Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಮಾಸಾಶನ ನೀಡುವ “ಮನಸ್ವಿನಿ” ಯೋಜನೆಯನ್ನು ಅನುಷ್ಟಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನೊದಗಿಸಿ, ಸಹಾಯ ನೀಡುವ ಉದ್ದೇಶದಿಂದ, ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ‘ಮಹಿಳೆಯರಿಗೆ ರೂ.500ಗಳ ಮಾಸಾಶನ… ನೀಡಲು “ಮನಸ್ವಿನಿ” ಯೋಜನೆಯನ್ನು ಸರ್ಕಾರ 2013-14 ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿದೆ. 65ಕ್ಕಿಂತ ಹೆಚ್ಚು ವಯಸ್ಸಾದ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರು ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಯಡಿ ಪ್ರಯೋಜನ ಪಡೆಯಬಹುದಾಗಿರುತ್ತದೆ. ಈ ಹಿನ್ನಲೆಯಲ್ಲಿ ಕೆಳಕಂಡ ಆದೇಶ. ಸರ್ಕಾರದ ಆದೇಶ ಸಂಖ್ಯೆ: ಆರ್ಡಿ 94 ಡಿಎಸ್ಪಿ 2013, ಬೆಂಗಳೂರು. 2:01/08/2013. ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64. ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ…
ಬೆಂಗಳೂರು : ರಾಜ್ಯಾದ್ಯಂತ ತಾಪಮಾನ ಕುಸಿತದಿಂದ ಚಳಿ ಹೆಚ್ಚಳವಾಗಿದ್ದು, ಮೈ ನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಚಳಿ ಹಿನ್ನೆಲೆಯಲ್ಲಿ ಶಾಲಾ ಅವಧಿಯನ್ನು ಚಳಿಗಾಲ ಮುಗಿಯುವವರೆಗೂ ಪ್ರತಿ ದಿನ ಬೆಳಗ್ಗೆ 9.30 ಕ್ಕೆ ತರಗತಿಗಳನ್ನು ಆರಂಭಿಸಬೇಕು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಮನವಿ ಮಾಡಿದ್ದಾರೆ. ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಶೀತಗಾಳಿ ಕಾಣಿಸಿಕೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಎಲ್ಕೆಜಿಯಿಂದ ಪಿಯುಸಿ ವರೆಗೆ ಶಾಲಾ ಅವಧಿಯನ್ನು ಚಳಿಗಾಲ ಮುಗಿಯುವವರೆಗೂ ಪ್ರತಿ ದಿನ ಬೆಳಗ್ಗೆ 9.30 ಕ್ಕೆ ತರಗತಿಗಳನ್ನು ಆರಂಭಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರ ಉತ್ತರ. ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೊಲೀಸ್ ಅಧೀಕ್ಷಕರು / ಪೊಲೀಸ್ ಉಪ ಅಧೀಕ್ಷಕರು ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರ ನೇತೃತ್ವದಲ್ಲಿ ರಚಿಸಲಾಗಿದೆ ಹಾಗೂ ಪ್ರತಿ ಜಿಲ್ಲಾಮಟ್ಟದಲ್ಲಿ ಜಾಗೃತದಳ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ / ಸಬ್ ಇನ್ಸ್ಪೆಕ್ಟರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಮತ್ತು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಾಗೃತದಳವು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು. ಜಾಗೃತದಳವು ನಿಯಮಿತವಾಗಿ…
ಬೆಳಗಾವಿ : ರಾಜ್ಯಾದ್ಯಂತ ಭ್ರೂಣಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಕೆಲ ಆಸ್ಪತ್ರೆಗಳಲ್ಲಿಯೇ ಗಂಡು ಸಂತಾನವು ಗರಿಷ್ಟ ಪ್ರಮಾಣದಲ್ಲಿ ದಾಖಲಾಗುತ್ತಿರುವುದನ್ನು ಗುಪ್ತಚರ ದಾಳಿಯ ಮೂಲಕ ಕಂಡುಕೊಳ್ಳಲಾಗುತ್ತಿದೆ. ಯಾವ ತಾಲೂಕಿನಲ್ಲಿ ಗಂಡು ಹೆಣ್ಣಿನ ಅನುಪಾತ ಹೆಚ್ಚುತ್ತಿದೆ? ಯಾವ ಆಸ್ಪತ್ರೆಯಲ್ಲಿ ಏನಾಗುತ್ತಿದೆ ಎನ್ನುವಂತಹ ಅಂಶಗಳ ಮೇಲೆ ಮೇಲ್ವಿಚಾರಣೆ ನಡೆಸಿ, ಅಂತಹ ಜಾಲವನ್ನು ಹತ್ತಿಕ್ಕಲು ಸೂಕ್ತ ಕ್ರಮವಹಿಸುತ್ತಿದ್ದೇವೆ. ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ 2024-25 ನೇ ಸಾಲಿನಲ್ಲಿ ಬಸ್ ಬ್ರ್ಯಾಂಡಿಂಗ್, ಟ್ರೈನ್ ಬ್ರ್ಯಾಂಡಿಂಗ್, ಹೋರ್ಡಿಂಗ್ಸ್ ಗೋಡೆ ಬರಹ, ರೇಡಿಯೋ ಜಿಂಗಲ್ಸ್, ಟಿ.ವಿ. ಸ್ಪಾಟ್ಸ್ ಮುಖಾಂತರ ಸಾರ್ವಜನಿಕರಿಗೆ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯ ಕುರಿತು ಅರಿವು ಮೂಡಿಸಲಾಗುತ್ತಿದೆ. ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಬಗ್ಗೆ ರಾಜ್ಯ ಮಟ್ಟದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಲಕಾಲಕ್ಕೆ ಅರಿವು ಮೂಡಿಸುವ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್…
ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಾರೆ. ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು, ಸಾರ್ವಜನಿಕರು ಮಾಡಬೇಕಾದ ಅಂಶಗಳು. 1. ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಆಚರಿಸುವುದು. 2. ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರಿ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ. 3. ಸಾರ್ವಜನಿಕರು ಶಾಂತಿ ಮತ್ತು ಶಿಸ್ತನ್ನು ಕಾಪಾಡಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಯವರ ಜೊತೆ ಸಹಕರಿಸಿ 4. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧೀಕೃತ ಸ್ಥಳಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ. 5. ತುರ್ತು ಸಂದರ್ಭಗಳಲ್ಲಿ 112 ಅಥವಾ ಸಮೀಪದ ಪೊಲೀಸ್ ಠಾಣೆಯನ್ನು/ಪೊಲೀಸ್ ಕಿಯೋಸ್ಕ್ ಅನ್ನು ಸಂಪರ್ಕಿಸುವುದು. 6. ವರ್ಷಾಚರಣೆಯ ಸಂದರ್ಭದಲ್ಲಿ ಅಕ್ಕಪಕ್ಕದವರ ಭದ್ರತೆ ಮತ್ತು ಸುರಕ್ಷತೆಯ…
ಬೆಳಗಾವಿ : ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಪಡಿತರ ಚೀಟಿ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು,ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು 3.96 ಲಕ್ಷ ಅರ್ಜಿಗಳು ಇಲಾಖೆಗೆ ಬಂದಿವೆ. ಈ ಪೈಕಿ 2.95 ಲಕ್ಷ ಅರ್ಜಿಗಳ ವಿಲೇ ವಾರಿ ಮಾಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಅನರ್ಹರನ್ನು ಪತ್ತೆ ಹಚ್ಚಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇನ್ನು ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3.96 ಲಕ್ಷ ಅರ್ಜಿಗಳು ಬಂದಿದ್ದು, ಈ ಪೈಕಿ 2.95 ಲಕ್ಷ ಅರ್ಜಿ ವಿಲೇವಾರಿ ಮಾಡಲಾಗಿದೆ. ಉಳಿದ ಅರ್ಜಿಗಳನ್ನು ಒಂದು ತಿಂಗಳೊಳಗೆ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಬೆಂಗಳೂರು : ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಲಬುರಗಿ, ಶಿವಮೊಗ್ಗ, ಬೀದರ್, ತುಮಕೂರು ಮತ್ತು ಹಾಸನ ಜಿಲ್ಲೆಗಳಿಗೆ ನಾನು ಭೇಟಿ ನೀಡಿದ್ದಾಗ ಅಕ್ರಮ ಮದ್ಯ ಮಾರಾಟ ಮತ್ತು ಹೆಚ್ಚುತ್ತಿರುವ ಮದ್ಯದಂಗಡಿಗಳ ಬಗ್ಗೆ ಮಹಿಳೆಯರು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಮದ್ಯ ಮಾರಾಟದಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಚಿಂತನೆ ನಡೆಸಬೇಕು ಎಂದು ಪತ್ರದಲ್ಲಿ ಅವರು ಕೋರಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2025-26 ನೇ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಸರ್ಕಾರವು ರಾಜ್ಯದಲ್ಲಿ ಸರ್ಕಾರಿ ಮತ್ತು ಅರೇ ಸರ್ಕಾರಿ ಇಲಾಖೆವಾರು ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿಗೆ ಸರ್ಕಾರದಿಂದ ಅನುಮೋದನೆ ದೊರೆತಿರುವ ಹುದ್ದೆಗಳ ಕುರಿತು ಮಾಹಿತಿ ಹಂಚಿಕೊಂಡಿದೆ. ಇವುಗಳಲ್ಲಿ 16,017 ಹುದ್ದೆಗಳು ಎ ದರ್ಜೆಯ ಹುದ್ದೆಗಳಾಗಿವೆ. 16,734 ಬಿ ದರ್ಜೆಯ ಹುದ್ದೆಗಳು, 1,66,021 ಸಿ ದರ್ಜೆಯ ಹುದ್ದೆಗಳು, 77,614 ಡಿ ದರ್ಜೆಯ ಹುದ್ದೆಗಳು ಖಾಲಿ ಉಳಿದಿವೆ. ಶಿಕ್ಷಣ ಇಲಾಖೆಯಲ್ಲಿ 70727 ಹುದ್ದೆಗಳು ಖಾಲಿ ಇವೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 37,572 ಹುದ್ದೆಗಳು ಖಾಲಿ ಇದ್ದು, ಒಳಾಡಳಿತ ಇಲಾಖೆಯಲ್ಲಿ 28,188, ಕಂದಾಯ ಇಲಾಖೆಯಲ್ಲಿ 10,867 ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 10,504 ಹುದ್ದೆಗಳು ಖಾಲಿ ಉಳಿದಿದೆ.
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರಸ್ತೆ ನಿರ್ಮಿಸಲು 12 ಲಕ್ಷ ರೂ. ಸಹಾಯನಧ ನೀಡಲಿದೆ. ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಲೆ.ಶೇ.3054 ಯೋಜನೆಯಡಿ ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಗ್ರಾಮೀಣ ಪ್ರದೇಶಗಳಲ್ಲಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ನರೇಗಾ ಯೋಜನೆಯಡಿ ಈ ಹಿಂದೆ ಗ್ರಾಮೀಣ ಸರ್ವಋತು ಸಂಪರ್ಕ ರಸ್ತೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಸದರಿ ಯೋಜನೆಯಡಿ ರಸ್ತೆಗಳನ್ನು ಕೊನೆಯ ಆದ್ಯತೆಯಾಗಿ ಪರಿಗಣಿಸಿ ಶೇ10ರ ಮಿತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿತ್ತು. ರಾಜ್ಯಾದ್ಯಂತ ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸಲು ವ್ಯಾಪಕವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗದ ಕಾರಣ, ಹಾಗೂ ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಸಕಾಲದಲ್ಲಿ ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುವಂತೆ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯವಾಗಿರವುದನ್ನು ಮನಗಂಡು ಸನ್ಮಾನ…
ಉಡುಪಿ :ಉಡುಪಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದ್ದು, ಆಫೀಸ್ ಗೆ ರಜೆ ಸಿಗದಿದ್ದಕ್ಕೆ ಆನ್ ಲೈನ್ ನಲ್ಲೇ ಜೋಡಿಯೊಂದು ನಿಶ್ಚಿತಾರ್ಥ ಮಾಡಿಕೊಂಡ ಘಟನೆ ನಡೆದಿದೆ. ಹೌದು, ಉಡುಪಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲು ರಜೆ ಸಿಗದೇ ಇದ್ದಕ್ಕೆ ಕುಟುಂಬದವರು ಆನ್ ಲೈನ್ ನಲ್ಲೇ ಎಂಗೇಜ್ ಮೆಂಟ್ ಮಾಡಿಸಿದ್ದಾರೆ. ಆನ್ ಲೈನ್ ನಲ್ಲೇ ಪರಸ್ಪರ ಉಂಗುರ ತೋರಿಸಿ ಯುವಕ ಯುವತಿ ಉಂಗುರ ಧರಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದ ಯುವಕ ಸುಹಾಸ್ ಎಸ್ ಮತ್ತು ಉಡುಪಿ ನಿವಾಸಿ ಕಾತ್ಯಾಯಿನಿ ಅವರ ನಿಶ್ಚಿತಾರ್ಥ ನಿಗದಿಯಾಗಿತ್ತು. ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಮಾಗಡಿ ಮೂಲದ ಸುಹಾಸ್ಗೆ ಇಂಡಿಯಾಗೆ ಬರಲು ರಜೆ ಸಿಕ್ಕಿಲ್ಲ. ಮುಂದಿನ ಜ. 7 ಹಾಗೂ 8 ಕ್ಕೆ ಮದುವೆ ನಿಗದಿಯಾಗಿದ್ದು, ನಿಶ್ಚಿತಾರ್ಥಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಆನ್ಲೈನ್ ಮೂಲಕ ನಿಶ್ಚಿತಾರ್ಥ ಮಾಡಲು ನಿರ್ಧರಿಸಿದ ಕುಟುಂಬ ವೀಡಿಯೋ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿ ಮುಗಿಸಿದೆ. ಉಡುಪಿಯಲ್ಲಿ ಬೆಳಗ್ಗೆ ಸಮಯದಲ್ಲಿ ನಿಶ್ಚಿತಾರ್ಥ ನಡೆದಿದ್ರೆ, ಕೆನಡಾದಲ್ಲಿ ಮಧ್ಯರಾತ್ರಿ ಆಗಿತ್ತು.…














