Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯದಲ್ಲಿ ಬಾಲಕ ಸೇರಿ ಮತ್ತೆ ನಾಲ್ವರು ಬಲಿಯಾಗಿದ್ದಾರೆ. ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಗದಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ಬೆಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ಬಾಲಕ ಮಹೇಶ್ (10), ಶಿವಮೊಗ್ಗ ತಾಲೂಕಿನ ಹರಮಘಟ್ಟದಲ್ಲಿ ರಾಕೇಶ್ (28), ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಪಾಲಡ್ಕ ನಿವಾಸಿ ನಿತಿನ್ (24) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸುಳಿ ಗಾಳಿ ಪರಿಣಾಮ ರಾಜ್ಯದ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ…

Read More

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 384 ಕೆಎಎಸ್ ಹುದ್ದೆ’ಗಳ ನೇಮಕಾತಿಗೆ ಸಂಬಂಧಿಸಿದಂತೆ ‘ಪೂರ್ವಭಾವಿ ಪರೀಕ್ಷೆ ದಿನಾಂಕ ಪ್ರಕಟಿಸಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಸಂಖ್ಯೆ:ಪಿಎಸ್ ಸಿ 509/ಇ(1)/2023-24, ದಿನಾಂಕ:26-02-2024ರಂದು ಹೊರಡಿಸಿದ್ದು, ಸದರಿ ಅಧಿಸೂಚನೆಗೆ ದಿನಾಂಕ:02-04-2024ರಂದು ಉಲ್ಲೇಖಿತ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಿ, ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:07-07-2024ರಂದು ನಡೆಸಲು ನಿಗದಿಪಡಿಸಲಾಗಿತ್ತು. ಪ್ರಸ್ತುತ ಸದರಿ ದಿನಾಂಕದಂದು ಕೇಂದ್ರ ಲೋಕಸೇವಾ ಆಯೋಗದ ಇ.ಪಿ.ಎಫ್.ಓ. ಪರೀಕ್ಷೆ ಇರುವುದರಿಂದ ಹಾಗೂ ಹಲವಾರು ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು. ಮುಂದೂಡುವಂತೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:21-07-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ.

Read More

ಬೆಂಗಳೂರು : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ-2024ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಇದೇ ಏಪ್ರಿಲ್ 26ರ ಶುಕ್ರವಾರ ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರ ಮಂಗಳವಾರ ನಡೆಸುತ್ತಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗಳಿಗೆ ಮತದಾನದ ದಿನದಂದು ವೇತನ ಸಹಿತ ರಜೆಯನ್ನು ನೀಡುವಂತೆ ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ. ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಬೇಕು. ಈ ಆದೇಶ ಉಲ್ಲಂಘನೆ ಮಾಡಿದರೆ ಸಂಬಂಧಪಟ್ಟ ಸಂಸ್ಥೆ, ನಿಯೋಜಕರು, ವ್ಯವಸ್ಥಾಪಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಅರ್ಹ ಮತದಾರ ಮತದಾನದ…

Read More

ಬಳ್ಳಾರಿ : ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಬರುವ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮಗಳಲ್ಲಿ ಭೂ ಒಡೆತನ ಯೋಜನೆಯಡಿ ಭೂ ಒಡೆತನದ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಜೇಷ್ಠತಾ ಪಟ್ಟಿಯನ್ನು ಅಂತರ್ಜಾಲ www.ballari.nic.in ನಲ್ಲಿ ಮತ್ತು ಜಿಲ್ಲಾ ಕಚೇರಿಯ ಸೂಚನಾ ಫಲಕದಲ್ಲಿಯೂ ಅಳವಡಿಸಲಾಗಿದೆ. ಆಕ್ಷೇಪಣೆಗಳಿರುವ ಭೂ ಮಾಲೀಕರು 07 ದಿನಗಳೊಳಗಾಗಿ ಈ ಕಚೇರಿಗೆ ಸಲ್ಲಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Read More

ಚಿಕ್ಕಬಳ್ಳಾಪುರ : ಲೋಕಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯಗೆ ನೀತಿ ಸಂಹಿತೆ ಬಿಸಿ ತಟ್ಟಿದೆ. ಚುನಾವಣಾಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಬಸ್ ಅನ್ನು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರದ ಐಬಿ ಬಳಿ ಸಿಎಂ ಸಿದ್ದರಾಮಯ್ಯ ಬಸ್ ಪರಿಶೀಲನೆ ನಡೆಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕಾಗಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ್ದು, ಈ ವೇಳೆ ಚುನಾವಣಾಧಿಕಾರಿಗಳು ಬಸ್ ಪರಿಶೀಲನೆ ನಡೆಸಲಾಗಿದೆ.

Read More

ಬೆಂಗಳೂರು : ಮೇ-2024ಮಾಹೆಯಲ್ಲಿ ನಡೆಯಲಿರುವ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಪರೀಕ್ಷೆಗೆ ರಾಜ್ಯದ ಸರ್ಕಾರಿ ಡಿ.ಇಎಲ್.ಇಡಿ ಸಂಸ್ಥೆಗಳು ಹಾಗೂ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಿಂದ ಪರೀಕ್ಷಾ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2023-24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ವಾರ್ಷಿಕ ಕಾರ್ಯ ಯೋಜನೆಯಂತೆ ಶೈಕ್ಷಣಿಕ ಅವಧಿಯ ಪರೀಕ್ಷೆಗಳನ್ನು ಮೇ-2024 ಮಾಹೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಹೊಸ ಮತ್ತು ಪುನರಾವರ್ತಿತ ಅಭ್ಯರ್ಥಿಗಳಿಗೆ ಲಿಖಿತ (ಥಿಯರಿ) ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2019-20ನೇ ಸಾಲಿನಿಂದ ಡಿ.ಇಎಲ್.ಇಡಿ ಪರೀಕ್ಷಾ ಪ್ರಕ್ರಿಯೆಗಳನ್ನು Online ವ್ಯವಸ್ಥೆಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ಡಿ.ಇಎಲ್.ಇಡಿ. ಪರೀಕ್ಷೆಗೆ Online ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. 1. ಸರ್ಕಾರಿ ಡಿ.ಇಎಲ್.ಇಡಿ ಸಂಸ್ಥೆಗಳು ಹಾಗೂ ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದು ನಿಯಮಾನುಸಾರ ಶೈಕ್ಷಣಿಕ ಚಟುವಟಿಕೆಗಳನ್ನು ನಿರ್ವಹಿಸುತ್ತಿರುವ ಖಾಸಗಿ ಅನುದಾನಿತ…

Read More

ಮಂಡ್ಯ : ಮಂಡ್ಯ ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಇಂದು ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇಂದು ಮಂಡ್ಯ ಲೋಕಸಭಾ ಕ್ಷೇತ್ರದ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮತ ಹಾಕಿ. ಉದಯ್, ನರೇಂದ್ರ ಸ್ವಾಮಿ ಕೈ ಬಲ ಪಡಿಸಿ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ಅಂಬರೀಶ್ ಪರವಾಗಿ ನಟರಾದ ದರ್ಶನ್ ಮತ್ತು ಯಶ್ ಮಂಡ್ಯ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೂ ತೆರಳಿ ಚುನಾವಣೆ ಪ್ರಚಾರ ನಡೆಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿ ಅವರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದರ್ಶನ್, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

Read More

ಬೆಂಗಳೂರು : ನಾಳೆಯಿಂದ ಅಂದರೆ ಏಪ್ರಿಲ್ 19, 2024 ರಿಂದ ದೇಶದಲ್ಲಿ ಲೋಕಸಭಾ ಚುನಾವಣೆಗಳು ಪ್ರಾರಂಭವಾಗಲಿವೆ. ಮತದಾರರ ಪಟ್ಟಿಯಲ್ಲಿ ಹೆಸರು ಇರುವ ವ್ಯಕ್ತಿ ಮಾತ್ರ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಒಬ್ಬ ವ್ಯಕ್ತಿಯ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿದ್ದರೆ, ಅವನು ಮತ ಚಲಾಯಿಸಲು ಸಾಧ್ಯವಿಲ್ಲ. ಅದೇ ಸಮಯದಲ್ಲಿ, ಮತದಾರರ ಗುರುತಿನ ಚೀಟಿ ಹೊಂದಿರುವ ಜನರು ಮತದಾನದಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸುವುದಿಲ್ಲ. ನಿಮ್ಮ ಬಳಿ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ ಅಥವಾ ಇಲ್ಲವೇ ಎಂದು ನಿಮಗೆ ಹೇಗೆ ತಿಳಿಯುತ್ತದೆ? ಇದರೊಂದಿಗೆ, ಮತದಾರರ ಪಟ್ಟಿಗೆ ನಿಮ್ಮ ಹೆಸರನ್ನು ಹೇಗೆ ಸೇರಿಸಬಹುದು ಎಂಬುದನ್ನು ಸಹ ನಾವು ನಿಮಗೆ ತಿಳಿಸುತ್ತೇವೆ ನಿಮ್ಮ ಬಳಿ ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಮತ ಚಲಾಯಿಸುವುದು ಹೇಗೆ? ಪ್ರಕ್ರಿಯೆ ಏನು ಎಂದು ತಿಳಿಯಿರಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ? ನೀವು ಸಹ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಲು ಬಯಸಿದರೆ. ಇದಕ್ಕಾಗಿ, ನೀವು https://electoralsearch.in/…

Read More

ಬೆಂಗಳೂರು : ಗ್ಯಾರಂಟಿ ಯೋಜನೆಗಳು ತಾತ್ಕಲಿಕವಲ್ಲ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳು ತಾತ್ಕಾಲಿಕವಲ್ಲ, ಯಾವುಏ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಕೆಲಸ ಮಾಡುತ್ತೇವೆ. ಮುಂದಿನ ವರ್ಷ ೫೨ ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. ಕರ್ನಾಟಕದಲ್ಲಿಕ ಈ ಟರ್ಮ್ ನಾವೇ ಇರುತ್ತೇವೆ. ಮುಂದಿನ ಟರ್ಮ್ ಸಹ ನಾವೇ ಇರುತ್ತೇವೆ ಎಂದು ಹೇಳಿದ್ದಾರೆ.

Read More

ನವದೆಹಲಿ : ಕಣ್ಣಿನ ಕ್ಯಾನ್ಸರ್ ಕಣ್ಣಿನ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ನ ಅಪರೂಪದ ರೂಪಗಳಲ್ಲಿ ಒಂದಾಗಿದೆ, ಕಣ್ಣಿನ ಕ್ಯಾನ್ಸರ್ ನಿಮ್ಮ ಕಣ್ಣುಗುಡ್ಡೆ ಮತ್ತು ಕಣ್ಣುಗುಡ್ಡೆಯ ಸುತ್ತಲಿನ ರಚನೆಗಳು ಸೇರಿದಂತೆ ನಿಮ್ಮ ಕಣ್ಣಿನ ವಿವಿಧ ಪ್ರದೇಶಗಳಲ್ಲಿ ಪ್ರಾರಂಭವಾಗುವ ಹಲವಾರು ಅಪರೂಪದ ರೀತಿಯ ಕ್ಯಾನ್ಸರ್ಗಳನ್ನು ಒಳಗೊಂಡಿದೆ ಎಂದು ವೈದ್ಯರು ಹೇಳುತ್ತಾರೆ. ಜೀವಕೋಶಗಳು ನಿಯಂತ್ರಣವನ್ನು ಮೀರಿ ದ್ವಿಗುಣಗೊಂಡು ಗೆಡ್ಡೆಯನ್ನು ರೂಪಿಸಿದಾಗ ಕಣ್ಣಿನ ಕ್ಯಾನ್ಸರ್ ಪ್ರಾರಂಭವಾಗುತ್ತದೆ. ಕ್ಯಾನ್ಸರ್ ಸಂಶೋಧನೆಯ ಪ್ರಕಾರ, ಹೆಚ್ಚಿನ ರೀತಿಯ ಕ್ಯಾನ್ಸರ್ಗಳಂತೆ, ಆರಂಭಿಕ ರೋಗನಿರ್ಣಯವು ಪರಿಣಾಮಕಾರಿ ಚಿಕಿತ್ಸೆ ಮತ್ತು ಬದುಕುಳಿಯುವ ಪ್ರಮಾಣವನ್ನು ಹೆಚ್ಚಿಸಲು ಪ್ರಮುಖವಾಗಿದೆ. ಆದ್ದರಿಂದ, ಈ ರೋಗದ ಆರಂಭಿಕ ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಕಣ್ಣಿನ ಕ್ಯಾನ್ಸರ್ ನ ಆರಂಭಿಕ ಸೂಚಕಗಳು ತಜ್ಞರ ಪ್ರಕಾರ, ಕಣ್ಣಿನ ಕ್ಯಾನ್ಸರ್ ಹೊಂದಿರುವ ಅನೇಕ ಜನರು ತಮ್ಮ ಕಣ್ಣು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದಕ್ಕೆ ಅಡ್ಡಿಯಾಗುವ ಸ್ಥಳದಲ್ಲಿ ಗೆಡ್ಡೆ ಬೆಳೆಯದ ಹೊರತು ರೋಗಲಕ್ಷಣಗಳನ್ನು ಅನುಭವಿಸುವುದಿಲ್ಲ. ರೋಗಲಕ್ಷಣಗಳನ್ನು ಅನುಭವಿಸುವುದು ನಿಮಗೆ ಕಣ್ಣಿನ ಕ್ಯಾನ್ಸರ್ ಇದೆ ಎಂದು…

Read More