Author: kannadanewsnow57

ನವದೆಹಲಿ : ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಗುರುವಾರ (ಡಿಸೆಂಬರ್ 26) ದೆಹಲಿಯಲ್ಲಿ ತಮ್ಮ 92 ನೇ ವಯಸ್ಸಿನಲ್ಲಿ ನಿಧರಾಗಿದ್ದು, ನಾಳೆ ದೆಹಲಿ ಲೋದಿ ರಸ್ತೆಯಲ್ಲಿರುವ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಯಾವಾಗ, ಎಲ್ಲಿ ನಡೆಯುತ್ತದೆ, ಹೇಗೆ ನಡೆಯುತ್ತದೆ ಎಂಬುದರ ಕುರಿತು ಇಲ್ಲಿದೆ ಮಾಹಿತಿ ವಾಸ್ತವವಾಗಿ, ಡಾ. ಮನಮೋಹನ್ ಸಿಂಗ್ ಅವರು ಮಾಜಿ ಪ್ರಧಾನಿಯಾಗಿದ್ದಾರೆ. ಆದ್ದರಿಂದ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ಅಂದರೆ ಡಿಸೆಂಬರ್ 28 ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಮಾಜಿ…

Read More

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ತಮ್ಮ 92 ನೇ ವಯಸ್ಸಿನಲ್ಲಿ ದೆಹಲಿ ಏಮ್ಸ್‌ನಲ್ಲಿ ನಿಧನರಾಗಿದ್ದು, ಇಂದು ದೆಹಲಿಯ ಮನಮೋಹನ್ ಸಿಂಗ್ ಅವರ ನಿವಾಸದಲ್ಲೇ ಗಣ್ಯರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ವಹೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸದ್ಯ ಅವರ ಪಾರ್ಥಿವ ಶರೀರವನ್ನು ದೆಹಲಿಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಬಳಿಕ ನಾಳೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಶುಕ್ರವಾರ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ. ನಾವು ಅಧಿಕೃತವಾಗಿ ಘೋಷಿಸುತ್ತೇವೆ. ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ದುರಂತದ ನಷ್ಟ ಎಂದು ಬಣ್ಣಿಸಿದ ಅವರು, ಮನಮೋಹನ್ ಸಿಂಗ್…

Read More

ನವದೆಹಲಿ : ಹೊಸ ವರ್ಷ ಬರಲಿದೆ ಮತ್ತು ಅದರೊಂದಿಗೆ ಬ್ಯಾಂಕ್ ರಜೆಗಳ ಹೊಸ ಪಟ್ಟಿಯನ್ನು ಸಹ ಸಿದ್ಧಪಡಿಸಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಸೂಚನೆಗಳ ಪ್ರಕಾರ, ಜನವರಿ 2025 ರಲ್ಲಿ ದೇಶಾದ್ಯಂತ 15 ದಿನಗಳವರೆಗೆ ಬ್ಯಾಂಕುಗಳು ಮುಚ್ಚಲ್ಪಡುತ್ತವೆ. ಈ ರಜಾದಿನಗಳನ್ನು ಎಲ್ಲಾ ರಾಜ್ಯಗಳಲ್ಲಿ ಏಕಕಾಲದಲ್ಲಿ ನಡೆಸಲಾಗುವುದಿಲ್ಲ. ಈ ರಜಾದಿನಗಳಲ್ಲಿ ರಾಷ್ಟ್ರೀಯ, ಸ್ಥಳೀಯ ಮತ್ತು ಸಾರ್ವಜನಿಕ ರಜಾದಿನಗಳು ಸೇರಿವೆ. ಈ ರಜಾದಿನಗಳು ರಾಜ್ಯಗಳಿಗೆ ಅನುಗುಣವಾಗಿ ಬದಲಾಗಬಹುದು. ಜನವರಿ 2025 ರ ಬ್ಯಾಂಕ್ ರಜಾದಿನಗಳ ಪಟ್ಟಿ ಜನವರಿ 1: ಹೊಸ ವರ್ಷದ ದಿನ ದೇಶದ ಹಲವು ರಾಜ್ಯಗಳಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಬ್ಯಾಂಕ್‌ಗಳು ಮುಚ್ಚಿರುತ್ತವೆ. 2 ಜನವರಿ: ಹೊಸ ವರ್ಷ ಮತ್ತು ಮನ್ನಂ ಜಯಂತಿ ಮಿಜೋರಾಂನಲ್ಲಿ ಹೊಸ ವರ್ಷ ಮತ್ತು ಕೇರಳದ ಮನ್ನಂ ಜಯಂತಿಯ ಕಾರಣ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಜನವರಿ 5: ಭಾನುವಾರ ಎಲ್ಲಾ ಬ್ಯಾಂಕ್‌ಗಳಲ್ಲಿ ವಾರದ ರಜೆ. 6 ಜನವರಿ: ಗುರು ಗೋಬಿಂದ್ ಸಿಂಗ್ ಜಯಂತಿ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಗುರು ಗೋವಿಂದ್…

Read More

ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ ಅಲ್ಲ. ಅವರೊಬ್ಬ ದೇಶ ಹಾಗೂ ಈ ಜಗತ್ತು ಕಂಡ ಮಹಾನ್ ಆರ್ಥಿಕ ತಜ್ಞ. ಇಂದು ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸಿದ್ದರೆ ಅದಕ್ಕೆ ಪ್ರಮುಖ ಕಾರಣ ಮನಮೋಹನ್ ಸಿಂಗ್ ಅವರ ಕ್ರಾಂತಿಕಾರಿ ನೀತಿಗಳು. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗ ಜಾಗತೀಕರಣಕ್ಕೆ ಒಡ್ಡಿಕೊಳ್ಳುವ ಮೂಲಕ ದೇಶವನ್ನು ಕಾಪಾಡಿದ ಆಪದ್ಭಾಂದವ. ಇದೇ ಕಾರಣಕ್ಕೆ ಸೋನಿಯಾ ಗಾಂಧಿ ಅವರು ತಮ್ಮ ಪಾಲಿಗೆ ಬಂದ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟರು. ಯುಪಿಎ ಮೊದಲ ಹಾಗೂ ಎರಡನೇ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ನರೇಗಾ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಆಹಾರ ಭದ್ರತಾ ಕಾಯ್ದೆಯಂತಹ ಕ್ರಾಂತಿಕಾರಿ ಯೋಜನೆಗಳನ್ನು ದೇಶದ ಜನತೆಗೆ ಕೊಟ್ಟಿದ್ದಾರೆ. ಇಂದು ಸಿಂಗ್ ಅವರು…

Read More

ಬೆಳಗಾವಿ : “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ. ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು” ಎಂದರು. “ಶುಕ್ರವಾರ ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು” ಎಂದು ಹೇಳಿದರು. “ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ…

Read More

ಭಾರತ ಇಂದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದ್ದರೆ, ಅದರ ಹಿಂದೆ ದೊಡ್ಡ ಪಾತ್ರ ವಹಿಸಿದವರಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಒಬ್ಬರು. ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದಾಗ ದೇಶದ ಆರ್ಥಿಕತೆಯ ಗಂಭೀರ ಸ್ಥಿತಿಯನ್ನು ಅರ್ಥಮಾಡಿಕೊಂಡು, ಕಾಲದ ಅಗತ್ಯವನ್ನು ಗ್ರಹಿಸಿ, ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಮಾರ್ಗದರ್ಶನದಲ್ಲಿ 1991 ರ ಹೊಸ ಆರ್ಥಿಕ ನೀತಿಯನ್ನು ತಂದರು. ಈ ಪ್ರಮುಖ ಆರ್ಥಿಕ ಸುಧಾರಣೆಯೇ ಭಾರತಕ್ಕೆ ಪ್ರಗತಿಯ ಹಾದಿಯನ್ನು ತೋರಿಸಿತು. ಆರ್ಥಿಕತೆಯು ಕ್ರಮೇಣ ವೇಗವನ್ನು ಪಡೆಯಲಾರಂಭಿಸಿತು. ಆರ್ಥಿಕ ನೀತಿಯು ಆರ್ಥಿಕ ಕ್ಷೇತ್ರದಲ್ಲಿ ಸರ್ಕಾರಗಳು ಮಾಡುವ ಕೆಲಸವನ್ನು ಸೂಚಿಸುತ್ತದೆ. ಇದು ತೆರಿಗೆಯ ಮಟ್ಟಗಳು, ಸರ್ಕಾರದ ಬಜೆಟ್‌ಗಳು, ಹಣ ಪೂರೈಕೆ ಮತ್ತು ಬಡ್ಡಿದರಗಳು, ಹಾಗೆಯೇ ಕಾರ್ಮಿಕ ಮಾರುಕಟ್ಟೆಗಳು, ರಾಷ್ಟ್ರೀಯ ಮಾಲೀಕತ್ವ ಮತ್ತು ಆರ್ಥಿಕತೆಯಲ್ಲಿ ಸರ್ಕಾರದ ಹಸ್ತಕ್ಷೇಪದ ಇತರ ಹಲವು ಕ್ಷೇತ್ರಗಳನ್ನು ಒಳಗೊಂಡಿದೆ. 1991 ರ ಆರ್ಥಿಕ ಬಿಕ್ಕಟ್ಟು 1985 ರ ಹೊತ್ತಿಗೆ, ಭಾರತದಲ್ಲಿ ಪಾವತಿ ಬಾಕಿ ಸಮಸ್ಯೆಗಳು ಪ್ರಾರಂಭವಾದವು. ಕಡಿಮೆ ಆದಾಯವನ್ನು ಉತ್ಪಾದಿಸಿದಾಗ ಸರ್ಕಾರದಿಂದ ಹೆಚ್ಚು ಖರ್ಚು…

Read More

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ತಮ್ಮ 92 ನೇ ವಯಸ್ಸಿನಲ್ಲಿ ದೆಹಲಿ ಏಮ್ಸ್‌ನಲ್ಲಿ ನಿಧನರಾಗಿದ್ದು, ಇಂದು ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ವಹೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸದ್ಯ ಅವರ ಪಾರ್ಥಿವ ಶರೀರವನ್ನು ದೆಹಲಿಯ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಬಳಿಕ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದ್ದು, ಶುಕ್ರವಾರ ಅಧಿಕೃತ ಘೋಷಣೆಯಾಗುವ ನಿರೀಕ್ಷೆಯಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ. ನಾವು ಅಧಿಕೃತವಾಗಿ ಘೋಷಿಸುತ್ತೇವೆ. ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ದುರಂತದ ನಷ್ಟ ಎಂದು ಬಣ್ಣಿಸಿದ ಅವರು, ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಮತ್ತು…

Read More

ನವದೆಹಲಿ : ದೇಶದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ದೇಶದ 14 ನೇ ಪ್ರಧಾನಿಯಾಗಿದ್ದರು. ಪ್ರಧಾನಿಯಾಗಿ, ಅವರು ದೇಶದ ಆರ್ಥಿಕತೆ ಮತ್ತು ಭವಿಷ್ಯವನ್ನು ಶಾಶ್ವತವಾಗಿ ಬದಲಾಯಿಸುವ ಅನೇಕ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡರು. ಅವರನ್ನು ಭಾರತೀಯ ಆರ್ಥಿಕತೆಯ ಭೀಷ್ಮ ಪಿತಾಮಹ ಎಂದು ಕರೆಯಲಾಗುತ್ತದೆ. ಡಾ. ಮನಮೋಹನ್ ಸಿಂಗ್ ಅವರ ಅಂತಹ ಐದು ದೊಡ್ಡ ನಿರ್ಧಾರಗಳ ತಿಳಿಯೋಣ MNREGA (2005) 2004ರಲ್ಲಿ ಡಾ.ಮನಮೋಹನ್ ಸಿಂಗ್ ದೇಶದ ಪ್ರಧಾನಿಯಾದರು. ಮುಂದಿನ ವರ್ಷ 2005 ರಲ್ಲಿ, ಅವರು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಅಂದರೆ NREGA ಅನ್ನು ಜಾರಿಗೆ ತಂದರು. ನಂತರ ಈ ಯೋಜನೆಯ ಹೆಸರು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ ಅಂದರೆ MNREGA. ಈ ಕಾನೂನಿನ ಅಡಿಯಲ್ಲಿ, ದೇಶದ ಹಳ್ಳಿಗಳಲ್ಲಿ ವಾಸಿಸುವ ಪ್ರತಿ ಕುಟುಂಬದ…

Read More

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 92 ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ನಂತರ ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತದ ರಾಜಕಾರಣಿಗಳು ದುಃಖ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಕೂಡ ಸಂತಾಪ ಸೂಚಿಸಿದ್ದು, ಭಾರತವು ಇಂದು ತನ್ನ ಅತ್ಯಂತ ಅದ್ಭುತ ಮಗನನ್ನು ಕಳೆದುಕೊಂಡಿದೆ ಎಂದು ಹೇಳಿದರು. ಮನಮೋಹನ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿರುವ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ. ಭಾರತವು ತನ್ನ ಅತ್ಯಂತ ಅದ್ಭುತ ಪುತ್ರರಲ್ಲಿ ಒಬ್ಬನನ್ನು ಕಳೆದುಕೊಂಡಿದೆ ಎಂದು ಹೇಳಿದರು. ಡಾ.ಮನಮೋಹನ್ ಸಿಂಗ್ ಅವರು ಅಫ್ಘಾನಿಸ್ತಾನದ ಜನರಿಗೆ ಅಚಲ ಮಿತ್ರ ಮತ್ತು ಸ್ನೇಹಿತರಾಗಿದ್ದರು. ನಾನು ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಮತ್ತು ಅವರ ಕುಟುಂಬಕ್ಕೆ, ಸರ್ಕಾರಕ್ಕೆ ಮತ್ತು ಭಾರತದ ಜನರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ ದೆಹಲಿಯ ಏಮ್ಸ್ ನಲ್ಲಿ ತಮ್ಮ 92 ನೇ…

Read More

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಂದಿನಿ ಲೇಔಟ್ ಠಾಣೆಯಲ್ಲಿ 100-150 ಜನ ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮೊಟ್ಟೆ ಎಸೆತ ಪ್ರಕರಣ ಸಂಬಂಧ ಶಾಸಕ ಮುನಿರತ್ನ ನೀಡಿರುವ ದೂರಿನಲ್ಲಿ, ಆರ್.ಆರ್. ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸು ಉಲ್ಲೇಖಿಸಲಾಗಿದೆ. ತಮ್ಮನ್ನು 100-150 ಜನರ ಮೂಲಕ ಹತ್ಯೆಗೆ ಕಾಂಗ್ರೆಸ್ ನಾಯಕರು ಸಂಚು ನಡೆಸಿದ್ದಾರೆ ಎಂದು ಅರೋಪಿಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರಳುವಾಗ ಮುನಿರತ್ನ ಮೇಲೆ ಕಿಡಿಗೇಡಿಗಳು ಮೊಟ್ಟೆ ಎಸೆದಿದ್ದರು. ಘಟನೆ ಬಳಿಕೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಶಾಸಕ ಮುನಿರತ್ನ ತಮ್ಮ ಮೇಲೆ ಆ್ಯಸಿಡ್ ಮೊಟ್ಟೆ ಎಸೆದು ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

Read More