರೆ. ಚಿತ್ರೀಕರಣದ ಸಂದರ್ಭ ಹೃದಯಾಘಾತವಾಗಿ ನಿರ್ದೇಶಕ ಸಂಗೀತ್‌ ಸಾಗರ್‌ ಅವರು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊಪ್ಪ ತಾಲೂಕು ಹರಿಹರಪುರದಲ್ಲಿ ‘ಪಾತ್ರಧಾರಿʼ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಸಂಗೀತ್‌ ಸಾಗರ್‌ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಕೊಪ್ಪ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿರ್ದೇಶಕ ಸಂಗೀತ್‌ ಸಾಗರ್‌ ಅವರನ್ನು ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕರಾಗಿದ್ದರು. ಅವರು ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ದೊಡ್ಡನಾಗರ ಮೂಲದವರಾಗಿದ್ದಾರೆ. 20 ದಿನದಿಂದ ಹರಿಹರಪುರ ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿತ್ತು.

Read More

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯಿದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 202’ಕ್ಕೆ ಅನು ಮೋದನೆ ಪಡೆಯುವ ಸಾಧ್ಯತೆಯಿದೆ. ಜೂನ್‌ನಲ್ಲಿನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿದ್ದು, ಅಂತಿಮ ವಿಧೇಯಕವು ಇಂದು ಮಂಡನೆಯಾಗಲಿದೆ. ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸುವ ಸಾಧ್ಯತೆಯಿದೆ. ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥ ವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡ ಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5…

Read More

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯಲ್ಲಿ ಶಾಲಾ ವಿದ್ಯಾರ್ಥಿಗಳ Aadhar Mandatory Biometric Update (Aadhar MBU) ಹಾಗೂ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1)ರಲ್ಲಿನ ದಿನಾಂಕ:16.07.2025ರ ಸಭಾ ನಡವಳಿಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, AJSK ಮತ್ತು EDCS ಸಹಯೋಗದೊಂದಿಗೆ, ವಾರ್ಷಿಕವಾಗಿ ಸುಮಾರು 20 ಲಕ್ಷ MBU ಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಶಾಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ಪ್ರಸ್ತಾಪಿಸಲಾಗಿರುವುದಾಗಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯನ್ನು ಯುಐಡಿಎಐ ಅಡಿಯಲ್ಲಿ ರಾಜ್ಯ ರಿಜಿಸ್ಟ್ರಾರ್ ಆಗಿ ನೇಮಿಸಲು, 300-500 ಇಸಿಎಂಪಿ ಕಿಟ್‌ಗಳನ್ನು ಸಂಗ್ರಹಿಸಲು ಮತ್ತು ಶಾಲಾ ಅಧಿಕಾರಿಗಳಿಗೆ ತರಬೇತಿ ನೀಡಲು ಅಥವಾ ಪ್ರಮಾಣೀಕೃತ ನಿರ್ವಾಹಕರ ಮೂಲಕ ವಿದ್ಯಾರ್ಥಿಗಳ ಆಧಾರ್ MBU ಕಾರ್ಯವನ್ನು ನಡೆಸಲು ಒಂದು ವ್ಯವಸ್ಥೆಯನ್ನು ರೂಪಿಸಲು ಪ್ರಸ್ತಾಪಿಸಲಾಗಿದೆ. ಮೇಲೆ ಓದಲಾದ (2)ರಲ್ಲಿನ, ದಿನಾಂಕ:16.09.2025ರ ಸಭಾ ನಡವಳಿಯಲ್ಲಿ, ಸರ್ಕಾರಿ ಶಾಲಾ-ಕಾಲೇಜುಗಳನ್ನು ನೋಂದಣಿ ಅಥವಾ ದಾಖಲಾತಿ ಏಜೆನ್ಸಿಗಳನ್ನಾಗಿ ಮಾಡಲಾಗುವುದಿಲ್ಲ ಎಂದು ತೀರ್ಮಾನಿಸಿದೆ. ಮುಂದುವರೆದು,…

Read More

ಬೆಂಗಳೂರು : ರಾಜ್ಯದ ಗ್ರಾಮಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಗ್ರಾಪಪಂಚಾಯಿತಿ ಸಿಬ್ಬಂದಿಗಳಿಗೆ ಪಿಎಫ್, ಇಎಸ್ ಐ ಸೌಲಭ್ಯ ಸಿಗಲಿದೆ. ಹೌದು, ಗ್ರಾಮ ಪಂಚಾಯ್ತಿ ನೌಕರರ ಬಹು ದಿನಗಳ ಬೇಡಿಕೆಯಾದ ಭವಿಷ್ಯ ನಿಧಿ (EPF) ಮತ್ತು ಆರೋಗ್ಯ ವಿಮೆ ಯೋಜನೆ (ESI) ಸೌಲಭ್ಯ ಕಲ್ಪಿಸಲು ಜಿಲ್ಲಾ ಪಂಚಾಯಿತಿಗಳು ಮುಂದಾಗಿದ್ದು, ಇದೀಗ ರಾಜ್ಯದ ಬೆಂಗಳೂರು ಗ್ರಾಮಾಂತರ, ಮಂಗಳೂರು, ಧಾರವಾಡ, ಉಡುಪಿ ಜಿಲ್ಲಾ ಪಂಚಾಯತ್ ಗಳು ಗ್ರಾಮಪಂಚಾಯಿತಿ ನೌಕರರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಉಳಿದ ಜಿಪಂಗಳಲ್ಲೂ ಶೀಘ್ರವೇ ಜಾರಿಯಾಗಲಿದೆ ಎನ್ನಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್‌ (ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿ, ನೇಮಕಾತಿ ವಿಧಾನ ಹಾಗೂ ಇತರ ಸೇವಾ ಷರತ್ತುಗಳು) ನಿಯಮಗಳು 2022ರಲ್ಲಿನ ತಿದ್ದುಪಡಿ ಪ್ರಕಾರ ಜಿಲ್ಲೆಯ ಪ್ರತಿ ತಾಲೂಕು ಪಂಚಾಯಿತಿ ವ್ಯಾಪ್ತಿಯನ್ನು ಅನುಷ್ಠಾನ ಘಟಕವಾಗಿ ಪರಿಗಣಿಸಿ, ಗ್ರಾಪಂಗಳ ಅನುಮೋದಿತ ಸಿಬ್ಬಂದಿಗೆ ಭವಿಷ್ಯ ನಿಧಿ ಹಾಗೂ ಇಎಸ್‌ಐ ಸೌಲಭ್ಯ ಜಾರಿಗೆ ತರಲಾಗಿದೆ. ನೌಕರ ತನ್ನ ಮೂಲವೇತನ…

Read More

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಶೈಕ್ಷಣಿಕ ಪ್ರವಾಸ ಕೈಗೊಳ್ಳುವಾಗ ವಿದ್ಯಾರ್ಥಿಗಳ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯ ಪೊಲೀಸ್‌ಇಲಾಖೆ ಮಾರ್ಗಸೂಚಿ ಹೊರಡಿಸಿದೆ.ಪ್ರವಾಸಕ್ಕೆ ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಾಗ ಹಾಗೂ ಅಸುರಕ್ಷಿತ ಪದ್ಧತಿ ತಡೆಯಲು ವಾಹನಗಳ ಪೂರ್ವ-ಪರಿಶೀಲನೆ ಹಾಗೂ ಸುರಕ್ಷತಾ ಸೂಚನೆ ನೀಡಲಾಗಿದೆ. ಈ ನಿಯಮಗಳ ಪಾಲನೆ ಕಡ್ಡಾಯ ಚಾಲಕರು ಮಾದಕ ದ್ರವ್ಯ ವ್ಯಸನಿ ಆಗಿಲ್ಲವೆಂಬುದನ್ನು ಖಚಿತಪಡಿಸಿಕೊಳ್ಳಬೇಕು. ತಾನು ಓಡಿಸುವ ವಾಹನದ ಮಾದರಿಗೆ ಸಂಬಂಧಿಸಿದಂತೆ ಅನುಜ್ಞಾ ಪತ್ರ ಮತ್ತು ಚಾಲನಾ ಕೌಶಲಗಳನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ರವಾಸದ ಅವಧಿಯಲ್ಲಿ ವಾಸ್ತವ್ಯ ಹೂಡುವ ಅವಶ್ಯಕತೆ ಕಂಡು ಬಂದಲ್ಲಿ ಚಾಲಕರ ರಾತ್ರಿ ಚಟುವಟಿಕೆಗಳ ಬಗ್ಗೆ ನಿಗಾವಹಿಸಲು ಸಂಬಂಧಪಟ್ಟ ಶಿಕ್ಷಕರಿಗೆ ಸೂಚಿಸಬೇಕು. ಪ್ರವಾಸದ ಸಮಯದಲ್ಲಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿರುವ ವೇಳೆ, ಆಯಾ ಜಿಲ್ಲೆಯ ಪೊಲೀಸ್ ನಿಯಂತ್ರಣ ಕೊಠಡಿ ಮತ್ತು ಸಂಬಂಧಪಟ್ಟ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ ನೀಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದಲ್ಲಿ ಮಾಡಬೇಕಾದ ಹಾಗೂ ಮಾಡಬಾರದ ಕೆಲಸಗಳ ಬಗ್ಗೆ ಸೂಕ್ತ ಮಾಹಿತಿಯನ್ನು ಶಾಲಾ ಆಡಳಿತ ಮಂಡಳಿ ನೀಡಬೇಕು ಎಂದು ರಾಜ್ಯ…

Read More

ಬೆಂಗಳೂರು : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದೀಗ ನುಗ್ಗೆಕಾಯಿ ಸೇರಿದಂತೆ ತರಕಾರಿ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಹೌದು, ರಾಜ್ಯದಲ್ಲಿ ನುಗ್ಗೆಕಾಯಿ ಬೆಲೆ ಮಟನ್ ರೇಟ್ ನಷ್ಟೇ ಏರಿಕೆಯಾಗಿದ್ದು, ನುಗ್ಗೆಕಾಯಿ ಕೆಜಿಗೆ 600-700 ರೂ.ಗೆ ಮಾರಾಟವಾಗುತ್ತಿದೆ. ಟೊಮೆಟೋ ದರ ಕೆಜಿಗೆ 100 ರೂ. ಗಡಿ ಸಮೀಪಸಿದ್ದು, ಈ ನಡುವೆ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಹಿಂಗಾರು ಮಳೆಯ ವಿಳಂಬದಿಂದಾಗಿ ಕಡಿಮೆ ಇಳುವರಿ ಹಾಗೂ ಬೆಳೆಗಳಿಗೆ ರೋಗ ಕಾರಣ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆಯಾಗದ ಕಾರಣ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಯಾವ ತರಕಾರಿ ಬೆಲೆ ಎಷ್ಟು ಏರಿಕೆ ಹಸಿರು ಬಟಾಣಿ ಪ್ರತಿ ಕೆಜಿಗೆ 250 ರೂ. ಬೀನ್ಸ್ 60-80 ರೂ. ತೊಂಡೆಕಾಯಿ 80-100 ರೂ. ತೊಗರಿಕಾಯಿ 60-70 ರೂ. ಕ್ಯಾರೆಟ್…

Read More

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಭಾಗದ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಅರ್ಜಿ ಸಲ್ಲಿಸಿದ 15 ದಿನಗಳಲ್ಲೇ ಇ-ಖಾತೆ ಪಡೆಯಬಹುದು. ಸಿಎಂ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದು, ಅರ್ಜಿದಾರರು ಅರ್ಜಿ ಸಲ್ಲಿಸಿದ 15 ದಿನಗಳಲ್ಲಿ ಇ-ಖಾತೆ ಪಡೆಯಬಹುದಾಗಿದ್ದು, ನಿಗದಿತ ಅವಧಿಯಲ್ಲಿ ಅಧಿಕಾರಿಗಳಿಂದ ಅನುಮೋದನೆ ದೊರಕದೆ ಇದ್ದರೆ ಸ್ವಯಂಚಾಲಿತವಾಗಿ ಅನುಮೋದನೆಯಾಗಲಿದೆ. ಸ್ಥಳೀಯ ಯೋಜನಾ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ಪಡೆಯದೆ ನಿರ್ಮಾಣವಾಗಿದ್ದ ಬಡಾವಣೆಗಳಲ್ಲಿನ ನಿವೇಶನಗಳಿಗೆ 11ಬಿ ಖಾತೆ ಕೂಡ ನೀಡಲು ಅವಕಾಶ ಕಲ್ಪಿಸಲಾಗಿದೆ. ತೆರಿಗೆ ವ್ಯಾಪ್ತಿಗೆ ಒಳಪಡದ ಕೃಷಿಯೇತರ ಆಸ್ತಿಗಳಿಗೆ ಇ-ಖಾತೆ ನೀಡಲು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತಿ ರಾಜ್ ಅಧಿನಿಯಮ 1993 ಪ್ರಕರಣ 199ಕ್ಕೆ ತಿದ್ದುಪಡಿ ತರುವ ಮೂಲಕ, ಕರ್ನಾಟಕ ಗ್ರಾಮ ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು 2025 ಅನ್ನು ರೂಪಿಸಲಾಗಿದೆ. ಅದರ…

Read More

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) NTPC ಪದವಿ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 4 ಕೊನೆಯ ದಿನವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡಬೇಕು. ಈ ನೇಮಕಾತಿ ಡ್ರೈವ್ 8,868 ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುತ್ತದೆ. ಒಟ್ಟು 5,810 ಹುದ್ದೆಗಳನ್ನು ಪದವಿ ವಿಭಾಗದ ಅಡಿಯಲ್ಲಿ ಮತ್ತು 3,058 ಹುದ್ದೆಗಳನ್ನು ಪದವಿಪೂರ್ವ ವಿಭಾಗದ ಅಡಿಯಲ್ಲಿ ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರ ವಿವರಗಳ ಕುರಿತು ಮಾಹಿತಿಯನ್ನು ಕೆಳಗೆ ಕಾಣಬಹುದು. ನೇಮಕಾತಿ ನಡೆಯುತ್ತಿರುವ ಹುದ್ದೆಗಳು ಇಂತಿವೆ: ಪದವಿ ಹಂತದ ಹುದ್ದೆಗಳು ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ – 161 ಸ್ಟೇಷನ್ ಮಾಸ್ಟರ್ – 615 ಸರಕು ರೈಲು ವ್ಯವಸ್ಥಾಪಕ – 3,416 ಜೂನಿಯರ್ ಅಕೌಂಟ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ – 921 ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್…

Read More

ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಹೊರಡಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), SBI SO ಅಧಿಸೂಚನೆ 2025 ರ ಮೂಲಕ VP ವೆಲ್ತ್ (SRM), AVP ವೆಲ್ತ್ (RM) ಮತ್ತು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳಿಗೆ ಒಟ್ಟು 996 ಹುದ್ದೆಗಳನ್ನು ಪ್ರಕಟಿಸಿದೆ. SBI SO ನೇಮಕಾತಿ 2025 ಗಾಗಿ ಆನ್ಲೈನ್ ಫಾರ್ಮ್ ಭರ್ತಿ ಪ್ರಕ್ರಿಯೆಯು ಡಿಸೆಂಬರ್ 2, 2025 ರಂದು www.sbi.co.in ನಲ್ಲಿ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯ ಅಡಿಯಲ್ಲಿ ಒಟ್ಟು 996 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 2 ರಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಕೆಳಗಿನ ಇತರ ವಿವರಗಳನ್ನು ಪರಿಶೀಲಿಸಿ.. ವಿವರಗಳು.. VP ವೆಲ್ತ್ (SRM) ಹುದ್ದೆಗಳ ಸಂಖ್ಯೆ: 506 AVP ವೆಲ್ತ್ (RM) ಹುದ್ದೆಗಳ ಸಂಖ್ಯೆ: 206 ಗ್ರಾಹಕ ಸಂಬಂಧ…

Read More