Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಕೆಪಿಎಸ್ಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಆಯೋಗದಿಂದ ಅಧಿಸೂಚಲಾದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಅಂತ ತಿಳಿಸಿದೆ. ಹೀಗಿದೆ ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ವೇಳಾಪಟ್ಟಿ
ಬೆಂಗಳೂರು : ಶಾಲಾ ವಿದ್ಯಾರ್ಥಿಗಳ ಪ್ರವೇಶ ವಯೋಮಿತಿ ಗೊಂದಲಕ್ಕೆ ಶಿಕ್ಷಣ ಇಲಾಖೆ ತೆರೆ ಎಳೆದಿದ್ದು, ಈ ಶೈಕ್ಷಣಿಕ ವರ್ಷ ಈಗಾಗಲೇ ಮುಕ್ತಾಯವಾಗಿದ್ದರೂ 2023-24 ರಿಂದ 2025-26ನೇ ವರ್ಷದವರೆಗೆ ಕನಿಷ್ಠ ಮತ್ತು ಗರಿಷ್ಠ ವಯೋಮಿತಿ ನಿಗದಿ ಮಾಡಿ ಗೊಂದಲಕ್ಕೆ ತೆರೆ ಎಳೆದಿದೆ. ಸರ್ಕಾರದ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ-2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಸರ್ಕಾರದ ಆದೇಶ ಸಂಖ್ಯೆ:ಇಪಿ 260 ಪಿಜಿಸಿ 2021, ದಿನಾಂಕ:26.07.2022ರ ಆದೇಶದಲ್ಲಿ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಲಾಗಿರುವುದನ್ನು 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (3)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ LKG, UKG ಮತ್ತು…
ಬೆಂಗಳೂರು : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ , ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್‍ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐನಲ್ಲಿ ಸಬ್ ಇನ್ಸ್ಪೆಕ್ಟರ್, ಅಂಚೆ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಹಿರಿಯ ಸಕ್ರೇಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಗುಮಾಸ್ತ, ಅಂಚೆ ಇಲಾಖೆ ಸಹಾಯಕ ಮತ್ತು ವಿಂಗಡಣೆ ಸಹಾಯಕ ಹುದ್ದಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇದೇ ಜುಲೈ 24 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿದ್ದು, ಕನಿಷ್ಠ 18 ರಿಂದ 32 ವರ್ಷಗಳು ವಯೋಮಿತಿ ಹೊಂದಿರಬೇಕು. ಈ ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/ https://ss.nic.in ಗೆ ಭೇಟಿ ನೀಡಬಹುದು. ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ: 080-25502520, 948362020. ಸಂಪರ್ಕಿಸಬಹುದು. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್…
ಬೆಂಗಳುರು : ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ. ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಈ ಕಾರ್ಡ್‍ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್‍ನ್ನು 14 ಸಂಖ್ಯೆಯ…
ಬೆಂಗಳೂರು : ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡು, ರಾಹುಲ್ ಗಾಂಧಿ ಅವರಿಗೆ ರಾಜ್ಯದ ಹಣವನ್ನು ಕಳುಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡು, ರಾಹುಲ್ ಗಾಂಧಿ ಅವರಿಗೆ ರಾಜ್ಯದ ಹಣವನ್ನು ಕಳುಹಿಸಲಾಗುತ್ತಿದೆ. ವಾಲ್ಮೀಕಿ ನಿಗಮದ ಹಣ ಹಾಗೂ ದಲಿತ ಸಮುದಾಯದ ಹಣವನ್ನು ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಬಳಸಿಕೊಂಡಿದೆ. ಸಿಎಂ ಸಿದ್ದರಾಮಯ್ಯನವರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ಕಾಂಗ್ರೆಸ್ ಸರ್ಕಾರ ಬಂಧಿಸಿದೆ ಎಂದು ಬಿಜೆಪಿ ತಿಳಿಸಿದೆ.
ಬೆಂಗಳೂರು : ಅಚ್ಚ ಕನ್ನಡದ ನಿರೂಪಕಿ ಎಂದೇ ಹೆಸರು ಪಡೆದಿದ್ದ ನಟಿ ಅಪರ್ಣಾ (57) ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅಪರ್ಣಾ ನಿಧನಕ್ಕೆ ನಮ್ಮ ಮೆಟ್ರೋ ಸಂತಾಪ ಸೂಚಿಸಿದೆ. ನಟಿ, ನಿರೂಪಕಿ ಅಪರ್ಣಾ ನಿಧನಕ್ಕೆ ನಮ್ಮ ಮೆಟ್ರೋ ಸಂತಾಪ ಸೂಚಿಸಿದೆ. ಅನೇಕ ನಮ್ಮ ಮೆಟ್ರೋ ಕಾರ್ಯಕ್ರಮಗಳನ್ನು ನಡೆಸಿದ ಗೌರವ ಅವರಿಗೆ ಇದೆ. ಕನ್ನಡ ಭಾಷೆಯ ಮೇಲಿನ ಅವರ ಹಿಡಿತ ಮತ್ತು ಉಚ್ಚಾರಣೆ ಎರಡೂ ಮಂತ್ರಮುಗ್ಧಗೊಳಿಸುತ್ತಿದ್ದವು. ನಮ್ಮ ಮೆಟ್ರೋ ರೈಲುಗಳಲ್ಲಿ ಅವರ ಧ್ವನಿ ಎಂದೆಂದಿಗೂ ಜೀವಂತವಾಗಿದೆ. ನಮ್ಮ ಮುಂದಿನ ಎಲ್ಲಾ ಪ್ರಯತ್ನಗಳಲ್ಲಿ ನಮ್ಮ ಮೆಟ್ರೋ ಅವಳನ್ನು ಮಿಸ್ ಮಾಡಿಕೊಳ್ಳುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಮ್ಮ ಮೆಟ್ರೋ ತಿಳಿಸಿದೆ. ನಿರೂಪಕಿ ಅಪರ್ಣಾ ಅವರು ಕಳೆದ 13 ವರ್ಷಗಳಿಂದ ನಮ್ಮ ಮೆಟ್ರೋಗೆ ಧ್ವನಿ ನೀಡಿದ್ದಾರೆ. ಮೊದಲ ಬಾರಿಗೆ 2011ರ ಅಕ್ಟೋಬರ್ 20 ರಂದು ಎಂಜಿ ರೋಡ್ನಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಆರಂಭಿಸಿದಾಗಿನಿಂದ ಇತ್ತೀಚೆಗೆ 2023ರ ಅಕ್ಟೋಬರ್ 9 ರಂದು ಉದ್ಘಾಟನೆಗೊಂಡ ಕೆಂಗೇರಿಯಿಂದ ಚಲ್ಲಘಟ್ಟ, ಕೆ.ಆರ್…
ಬೆಂಗಳೂರು : ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಘೋಷಿಸಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ರಣಹೇಡಿ ಕಾಂಗ್ರೆಸ್ ಸರ್ಕಾರ ಬಂಧಿಸಿದೆ ಎಂದು ಕಿಡಿಕಾರಿದೆ. ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿ ಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ತಮ್ಮ ಖುರ್ಚಿ ಉಳಿಸಿಕೊಳ್ಳಲು, ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ.ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನು ಒಪ್ಪಿಕೊಳ್ಳದ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ದೇಶದ ಜನರ ದಾರಿ ತಪ್ಪಿಸಲು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮೂತ್ರ ವಿಸರ್ಜನೆ ಮಾಡುತ್ತಿದ್ದಾಗಲೇ ಕರೆಂಟ್ ಶಾಕ್ ನಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಮನೆ ಮುಂದೆ ಹಾದು ಹೋಗಿದ್ದ ಐಬೆಕ್ಸ್ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮೃತ ಯುವಕನನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದೆ. ಮನೆ ಮುಂದಿನ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿ : ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಈಗ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲು ನಿಮಗೆ ಸೆಪ್ಟೆಂಬರ್ 30 ರವರೆಗೆ ಸಮಯ ಸಿಗುತ್ತದೆ. ಆಧಾರ್ ಮತ್ತು ಪಡಿತರ ಚೀಟಿಯನ್ನು ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲು ನಿಮಗೆ ಸೆಪ್ಟೆಂಬರ್ 30 ರವರೆಗೆ ಸಮಯವಿದೆ. ಇಲ್ಲಿಯವರೆಗೆ ಕೊನೆಯ ದಿನಾಂಕ ಜೂನ್ 30 ಆಗಿತ್ತು. ಈ ಬಗ್ಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪಡಿತರ ಚೀಟಿಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ. ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ಪಡೆಯುವ ಖಾಸಗಿ ಲ್ಯಾಬ್ ಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ ಗುಂಡೂರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಡೆಂಗ್ಯೂ ಪರೀಕ್ಷೆಗಾಗಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ಖಾಸಗಿ ಲ್ಯಾಬ್’ಗಳು ಪಡೆಯುತ್ತಿರುವ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ಭಾಗದಲ್ಲಿರುವ ಖಾಸಗಿ ಸಂಸ್ಥೆ, ಆಸ್ಪತ್ರೆ ಹಾಗೂ ಪರೀಕ್ಷೆ ಕೇಂದ್ರಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ದರ ಪಡೆಯುತ್ತಿದ್ದ 22 ಲ್ಯಾಬ್’ಗಳಿಗೆ ನೋಟಿಸ್ ನೀಡಲಾಗಿದೆ ಎಂದರು. ಸರ್ಕಾರದ ದರ ನಿಗದಿ ಆದೇಶವನ್ನು ಎಲ್ಲಾ ಖಾಸಗಿ ಲ್ಯಾಬ್, ಆಸ್ಪತ್ರೆಗಳು ಕಡ್ಡಾಯವಾಗಿ ಪಾಲಿಸಬೇಕು. ಡೆಂಗಿ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ವಸೂಲಿ ಮಾಡುವುದು ಕಂಡುಬಂದಲ್ಲಿ ಅಂತಹ ಖಾಸಗಿ ಲ್ಯಾಬ್, ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.