Subscribe to Updates
Get the latest creative news from FooBar about art, design and business.
Author: kannadanewsnow57
BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು : ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜಿನ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು “ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಗರಿಷ್ಟ 06 ತಿಂಗಳುಗಳ ಮಿತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಮಂಜೂರು ಮಾಡಿರುವಂತೆಯೇ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ಸ್ವಯಂ ಚಾಲಿತವಾಗಿ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಲಭ್ಯವಿರುವ ಅಸಾಧಾರಣ ರಜೆಗಳನ್ನು ಒಳಗೊಂಡಂತೆ ಎಲ್ಲಾ ರಜೆಗಳನ್ನು ಮೊದಲು ಬಳಸಿಕೊಂಡು ನಂತರ ಅಗತ್ಯವಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದು ವಿಶೇಷ…
ಬೆಂಗಳೂರು : ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 1,500 ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲಿದೆ. ಆಗಸ್ಟ್ 25 ಮತ್ತು 26ರಂದು ಬೆಂಗಳೂರಿನಿಂದ ವಿಶೇಷ ಬಸ್ ಸೇವೆ ಇರಲಿದೆ. ದಿನಾಂಕ: 26.08.2025 ರಂದು ಸ್ವರ್ಣಗೌರಿ ವ್ರತ, ದಿನಾಂಕ 27.08.2025ರಂದು ಗಣೇಶ ಚತುರ್ಥಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:25.08.2025 ಹಾಗೂ 26.08.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:27.08.2025 ಹಾಗೂ 31.08.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. https://twitter.com/KarnatakaVarthe/status/1959225292607865075 • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. • ಮೈಸೂರು ರಸ್ತೆ…
ಬೆಂಗಳೂರು : 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ‘ನಂಬಿಕೆ ನಕ್ಷೆ’ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ. 7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ‘ಅಭಿವೃದ್ದಿ ಹೊಂದಿದ ಜಮೀನು ’ ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1959189818963099928
ತುಮಕೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತುಮಕೂರಿನಲ್ಲಿ ಹೃದಯಾಘಾತದಿಂದ ಕರ್ತವ್ಯನಿರತ ನರ್ಸ್ ಬಲಿಯಾಗಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕುಸಿದುಬಿದ್ದು ನರ್ಸ್ ಲತಾ (37) ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಪಾಳಿ ಕರ್ತವ್ಯಕ್ಕೆ ಹಾಜರಾಗಿದ್ದ ಲತಾ ಅವರು ಊಟ ಮುಗಿಸಿಕೊಂಡು ವಾಶ್ ರೂಂ ಬಳಿ ಹೋದಾಗ ಸುಸ್ತಾಗಿದ್ದರು. ಈ ವೇಳೆ ಚಿಕಿತ್ಸೆ ನೀಡುತ್ತಿದ್ದಂತೆಯೇ ಮೃತಪಟ್ಟಿದ್ದಾರೆ. ನರ್ಸ್ ಲತಾ ತುಮಕೂರು ತಾಲೂಕಿನ ಹಿರೇಹಳ್ಳಿ ನಿವಾಸಿಯಾಗಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪಣಜಿ : ಐದು ವರ್ಷದ ಮಗುವಿನ ಪೋಷಕರು ಒಂದನೇ ತರಗತಿಗೆ ಪ್ರವೇಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗೋವಾ ಹೈಕೋರ್ಟ್ ವಜಾಗೊಳಿಸಿದೆ. ಗೋವಾ ರಾಜ್ಯ ಸರ್ಕಾರವು ಡಿಸೆಂಬರ್ 13, 2022 ರ NEP, 2020 ಮತ್ತು RTE ಕಾಯ್ದೆ, 2009 ರ ಸುತ್ತೋಲೆಯನ್ನು 2025-26 ರಿಂದ ಜಾರಿಗೆ ತರಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ವಜಾಗೊಳಿಸಲಾಗಿದೆ. NEP ಪ್ರಕಾರ, ಮಗುವು 1 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಲು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಆರು ವರ್ಷಗಳನ್ನು ಪೂರ್ಣಗೊಳಿಸಬೇಕು ಎಂದು ಮಗುವಿನ ತಂದೆ ಹೈಕೋರ್ಟ್ಗೆ ಸಲ್ಲಿಸಿದರು. ಅರ್ಜಿದಾರರ ಮಗನಿಗೆ 5 ವರ್ಷ ಮತ್ತು 11 ತಿಂಗಳು. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ, ಮೊದಲ ತರಗತಿಗೆ ಪ್ರವೇಶಕ್ಕೆ ವಯಸ್ಸಿನ ಮಿತಿ ಆರು ವರ್ಷ ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು. ಆದ್ದರಿಂದ, ಅರ್ಜಿದಾರರ ಮಗನನ್ನು ಕಾನ್ವೆಂಟ್ ಒಂದನೇ ತರಗತಿಗೆ ಸೇರಿಸಲಿಲ್ಲ. ಇದನ್ನು ವಿರೋಧಿಸಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಸರ್ಕಾರಕ್ಕೆ ಈ ವಿಷಯವನ್ನು ಸ್ಪಷ್ಟಪಡಿಸುವಂತೆ ಕೇಳಿತ್ತು.…
ಕೊಪ್ಪಳ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅನ್ಯಕೋಮಿನ ಯುವಕ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಶಾಸಕ ಯತ್ನಾಳ್ ವಿರುದ್ಧ ಹುಸೇನಿ ಎಂಬುದ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋದಲ್ಲಿ ಆಜಾನ್ ಕುರಿತು ಅಧಿವೇಶನದಲ್ಲಿ ಶಾಸಕ ಯತ್ನಾಳ್ ಮಾತನಾಡಿದ್ದನ್ನು ಪ್ರಸ್ತಾಪಿಸಿದ್ದಾನೆ. ಯತ್ನಾಳ್ ಹೇಳಿಕೆ ಖಂಡಿಸಿ ನೀನು ಬೂಟು ನೆಕ್ಕಿದ ವಂಶಸ್ಥ ಹೇಳಿದ್ದ. ವಿಡಿಯೋ ವೈರಲ್ ಆಗುತ್ತಿದ್ದಂತೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಮುಸಲಾಪುರದಲ್ಲಿ ಶಾಸಕ ಯತ್ನಾಳ್ ಅಭಿಮಾನಿಗಳು ಜಮಾವಣೆಗೊಂಡಿದ್ದಾರೆ. ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ವಿಡಿಯೋ ಹರಿಬಿಟ್ಟಿರುವ ಹುಸೇನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನಕಗಿರಿ ಠಾಣೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿಯಲ್ಲಿ, ಈ ಯೋಜನೆಗೆ ಅರ್ಹರಾಗಿರುವ ಜನರಿಗೆ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ನೀಡಲಾಗುತ್ತದೆ. ಈ ಯೋಜನೆಗೆ ಸೇರಿದ ನಂತರ, ನಿಮ್ಮ ಆಯುಷ್ಮಾನ್ ಕಾರ್ಡ್ ಅನ್ನು ಮೊದಲು ತಯಾರಿಸಲಾಗುತ್ತದೆ ಏಕೆಂದರೆ ಇದು ನೀವು ಉಚಿತ ಚಿಕಿತ್ಸೆಯನ್ನು ಪಡೆಯುವ ಕಾರ್ಡ್ ಆಗಿದೆ, ಆದರೆ ನಿಮ್ಮ ನಗರದ ಯಾವ ಆಸ್ಪತ್ರೆಯಲ್ಲಿ ಈ ಆಯುಷ್ಮಾನ್ ಕಾರ್ಡ್‌ನೊಂದಿಗೆ ನಿಮ್ಮ ಉಚಿತ ಚಿಕಿತ್ಸೆಯನ್ನು ಪಡೆಯಬಹುದು ಎಂದು ತಿಳಿಯಬೇಕಾ? ಹಾಗಿದ್ರೆ ಮುಂದೆ ಓದಿ… ನೀವು ಆಯುಷ್ಮಾನ್ ಕಾರ್ಡ್ ಪಡೆದರೆ, ಈ ಯೋಜನೆಯಡಿಯಲ್ಲಿ, ನೀವು ಈ ಕಾರ್ಡ್ ಮೂಲಕ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತೀರಿ. ಆಯುಷ್ಮಾನ್ ಕಾರ್ಡ್ ಹೊಂದಿರುವವರು ವಾರ್ಷಿಕವಾಗಿ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು. ಕಾರ್ಡ್ ಹೊಂದಿರುವವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಸರ್ಕಾರವು ಪ್ರತಿ ಹಣಕಾಸು ವರ್ಷದಲ್ಲಿ ಆಯುಷ್ಮಾನ್ ಕಾರ್ಡ್‌ನಲ್ಲಿ ಈ ಮಿತಿಯನ್ನು ನಿಗದಿಪಡಿಸುತ್ತದೆ ಮತ್ತು ಕಾರ್ಡ್ ಹೊಂದಿರುವವರು ಇದನ್ನು ಉಚಿತ ಚಿಕಿತ್ಸೆಗಾಗಿ ಬಳಸಬಹುದು. ಈ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು…
ಬೆಂಗಳೂರು : ಪಡಿತರ ವಿತರಣೆಯಲ್ಲಿ ಅವ್ಯವಹಾರಗಳನ್ನು ತಪ್ಪಿಸುವ ಉದ್ದೇಶದಿಂದ ಬಯೋಮೆಟ್ರಿಕ್ ಆಧಾರಿತ ಪಡಿತರ ವಿತರಣೆಯನ್ನು ಕಡ್ಡಾಯಗೊಳಿಸಲಾಗಿದೆ. ವಯಸ್ಸಾದವರಿಗೆ ಬಯೋಮೆಟ್ರಿಕ್ ನೀಡಲು ತೊಂದರೆ ಉಂಟಾದಲ್ಲಿ ಐರೀಸ್ ಸ್ಕ್ಯಾನರ್ (ಕಣ್ಣಿನ ಮೂಲಕ ದೃಢೀಕರಣ) ಮಾಡಬಹುದಾಗಿದೆ. ಬಯೋಮೆಟ್ರಿಕ್ ಹಾಗೂ ಐರೀಸ್ ಎರಡರಲ್ಲಿಯೂ ಪಡಿತರ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ವಿನಾಯಿತಿ ನೀಡಿ ಪಡಿತರವನ್ನು ವಿತರಿಸಲಾಗುತ್ತಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1958831730716287194
ಧಾರವಾಡ : ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಡಳಿತಕ್ಕೆ ಪ್ರಾಥಮಿಕ ಸಮೀಕ್ಷಾ ವರದಿಯನ್ನು ಸಲ್ಲಿಸಿದ್ದು, ಶೀಘ್ರದಲ್ಲಿ ಸರ್ಕಾರಕ್ಕೆ ಈ ವರದಿ ಸಲ್ಲಿಸಿ, ಪರಿಹಾರ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು (ಆ.23) ಬೆಳಿಗ್ಗೆ ನವಲಗುಂದ ತಾಲೂಕಿನಲ್ಲಿ ನಿರಂತರ ಮಳೆಯಿಂದಾಗಿ ಆಗಿರುವ ಮನೆ ಹಾನಿ, ಬೆಳೆಹಾನಿ, ತಡಹಾಳ ಸೇತುವೆ ಹಾನಿ ಪರಿಶೀಲಿಸಿ, ಮಾತನಾಡಿದರು. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಉಪವಿಭಾಗಾಧಿಕಾರಿ, ತಹಶೀಲ್ದಾರರು, ಕೃಷಿ ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳು ಕಳೆದ 4 ದಿನಗಳಿಂದ ಬೆಳಹಾನಿಯ ಸಮಿಕ್ಷೆಯನ್ನು ತಂಡಗಳನ್ನು…
ನವದೆಹಲಿ : ಇತ್ತೀಚಿನ ದಿನಗಳಲ್ಲಿ ಬ್ರೈನ್ ಸ್ಟ್ರೋಕ್ ವೇಗವಾಗಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ. ಈ ಸಮಸ್ಯೆ ಎಷ್ಟು ಅಪಾಯಕಾರಿ ಎಂದರೆ ಅದು ವ್ಯಕ್ತಿಯ ಜೀವವನ್ನೇ ಬಲಿ ತೆಗೆದುಕೊಳ್ಳುತ್ತದೆ. ಬ್ರೈನ್ ಸ್ಟ್ರೋಕ್ ಎಂದರೇನು? ಮೆದುಳಿನ ಯಾವುದೇ ಭಾಗದಲ್ಲಿ ರಕ್ತದ ಹರಿವು ನಿಂತಾಗ ಅಥವಾ ಛಿದ್ರವಾಗಿ ರಕ್ತಸ್ರಾವ ಪ್ರಾರಂಭವಾದಾಗ ಬ್ರೈನ್ ಸ್ಟ್ರೋಕ್ ಸಂಭವಿಸುತ್ತದೆ. ಇದರಿಂದಾಗಿ, ಆ ಭಾಗದ ಮೆದುಳಿನ ಕೋಶಗಳು ಆಮ್ಲಜನಕ ಮತ್ತು ಪೋಷಣೆಯ ಕೊರತೆಯಿಂದಾಗಿ ಕೆಲವೇ ನಿಮಿಷಗಳಲ್ಲಿ ಸಾಯಲು ಪ್ರಾರಂಭಿಸುತ್ತವೆ. ಪಾರ್ಶ್ವವಾಯು ಮೆದುಳಿನ ಯಾವುದೇ ಭಾಗಕ್ಕೆ ಗಂಭೀರ ಹಾನಿಯನ್ನುಂಟುಮಾಡಬಹುದು. ಭಾರತದಲ್ಲಿ ಪ್ರತಿ 40 ಸೆಕೆಂಡುಗಳಿಗೆ ಒಂದು ಪಾರ್ಶ್ವವಾಯು ಪ್ರಕರಣ ಭಾರತದಲ್ಲಿ ಪಾರ್ಶ್ವವಾಯುವಿನ ಹೊರೆ ತುಂಬಾ ಹೆಚ್ಚಾಗಿದೆ. WHO ಮತ್ತು ಲ್ಯಾನ್ಸೆಟ್ ನರವಿಜ್ಞಾನದ ಇತ್ತೀಚಿನ ವರದಿಗಳ ಪ್ರಕಾರ, WHO ಪ್ರಕಾರ, ಪ್ರತಿ ವರ್ಷ 1.5 ಕೋಟಿ ಜನರು ಪಾರ್ಶ್ವವಾಯುವಿಗೆ ಒಳಗಾಗುತ್ತಾರೆ ಮತ್ತು ಈ ಪೈಕಿ ಸುಮಾರು 50 ಲಕ್ಷ ಜನರು ಸಾಯುತ್ತಾರೆ. ಪ್ರತಿ 40 ಸೆಕೆಂಡುಗಳಿಗೊಮ್ಮೆ ಹೊಸ ಪ್ರಕರಣ ವರದಿಯಾಗುತ್ತದೆ. ಭಾರತದಲ್ಲಿ ಅಧಿಕ ರಕ್ತದೊತ್ತಡವೇ…