Subscribe to Updates
Get the latest creative news from FooBar about art, design and business.
Author: kannadanewsnow57
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ…
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯದ ಗ್ರಾಮಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹಾಗೂ 2, ಮತ್ತು ದ್ವಿತೀಯ ದರ್ಜೆ ಲೆಕ್ಕಸಹಾಯಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ನಿಗದಿಯಾಗಿದೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ಶೇ.9 ಕಡ್ಡಾಯ ಸಾರ್ವಜನಿಕ ಹಿತಾಸಕ್ತಿ, ಸಾಮಾನ್ಯ ಕೋರಿಕೆ ವರ್ಗಾವಣೆ ಹಾಗೂ ಶೇ.6 ವಿಶೇಷ ಪ್ರಕರಣಗಳ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ಜೂ.23ರಿಂದ ಜು.28ರವರೆಗೆ ನಡೆಯಲಿದೆ ಎಂದಿದ್ದಾರೆ. ವರ್ಗಾವಣೆ ಹಾಗೂ ವಿಸ್ತರಣೆಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ ಜೂ.23. ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿ ಜೂ.24ಕ್ಕೆ ಪ್ರಕಟವಾಗಲಿದೆ. ಅರ್ಹರು ಹಾಗೂ ಖಾಲಿ ಹುದ್ದೆಗಳ ಜಿಲ್ಲಾವಾರು ಪಟ್ಟಿಗೆ ಆಯಾ ಜಿಪಂ ಸಿಇಒಗೆ ಅಪೀಲ್ ಸಲ್ಲಿಸಲು ಜೂ.26 ಕಡೇ ದಿನವಾಗಿದ್ದು, ಅಂತಿಮ ಪಟ್ಟಿ ಜೂ.30ಕ್ಕೆ ಪ್ರಕಟವಾಗಲಿದೆ. ತಿರಸ್ಕೃತ ವರ್ಗಾವಣೆ, ವಿಸ್ತರಣೆ ಅರ್ಜಿಗಳಿಗೆ ಅಪೀಲು ಸಲ್ಲಿಸಲು ಜು.9 ಕೊನೇ ದಿನ. ಸಾರ್ವಜನಿಕ ಹಿತಾಸಕ್ತಿಯ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿ ಹಾಗೂ ವಿಶೇಷ ಪ್ರಕರಣಗಳ…
ಹಾವೇರಿ : ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯ ಮನೆಗೆ ಗುತ್ತಿಗೆದಾರನ ಸಂಬಂಧಿಕರು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಗುತ್ತಿಗೆದಾರ ಶಿವನಾಂದ ಕುನ್ನೂರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಸಂಬಂಧಿಕರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಗ್ಗಾಂವಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಆರೋಪಿ ನಾಗರಾಜ್ ಮನೆಗೆ ಸಂಬಂಧಿಕರು ಬೆಂಕಿ ಹಚ್ಚಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ…
ಮಂಗಳವಾರ ನಡೆದ ಏಕದಿನ ಸ್ಪರ್ಧೆಯಲ್ಲಿ 85.29 ಮೀಟರ್ ದೂರ ಎಸೆಯುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಒಸ್ಟ್ರಾವಾ ಗೋಲ್ಡನ್ ಸ್ಪೈಕ್ 2025 ರ ಕೂಟದಲ್ಲಿ ಜಾವೆಲಿನ್ ಥ್ರೋ ಪ್ರಶಸ್ತಿಯನ್ನು ಗೆದ್ದರು. ಆರು ಸುತ್ತುಗಳ ನಂತರ 85.29 ಮೀಟರ್ ದೂರ ಎಸೆದು ಅಜೇಯರಾಗಿ ಉಳಿದ ನೀರಜ್, ಈ ಋತುವಿನಲ್ಲಿ ಮತ್ತೊಂದು ಅತ್ಯುತ್ತಮ ಪೋಡಿಯಂ ಫಿನಿಶ್ ಗಳಿಸುವ ಮೂಲಕ ಪ್ರತಿಷ್ಠಿತ ಕೂಟದಲ್ಲಿ ಒಂದು ಎಸೆತ ಬಾಕಿ ಇರುವಾಗಲೇ ಗೆಲುವು ಸಾಧಿಸಿದರು. ಕೆಲವು ದಿನಗಳ ಹಿಂದೆ ಪ್ಯಾರಿಸ್ ಡೈಮಂಡ್ ಲೀಗ್ ಕೂಟದಲ್ಲಿ ಗೆದ್ದ ನಂತರ ನೀರಜ್ ಅವರಿಗೆ ಇದು ಎರಡನೇ ಪ್ರಶಸ್ತಿಯಾಗಿದೆ. ಹರ್ಯಾಹದ 27 ವರ್ಷದ ನೀರಜ್ ತಮ್ಮ ಮೂರನೇ ಸರದಿಯಲ್ಲಿ ಮೊದಲ ಸ್ಥಾನ ಪಡೆದು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಿದರು, ಆದರೆ ದಕ್ಷಿಣ ಆಫ್ರಿಕಾದ ಡೌವ್ ಸ್ಮಿಟ್ 84.12 ಮೀ ಮತ್ತು ಗ್ರಾನಡಾದ ಆಂಡರ್ಸನ್ ಪೀಟರ್ಸ್ 83.63 ಮೀ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದರು. ಟೋಕಿಯೊ…
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರು ರಾಜ್ಯದ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು 2025-26ನೇ ಸಾಲಿನ ವರ್ಗಾವಣೆಗೆ ಜೂ.25ರ ಇಂದಿನಿಂದ ಕೌನ್ಸೆಲಿಂಗ್ ಆರಂಭವಾಗಲಿದೆ. ಕಡಿಮೆ ಮಕ್ಕಳ ದಾಖಲಾತಿ ಇರುವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನೂ ವರ್ಗಾವಣೆಗೆ ಲಭ್ಯವಿರುವ ಪಟ್ಟಿಯಲ್ಲಿ ತೋರಿಸದಿದ್ದರೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಾಕಷ್ಟು ಸಮಸ್ಯೆಯಾಗಬಹುದು. ಹಾಗಾಗಿ ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಮತ್ತು ಶೂನ್ಯ ದಾಖಲಾತಿ ಹೊಂದಿರುವ ಕಾಲೇಜಿನ ಉಪನ್ಯಾಸಕರ, ಕೋರಿಕೆ ವರ್ಗಾವಣೆ ಯಲ್ಲಿ 40ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಗ್ರಾಮೀಣ ಪ್ರದೇಶದ ಕಾಲೇಜಿನ ಖಾಲಿ ಹುದ್ದೆ ವರ್ಗಕ್ಕೆ ಆಯ್ಕೆ ಮಾಡಿಕೊಳ್ಳಲು ಅವಕಾಶಕ್ಕಾಗಿ ಸಂಘ ಆಗ್ರಹಿಸಿದೆ. ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳಲ್ಲಿಖಾಲಿ ಹುದ್ದೆಗಳನ್ನೂ ವರ್ಗಾವಣೆಗೆ ಪರಿಗಣಿಸುವಂತೆ ರಾಜ್ಯ ಪಿಯು ಉಪನ್ಯಾಸಕರ ಸಂಘ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದೆ.
ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಾಣೆ, ಬೆಂಗಳೂರು ಡ್ಯೆರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾಡ್ðನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದವನ ಸ್ಲಮ್, ಲಾಲ್ ಜಿ ನಗರ, ಶಾಮಣ್ಣ ಗಾಡðನ್, ಎನ್ ಡಿ ರ್ ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲ ಪ್ರದೇಶಗಳು, ರಿಚ್ ಮಂಡ್ ಟೌನ್, ರಿಚ್ ಮಂಡ್ ಸರ್ಕಲ್ ನಲ್ಲಿ ಕರೆಂಟ್ ಇರೋದಿಲ್ಲ. ಜಾನ್ಸನ್ ಮಾಕೆðಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾಡ್ð ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ…
BIG NEWS : ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ಪ್ರಾಥಮಿಕ ಚಿಕಿತ್ಸೆಗೆ ಸಂಚಾರಿ ಆರೋಗ್ಯ ಘಟಕ : ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ದುರ್ಗಮ ಪ್ರದೇಶ, ಸಂಪರ್ಕ ರಹಿತ ಪ್ರದೇಶಗಳ ಜನತೆಗೆ ಪ್ರಾಥಮಿಕ ಆರೋಗ್ಯ ಆರೈಕಾ ಸೇವೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 20 ಸಂಚಾರಿ ಆರೋಗ್ಯ ಘಟಕಗಳನ್ನು 3 ವರ್ಷಗಳ ಅವಧಿಗೆ ರೂ.2007.48 ಲಕ್ಷಗಳ ವೆಚ್ಚದಲ್ಲಿ ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ಕೆಟಿಪಿಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಕೆಲವೊಂದು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. 82 ಸಂಚಾರಿ ಆರೋಗ್ಯ ಘಟಕಗಳನ್ನು ( NHM ಅಡಿಯಲ್ಲಿ 50 + SCPTSP ರಡಿ 32 ) ಕೆಲವು ಷರತ್ತಿಗೊಳಪಟ್ಟು ಪಥಮವಾಗಿ 03 ವರ್ಷದ ಅವಧಿಗೆ ಕೆ.ಟಿ.ಪಿ.ಪಿ ಕಾಯ್ದೆ ಹಾಗೂ ನಿಯಮಗಳನ್ನು ಅನುಸರಿಸಿ ಅಲ್ಪಾವಧಿ ಟೆಂಡರ್ ಆಹ್ವಾನಿಸಲು ಅನುಮೋದನೆ ನೀಡಲಾಗಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಕಡತ ಸಂಖ್ಯೆ: ಆಕುಕ…
ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಆರೆಂಜ್ ಅಲರ್ಟ್ ಹಾಗೂ ನಂತರದನಂತರದ ಎರಡು ದಿನಕ್ಕೆ ಯೆಲ್ಲೋ ಅಲರ್ಟ್ ನೀಡಲಾ ಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಮೂರು ದಿನಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುನ್ನೆಚ್ಚರಿಕ ಕ್ರಮವಾಗಿ ಇಂದು ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ರಜೆ ಘೋಷಿಸಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಸರ್ಕಾರಿ, ಅನುದಾನ ರಹಿತ, ಅನುದಾನ ಸಹಿತ ಮತ್ತು ಪಿಯುಸಿ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ…
ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಘೋಷಣೆ ಸಂಖ್ಯೆ: 140- ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 3 ಲಕ್ಷಕ್ಕೂ ಅಧಿಕ ಸಿಬ್ಬಂದಿ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ ಹಾಗೂ ಸಿಬ್ಬಂದಿಗಳಿಂದ ಮಾಸಿಕ 100 ರೂಗಳ ವಂತಿಕೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ(1)ರ ಪ್ರಕಾರ ವಿಷಯದಲ್ಲಿ ಘೋಷಿಸಲಾಗಿರುತ್ತದೆ. ವಿವರಿಸಿದಂತೆ ಮೇಲೆ ಓದಲಾದ ಕ್ರಮಾಂಕ(2)ರ ಏಕ-ಕಡತದಲ್ಲಿ ಈ ಕೆಳಕಂಡಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ: 1. ಆಯವ್ಯಯ ಘೋಷಣೆಯು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಒಪ್ಪಂದ, ಗುತ್ತಿಗೆ / ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುವ ತನ್ನ ಸಿಬ್ಬಂದಿಗಳಿಗೆ ಖಚಿತವಾದ ಆರೋಗ್ಯ ಸೌಲಭ್ಯದ ಸೇವೆಗಳನ್ನು ಒದಗಿಸುವ ಪ್ರಯತ್ನವನ್ನು ಗುರಿಯಾಗಿಸಿಕೊಂಡು ಈ ವರ್ಗದ ಸಿಬ್ಬಂದಿಗಳನ್ನು ಒಳಗೊಳ್ಳಲು ಹೊಸ ಕೊಡುಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಪ್ರಸ್ತಾಪಿಸಲಾಗಿದೆ.…
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿಯನ್ನು ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕನಿಷ್ಠ 20 ರಿಂದ 45 ವರ್ಷದೊಳಗಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ದೊಂದಿಗೆ ಉಚಿತ ತರಬೇತಿ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಆಸಕ್ತ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆಯ ವೆಬ್ ಸೈಟ್: karnatakatourism.org, ಸೇವಾಸಿಂಧು ಪೋರ್ಟಲ್: sevasindhu.karnataka.gov.in ಹಾಗೂ ಬಾಪೂಜಿ ಸೇವಾ ಕೇಂದ್ರ: :bsk.karnataka.gov.in ಗಳಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ತರಬೇತಿ ವಿವರ: ಆಹಾರ ಮತ್ತು…