Author: kannadanewsnow57

ಧಾರವಾಡ : ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಮತ್ತು ದೇವಲಿಂಗಿಕೊಪ್ಪ ಗ್ರಾಮಪಂಚಾಯತಿಗಳಲ್ಲಿ ಹಾಗೂ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ-ಒನ್ ಕೇಂದ್ರದ ಫ್ರಾಂಚೈಸಿ ಸ್ಥಾಪಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.  ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಳಿ ಇರುವ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪಬ್ ಗೆ ಸಂಬಂಧಪಟ್ಟಂತೆ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆಯಲ್ಲ ತೊಡಗಿದ್ದಾರ್ಎ. ಇದು ಬೆಂಗಳೂರಿನ ಅತಿ ದುಬಾರಿ ಪಬ್ ಆಗಿದೆ.

Read More

ಧಾರವಾಡ: ಮಹಿಳೆಯೊಬ್ಬರ ಜೊತೆಗೆ ಸ್ವಾಮೀಜಿಯೊಬ್ಬರು ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಧಾರವಾಡ ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿ ಬೆತ್ತಲೆಯಾಗಿ ಮಹಿಳೆಯಿಂದ ಮಸಾಜ್ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ. ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಸುಮಾರು 5 ಜನರ ಗುಂಪು ಈ ವಿಡಿಯೋವನ್ನಿಟ್ಟುಕೊಂಡು ಸ್ವಾಮೀಜಿಯನ್ನ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿತ್ತು. ಗ್ರಾಮದ ವ್ಯಕ್ತಿಯೊಬ್ಬರ ಸಮ್ಮುಖದಲ್ಲಿ 10 ಲಕ್ಷಕ್ಕೆ ಡೀಲ್ ಓಕೆ ಆಗಿತ್ತು. ಬಳಿಕ ಸ್ವಾಮೀಜಿ ವಿಡಿಯೋ ಡಿಲೀಟ್‌ ಮಾಡುವಂತೆ ಹೇಳಿ ಮಠಕ್ಕೆ ಕರೆಸಿಕೊಂಡು 7 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಬಾಕಿ 3 ಲಕ್ಷ ಹಣ ಬಂದಿಲ್ಲ ಅಂತ ವಿಡಿಯೋ ವೈರಲ್‌ ಮಾಡಿದ್ದಾರೆ ಎಂದು ಹೇಳಲಾಗಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಗೃಹಲಕ್ಷ್ಮೀ ಯೋಜನೆ ಹಣ ಸಮರ್ಪಕವಾಗಿ ಮಹಿಳೆಯರ ಖಾತೆಗೆ ಬರುತ್ತಿಲ್ಲ. ಫೆಬ್ರವರಿ, ಮಾರ್ಚ್ ತಿಂಗಳ ಹಣ ಇನ್ನೂ ಸಂದಾಯವಾಗಿಲ್ಲ. ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರಿಗೆ ಮೋಸವಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಸೇರಿ ಇನ್ನು ಮುಂದೆ ಖಾಸಗಿ ಆಸ್ಪತ್ರೆ ಎಂಪಾನೆಲ್ (ನೋಂದಣಿ) ಮಾಡುವಾಗ ಅಥವಾ ನವೀಕರಿಸುವಾಗ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ (ಕೆಪಿಎಂಇ)ಯಿಂದ ಮಾನ್ಯತೆ ಹೊಂದಿರುವ ಪ್ರಮಾಣಪತ್ರ ಪರಿಗಣಿಸುವುದು ಕಡ್ಡಾಯವೆಂದು ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಕ್ರಮ ಸಂಖ್ಯೆ (1) ರಲ್ಲಿ ಓದಲಾದ ಆದೇಶದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ಯೋಜನೆಯಾದ “ಆರೋಗ್ಯ ಕರ್ನಾಟಕ ಮತ್ತು ಭಾರತ ಸರ್ಕಾರದ ಆರೋಗ್ಯ ಯೋಜನೆ “ಆಯುಷ್ಮಾನ್ ಭಾರತ್’ ಅನು ಸಂಯೋಜಿಸುವ ಮೂಲಕ ಕರ್ನಾಟಕದ ಎಲ್ಲಾ ನಿವಾಸಿಗಳಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಆಯುಷ್ಕಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಒದಗಿಸಲು ಅನುಮೋದನೆಯನ್ನು ನೀಡಿ ಆದೇಶಿಸಲಾಗಿದೆ. ಮುಂದುವರೆದು, ಇದೇ ಆದೇಶದ ಅನುಬಂಧ-6 ರಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳನ್ನು ಎಂಪ್ಯಾನಲ್ ಮಾಡಲು ಮಾನದಂಡಗಳನ್ನು ತಿಳಿಸಲಾಗಿರುತ್ತದೆ. ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಮಾರ್ಗಸೂಚಿಗಳಲ್ಲಿ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳನ್ನು ಎಂಪ್ಯಾನಲ್…

Read More

ಬೆಂಗಳೂರು : ಮಹಿಳೆಯೊಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ಹಿಂದೆ ಬಿದ್ದು, ಪ್ರೀತಿಸುವಂತೆ ಕಾಟ ಕೊಡುತ್ತಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತೀಶ್ ಅವರಿಗೆ ಮಹಿಳೆಯೊಬ್ಬರು ಪ್ರೀತಿಸುವಂತೆ ನಿರಂತರವಾಗಿ ಇನ್ಸ್ಪೆಕ್ಟರ್ ಹಿಂದೆ ಬಿದ್ದಿದ್ದಳು ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ. ಚಿನ್ನಿ ಐ ಲವ್ ಯು, ಯು ಮಸ್ಟ್ ಲವ್ ಮಿ ಎಂದು ಸಾವಿರಾರು ಮೆಸೇಜ್ ಗಳನ್ನು ಕಳುಹಿಸಿತ್ತಾರಂತೆ. ಮಹಿಳೆ ಬರ್ರೋಬ್ಬರಿ 11 ಮೊಬೈಲ್ ನಂಬರ್ ಗಳಿಂದ ಇನ್ಸ್ ಪೆಕ್ಟರ್ ಗೆ ಮೆಸೇಜ್ ಕಳುಹಿಸಿ ಕಾಟ ಕೊಡುತ್ತಿದ್ದು, ಇದರಿಂದ ಬೇಸತ್ತ ಇನ್ಸ್ ಪೆಕ್ಟರ್ 11 ನಂಬರ್ ಗಳನ್ನು ಬ್ಲಾಕ್ ಮಾಡಿದ್ದಾರೆ. ಮಹಿಳೆ ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದಾಳೆ. ಮೋಟಮ್ಮ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಇರುವ ಫೋಟೋಗಳನ್ನು ಕಳುಹಿಸಿ, ಪ್ರೀತಿಸಲೇಬೇಕು ಎಂದು ಇನ್ಸ್ಪೆಕ್ಟರ್ ಮೇಲೆ ಒತ್ತಡ ಹೇರಿದ್ದಾಳೆ ಎಂದು…

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದಿನಿಂದ ಟ್ರಯಲ್ ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ ಇಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ತಾಯಿ ರತ್ನಪ್ರಭಾ ಸಾಕ್ಷಿ ನುಡಿಯಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಇಂದು ಕಾಶಿನಾಥಯ್ಯ ಹಾಗೂ ತಾಯಿ ರತ್ನಪ್ರಭಾ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದು, ಘಟನಾವಳಿಯ ಬಗ್ಗೆ ಸಂಪೂರ್ಣ ಹೇಳಿಕೆಯನ್ನು ನುಡಿಯಲಿದ್ದಾರೆ. ರೇಣುಕಾಸ್ವಾಮಿ ಯಾವಾಗ ಮನೆಯಿಂದ ಹೊರಟ, ಮಧ್ಯಾಹ್ನ ಊಟಕ್ಕೆ ಬರೋದಿಲ್ಲ ಅಂದಿದ್ದು, ಬಳಿಕ ಸಾವಿನ ವಿಚಾರ ತಿಳಿದಿದ್ದು, ಈ ಎಲ್ಲಾ ಮಾಹಿತಿಯನ್ನು ನ್ಯಾಯಾಲಯದ ಮುಂದೆ ಹೇಳಲಿದ್ದಾರೆ. ನಟ ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನುಡಿಯಲು ಕೊಲೆಯಾದ ರೇಣುಕಾಸ್ವಾಮಿಯ ಪಾಲಕರಿಗೆ ಸಮನ್ಸ್‌ ಜಾರಿಗೊಳಿಸಿರುವ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ, ಡಿಸೆಂಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು. ಪ್ರಕರಣ ಸಂಬಂಧ ಸಾಕ್ಷ್ಯ ನುಡಿಯಲು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಮತ್ತು ತಾಯಿ ರತ್ನಮ್ಮಗೆ (ಸಾಕ್ಷಿ ಸಂಖ್ಯೆ 7 ಹಾಗೂ 8) ಸಮನ್ಸ್‌ ಜಾರಿಗೊಳಿಸಬೇಕು ಎಂದು ಕೋರಿ…

Read More

ಧಾರವಾಡ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ನಗರದ ಶಿವಗಿರಿಯಲ್ಲಿ ನಡೆದಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲೆಂದು ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘೋರ ಧಾರವಾಡದ ತಪೋವನ ಬಳಿ ನಡೆದಿದೆ. ಬಳ್ಳಾರಿ ಮೂಲಕ ಪಲ್ಲವಿ (22) ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪರ್ಧಾತ್ಮಕ ಪರೀಕ್ಷೆ ಸಿದ್ಧತೆಯಲ್ಲಿದ್ದ ಯುವತಿ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧಾರವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More

ನವದೆಹಲಿ : ಹಿಜಾಬ್ ವಿಷಯಕ್ಕೆ ಸಂಬಂಧಿಸಿದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಪಾಕಿಸ್ತಾನದ ಕುಖ್ಯಾತ ಭಯೋತ್ಪಾದಕ ಶಹಜಾದ್ ಭಟ್ಟಿ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಪರಿಣಾಮಗಳು ಭೀಕರವಾಗಿರುತ್ತವೆ ಎಂದು ಒತ್ತಾಯಿಸಿದ್ದಾನೆ. ಬಿಹಾರದಲ್ಲಿ ಉನ್ನತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮುಸ್ಲಿಂ ಮಹಿಳೆಯನ್ನು ಈ ರೀತಿ ನಡೆಸಿಕೊಂಡರು ಎಂದು ಭಟ್ಟಿ ಹೇಳಿದ್ದಾನೆ. ಆ ವ್ಯಕ್ತಿಗೆ ಇನ್ನೂ ಸಮಯವಿದೆ ಅವನು ಅವಳಲ್ಲಿ ಕ್ಷಮೆಯಾಚಿಸಬೇಕು. ಇಂದು ಅವನು ಕ್ಷಮೆಯಾಚಿಸದಿದ್ದರೆ, ಜವಾಬ್ದಾರಿಯುತ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು. ಎಚ್ಚರಿಕೆ ನೀಡಲಾಗಿಲ್ಲ ಎಂದು ನಂತರ ಹೇಳಬೇಡಿ. ಕುಖ್ಯಾತ ಪಾಕಿಸ್ತಾನಿ ದರೋಡೆಕೋರನಿಂದ ಭಯೋತ್ಪಾದಕನಾಗಿ ಬದಲಾದ ಬೆದರಿಕೆಯ ನಂತರ, ಬಿಹಾರ ಪೊಲೀಸ್ ಮತ್ತು ಕೇಂದ್ರ ಸಂಸ್ಥೆಗಳ ತಂಡಗಳು ಸಕ್ರಿಯವಾಗಿವೆ ಮತ್ತು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿವೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳಾ ವೈದ್ಯೆ ನುಸ್ರತ್ ಪ್ರವೀಣ್ ಅವರಿಗೆ ನೇಮಕಾತಿ ಪತ್ರ ನೀಡುವಾಗ ಅವರ ಹಿಜಾಬ್ ತೆಗೆದು ನೋಡುತ್ತಿರುವುದನ್ನು…

Read More

ಹೃದಯಾಘಾತದ ಹಲವು ಲಕ್ಷಣಗಳು ಬಹಳ ಸಾಮಾನ್ಯ. ಜನರು ಅವುಗಳನ್ನು ಹಗುರವಾಗಿ ಪರಿಗಣಿಸುತ್ತಾರೆ. ಈ ಚಿಹ್ನೆಗಳು ವಾರಗಳು ಅಥವಾ ತಿಂಗಳುಗಳ ಮೊದಲೇ ಕಾಣಿಸಿಕೊಳ್ಳಬಹುದು. ಅಂತಹ ಲಕ್ಷಣಗಳ ಮೇಲೆ ನಿಗಾ ಇರಿಸಿ ಸರಿಯಾದ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ತಜ್ಞರು ಸೂಚಿಸುತ್ತಾರೆ. ಆಯಾಸ, ಅನಿಲ, ಒತ್ತಡ ಅಥವಾ ವೃದ್ಧಾಪ್ಯದ ಕಾರಣದಿಂದಾಗಿ ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಲಾಗುತ್ತದೆ. ಈ ಅಜಾಗರೂಕತೆಯು ನಂತರ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹೃದಯ ಸಮಸ್ಯೆಗಳು ಇದ್ದಕ್ಕಿದ್ದಂತೆ ಬೆಳೆಯುವುದಿಲ್ಲ, ಆದರೆ ಕ್ರಮೇಣ ಬೆಳೆಯುತ್ತವೆ ಎಂಬುದನ್ನು ನೆನಪಿಡಿ. ಹೃದಯ ಅಪಧಮನಿಗಳಲ್ಲಿ ಅಡಚಣೆಗಳು ಬೆಳೆಯಲು ಪ್ರಾರಂಭಿಸಿದಾಗ ಅಥವಾ ಹೃದಯ ಸ್ನಾಯುವಿಗೆ ಸಾಕಷ್ಟು ಆಮ್ಲಜನಕ ಸಿಗದಿದ್ದಾಗ, ದೇಹವು ವಿವಿಧ ರೀತಿಯಲ್ಲಿ ಎಚ್ಚರಿಸುತ್ತದೆ. ಈ ಆರಂಭಿಕ ಚಿಹ್ನೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ಪ್ರಾರಂಭಿಸಿದರೆ, ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಬಹುದು ಮಾತ್ರವಲ್ಲದೆ ಜೀವಗಳನ್ನು ಸಹ ಉಳಿಸಬಹುದು. ಹಿರಿಯ ಹೃದ್ರೋಗ ತಜ್ಞ ಡಾ. ಅಲೋಕ್ ಚೋಪ್ರಾ ಅವರ ಪ್ರಕಾರ, ಹಠಾತ್ ಹೃದಯಾಘಾತದ ಮೊದಲು ಕಾಣಿಸಿಕೊಳ್ಳುವ ಕೆಲವು ಮೌನ, ಸೂಕ್ಷ್ಮ ಎಚ್ಚರಿಕೆ ಚಿಹ್ನೆಗಳು…

Read More