Author: kannadanewsnow57

ಬೆಂಗಳೂರು : ಬೆಂಗಳೂರಿನ ಅಮೃತ್ ಹಳ್ಳಿಯ ಜೈನ್ ಶಾಲೆಯ ಬೆನ್ನಲ್ಲೇ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಬಳಿಯ ಖಾಸಗಿ ಶಾಲೆಯಾದ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇ ಮೇಲ್ ಮೂಲಕ ಶಾಲೆಯ ಆಡಳಿತ ಮಂಡಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೂಡಲೇ ಈಡಿಪೈ ಶಾಲಾ ಸಿಬ್ಬಂದಿಯನ್ನು ಹೊರ ಕಳಸಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಹುಸಿಬಾಂಬ್ ಕರೆಯಾದ್ರೂ ಶ್ವಾನದಳ ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದಕ್ಕೂ ಮುನ್ನ ಬೆಂಗಳೂರಿನ ಜೈನ್ ಹರಿಟೇಜ್ ಶಾಲೆಗೆ ದುಷ್ಕರ್ಮಿಗಳು ಮಧ್ಯರಾತ್ರಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾರೆ. ಹೀಗಾಗಿ ಶಾಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ. ಶಾಲೆಗೆ ಸ್ಥಳೀಯ ಪೊಲೀಸರು, ಡಾಗ್…

Read More

ಬೆಂಗಳೂರು : ರಾಸಲೀಲೆ ಪೆನ್ ಡ್ರೈವ್ ಪ್ರಕರಣದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದು, ಮಹಾನಾಯಕ ಆಯ್ತು, ಇದೀಗ ಪೆನ್ ಡ್ರೈವ್ ಪ್ರಕರಣದಲ್ಲಿ ದೊಡ್ಡ ತಿಮಿಂಗಿಲ ಇದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇದ್ದಾನೆ. ದೊಡ್ಡ ತಿಮಿಂಗಿಲ ಹಿಡಿದ್ರೆ ಎಲ್ಲಾ ಗೊತ್ತಾಗುತ್ತೆ. ಆ ದೊಡ್ಡ ತಿಮಿಂಗಿಲ ಸರ್ಕಾರದಲ್ಲೇ ಇದ್ದಾರೆ. ಎಲ್ಲಿ ಹಿಡಿತೀರಿ? ದೊಡ್ಡ ತಿಮಿಂಗಿಲದ ಆಡಿಯೋ ಬಿಟ್ಟಿದ್ದಕ್ಕೆ ಕೇಸ್ ಹಾಕಿದ್ರು. ದೇವರಾಜೇಗೌಡನ ಮೇಲೆ ಕೇಸ್ ಹಾಕಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ರಾಜ್ಯದಲ್ಲಿ ಹೀನಾಯ ಘಟನೆ ನಡೆದಿದೆ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದು ಎಂದು ಹೇಳಿದರು.

Read More

ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಕೆರಿಯರ್ಸ್ ಸೈಟ್ ಇಂಡೀಡ್ ತನ್ನ ಸಂಸ್ಥೆಯನ್ನು ಸರಳಗೊಳಿಸುವ ಉದ್ದೇಶದಿಂದ ಸುಮಾರು 1,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ಕಂಪನಿಯ ಸಿಇಒ ಕ್ರಿಸ್ ಹೈಮ್ಸ್ ಉದ್ಯೋಗ ಕಡಿತದ ಜವಾಬ್ದಾರಿಯನ್ನು ವಹಿಸಿಕೊಂಡರು ಮತ್ತು ಕಳೆದ ವರ್ಷದ ನೇಮಕಾತಿಯಲ್ಲಿ ಜಾಗತಿಕ ಮಂದಗತಿಯ ಪರಿಣಾಮವಾಗಿ ಮಾರಾಟವು ಕುಸಿದ ನಂತರ ಸಂಸ್ಥೆ ಇನ್ನೂ ಬೆಳವಣಿಗೆಗೆ ಸಿದ್ಧವಾಗಿಲ್ಲ ಎಂದು ಹೇಳಿದರು. ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ಮೆಮೋದಲ್ಲಿ, ಕಳೆದ ವರ್ಷ 2,200 ಕಾರ್ಮಿಕರ ಕಡಿತಕ್ಕಿಂತ ಭಿನ್ನವಾಗಿ, ಇತ್ತೀಚಿನ ಕಡಿತಗಳು ಯುಎಸ್ನಲ್ಲಿ ಹೆಚ್ಚು ಕೇಂದ್ರೀಕೃತವಾಗಿರುತ್ತವೆ ಎಂದು ಅವರು ಹೇಳಿದರು. ಕೆಲಸದಿಂದ ತೆಗೆದುಹಾಕುವುದರಿಂದ ಹೆಚ್ಚು ಪರಿಣಾಮ ಬೀರುವ ತಂಡಗಳು ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಮಾರುಕಟ್ಟೆಗೆ ಹೋಗುವ ತಂಡಗಳು ಎಂದು ಅವರು ಹೇಳಿದರು. ಈ ವಜಾಗಳ ಮೂಲಕ, ಕಂಪನಿಯು “ಅನೇಕ ಸಾಂಸ್ಥಿಕ ಪದರಗಳನ್ನು” ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. “ನಾವು ನಮ್ಮ ವ್ಯವಹಾರದ ಪ್ರತಿಯೊಂದು ಅಂಶವನ್ನು ಸರಳೀಕರಿಸಲು ಕೆಲಸ ಮಾಡುತ್ತಿದ್ದೇವೆ, ಆದರೆ ಅರ್ಥಪೂರ್ಣ ಬದಲಾವಣೆಯಿಲ್ಲದೆ, ನಾವು ಹೋಗಬೇಕಾದ ಸ್ಥಳಕ್ಕೆ ಹೋಗಲು…

Read More

ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು ವೋಟರ್ ಐಡಿ ಆಧಾರ್…

Read More

ನವದೆಹಲಿ: ಬಾಬಾ ರಾಮದೇವ್ ಮತ್ತು ಪತಂಜಲಿ ಆಯುರ್ವೇದ ವಿರುದ್ಧ ದಾಖಲಿಸಲಾದ ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಅವಲೋಕನಗಳ ವಿರುದ್ಧ ಸಂದರ್ಶನ ನೀಡಿದ್ದಕ್ಕಾಗಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಅಧ್ಯಕ್ಷ ಡಾ.ಆರ್.ವಿ.ಅಶೋಕನ್ ಅವರು ನೀಡಿದ ಬೇಷರತ್ ಕ್ಷಮೆಯಾಚನೆಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಐಎಂಎ ಅಧ್ಯಕ್ಷರ ಕ್ಷಮೆಯಾಚನೆಯು ಹೃತ್ಪೂರ್ವಕವಾಗಿ ಕಾಣುತ್ತಿಲ್ಲ ಎಂದು ಉನ್ನತ ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ನ್ಯಾಯಪೀಠವು ಡಾ.ಆರ್.ವಿ.ಅಶೋಕನ್ ಅವರ ಕ್ಷಮೆಯಾಚನೆಯನ್ನು ಸ್ವೀಕರಿಸಲು ನಿರಾಕರಿಸಿತು. ಅಧೀನದಲ್ಲಿರುವ ವಿಷಯದ ಬಗ್ಗೆ ಸಂದರ್ಶನದ ಬಗ್ಗೆ ಇನ್ನೊಂದು ಬದಿಯನ್ನು (ರಾಮ್ದೇವ್) ನ್ಯಾಯಾಲಯಕ್ಕೆ ಎಳೆದು ತಂದವರು ನೀವು. ಈಗ ನೀವು ಹೋಗಿ ಇಂತಹ ಹೇಳಿಕೆಗಳನ್ನು ನೀಡಿ” ಎಂದು ನ್ಯಾಯಪೀಠ ಐಎಂಎ ಅಧ್ಯಕ್ಷರಿಗೆ ಹೇಳಿದೆ. ಇದ್ದಕ್ಕಿದ್ದಂತೆ ಆ ಸಂದರ್ಶನ ಮಾಡಲು ಕಾರಣವೇನು ಎಂದು ನ್ಯಾಯಮೂರ್ತಿ ಅಮಾನುಲ್ಲಾ ಅವರು ಐಎಂಎ ಅಧ್ಯಕ್ಷರನ್ನು ಕೇಳಿದರು. “ನೀವು ಅದನ್ನು ಹೇಗೆ ಮಾಡಲು ಸಾಧ್ಯ?” “ನಾನು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ” ಎಂದು ಡಾ.ಅಶೋಕನ್…

Read More

ವಾರಣಾಸಿ : ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಧಾನಿ ಮೋದಿ ಗಂಗಾ ಆರತಿ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಣಾಸಿ ಲೋಕಸಭಾ ಕ್ಷೇತ್ರದ ನಾಮಪತ್ರ ಸಲ್ಲಿಕೆಯನ್ನು ದಶಾಶ್ವಮೇಧ ಘಾಟ್ ನಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿದರು, ಅಲ್ಲಿ ಅವರು ವೈದಿಕ ಮಂತ್ರಗಳ ಪಠಣದ ನಡುವೆ ಆರತಿ ಮಾಡಿದರು. ದೈನಂದಿನ ಸಂಜೆ ಗಂಗಾ ಆರತಿ ಸಮಾರಂಭಕ್ಕೆ ಹೆಸರುವಾಸಿಯಾದ ಅಪ್ರತಿಮ ಘಾಟ್ನಲ್ಲಿ ಪ್ರಧಾನಿ ಆರತಿ ಮಾಡಿದರು, ಅಲ್ಲಿ ಪುರೋಹಿತರು ದೀಪಗಳು ಮತ್ತು ಸಂಗೀತದ ರೋಮಾಂಚಕ ದೃಶ್ಯದ ನಡುವೆ ಆಚರಣೆಗಳು ಮತ್ತು ಪ್ರಾರ್ಥನೆಗಳನ್ನು ಮಾಡಿದ್ದಾರೆ. “ನಾನು ಭಾವಪರವಶನಾಗಿದ್ದೇನೆ ಮತ್ತು ಭಾವುಕನಾಗಿದ್ದೇನೆ! ನಿಮ್ಮ ಪ್ರೀತಿಯ ನೆರಳಿನಲ್ಲಿ 10 ವರ್ಷಗಳು ಹೇಗೆ ಕಳೆದವು ಎಂದು ನನಗೆ ತಿಳಿದಿರಲಿಲ್ಲ. ಗಂಗಾ ಮಾತೆ ನನ್ನನ್ನು ಕರೆದಿದ್ದಾಳೆ ಎಂದು ನಾನು ಹೇಳಿದ್ದೆ. ಆಜ್ ಮಾ ಗಂಗಾ ನೆ ಮುಜೆ ಗಾಡ್ ಲೆ ಲಿಯಾ ಹೈ (ಇಂದು…

Read More

ವಾರಣಾಸಿ : ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾ ಮಾತೆಗೆ ಪೂಜೆ ಸಲ್ಲಿಸಿ ವಾರಣಾಸಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. https://twitter.com/i/status/1790269293382516924 2019 ರ ಚುನಾವಣೆಯಲ್ಲಿ, ಪಿಎಂ ಮೋದಿ ವಾರಣಾಸಿಯನ್ನು 6,74,664 ಕ್ಕೂ ಹೆಚ್ಚು ಮತಗಳನ್ನು ಮತ್ತು ಶೇಕಡಾ 63.6 ರಷ್ಟು ಮತಗಳನ್ನು ಪಡೆಯುವ ಮೂಲಕ ಗಮನಾರ್ಹ ಅಂತರದಿಂದ ಗೆದ್ದರು. 2014ರಲ್ಲಿ ಮೋದಿ ಅವರು ವಾರಣಾಸಿ ಜೊತೆಗೆ ಗುಜರಾತ್ ನ ವಡೋದರಾದಿಂದ ಸ್ಪರ್ಧಿಸಿದ್ದರು. ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು? ವಾರಣಾಸಿಯಲ್ಲಿ ಮೋದಿ ವಿರುದ್ಧ ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಸ್ಪರ್ಧಿಸುತ್ತಿರುವುದು ಇದು ಮೂರನೇ ಬಾರಿ. ವಾರಣಾಸಿಯಲ್ಲಿ ಜೂನ್ 1…

Read More

ಬೆಂಗಳೂರು: ಸರ್ಕಾರಿ ಸೇವೆಗೆ ಸೇರ್ಪಡೆಗೊಂಡಿರುವ ಎಲ್ಲಾ ಅಧಿಕಾರಿ/ನೌಕರರ ಸೇವಾ ವಹಿಯನ್ನು Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸುವ ಕುರಿತು ಆದೇಶವನ್ನು ಹೊರಡಿಸಿದೆ. 2021-22ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧ ಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ. ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ ಹಾಗೂ ಹೆಚ್‌ಆರ್‌ಎಂಎಸ್-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿಯು ಲಭ್ಯವಿದ್ದು, ಸದರಿ ಮಾಹಿತಿಯನ್ನು ಹೆಚ್‌ಆರ್‌ಎಂಎಸ್-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ ಹೆಚ್‌ಆರ್‌ಎಂಎಸ್-1 ತಂತ್ರಾಂಶದಲ್ಲಿ…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ಇಂದು ಸಂಜೆ ಜೈಲಿನಿಂದ ಬಿಡುಗಡೆಗೆ ಆದೇಶ ಹೊರಡಿಸಿದೆ. ಇಂದು ಕೋರ್ಟ್ ನಲ್ಲಿ ನ್ಯಾಯಾಧೀಶರಿಂದ ಬಿಡುಗಡೆ ಆದೇಶ ಬಂದಿದ್ದು, ಇಂದು ಸಂಜೆ ಬಳಿಕ ಹೆಚ್ ಡಿ ರೇವಣ್ಣಗೆ ಬಿಡುಗಡೆ ಭಾಗ್ಯ ದೊರೆಯಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

Read More

ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ ಅಗರಬತ್ತಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಗರಬತ್ತಿ ಕಾರ್ಖಾನೆಯ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ.

Read More