Author: kannadanewsnow57

ಬೆಂಗಳೂರು : ಬರದಿಂದ ತತ್ತರಿಸಿರುವ ರೈತರಿಗೆ ಇದೀಗ ಬ್ಯಾಂಕುಗಳು ಶಾಕ್ ನೀಡಿದ್ದು, ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿವೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನು ರೈತರ ಖಾತೆಗೆ ಜಮೆ ಮಾಡಿದರೆ, ಆ ಹಣ ಇದೀಗ ಬ್ಯಾಂಕ್ ಸಾಲಕ್ಕೆ ಹೊಂದಿಸಿಕೊಳ್ಳಲಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರಿಗೆ ಸರ್ಕಾರ ಬರ ಪರಿಹಾರ ಜಮೆ ಮಾಡಿದೆ. ಆದರೆ ಕೆಲ ಬ್ಯಾಂಕ್‌ಗಳು ರೈತರ ಬೆಳೆಸಾಲಕ್ಕೆ ಹೊಂದಿಸಿಕೊಳ್ಳುತ್ತಿದ್ದಾರೆ. ಇದು ರೈತರಿಗೆ ತಿಳಿಯುತ್ತಿದ್ದಂತೆ ಬ್ಯಾಂಕಿಗೆ ತೆರಳಿದರೆ ಬೆಳೆ ಸಾಲಕ್ಕೆ ಹೊಂದಿಸಿಕೊಳ್ಳಲಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ಪರಿಹಾರ ಬಿಡುಗಡೆ ಮಾಡಿದೆ. ಪ್ರತಿ ಹೆಕ್ಟೇರ್ ಮಳೆಯಾಶ್ರಿತ ಒಣ ಬೇಸಾಯಕ್ಕೆ 8,500 ರೂ., ನೀರಾವರಿಗೆ 17,000 ರೂ., ಬಹುವಾರ್ಷಿಕ/ ತೋಟಗಾರಿಕೆ ಬೆಳೆಗೆ 22,500 ರೂ.ವರೆಗೆ ಪರಿಹಾರವನ್ನು ಸರ್ಕಾರ ನಿಗದಿಪಡಿಸಲಾಗಿದೆ. ಬೆಳೆ ಪರಿಹಾರದ ಹಣವನ್ನು ಯಾವುದೇ ಕಾರಣಕ್ಕೂ ಹೊಂದಾಣಿಕೆ ಮಾಡಿಕೊಳ್ಳು ವಂತಿಲ್ಲ. ಒಂದು ವೇಳೆ ಮಾಡಿಕೊಂಡರೆ ಬ್ಯಾಂಕ್ ಅಧಿಕಾರಿಗಳೇ ಹೊಣೆಗಾರರು ಎಂದು ಎಚ್ಚರಿಕೆ…

Read More

ಬೆಂಗಳೂರು : ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶಾಕ್ ನೀಡಿದ್ದು, ಶಿಕ್ಷಕರ 15 ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ಸೂಚನೆ ನೀಡಲಾಗಿದೆ. ಜೂನ್-ಜುಲೈನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆ ಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ. ಮಂಗಳವಾರ ಸಂಜೆಯೇ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆಯಾ ವಿಷಯದ ಶಿಕ್ಷಕರುಗಳೇ ಶಾಲೆಗಳಿಗೆ ಹಾಜರಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ 1ರಲ್ಲಿ ಫೇಲಾಗಿರುವ, ಫಲಿತಾಂಶ ಇನ್ನಷ್ಟು ಉತ್ತಮ ಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಬೇಕೆಂದು ಸೂಚಿಸಲಾಗಿದೆ.

Read More

ಬೆಂಗಳೂರು: ಕೆಇಎಯಿಂದ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈಗ ಉದ್ಯೋಗಾಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸೋದಕ್ಕೆ ಮೇ.15ರ ಇಂದು ಕೊನೆಯ ದಿನವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಭ್ಯರ್ಥಿಗಳು ಒಂದು ಜಿಲ್ಲೆಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿದ್ದು, ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಎರಡನೇ ಪಿ.ಯು.ಸಿ ಅಥವಾ ತತ್ಸಮಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಒಟ್ಟು 1000 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯು ಎರಡನೇ ಪಿಯುಸಿ ಅಥವಾ ತತ್ಸಮಾನತೆಯ ಶೈಕ್ಷಣಿಕ ವಿದ್ಯಾರ್ಹತೆಯನ್ನು ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ 21,400-42,000 ನಿಗದಿಯಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇಲಾಖೆಯ…

Read More

ನವದೆಹಲಿ: ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಅವರು ಮಂಗಳವಾರ ಲೋಕಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು,  ಡಿಯ ಜನರ ಪ್ರೀತಿಯೇ ತನ್ನನ್ನು ತನ್ನ ತವರು ರಾಜ್ಯಕ್ಕೆ ಮರಳಿ ಕರೆತಂದಿದೆ, ಚಲನಚಿತ್ರದಲ್ಲಿ ಮಾಡಿದಂತೆಯೇ ರಾಜಕೀಯದಲ್ಲಿಯೂ ತನ್ನದೇ ಆದ ಛಾಪು ಮೂಡಿಸಲು ಆಶಿಸುತ್ತೇನೆ .ಮಂಡಿಯ ಜನರು ಮತ್ತು ನನ್ನ ಮೇಲಿನ ಪ್ರೀತಿ ನನ್ನನ್ನು ಇಲ್ಲಿಗೆ ಕರೆತಂದಿದೆ. ನಮ್ಮ ದೇಶದಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಛಾಪು ಮೂಡಿಸುತ್ತಿದ್ದಾರೆ ಆದರೆ ಕೆಲವು ವರ್ಷಗಳ ಹಿಂದೆ ಮಂಡಿಯಲ್ಲಿ ಭ್ರೂಣ ಹತ್ಯೆಯ ಘಟನೆಗಳು ಹೆಚ್ಚಾಗಿದ್ದವು ಎಂದರು. ಇಂದು, ಮಂಡಿಯ ಮಹಿಳೆಯರು ಸೈನ್ಯ, ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿದ್ದಾರೆ. ಕಾಂಗ್ರೆಸ್ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷದ ರಾಷ್ಟ್ರ ವಿರೋಧಿ ಮನಸ್ಥಿತಿ ದೇಶಕ್ಕೆ ಕಳವಳಕಾರಿಯಾಗಿದೆ ಎಂದು ಕಂಗನಾ ಹೇಳಿದರು.

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇಂದು ಕೋರ್ಟ್ ನಲ್ಲಿ ನ್ಯಾಯಾಧೀಶರಿಂದ ಬಿಡುಗಡೆ ಆದೇಶ ಬಂದಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದ ಹೆಚ್ ಡಿ ರೇವಣ್ಣಗೆ ಬಿಡುಗಡೆ ಭಾಗ್ಯ ದೊರೆತಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

Read More

ಬೆಂಗಳೂರು : ಬೆಂಗಳೂರಿನ ಅಮೃತ್ ಹಳ್ಳಿಯ ಜೈನ್ ಶಾಲೆಯ ಬೆನ್ನಲ್ಲೇ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಬಳಿಯ ಖಾಸಗಿ ಶಾಲೆಯಾದ ಈಡಿಫೈ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇ ಮೇಲ್ ಮೂಲಕ ಶಾಲೆಯ ಆಡಳಿತ ಮಂಡಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೂಡಲೇ ಈಡಿಪೈ ಶಾಲಾ ಸಿಬ್ಬಂದಿಯನ್ನು ಹೊರ ಕಳಸಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಹುಸಿಬಾಂಬ್ ಕರೆಯಾದ್ರೂ ಶ್ವಾನದಳ ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದಕ್ಕೂ ಮುನ್ನ ಬೆಂಗಳೂರಿನ ಜೈನ್ ಹರಿಟೇಜ್ ಶಾಲೆಗೆ ದುಷ್ಕರ್ಮಿಗಳು ಮಧ್ಯರಾತ್ರಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದಾರೆ. ಹೀಗಾಗಿ ಶಾಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾತ್ರಿ ಸುಮಾರು 12.20ರ ಸುಮಾರಿಗೆ ಬಾಂಬ್ ಬೆದರಿಕೆಯ ಮೇಲ್ ರವಾನೆಯಾಗಿದೆ. ಶಾಲೆಗೆ ಸ್ಥಳೀಯ ಪೊಲೀಸರು, ಡಾಗ್…

Read More

ಬೆಂಗಳೂರು : ರಾಸಲೀಲೆ ಪೆನ್ ಡ್ರೈವ್ ಪ್ರಕರಣದ ಕುರಿತಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದು, ಮಹಾನಾಯಕ ಆಯ್ತು, ಇದೀಗ ಪೆನ್ ಡ್ರೈವ್ ಪ್ರಕರಣದಲ್ಲಿ ದೊಡ್ಡ ತಿಮಿಂಗಿಲ ಇದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇದ್ದಾನೆ. ದೊಡ್ಡ ತಿಮಿಂಗಿಲ ಹಿಡಿದ್ರೆ ಎಲ್ಲಾ ಗೊತ್ತಾಗುತ್ತೆ. ಆ ದೊಡ್ಡ ತಿಮಿಂಗಿಲ ಸರ್ಕಾರದಲ್ಲೇ ಇದ್ದಾರೆ. ಎಲ್ಲಿ ಹಿಡಿತೀರಿ? ದೊಡ್ಡ ತಿಮಿಂಗಿಲದ ಆಡಿಯೋ ಬಿಟ್ಟಿದ್ದಕ್ಕೆ ಕೇಸ್ ಹಾಕಿದ್ರು. ದೇವರಾಜೇಗೌಡನ ಮೇಲೆ ಕೇಸ್ ಹಾಕಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಬೇಡ. ನಾನು ಸಂತೋಷ ಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ರಾಜ್ಯದಲ್ಲಿ ಹೀನಾಯ ಘಟನೆ ನಡೆದಿದೆ. ರಾಜ್ಯವೇ ತಲೆ ತಗ್ಗಿಸುವ ಘಟನೆ ಇದು ಎಂದು ಹೇಳಿದರು.

Read More

ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಕೆರಿಯರ್ಸ್ ಸೈಟ್ ಇಂಡೀಡ್ ತನ್ನ ಸಂಸ್ಥೆಯನ್ನು ಸರಳಗೊಳಿಸುವ ಉದ್ದೇಶದಿಂದ ಸುಮಾರು 1,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ಕಂಪನಿಯ ಸಿಇಒ ಕ್ರಿಸ್ ಹೈಮ್ಸ್ ಉದ್ಯೋಗ ಕಡಿತದ ಜವಾಬ್ದಾರಿಯನ್ನು ವಹಿಸಿಕೊಂಡರು ಮತ್ತು ಕಳೆದ ವರ್ಷದ ನೇಮಕಾತಿಯಲ್ಲಿ ಜಾಗತಿಕ ಮಂದಗತಿಯ ಪರಿಣಾಮವಾಗಿ ಮಾರಾಟವು ಕುಸಿದ ನಂತರ ಸಂಸ್ಥೆ ಇನ್ನೂ ಬೆಳವಣಿಗೆಗೆ ಸಿದ್ಧವಾಗಿಲ್ಲ ಎಂದು ಹೇಳಿದರು. ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ಮೆಮೋದಲ್ಲಿ, ಕಳೆದ ವರ್ಷ 2,200 ಕಾರ್ಮಿಕರ ಕಡಿತಕ್ಕಿಂತ ಭಿನ್ನವಾಗಿ, ಇತ್ತೀಚಿನ ಕಡಿತಗಳು ಯುಎಸ್ನಲ್ಲಿ ಹೆಚ್ಚು ಕೇಂದ್ರೀಕೃತವಾಗಿರುತ್ತವೆ ಎಂದು ಅವರು ಹೇಳಿದರು. ಕೆಲಸದಿಂದ ತೆಗೆದುಹಾಕುವುದರಿಂದ ಹೆಚ್ಚು ಪರಿಣಾಮ ಬೀರುವ ತಂಡಗಳು ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಮಾರುಕಟ್ಟೆಗೆ ಹೋಗುವ ತಂಡಗಳು ಎಂದು ಅವರು ಹೇಳಿದರು. ಈ ವಜಾಗಳ ಮೂಲಕ, ಕಂಪನಿಯು “ಅನೇಕ ಸಾಂಸ್ಥಿಕ ಪದರಗಳನ್ನು” ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. “ನಾವು ನಮ್ಮ ವ್ಯವಹಾರದ ಪ್ರತಿಯೊಂದು ಅಂಶವನ್ನು ಸರಳೀಕರಿಸಲು ಕೆಲಸ ಮಾಡುತ್ತಿದ್ದೇವೆ, ಆದರೆ ಅರ್ಥಪೂರ್ಣ ಬದಲಾವಣೆಯಿಲ್ಲದೆ, ನಾವು ಹೋಗಬೇಕಾದ ಸ್ಥಳಕ್ಕೆ ಹೋಗಲು…

Read More

ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದ್ದು, ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಸಾಧ್ಯತೆ ಇದೆ. ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು ವೋಟರ್ ಐಡಿ ಆಧಾರ್…

Read More

ನವದೆಹಲಿ: ಬಾಬಾ ರಾಮದೇವ್ ಮತ್ತು ಪತಂಜಲಿ ಆಯುರ್ವೇದ ವಿರುದ್ಧ ದಾಖಲಿಸಲಾದ ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಅವಲೋಕನಗಳ ವಿರುದ್ಧ ಸಂದರ್ಶನ ನೀಡಿದ್ದಕ್ಕಾಗಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಅಧ್ಯಕ್ಷ ಡಾ.ಆರ್.ವಿ.ಅಶೋಕನ್ ಅವರು ನೀಡಿದ ಬೇಷರತ್ ಕ್ಷಮೆಯಾಚನೆಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಐಎಂಎ ಅಧ್ಯಕ್ಷರ ಕ್ಷಮೆಯಾಚನೆಯು ಹೃತ್ಪೂರ್ವಕವಾಗಿ ಕಾಣುತ್ತಿಲ್ಲ ಎಂದು ಉನ್ನತ ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ನ್ಯಾಯಪೀಠವು ಡಾ.ಆರ್.ವಿ.ಅಶೋಕನ್ ಅವರ ಕ್ಷಮೆಯಾಚನೆಯನ್ನು ಸ್ವೀಕರಿಸಲು ನಿರಾಕರಿಸಿತು. ಅಧೀನದಲ್ಲಿರುವ ವಿಷಯದ ಬಗ್ಗೆ ಸಂದರ್ಶನದ ಬಗ್ಗೆ ಇನ್ನೊಂದು ಬದಿಯನ್ನು (ರಾಮ್ದೇವ್) ನ್ಯಾಯಾಲಯಕ್ಕೆ ಎಳೆದು ತಂದವರು ನೀವು. ಈಗ ನೀವು ಹೋಗಿ ಇಂತಹ ಹೇಳಿಕೆಗಳನ್ನು ನೀಡಿ” ಎಂದು ನ್ಯಾಯಪೀಠ ಐಎಂಎ ಅಧ್ಯಕ್ಷರಿಗೆ ಹೇಳಿದೆ. ಇದ್ದಕ್ಕಿದ್ದಂತೆ ಆ ಸಂದರ್ಶನ ಮಾಡಲು ಕಾರಣವೇನು ಎಂದು ನ್ಯಾಯಮೂರ್ತಿ ಅಮಾನುಲ್ಲಾ ಅವರು ಐಎಂಎ ಅಧ್ಯಕ್ಷರನ್ನು ಕೇಳಿದರು. “ನೀವು ಅದನ್ನು ಹೇಗೆ ಮಾಡಲು ಸಾಧ್ಯ?” “ನಾನು ಬೇಷರತ್ತಾಗಿ ಕ್ಷಮೆಯಾಚಿಸುತ್ತೇನೆ” ಎಂದು ಡಾ.ಅಶೋಕನ್…

Read More