Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ದೇಶಾದ್ಯಂತ ರೈಲ್ವೆ ಪ್ರದೇಶಗಳಲ್ಲಿ 2025 ರ ವರ್ಷಕ್ಕೆ ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವೀಧರ ಮತ್ತು ಪದವಿಪೂರ್ವ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಮಂಡಳಿ (RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 8,050 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ 5,000 ಪದವೀಧರ ಹುದ್ದೆಗಳು ಮತ್ತು 3,050 ಪದವಿಪೂರ್ವ ಹುದ್ದೆಗಳು ಸೇರಿವೆ. ಈ ಪದವೀಧರ ಹುದ್ದೆಗಳಿಗೆ ಆನ್ಲೈನ್ ಅರ್ಜಿಗಳು ಅಕ್ಟೋಬರ್ 21 ರಿಂದ ಪ್ರಾರಂಭವಾಗುತ್ತವೆ. ಪದವಿಪೂರ್ವ ಹುದ್ದೆಗಳಿಗೆ ಅರ್ಜಿಗಳು ಅಕ್ಟೋಬರ್ 28, 2025 ರಿಂದ ಪ್ರಾರಂಭವಾಗುತ್ತವೆ. ಇತರ ವಿವರಗಳನ್ನು ಕೆಳಗೆ ಪರಿಶೀಲಿಸಬಹುದು. ಆರ್ಆರ್ಬಿ ಅಹಮದಾಬಾದ್, ಅಜ್ಮೀರ್, ಬೆಂಗಳೂರು, ಭೋಪಾಲ್, ಭುವನೇಶ್ವರ, ಬಿಲಾಸ್ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಗೋರಖ್ಪುರ, ಜಮ್ಮು – ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಫರ್ಪುರ್, ಪಾಟ್ನಾ, ಪ್ರಯಾಗ್ರಾಜ್, ರಾಂಚಿ, ಸಿಕಂದರಾಬಾದ್, ಸಿಲಿಗುರಿ, ತಿರುವನಂತಪುರಂ ಪ್ರದೇಶಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡುತ್ತದೆ. RRB NTPC ನೇಮಕಾತಿ ಅಡಿಯಲ್ಲಿ ಭರ್ತಿ ಮಾಡಲಾಗುವ ಹುದ್ದೆಗಳು…
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ…
ಬೆಂಗಳೂರು : ಕರ್ನಾಟಕದ 10 ಮಂದಿ ಹಿರಿಯ ಸಾಹಿತಿಗಳಿಗೆ 2024 ರ ಸಾಹಿತ್ಯಶ್ರೀ ಪ್ರಶ್ತಿಯನ್ನು ಘೋಷಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ 50 ರಿಂದ 60ರ ವಯೋಮಾನದ ಈ ಕೆಳಕಂಡ 10 ಮಂದಿ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2024ನೆಯ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿಯನ್ನು ನೀಡಲು ಅಕಾಡೆಮಿ ಅಧ್ಯಕ್ಷರಾದ ಎಲ್. ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 09-10-2025 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಿತು. ಈ ಪ್ರಶಸ್ತಿಯು ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು, ಪ್ರಶಸ್ತಿಫಲಕ, ಶಾಲು, ಹಾರ ಹಾಗೂ ಪ್ರಮಾಣ ಪತ್ರಗಳನ್ನು ಒಳಗೊಂಡಿದೆ. 1. ಡಾ. ಬಿ.ಎಂ ಪುಟ್ಟಯ್ಯ – ಚಿಕ್ಕಮಗಳೂರು 2. ಡಾ. ಕೆ.ವೈ ನಾರಾಯಣಸ್ವಾಮಿ ಬೆಂಗಳೂರು 3. ಶ್ರೀ ಪದ್ಮಾಲಯ ನಾಗರಾಜ್ ಕೋಲಾರ 4. ಡಾ. ಬಿ.ಯು ಸುಮಾ ತುಮಕೂರು 5. ಡಾ. ಮಮತಾ ಸಾಗರ ಶಿವಮೊಗ್ಗ 6. ಡಾ. ಸಬಿತಾ ಬನ್ನಾಡಿ ಉಡುಪಿ 7. ಶ್ರೀ ಅಬ್ದುಲ್ ಹೈ…
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗದ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಲಾಗಿದೆ. ಇಂದು ರೈಲಿನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣದಿಂದ 10:15 ಗಂಟೆಯಿಂದ ಹಳದಿ ಮಾರ್ಗದ ರೈಲುಗಳು 25 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿವೆ. ಪ್ರಯಾಣಿಕರು ಈ ಕುರಿತು ಗಮನಿಸಿ ಇದರಿಂದ ಆದ ಅನಾನುಕೂಲತೆಗೆ ಸಹಕರಿಸಬೇಕು ಎಂದು ವಿನಂತಿಸಲಾಗಿದೆ. https://twitter.com/OfficialBMRCL/status/1977252682722427088?ref_src=twsrc%5Etfw%7Ctwcamp%5Etweetembed%7Ctwterm%5E1977252682722427088%7Ctwgr%5Ecb98ceffa00b1814a968ab14067101c3062f6056%7Ctwcon%5Es1_c10&ref_url=https%3A%2F%2Fpublictv.in%2Ftechnical-problem-on-the-yellow-line-metro-travelling-public-are-requested-to-note-and-co-operate-please-bmrcl%2F
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಪ್ರಯತ್ನ ನಡೆದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಶುರುವಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನ ಗೂಂಡಾಗಿರಿ ಶುರುವಾಗಿದೆ. ಮುನಿರತ್ನ ಪ್ರತಿಭಟನೆಗೆ ನಮ್ಮ ಬೆಂಬಲ ಇದೆ. ಶಾಸಕರ ಮೇಲೆ ಹಲ್ಲೆ ಮಾಡುವ ಪ್ರಯತ್ನ, ಸಂಸದರನ್ನು ಕಾರ್ಯಕ್ರಮಕ್ಕೆ ಕರೆಯದಿರುವುದು ತಪ್ಪು, ಇದು ನಿಜಕ್ಕೂ ಗೂಂಡಾಗಿರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಕಾರ್ಯಕ್ರಮ ಎಂದು ಹೇಳಿ ಆ ಭಾಗದ ಶಾಸಕರು, ಸಂಸದರಿಗೆ ಆಹ್ವಾನಿಸಿಲ್ಲ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮುನಿರತ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಓರ್ವ ಶಾಸಕರ ಮೇಲೆ ಹಲ್ಲೆಗೆ ಯತ್ನ ನಡೆಸಿದ್ದು ಎಷ್ಟು ಸರಿ? ಇದನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಗೂಂಡಾಗಿರಿ ಮಾಡುತ್ತಿದೆ, ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಸುರಿಯುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದು ಜನರು ಸಾಯುತ್ತಿದ್ದಾರೆ. ಇದ್ಯಾವುದನ್ನೂ ಸರಿಪಡಿಸದೇ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ಇವರು ನಡಿಗೆ ಮಾಡುತ್ತಿದ್ದಾರೆ? ಇದು ನಡುಗೆ…
ಬೆಂಗಳೂರು : ಬೆಂಗಳೂರಿನಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿಯೊಬ್ಬರಿಗೆ ಹೃದಯಾಘಾತ ಸಂಭವಿಸಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಯಶೋಧಾ ಎಂಬ ಶಿಕ್ಷಕಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಯಶೋಧಾ ಅವರು ಬೊಮ್ಮಸಂದ್ರ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೊಮ್ಮಸಂದ್ರದಲ್ಲಿ ಸಮೀಕ್ಷೆ ಕಾರ್ಯದಲ್ಲಿದ್ದಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಅಲ್ಲಿ ವೈದ್ಯರು ಆಪರೇಷನ್ ಮಾಡಿ ಸ್ಟೆಂಟ್ ಅಳವಡಿಸಿದ್ದಾರೆ.
ನವದೆಹಲಿ : ಈ ಡಿಜಿಟಲ್ ಯುಗದಲ್ಲಿ, ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಈಗ ನಾವು ಪಾವತಿ ಸೇರಿದಂತೆ ಹಲವು ಪ್ರಮುಖ ಕಾರ್ಯಗಳನ್ನು ಸುಲಭವಾಗಿ ಮಾಡಬಹುದು. ಆದರೆ ಸರ್ಕಾರಿ ಕೆಲಸ ಎಂದಾಗ ಆಗಾಗ ಸರ್ಕಾರಿ ಕಚೇರಿಗೆ ಹೋಗಬೇಕಾಗುತ್ತದೆ. ಆದರೆ, ಆ್ಯಪ್ ಮೂಲಕ ಹಲವು ಕೆಲಸಗಳನ್ನು ಪೂರ್ಣಗೊಳಿಸುವ ಅಥವಾ ಆ್ಯಪ್ ನಲ್ಲೇ ಮಾಹಿತಿ ಪಡೆಯುವ ಸೌಲಭ್ಯವನ್ನು ಸರ್ಕಾರ ಜನರಿಗೆ ನೀಡಿದೆ. ಹೌದು, ಸರ್ಕಾರ ಹಲವು ಆಪ್ ಗಳನ್ನು ಬಿಡುಗಡೆ ಮಾಡಿದೆ. ಈ ಅಪ್ಲಿಕೇಶನ್‌ಗಳ ಮೂಲಕ ನೀವು ಅನೇಕ ವಿವರಗಳನ್ನು ಪಡೆಯಬಹುದು. ಈ ಸರ್ಕಾರಿ ಆ್ಯಪ್‌ಗಳು ಹಲವು ಕೆಲಸಗಳನ್ನು ಸುಲಭಗೊಳಿಸುತ್ತವೆ. ನಿಮ್ಮ ಫೋನ್‌ನಲ್ಲಿ ನೀವು ಯಾವ ಸರ್ಕಾರಿ ಅಪ್ಲಿಕೇಶನ್‌ಗಳನ್ನು ಇಟ್ಟುಕೊಳ್ಳಬೇಕು ಎಂಬುದನ್ನು ನಾವು ಇಂದು ನಿಮಗೆ ತಿಳಿಸುತ್ತೇವೆ, ಇದರಿಂದ ನೀವು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವುದನ್ನು ತಪ್ಪಿಸಬಹುದು. ಉಮಂಗ್ ಅಪ್ಲಿಕೇಶನ್ ಆಧಾರ್ ಕಾರ್ಡ್, ಡಿಜಿಲಾಕರ್, ಪಾಸ್‌ಪೋರ್ಟ್ ಮತ್ತು ಇಪಿಎಫ್‌ಒಗಳಂತಹ ಸರ್ಕಾರಿ ಸೇವೆಗಳ ವಿವರಗಳನ್ನು ಒಂದೇ ಸ್ಥಳದಲ್ಲಿ ತಿಳಿಯಲು ಉಮಂಗ್ ಅಪ್ಲಿಕೇಶನ್ ತುಂಬಾ ಸಹಾಯಕವಾಗಿದೆ. ವಾಸ್ತವವಾಗಿ,…
ಬೆಂಗಳೂರು : ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ, ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ ಮಾಡುತ್ತಿದ್ದಾರೆ ಎಂದು ಶಾಸಕ ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಆಕ್ರೋಶ ಹೊರಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಡಿಗೆ ಕಾರ್ಯಕ್ರಮಕ್ಕೆ ಈ ಭಾಗದ ಸಂಸದರನ್ನು ಆಹ್ವಾನಿಸಿಲ್ಲ, ಶಾಸಕನಾಗಿರುವ ನನ್ನನ್ನೂ ಆಹ್ವಾನಿಸಿಲ್ಲ. ಸೋತ ಅಭ್ಯರ್ಥಿಯ ಜೊತೆ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದು ರಾಅಜಕೀಯಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮ ಹೊರತು ಜನರಿಗಾಗಿ, ಜನರ ಸಮಸ್ಯೆ, ಕುಂದುಕೊರತೆ ಆಲಿಸಲು ಮಾಡುತ್ತಿರುವ ಕಾರ್ಯಕ್ರಮವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ ಮಾಡುತ್ತಿದ್ದಾರೆ. ಶಾಸಕನಾಗಿರುವ ನನ್ನನ್ನೇ ಅವಮಾನಿಸಿದ್ದಾರೆ. ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನು ಕರೆಸಿದ್ದಾರೆ, ಇದು ಸಾರ್ವಜನಿಕ ಕಾರ್ಯಕ್ರಮವಲ್ಲ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಯಚೂರು : ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಅವರ ಕಾರು ಅಪಘಾತವಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋಲಪಲ್ಲಿ ಬಳಿ ನಡೆದಿದೆ. ದೇವದುರ್ಗ ಜೆಡಿಎಸ್ ಶಾಸಕಿ ಜಿ ಕರೆಮ್ಮಾ ನಾಯಕ್ ಪ್ರಯಾಣಿಸುತ್ತಿದ್ದ ಕಾರು ರಸ್ತೆಗೆ ಅಡ್ಡ ಬಂದ ನಾಯಿಯನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಬೆಟ್ಟಕ್ಕೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಕರೆಮ್ಮಾ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು: ಬೆಂಗಳೂರಿನ ಜೆ.ಪಿ ಪಾರ್ಕ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ʼಬೆಂಗಳೂರು ನಡಿಗೆʼ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರು ವೇದಿಕೆ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. ಮುನಿರತ್ನ ವೇದಿಕೆಗೆ ಹೋಗಿ ಡಿಕೆಶಿ ಬಳಿ ಮೈಕ್ ಕೇಳಿದರು. ಆದರೆ ಡಿಕೆಶಿ ಮೈಕ್ ನೀಡದೇ ಇಲ್ಲಿ ಕುಳಿತುಕೊಳ್ಳಿ ಎಂದರು. ಇದಕ್ಕೆ ಒಪ್ಪದ ಮುನಿರತ್ನ ಮೈಕ್ ನೀಡುವಂತೆ ಕೇಳಿದರು. ಕೊನೆಗೆ ಮುನಿರತ್ನ ಅವರು ಮೈಕ್ ಪಡೆದು, ಆರ್ಎಸ್ಎಸ್ ಪಥಸಂಚಲನ ಮುಗಿಸಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೇನೆ. ಸರ್ಕಾರದ ನಡಿಗೆ ಕಾರ್ಯಕ್ರಮಕ್ಕೆ ಈ ಭಾಗದ ಸಂಸದರನ್ನು ಆಹ್ವಾನಿಸಿಲ್ಲ, ಶಾಸಕನಾಗಿರುವ ನನ್ನನ್ನೂ ಆಹ್ವಾನಿಸಿಲ್ಲ. ಸೋತ ಅಭ್ಯರ್ಥಿಯ ಜೊತೆ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದು ರಾಅಜಕೀಯಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮ ಹೊರತು ಜನರಿಗಾಗಿ, ಜನರ ಸಮಸ್ಯೆ, ಕುಂದುಕೊರತೆ ಆಲಿಸಲು ಮಾಡುತ್ತಿರುವ ಕಾರ್ಯಕ್ರಮವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ ಮಾಡುತ್ತಿದ್ದಾರೆ.…














