Author: kannadanewsnow57

ಕಲಬುರಗಿ : ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕೇಂದ್ರ ಸರ್ಕಾರವೇ ಡಿಪ್ಲೋಮಾಟಿಕ್ ಪಾಸ್ ಪೋರ್ಟ್ ಕೊಟ್ಟಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣಗೆ ಡಿಪ್ಲೋಮಾಟಿಕ್ ಪಾಸ್ ಪೋರ್ಟ್ ಕೊಟ್ಟಿದೆ. ಮಹಿಳೆ ದೂರು ಕೊಟ್ಟ ಬಳಿಕವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ. ಮಹಿಳೆ ದೂರು ಕೊಟ್ಟ ಬಳಿಕ ಮಹಿಳಾ ಆಯೋಗ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಿತು. ನಂತರ ರಾಜ್ಯ ಸರ್ಕಾರ ಎಸ್ ಐಟಿ ರಚನೆಗೆ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ. ಪ್ರಜ್ವಲ್ ಪ್ರಕರಣ ಸಬಂದ ಎಲ್ಲಾ ಕಡೆ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದೇವೆ. ವಿಮಾನ ನಿಲ್ದಾಣ, ಬಂದರು ಸೇರಿ ಎಲ್ಲೆಡೆ ಲುಕ್ ಔಟ್ ನೋಟಿಸ್ ನೀಡಿದ್ದೇವೆ.ಕೇಂದ್ರ ಸರ್ಕಾರ ರಾಜ ತಾಂತ್ರಿಕ ಪಾಸ್ಪೋರ್ಟ್ ನೀಡಿದೆ. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವಂತೆ ಪತ್ರ ಬರೆದಿದ್ದೇವೆ ಪ್ರಜ್ವಲ್ ರೇನು ಶೀಘ್ರದಲ್ಲೇ ವಾಪಸ್ ಕಳಿಸುತ್ತೇವೆ ಎಂದರು. ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಸಿಎಂ ಸಿದ್ದರಾಮಯ್ಯ…

Read More

ಕಲಬುರಗಿ : ಲೌಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್ ಐಟಿ ವಿಚಾರಣೆಗೆ ಹಾಜರಾಗದಿದ್ದರೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೌಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ. ರೇವಣ್ಣಗೆ ಎಸ್ ಐಟಿ ನೋಟಿಸ್ ಜಾರಿ ಮಾಡಿದೆ. ಇಂದು ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಜಾರಿ ಮಾಡಿದ ೪೮ ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅವರು ವಿದೇಶದಲ್ಲಿ ಇರುವುದರಿಂದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರ ವಿರುದ್ದ ಎಲ್ಲಾ ಏರ್ ಪೋರ್ಟ್ ಗಳಿಗೆ ನೋಟಿಸ್ ನೀಡಿದ್ದೇವೆ ಎಂದು ಹೇಳಿದ್ದಾರೆ.

Read More

ನವದೆಹಲಿ : ತಾಯಂದಿರು ಮತ್ತು ಪುತ್ರರನ್ನು ಒಳಗೊಂಡ ಅಸಭ್ಯ ವಿಷಯಕ್ಕೆ ಸಂಬಂಧಿಸಿದಂತೆ ಇನ್ಸ್ಟಾಗ್ರಾಮ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗದ (ಎನ್ಸಿಪಿಸಿಆರ್) ಸೂಚನೆಯ ಮೇರೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. CrPC 91 ರ ಅಡಿಯಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆ ಮತ್ತು ಯುನೈಟೆಡ್ ಸ್ಟೇಟ್ಸ್ನಲ್ಲಿರುವ ಮೆಟಾ ಕಚೇರಿಗೆ ನೋಟಿಸ್ ನೀಡಲಾಗಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಪ್ರಸಾರವಾಗುತ್ತಿರುವ ಇಂತಹ ವೀಡಿಯೊಗಳ ಬಗ್ಗೆ ಮಕ್ಕಳ ಹಕ್ಕುಗಳ ಸಂಸ್ಥೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಕಳವಳ ವ್ಯಕ್ತಪಡಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ವೀಡಿಯೊಗಳು ತಾಯಂದಿರು ಮತ್ತು ಪುತ್ರರ ನಡುವೆ ಚುಂಬನಗಳಂತಹ ಅಸಭ್ಯ ಕೃತ್ಯಗಳನ್ನು ಒಳಗೊಂಡಿವೆ.ಅಂತಹ ವಿಷಯವನ್ನು ಒಳಗೊಂಡ ಇನ್ಸ್ಟಾಗ್ರಾಮ್ ಹ್ಯಾಂಡಲ್ ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್ಪುರದಲ್ಲಿ ಪತ್ತೆಯಾಗಿದೆ. ಈ ವರ್ಷದ ಜನವರಿಯಲ್ಲಿ, ಎನ್ಸಿಪಿಸಿಆರ್ ಯೂಟ್ಯೂಬ್ ಇಂಡಿಯಾದ ಸರ್ಕಾರಿ ವ್ಯವಹಾರಗಳು ಮತ್ತು ಸಾರ್ವಜನಿಕ ನೀತಿ ಮುಖ್ಯಸ್ಥರನ್ನು…

Read More

ನವದೆಹಲಿ : ಭಾರತದ ಉತ್ಪಾದನಾ ವಲಯದ ಬೆಳವಣಿಗೆಯು ಹಿಂದಿನ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸರಾಗವಾಗಿದ್ದರೂ ಏಪ್ರಿಲ್ನಲ್ಲಿ ಬಲವಾಗಿ ಉಳಿದಿದೆ. ಈ ಕಾರ್ಯಕ್ಷಮತೆಗೆ ಮುಖ್ಯವಾಗಿ ನಿರಂತರ ಬೇಡಿಕೆ ಕಾರಣವಾಗಿದೆ, ಇದು ವ್ಯವಹಾರಗಳು ಕಚ್ಚಾ ವಸ್ತುಗಳ ಸಂಗ್ರಹವನ್ನು ದಾಖಲೆಯ ವೇಗದಲ್ಲಿ ಹೆಚ್ಚಿಸಲು ಪ್ರೇರೇಪಿಸುತ್ತದೆ ಎಂದು ವರದಿ ತಿಳಿಸಿಎ. ಎಸ್ &ಪಿ ಗ್ಲೋಬಲ್ ಸಂಗ್ರಹಿಸಿದ ಎಚ್ಎಸ್ಬಿಸಿ ಅಂತಿಮ ಭಾರತ ಉತ್ಪಾದನಾ ಖರೀದಿ ವ್ಯವಸ್ಥಾಪಕರ ಸೂಚ್ಯಂಕ (ಪಿಎಂಐ) ಮಾರ್ಚ್ನಲ್ಲಿ 16 ವರ್ಷಗಳ ಗರಿಷ್ಠ 59.1 ರಿಂದ ಏಪ್ರಿಲ್ನಲ್ಲಿ 58.8 ಕ್ಕೆ ಇಳಿದಿದೆ. ಈ ಕುಸಿತವು ಯಾವುದೇ ಬದಲಾವಣೆಯ ಪ್ರಾಥಮಿಕ ಅಂದಾಜಿಗಿಂತ ಕಡಿಮೆಯಿದ್ದರೂ, ಇದು ಇನ್ನೂ ಘನ ವಿಸ್ತರಣೆಯನ್ನು ಸೂಚಿಸುತ್ತದೆ, ಇದು ಸತತ 34 ನೇ ತಿಂಗಳ ಬೆಳವಣಿಗೆಯನ್ನು ಸೂಚಿಸುತ್ತದೆ. ಬೆಳವಣಿಗೆಯನ್ನು ಸಂಕೋಚನದಿಂದ ಬೇರ್ಪಡಿಸುವ ಪಿಎಂಐ 50 ರ ಗಡಿಗಿಂತ ಆರಾಮವಾಗಿ ಉಳಿದಿದೆ. ಎಚ್ಎಸ್ಬಿಸಿಯ ಮುಖ್ಯ ಭಾರತೀಯ ಅರ್ಥಶಾಸ್ತ್ರಜ್ಞ ಪ್ರಂಜುಲ್ ಭಂಡಾರಿ, ಏಪ್ರಿಲ್ನ ಉತ್ಪಾದನಾ ಪಿಎಂಐ ಮೂರೂವರೆ ವರ್ಷಗಳಲ್ಲಿ ಕಾರ್ಯಾಚರಣೆಯ ಪರಿಸ್ಥಿತಿಗಳಲ್ಲಿ ಎರಡನೇ ವೇಗದ ಸುಧಾರಣೆಯನ್ನು ದಾಖಲಿಸಿದೆ. ಮಾರ್ಚ್ನಿಂದ…

Read More

ರಾಮನಗರ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕನದ್ದು ಎನ್ನಲಾದಂತ ಅಶ್ಲೀಲ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸಂಬಂಧ ಯುವತಿ ದೂರು ದಾಖಲಿಸಿದ್ದಾರೆ. ಶಾಸಕ ಇಕ್ಬಾಲ್‌ ಹುಸೇನ್‌ ಮತ್ತು ಯುವತಿಯ ವಾಟ್ಸಪ್‌ ವಿಡಿಯೋ ಕಾಲ್ ವೈರಲ್‌ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಫೇಸ್‌ಬುಕ್‌ನಲ್ಲಿ ವೀಡಿಯೋ ಹರಿಬಿಟ್ಟು ನನ್ನ ತೇಜೋವಧೆ ಮಾಡುತ್ತಿದ್ದಾರೆ‌. ಇದರಿಂದ ನನ್ನ ಮಾನಹಾನಿಯಾಗಿದ್ದು ವೀಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ರಾಮನಗರ ಕಾಂಗ್ರೆಸ್ ಶಾಸಕನ ವೀಡಿಯೋ ವೈರಲ್ ಆಗುತ್ತಿದ್ದಂತೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಪೊಲೀಸರಿಗೆ ನೀಡಿರುವಂತ ದೂರಿನಲ್ಲಿ, ಕಾಂಗ್ರೆಸ್…

Read More

ನವದೆಹಲಿ : ದಿವಾಳಿತನ ಪ್ರಕ್ರಿಯೆಗೆ ಒಳಗಾಗುತ್ತಿರುವ ವಿಮಾನಯಾನ ಕಂಪನಿ ಗೋ ಫಸ್ಟ್ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಗೋ ಫಸ್ಟ್ ವಿಮಾನಯಾನ ಸಂಸ್ಥೆಯ ಎಲ್ಲಾ 54 ವಿಮಾನಗಳ ನೋಂದಣಿಯನ್ನು ವಿಮಾನಯಾನ ನಿಯಂತ್ರಕ ಡಿಜಿಸಿಎ ರದ್ದುಗೊಳಿಸಿದೆ. ಇತ್ತೀಚೆಗೆ ದೆಹಲಿ ಹೈಕೋರ್ಟ್ ವಿಮಾನಯಾನ ಸಂಸ್ಥೆಯ 54 ವಿಮಾನಗಳ ನೋಂದಣಿಯನ್ನು ರದ್ದುಗೊಳಿಸುವಂತೆ ಆದೇಶಿಸಿತ್ತು. ಕಳೆದ ಶುಕ್ರವಾರ ದೆಹಲಿ ಹೈಕೋರ್ಟ್ ಆದೇಶದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಐದು ಕೆಲಸದ ದಿನಗಳಲ್ಲಿ ನೋಂದಣಿ ರದ್ದುಗೊಳಿಸಬೇಕು ಎಂದು ದೆಹಲಿ ಹೈಕೋರ್ಟ್ ಆದೇಶಿಸಿತ್ತು. ದೆಹಲಿ ಹೈಕೋರ್ಟ್ನ ನ್ಯಾಯಮೂರ್ತಿ ತಾರಾ ವಿಟಾಸ್ತ ಗಂಜೂ ಅವರು ಕಳೆದ ಶುಕ್ರವಾರ ದೀರ್ಘಕಾಲೀನ ವಿಮಾನಗಳಿಗೆ ಗುತ್ತಿಗೆದಾರರಿಗೆ ನಿರ್ವಹಣಾ ಅನುಮತಿ ನೀಡಿದರು. ಭಾರತೀಯ ಕಾನೂನಿನ ಪ್ರಕಾರ ಅವುಗಳನ್ನು ನೋಂದಣಿಯನ್ನು ರದ್ದುಗೊಳಿಸಲಾಗುವುದಿಲ್ಲ ಮತ್ತು ರಫ್ತು ಮಾಡಲಾಗುವುದಿಲ್ಲ. “ಪ್ರತಿವಾದಿ ಡಿಜಿಸಿಎ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಅರ್ಜಿದಾರರ ಗುತ್ತಿಗೆದಾರರಿಗೆ ಸಹಾಯ ಮಾಡಬೇಕು ಮತ್ತು ಅವರಿಗೆ ವಿಮಾನ ನಿಲ್ದಾಣಗಳಿಗೆ ಪ್ರವೇಶವನ್ನು ಒದಗಿಸಬೇಕು ” ಎಂದು ನ್ಯಾಯಾಲಯ ಹೇಳಿದೆ.

Read More

ಬೀದರ್ : ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಪ್ರದೀಪ್ (೨೫) ವರ್ದೀಶ್ (೨೫) ಎಂದು ಗುರುತಿಸಲಾಗಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬೀದರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಹುಬ್ಬಳ್ಳಿ : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಆರೋಪ ಕೇಳಿ ಬಂದಿರುವ ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸಿದ್ದು ಸಿಎಂ ಸಿದ್ದರಾಮಯ್ಯ ಎಂದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನೇರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸಿದ್ದು ಸಿಎಂ ಸಿದ್ದರಾಮಯ್ಯ, ಇದರಲ್ಲೇ ಅವರ ಗೇಮ್ ಗೊತ್ತಾಗುತ್ತದೆ. ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸಿ ಈಗ ಡ್ರಾಮಾ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ರೇವಣ್ಣರನ್ನು ವಿದೇಶಕ್ಕೆ ಕಳಿಸ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆಯುತ್ತಾರೆ. ಇದು ನನ್ನ ನೇರವಾದ ಆರೋಪ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Read More

ಹಾಸನ : ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪ ಸಂಬಂಧ ನವೀನ್ ಗೌಡ ಎಂಬಾತನನ್ನು ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟಿಸ್ ನೀಡಿದೆ.  ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ನವೀನ್ ಗೌಡಗೆ ಎಸ್ ಐಟಿ ನೋಟಿಸ್ ಜಾರಿ ಮಾಡಿದ್ದು, ಮೇ. ೪ ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಈಗಾಗಲೇ ನವೀನ್ ಗೌಡ ಎಸ್ ಐಟಿ ಅಧಿಕಾರಿಗಳಿಗೆ ಫೋನ್ ನಲ್ಲಿ ಪ್ರಾಥಮಿಕ ಮಾಹಿತ ನೀಡಿದ್ದು, ನಾನು ಪೆನ್ ಡ್ರೈ ಹಂಚಿಕೆ ಮಾಡಿಲ್ಲ ಎಂದು ಹೇಳಿದ್ದಾರೆ. ಹಾಸನದಲ್ಲಿ ಪೆನ್ ಡ್ರೈ ಹಂಚಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ದೂರು ದಾಖಲಾಗಿತ್ತು. ಈಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಹಾಸನದಲ್ಲಿ ಕಿಡಿಗೇಡಿಗಳು ದಿನಕೊಂದು ವಿಡಿಯೋಗಳನ್ನು ಹರಿಬಿಡುತ್ತಿದ್ದು, ವಿಡಿಯೋಗಳು, ಪೋಟೋಗಳನ್ನು ಕಿಡಿಗೇಡಿಗಳು ವಾಟ್ಸಪ್, ಇನ್ ಸ್ಟಾಗ್ರಾಂ ಹಾಗೂ ಟೆಲಿಗ್ರಾಂನಲ್ಲಿ ಶೇರ್ ಮಾಡಿ ವೈರಲ್ ಮಾಡುತ್ತಿದ್ದಾರೆ. ನೂರಾರು ಫೋಟೋಗಳು, ೨೦…

Read More

ನವದೆಹಲಿ : ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕಲಾಗಿದೆ. ದೆಹಲಿ ಮಹಿಳಾ ಆಯೋಗದ ಆಗಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ನಿಯಮಗಳಿಗೆ ವಿರುದ್ಧವಾಗಿ ಅನುಮತಿಯಿಲ್ಲದೆ ಅವರನ್ನು ನೇಮಕ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಮಹಿಳಾ ಆಯೋಗದ ಆಗಿನ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ನಿಯಮಗಳಿಗೆ ವಿರುದ್ಧವಾಗಿ ಅನುಮತಿಯಿಲ್ಲದೆ ಅವರನ್ನು ನೇಮಕ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹೇಳಿಕೆಯ ಪ್ರಕಾರ, ದೆಹಲಿ ಮಹಿಳಾ ಆಯೋಗವು ಒದಗಿಸಿದ ಲೆಕ್ಕಪರಿಶೋಧನಾ ಉತ್ತರಗಳು, ದಾಖಲೆಯಲ್ಲಿ ಲಭ್ಯವಿರುವ ವಸ್ತುಗಳು, ಕಾಲಕಾಲಕ್ಕೆ ಸರ್ಕಾರ ಹೊರಡಿಸಿದ ನಿಯಮಗಳು / ಕಾರ್ಯವಿಧಾನ / ಮಾರ್ಗಸೂಚಿಗಳ ಪ್ರಕಾರ, “ಡಿಸಿಡಬ್ಲ್ಯೂ ಕಾರ್ಯನಿರ್ವಹಣೆಯಲ್ಲಿ ದೊಡ್ಡ ಪ್ರಮಾಣದ ಆಡಳಿತಾತ್ಮಕ ಮತ್ತು ಆರ್ಥಿಕ ಅಕ್ರಮಗಳು / ಉಲ್ಲಂಘನೆಗಳು ಕಂಡುಬಂದಿವೆ,

Read More