Author: kannadanewsnow57

ಬೆಂಗಳೂರು : ನೀರಿನ ಶುದ್ಧತೆ ಮತ್ತು ಸುರಕ್ಷಿತತೆಯನ್ನು ಗ್ರಾಮ ಪಂಚಾಯಿತಿಯವರು ಖಾತ್ರಿಪಡಿಸಿಕೊಂಡು ಜನರಿಗೆ ಕುಡಿಯುವ ನೀರನ್ನು  ಪೂರೈಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆದೇಶ ಹೊರಡಿಸಿದೆ.  ಗ್ರಾಮ ಪಂಚಾಯಿತಿಗಳಿಗೆ ನೀಡಲಾದ ಪೋಟೆಬಲ್ ವಾಟರ್ ಕ್ವಾಲಿಟಿ ಫೀಲ್ಡ್ ಟೆಸ್ಟ್ ಕಿಟ್ ಮೂಲಕ ನೀರಿನ ಶುದ್ಧತೆಯನ್ನು ಪರೀಕ್ಷಿಸಿ, ಸುರಕ್ಷಿತ ನೀರನ್ನು ಗ್ರಾಮೀಣ ಜನರಿಗೆ ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಯ ಕರ್ತವ್ಯವಾಗಿದೆ. ಒಂದು ವೇಳೆ ಕುಡಿಯುವ ನೀರಿನಲ್ಲಿ ಕಲುಷಿತತೆ ಕಂಡುಬಂದಲ್ಲಿ ಜನರು ಏಕೀಕೃತ ಸಹಾಯವಾಣಿಗೆ ಅಥವಾ ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಬೇಕು. ಏಕೀಕೃತ ಸಹಾಯವಾಣಿ  ಸಂಖ್ಯೆ- 9480985555 8277506000

Read More

ರಾಯಚೂರು :ರಾಯಚೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ, 15 ಸಾವಿರ ರೂ.ದಂಢ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರಿನ 3 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅಪರಾಧಿ ಹುಲ್ಲಪ್ಪಗೆ 20 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಪೋಕ್ಸೋ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ ತೀರ್ಪು ನೀಡಿದ್ದು, ನೋಂದ ಬಾಲಕಿಗೆ 9 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಸರ್ಕಾರದ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ತೀರ್ಪು ನೀಡಿದೆ. 2021 ರಲ್ಲಿ ಲಿಂಗಸೂಗುರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪರಾಧಿ ಹುಲ್ಲಪ್ಪ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Read More

ಕಾರವಾರ : ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಹೊರ ಬರುವಂತೆ ನಟ ದರ್ಶನ ಭಾವ ಮಂಜುನಾಥ್‌ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕೈಗಾ ಪ್ರದೇಶದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನ ಹಾಗೂ ಶನೈಶ್ವರ, ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ದರ್ಶನ್‌ ಗೆ ಗ್ರಹಗತಿ ಸರಿಯಲ್ಲಿ, ಮನುಷ್ಯನಿಗೆ ಜೀವಿತಾವಧಿಯಲ್ಲಿ ದೋಷ ನಿವಾರಣೆಗೆ ವಿಶೇಷ ಪೂಜೆ ನಡೆಸಲಾಗುತ್ತದೆ. ಅದರಂತೆ ರೇಣುಕಾಸ್ವಾಮಿ ಪ್ರಕರಣದಿಂದ ಆದಷ್ಟು ಬೇಗ ದರ್ಶನ್‌ ಹೊರಬರಬೇಕೆಂದು ದರ್ಶನ್‌ ಸಹೋದರಿ ಪತಿ ಮಂಜುನಾಥ್‌ ಪೂಜೆ ಸಲ್ಲಿಸಿದ್ದಾರೆ.

Read More

ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ನೀಡಿದ್ದಾರೆ.  ಹಾವೇರಿ ಲೋಕಸಭಾ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸೌಧದಲ್ಲಿ ಸ್ಪೀಕರ್‌ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Read More

ಚಿತ್ರದುರ್ಗ : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪುತ್ರನ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಹೃದಯಾಘಾತ ನಿಧನಹೊಂದಿದ ಚಂದ್ರಪ್ಪ ಅಂತ್ಯಕ್ರಿಯೆಗೆ ಪುತ್ರ ಅನಿಲ್‌ಕುಮಾರ್ ನನ್ನು ಕರೆದುಕೊಂಡು ಹೋಗಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದ ಆರೋಪಿ ಅನಿಲ್‌ಕುಮಾರ್ ತಂದೆ ಚಂದ್ರಪ್ಪ ಅಂತ್ಯಕ್ರಿಯೆಗೆ ಕರೆದುಕೊಂಡಲು ಹೋಗಲು ಕೋರ್ಟ್‌ ನ ಅನುಮತಿ ಕೇಳಿದ್ದು, ಕೋರ್ಟ್‌ ಅನುಮತಿ ಕೊಟ್ರೆ ಅನು ತಂದೆಯ ಅಂತ್ಯಕ್ರಿಯೆಲ್ಲಿ ಭಾಗವಹಿಸಲಿದ್ದಾನೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಗನ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ತೀವ್ರವಾಗಿ ನೊಂದಿದ್ದ ಹೊಳಲ್ಕೆರೆ ರಸ್ತೆಯ ಸಿಹಿನೀರು ಹೊಂಡ ಬೀದಿಯ ನಿವಾಸಿ ಚಂದ್ರಪ್ಪ (55) ಶುಕ್ರವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

Read More

ಮೈಸೂರು : ನೀಟ್‌ ಪರೀಕ್ಷೆಯಲ್ಲಿ ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿರುವುದು ಸರಿಯಲ್ಲ, ನೀಟ್‌ ಮರು ಪರೀಕ್ಷೆ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀಟ್‌ ಪರೀಕ್ಷೆ ಬರೆದವರಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿರುವುದು ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಇದರಿಂದ ಮೋಸವಾಗಲಿದೆ. ಹೀಗಾಗಿ ನೀಟ್‌ ಮರುಪರೀಕ್ಷೆ ನಡೆಸಬೇಕು. ನೀಟ್‌ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ. ಇನ್ನು ದರ್ಶನ್‌ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ದರ್ಶನ್ ಮೇಲಿನ ಕೊಲೆ ಆರೋಪ ಪ್ರಕರಣದಲ್ಲಿ ಯಾವ ಪ್ರಭಾವಿಗಳೂ ನನ್ನನ್ನು ಭೇಟಿಯಾಗಲು ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಕಾನೂನು ರೀತಿ ಹೇಗೆ ತನಿಖೆಯಾಗಬೇಕು ಹಾಗೆಯೇ ಆಗುತ್ತದೆ, ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದು ಹೇಳಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾಜ್ಯದ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ರಾಜ್ಯದ ವಿವಿಧ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಫ್ರೀಡಂಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಪ್ರೀಡಂ ಪಾರ್ಕ್‌ ಗೆ ಆಗಮಿಸಿದ್ದು, ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಈಗಾಗಲೇ ತರಗತಿಗಳು ಆರಂಭವಾಗಿದ್ದು, ಇತ್ತ ಉಪನ್ಯಾಸಕರು ಪ್ರತಿಭಟನೆಗೆ ಇಳಿದಿದ್ದಾರೆ.

Read More

ನವದೆಹಲಿ : ಬ್ಯಾಂಕ್ ಆಫ್ ಬರೋಡಾ (ಬಿಒಬಿ) 2024 ರಲ್ಲಿ 627 ಹುದ್ದೆಗಳ ನೇಮಕಾತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ವಿವಿಧ ಇಲಾಖೆಗಳಲ್ಲಿ 459 ನಿಗದಿತ ಅವಧಿಯ ಗುತ್ತಿಗೆ ಸ್ಥಾನಗಳು ಮತ್ತು ಕಾರ್ಪೊರೇಟ್ ಮತ್ತು ಸಾಂಸ್ಥಿಕ ಸಾಲ ಮತ್ತು ಹಣಕಾಸು ಇಲಾಖೆಯಲ್ಲಿ ವೃತ್ತಿಪರರಿಗೆ 168 ನಿಯಮಿತ ಹುದ್ದೆಗಳು ಸೇರಿವೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ bankofbaroda.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶವನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾ (ಬಿಒಬಿ) ಬಿಡುಗಡೆ ಮಾಡಿದ ಇತ್ತೀಚಿನ ಅಧಿಸೂಚನೆಯನ್ನು ಪರಿಶೀಲಿಸಬೇಕು. ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024 ಅಧಿಸೂಚನೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2024 ತನ್ನ ಅಧಿಕೃತ ವೆಬ್ಸೈಟ್ www.bankofbaroda.com ನಲ್ಲಿ ರೆಗ್ಯುಲರ್ ಮತ್ತು ಗುತ್ತಿಗೆ ಹುದ್ದೆಗಳಿಗೆ ಒಟ್ಟು 627 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಪ್ರಕ್ರಿಯೆಯು ಜನವರಿ 12, 2024 ರಿಂದ ಜುಲೈ 02, 2024 ರವರೆಗೆ ಮುಂದುವರಿಯುತ್ತದೆ. ಶುಲ್ಕ ಪಾವತಿಸಲು ಕೊನೆಯ ದಿನಾಂಕ 02 ಜುಲೈ…

Read More

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಎನ್‌ ಡಿಎ ಸರ್ಕಾರ ಯಾವಾಗ ಬೇಕಾದ್ರೂ ಬೀಳಬಹುದು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು. “ಎನ್ಡಿಎ ಸರ್ಕಾರವನ್ನು ತಪ್ಪಾಗಿ ರಚಿಸಲಾಗಿದೆ. ಮೋದಿಜಿಗೆ ಜನಾದೇಶವಿಲ್ಲ. ಇದು ಅಲ್ಪ ಸಮಯದ ಸರ್ಕಾರ. ಈ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು. ಇದು ಮುಂದುವರಿಯಬೇಕೆಂದು ನಾವು ಬಯಸುತ್ತೇವೆ. ಇದು ದೇಶಕ್ಕೆ ಒಳ್ಳೆಯದು. ದೇಶವನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು. ದೇಶವನ್ನು ಬಲಪಡಿಸಲು ನಾವು ಸಹಕರಿಸುತ್ತೇವೆ ಎಂದರು. https://twitter.com/i/status/1801558658460881066 ಖರ್ಗೆ ಹೇಳಿಕೆಗೆ ಆರ್ಜೆಡಿ ವಕ್ತಾರ ಇಜಾಜ್ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. ಖರ್ಗೆ ಹೇಳಿದ್ದು ಸರಿ ಎಂದು ಹೇಳಿದರು. ಜನಾದೇಶವು ಮೋದಿ ಸರ್ಕಾರದ ವಿರುದ್ಧವಾಗಿತ್ತು. ಮತದಾರರು ಅವರನ್ನು ಸ್ವೀಕರಿಸಲಿಲ್ಲ. ಆದರೂ ಅವರು ಅಧಿಕಾರಕ್ಕೆ ಬಂದರು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್‌ ನಿಂದ ತಾತ್ಕಾಲಿಕ ರಿಲೀಫ್‌ ಸಿಕ್ಕ ಬೆನ್ನಲ್ಲೇ ಕಳೆದ ಎರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಇಂದು ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ. ಕಳೆದ ಎರಡು ದಿನಗಳಿಂದ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ದೆಹಲಿಯಿಂದ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದು, ಇಂದು ಮಧ್ಯಾಹ್ನ ೧೨ ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಬಿಗ್ ರಿಲೀಫ್‌ ಸಿಕ್ಕಂತಾಗಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಸಿಐಡಿಗೆ ಹೈಕೋರ್ಟ್‌ ಸೂಚಿಸಿದೆ.

Read More