Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ : ಡಾ. ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು. ಮುಖ್ಯಾಂಶಗಳು: *ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು. ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿದವರು. RBI…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಬೈಪಾಸ್ ಬಳಿ ವ್ಹೀಲಿಂಗ್ ಕ್ರೇಜ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡುವಾಗ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.ಮೃತ ಯುವಕರನ್ನು ಅರ್ಫಾಜ್ (22) ಮನೋಜ್ (22) ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ನಲ್ಲಿ ಅರ್ಫಾಜ್ ಮತ್ತು ಮನೋಜ್ ವ್ಹೀಲಿಂಗ್ ಮಾಡುತ್ತಿದ್ದಾಗ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಕಟೀಲು ದುರ್ಗಾ ಪರಮೇಶ್ವರಿಯನ್ನು, ಶಕ್ತಿ ದೇವತೆಯ ಅವತಾರವೆಂದೇ ನಂಬಲಾಗಿದೆ. ದುರ್ಗೆ, ಕಟೀಲಿನಲ್ಲಿ ನೆಲೆಸಲು ಕಾರಣವೇನು ಎಂಬುದಕ್ಕೆ ಪೌರಾಣಿಕ ಹಿನ್ನೆಲೆಯ ಕಥೆಯೊಂದಿದೆ. ಶರನ್ನವರಾತ್ರಿಯ ಉತ್ಸವವನ್ನು ಇಲ್ಲಿ ಅದ್ದೂರಿಯಿಂದ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಸಾಕಷ್ಟು ಪವಿತ್ರ ಪುಣ್ಯಕ್ಷೇತ್ರಗಳನ್ನು ಹೊಂದಿದೆ. ಅವುಗಳಲ್ಲಿ ನಂದಿನಿ ನದಿಯ ತಟದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವೂ ಒಂದು. ಈ ದೇಗುಲವು, ನಂದಿನಿ ಎಂಬ ನದಿಯ ಮಧ್ಯದಲ್ಲಿರುವ ಸಣ್ಣ ದ್ವೀಪದಲ್ಲಿ ನೆಲೆಗೊಂಡಿದೆ. ಪ್ರತಿ ವರ್ಷ ಲಕ್ಷಾಂತರ ಯಾತ್ರಾರ್ಥಿಗಳು ಇಲ್ಲಿಗೆ ಬಂದು ತಾಯಿ ದುರ್ಗಾ ಪರಮೇಶ್ವರಿಯ ದರ್ಶನ ಭಾಗ್ಯ ಪಡೆದು ಪುನೀತರಾಗುತ್ತಿದ್ದಾರೆ. ಈ ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿ ಬಂದು ನೆಲೆಸಲು ಕಾರಣವೇನು ಎಂಬ ಕುರಿತಾಗಿ ಒಂದು ಪೌರಾಣಿಕ ಕಥೆಯೇ ಇದೆ. ಶುಂಭ ಮತ್ತು ನಿಶುಂಭರೆಂಬ ಎಂಬ ಇಬ್ಬರು ರಾಕ್ಷಸರನ್ನು ದುರ್ಗಾದೇವಿ ಸಂಹರಿಸಿದ ನಂತರ ಅವರ ಮಂತ್ರಿಗಳಲ್ಲಿ ಒಬ್ಬನಾದ ಅರುಣಾಸುರನು ಯುದ್ಧಭೂಮಿಯಿಂದ ಓಡಿಹೋಗುತ್ತಾನೆ. ಆನಂತರ…
ಬೆಳಗಾವಿ : ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಸಿಎಂ ಮಾತುಗಳ ಹೈಲೈಟ್ಸ್… *ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಢ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು. ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ…
ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು. ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು 2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್…
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಾ ಸಂಘ ಸಂತಾಪ ಸೂಚಿಸಿದ್ದು, ಡಾ.ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಭಾರತ ಸದಾ ನೆನಪಿಸಿಕೊಳ್ಳುತ್ತದೆ ಎಂದು ಹೇಳಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂತಾಪ ವ್ಯಕ್ತಪಡಿಸಿದೆ. ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ದೇಶವೇ ದುಃಖಿತವಾಗಿದೆ ಎಂದು ಸಂಘ ಹೇಳಿದೆ. ಮನಮೋಹನ್ ಸಿಂಗ್ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರು. ಅವರ ಕೊಡುಗೆ ಸದಾ ಸ್ಮರಣೀಯ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಅವರ ಕುಟುಂಬಕ್ಕೆ ಮತ್ತು ಅವರ ಹಲವಾರು ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿದೆ.
ಚೆನ್ನೈ : ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿಚಿತ್ರ ಶೈಲಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿರುವುದನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ವತಃ ಚಾಟಿ ಬೀಸಿದ್ದಾರೆ. ಡಿಎಂಕೆಯನ್ನು ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಅಣ್ಣಾಮಲೈ ನಿನ್ನೆ ಶಪಥ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಚಾಟಿ ಬೀಸಿರುವ ವಿಡಿಯೋ ಇದೀಗ ವೈರಲ್ ಆಗಿದೆ. https://twitter.com/i/status/1872519736669642779
ನವದೆಹಲಿ : ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಕುರಿತು ಪ್ರಧಾನಿ ಮೋದಿ ವಿಡಿಯೋ ಸಂದೇಶ ಹಂಚಿಕೊಂಡಿದ್ದು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ನಾವೆಲ್ಲರೂ ತೀವ್ರ ದುಃಖಿತರಾಗಿದ್ದೇವೆ. ಅವರ ನಿಧನವು ಇಡೀ ದೇಶಕ್ಕೆ ದೊಡ್ಡ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಹೋರಾಟಗಳ ನಡುವೆಯೂ ನಾವು ಹೇಗೆ ಉನ್ನತ ಸ್ಥಾನವನ್ನು ತಲುಪಬಹುದು ಎಂಬುದಕ್ಕೆ ಅವರ ಜೀವನವು ಭವಿಷ್ಯದ ಪೀಳಿಗೆಗೆ ಒಂದು ಉದಾಹರಣೆಯಾಗಿದೆ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿದ ಪ್ರಧಾನಿ ಮೋದಿ, ಅವರು ಪ್ರಾಮಾಣಿಕ ವ್ಯಕ್ತಿ, ಶ್ರೇಷ್ಠ ಅರ್ಥಶಾಸ್ತ್ರಜ್ಞ ಮತ್ತು ಸುಧಾರಣೆಗಳಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ನಾಯಕ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದರು. https://twitter.com/i/status/1872517554507489773 “ಆರ್ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಿದ ಅವರು, ಅರ್ಥಶಾಸ್ತ್ರಜ್ಞರಾಗಿ ದೇಶಕ್ಕೆ ಹಲವು ಸೇವೆ ಸಲ್ಲಿಸಿದ್ದಾರೆ. ದೇಶ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾಗ ಮಾಜಿ ಪ್ರಧಾನಿ ಭಾರತರತ್ನ ಪಿ.ವಿ.ನರಸಿಂಹರಾವ್ ಅವರ ನೇತೃತ್ವದಲ್ಲಿ ಹಣಕಾಸು ಸಚಿವರಾಗಿ ದೇಶವನ್ನು ಮುನ್ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ನಾಳೆ ದೆಹಲಿ ರಾಜ್ ಘಾಟ್ ಬಳಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿದ್ದು, ಇಂದು ದೆಹಲಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ದೆಹಲಿಯಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಹೊತ್ತೊಯ್ಯುವ ಬಿಯರ್ ಮೇಲೆ ರಾಷ್ಟ್ರಧ್ವಜವನ್ನು ಹೊದಿಸಲಾಗಿದೆ. https://twitter.com/i/status/1872521206332846508 ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ…
ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಮಿಸಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. https://twitter.com/i/status/1872519996112613729 https://twitter.com/i/status/1872509897277157796 ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.