Author: kannadanewsnow57

ಚಿತ್ರದುರ್ಗ : ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಂಪನಿಗಳು ಪಾಲ್ಗೊಂಡು, ಜಿಲ್ಲೆಯ ಬಹಳಷ್ಟು ಅಭ್ಯರ್ಥಿಗಳಿಗೆ ಉದ್ಯೋಗ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಸೂಕ್ತ ಸಿದ್ಧತೆ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್ ಸೂಚನೆ ನೀಡಿದರು. ಬೃಹತ್ ಉದ್ಯೋಗ ಮೇಳ ಆಯೋಜನೆ ಸಂಬಂಧ ಜಿಲ್ಲಾ ಪಂಚಾಯತಿಯ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾ. 01 ರಂದು ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಮೊದಲ ಹಂತದಲ್ಲಿ ಜಿಲ್ಲಾಧಿಕಾರಿಗಳು ಪೂರ್ವಸಿದ್ಧತಾ ಸಭೆ ಕೈಗೊಂಡು, ಸಲಹೆ ಸೂಚನೆಗಳನ್ನು ನೀಡಿದ್ದಾರೆ, ಅಲ್ಲದೆ ಉದ್ಯೋಗ ಮೇಳವನ್ನು ಯಶಸ್ವಿಯಾಗಿ ಆಯೋಜಿಸಲು ಒಟ್ಟು 07 ಉಪಸಮಿತಿಗಳನ್ನು ಕೂಡ ರಚಿಸಿದ್ದಾರೆ ಎಂದರು. ಚಿತ್ರದುರ್ಗ ಜಿಲ್ಲೆಯಲ್ಲಿ ಉನ್ನತ ವ್ಯಾಸಂಗ ಮಾಡಿದವರ ಸಂಖ್ಯೆ…

Read More

ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ, ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಹೆಚ್ಚು ಅಂಕಗಳಿಸಲು ಕೆಲವೊಂದು ಸಲಹೆಗಳನ್ನು ಪಾಲಿಸಿ. ಒದುವ ಕಲೆ ಒಂದು ತಪಸ್ಸು. ಅದು ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಮುಲ್ಯ ಘಟ್ಟ ಕೂಡ. ನಿಷ್ಠೆ, ಶ್ರದ್ಧೆಯಿಂದ ಓದಿದಾಗ, ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದರೊಂದಿಗೆ, ಉತ್ತಮ ಸಾಧನೆಗೂ ಸಹಕಾರಿಯಾಗಲಿದೆ. ಹಾಗಾದ್ರೇ.. ಓದುವ ಕಲೆಯನ್ನು ಹೇಗ್ ರೂಢಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಓದೋದಕ್ಕೆ ಯಾವೆಲ್ಲಾ ಟಿಪ್ಸ್ ಅಳವಡಿಸಿಕೊಳ್ಳಬೇಕು ಎನ್ನುವ ಬಗ್ಗೆ ಮುಂದೆ ಓದಿ.. ಓದುವುದು ಹೇಗೆ? ವಿದ್ಯಾರ್ಥಿಗಳಿಗೆ ಓದು ಅನಿವಾರ್ಯ ಹಾಗೂ ಅಗತ್ಯ ಆದರೆ ಇಂದಿನ ಬಹುತೇಕ ವಿದ್ಯಾರ್ಥಿಗಳಿಗೆ ಅದೊಂದು ತಲೆನೋವಿನ ಸಂಗತಿಯೆನಿಸಿ, ಪರೀಕ್ಷೆಗಾಗಿ ಓದುವ ಕರ್ಮ ಆಗಿಬಿಟ್ಟಿದೆ, ಎನ್ನುವ ದೃಷ್ಟಿಯಿಂದ ಪುಸ್ತಕವನ್ನು ಕೈಗೆತ್ತಿಕೊಳ್ಳುವವರೇ ಬಹಳ ಜನ. ಬಹುತೇಕ ವಿದ್ಯಾರ್ಥಿಗಳಿಗೆ ಓದುವ ಸರಿಯಾದ ಪದ್ಧತಿ ಗೊತ್ತಿಲ್ಲದಿರುವುದೇ ಇಂಥ ಮನೋಭಾವಕ್ಕೆ ಕಾರಣ. ಹಾಗಾಗಿ ಓದಿನಲ್ಲಿ ಆಸಕ್ತಿ ಮೂಡದೆ, ಪರೀಕ್ಷೆಗಳಲ್ಲಿ ಕಡಿಮೆ ಅಂಕ ಪಡೆಯುತ್ತಿರುತ್ತಾರೆ, ಇಲ್ಲವೆ ಅನುತ್ತೀರ್ಣರಾಗುತ್ತಾರೆ. ಇನ್ನು ಕೆಲ ವಿದ್ಯಾರ್ಥಿಗಳ…

Read More

ಬೆಳಗಾವಿ : ಕನ್ನಡ ಮಾತನಾಡಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪುಂಡರು ಹಲ್ಲೆ ನಡೆಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆಯುತ್ತಿದೆ. ಇದೀಗ ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರದ ಬಸ್ ತಡೆದು, ಪ್ರತಿಭಟನೆ ನಡೆಸಲಾಗಿದೆ. ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್‌ ತಡೆದು ಪ್ರತಿಭಟನೆ ನಡೆಸಲಾಗಿದೆ. ಕೊಲ್ಹಾಪುರದಲ್ಲಿ ಶಿವಸೇನೆ ಭಾರೀ ಪ್ರತಿಭಟನೆ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕರ್ನಾಟಕ – ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಸರ್ಕಾರಿ ಬಸ್ ಸಂಚಾರ ಎರಡು ದಿನಗಳಿಂದ ಬಂದ್ ಆಗಿದ್ದು, ಇಂದು ಕೂಡ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರದಲ್ಲಿ ಶಿವಸೇನೆ ನಡೆಸುತ್ತಿರುವ ಪ್ರತಿಭಟನೆ ಇದಕ್ಕೆ ಕಾರಣ. ಸದ್ಯ ಕರ್ನಾಟಕ-ಮಹಾರಾಷ್ಟ್ರ ನಡುವಿನ 250 ಕ್ಕೂ ಹೆಚ್ಚು ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಈ ನಡುವೆ ಘಟನೆ ಖಂಡಿಸಿ ಇಂದು ಬೆಳಗಾವಿಯಲ್ಲಿ ಬೆಳಗ್ಗೆ11.30 ಕ್ಕೆ ನಾರಾಯಣಗೌಡ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

Read More

ಕೊಪ್ಪಳ : ರಾಜ್ಯದಲ್ಲಿ ಸಾಲಗಾರರ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಹಾಳ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯಂಕಪ್ಪ ಬಂಗಿ (38) ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೇ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಹಾಗೂ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಲಿದ್ದಾರೆ. ಹೌದು ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಟ ದರ್ಶನ್ ಹಾಜರಾಗಲಿದ್ದಾರೆ. ಅಲ್ಲದೇ A1 ಆರೋಪಿ ಪವಿತ್ರ ಗೌಡ A2 ದರ್ಶನ್ ಮುಖಾಮುಖಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ಪೊಲೀಸರು ಇಂದು ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಫೆ.25 ಕ್ಕೆ ಮುಂದೂಡಿ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿತ್ತು, ಒಂದು ವೇಳೆ ಕೋರ್ಟಿಗೆ ಹಾಜರಾಗದಿದ್ದಲ್ಲಿ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಬೇಕು. ಇಂದು ಅಕಸ್ಮಾತ್ ಕೋರ್ಟ್ ಗೆ ದರ್ಶನ್ ಹಾಜರಾದರೆ, ನಟ ದರ್ಶನ್ ಹಾಗೂ ಪವಿತ್ರ ಗೌಡ ಮುಖಾಮುಖಿ ವಿಚಾರಣೆ…

Read More

ಕಲಬುರಗಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸ್ತ್ರೀಶಕ್ತಿ ಸಂಘಗಳಲ್ಲಿ ಕ್ರೆಡಿಟ್ ಸೊಸೈಟಿ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಹಾವಳಿಯಿಂದ ಮಹಿಳೆಯರನ್ನು ರಕ್ಷಿಸಲು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆರಂಭಿಸಲು ಚಿಂತನೆ ನಡೆದಿದೆ. ಸ್ವಸಹಾಯ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣ ಸಾಲದ ರೂಪದಲ್ಲಿ ನೀಡಲು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆರಂಭಿಸುವ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ. ರಾಜ್ಯದಾದ್ಯಂತ 2.80 ಲಕ್ಷ ಮಹಿಳಾ ಸ್ವಸಹಾಯ ಗುಂಪುಗಳಿದ್ದು, ಇವುಗಳಿಗೆ, ಸ್ವಸಹಾಯ ಸಂಘಗಳಿಗೆ ಇನ್ನಷ್ಟು ಅನುಕೂಲ ಕಲ್ಪಿಸಲು ತಲಾ 15 ಲಕ್ಷ ರೂಪಾಯಿ ವೆಚ್ಚದಲ್ಲಿ 50 ಕಡೆ ಅಕ್ಕ ಕೆಫೆ ಮತ್ತು ತಲಾ 1 ಲಕ್ಷ ರೂಪಾಯಿ ವೆಚ್ಚದಲ್ಲಿ 2500 ಕಡೆ ಕಾಫಿ ಕಿಯೋಸ್ಕ್ ಸ್ಥಾಪಿಸಲು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ವೀಲ್ಹಿಂಗ್ ಮಾಡಿದ್ದ ಪುಂಡರ ವಿರುದ್ಧ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ವ್ಹೀಲಿಂಗ್ ಮಾಡಿದ್ದ 14 ಜನರ ವಿರುದ್ಧ ರೌಡಿಶೀಟರ್ ಓಪನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡಿದ್ದ 14 ಮಂದಿ ಪುಂಡರ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲಿಸರು ರೌಡಿಶೀಟರ್ ಓಪನ್ ಮಾಡಿದ್ದಾರೆ. ಮಾರಕಾಸ್ತ್ರಗಳನ್ನು ಹಿಡಿದು ಮಧ್ಯರಾತ್ರಿ ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಗುಂಪನ್ನು ಬೆಂಗಳೂರು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಫೆ.13ರದು ಶಬ್ ಎ ಬಾರತ್ ಹಬ್ಬ ದ ಹಿನೆಲೆಯಲ್ಲಿ 25ಕ್ಕೂ ಹೆಚ್ಚು ಜನರು ಕೆ.ಜಿ.ಹಳ್ಳಿಯ ನೂರ್ ಮಸೀದಿ ಬಳಿ ರೀಲ್ಸ್ ಹುಚ್ಚಾಟಕ್ಕಾಗಿ ಬೈಕ್ ಗಳಲ್ಲಿ ತ್ರಿಬಲ್ ರೈಡ್ ನಲ್ಲಿಯೇ ಮಾರಕಾಸ್ತ್ರ್ಗಗಳನ್ನು ಹಿಡಿದು ವ್ಹೀಲಿಂಗ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಪುಂಡರ ವ್ಹೀಲಿಂಗ್ ಹುಚ್ಚಾಟದ ವಿಡಿಯೋ ವೈರಲ್ ಆಗಿತ್ತು. ಬಳಿಕ ಪೊಲೀಸರು 14 ಮಂದಿಯನ್ನು ಬಂಧಿಸಿದ್ದು, ಇದೀಗ ರೌಡಿಶೀಟರ್ ಓಪನ್ ಮಾಡಿ ಹೆಡೆಮುರಿ ಕಟ್ಟಿದೆ.

Read More

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಇಂದಿನಿಂದ ಮಾರ್ಚ್ 1 ರವರೆಗೆ ಹಗುರದಿಂದ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಜಮ್ಮು ಮತ್ತು ಕಾಶ್ಮೀರ ಮತ್ತು ವಾಯುವ್ಯ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಚದುರಿದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 25 ರಿಂದ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತದ ಚಟುವಟಿಕೆಗಳು ಗಮನಾರ್ಹವಾಗಿ ಹೆಚ್ಚಾಗಬಹುದು, ಇದು ಮಾರ್ಚ್ 2 ಅಥವಾ 3 ರವರೆಗೆ ಮುಂದುವರಿಯಬಹುದು. ಫೆಬ್ರವರಿ 26 ರಿಂದ ಮಾರ್ಚ್ 1 ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಕೆಲವು ಸ್ಥಳಗಳಲ್ಲಿ ಭಾರೀ ಹಿಮಪಾತ ಮತ್ತು ಮಳೆಯಾಗುವ ಸಾಧ್ಯತೆಯಿದೆ. ಫೆಬ್ರವರಿ 26 ರಿಂದ ಮಾರ್ಚ್…

Read More

ನವದೆಹಲಿ : ಕಳೆದ ಕೆಲವು ದಿನಗಳಿಂದ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗುತ್ತಿದ್ದ ಅಡುಗೆ ಎಣ್ಣೆಯ ಬೆಲೆ ಈಗ 10 ರಷ್ಟು ಹೆಚ್ಚಾಗಿದೆ. ಸೂರ್ಯಕಾಂತಿ, ತಾಳೆ ಎಣ್ಣೆ, ಕಡಲೆಕಾಯಿ ಎಣ್ಣೆ, ಕುಸುಬೆ ಎಣ್ಣೆ, ಸಾಸಿವೆ ಎಣ್ಣೆ, ಬೆಲೆ ಶೇ. 10 ರಷ್ಟು ಹೆಚ್ಚಾಗಿದೆ. ಸೂರ್ಯಕಾಂತಿ ಎಣ್ಣೆ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಸೂರ್ಯಕಾಂತಿ ಎಣ್ಣೆಯ ಬೆಲೆ ಅನಿವಾರ್ಯವಾಗಿ ಹೆಚ್ಚಾಗಿದೆ. ಹೆಚ್ಚುತ್ತಿರುವ ಬಿಸಿಲು ಮತ್ತು ಎಳನೀರು ಬೇಡಿಕೆ ಹೆಚ್ಚುತ್ತಿರುವುದರಿಂದ ತೆಂಗಿನಕಾಯಿ ಕೊರತೆ ಉಂಟಾಗಿದ್ದು, ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಬೆಲೆ ಇದ್ದಕ್ಕಿದ್ದಂತೆ 50 ರೂ.ಗಳಷ್ಟು ಏರಿಕೆಯಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಕಿಲೋಗ್ರಾಂ ತೆಂಗಿನ ಎಣ್ಣೆಯ ಬೆಲೆ 320 ರೂ.ಗಳಷ್ಟಿದೆ. ಇದೆ. ಒಟ್ಟಾರೆಯಾಗಿ, ಅಗತ್ಯ ವಸ್ತುಗಳ ಬೆಲೆಗಳು ದಿನೇ ದಿನೇ ಏರುತ್ತಿದ್ದು, ಸಾಮಾನ್ಯ ಜನರು ತಮ್ಮ ಜೀವನೋಪಾಯವನ್ನು ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಅಡುಗೆ ಎಣ್ಣೆ ಬೆಲೆ ಕೆಜಿಗೆ 10 ರೂ. ಏರಿಕೆಯಾಗಿ 20 ರೂ.ಗೆ ತಲುಪಿದೆ: ಸೂರ್ಯಕಾಂತಿ: ಹಳೆಯ ಬೆಲೆ – 133, ಹೊಸ ಬೆಲೆ – 143, ಗೋಲ್ಡ್ ಬೆಲೆ:…

Read More

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ ಸರಿಯಾದ ಚಿಕಿತ್ಸೆ ಅಥವಾ ಆಹಾರ ವ್ಯವಸ್ಥೆ ಮಾಡಲು ಸಾಧ್ಯವಾಗದ ಅನೇಕ ಜನರಿದ್ದಾರೆ. ಈ ನಿರ್ಗತಿಕರಿಗೆ, ಭಾರತ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಉಚಿತ ಪಡಿತರವನ್ನು ಒದಗಿಸುತ್ತದೆ. ಇದಲ್ಲದೇ ಹಲವರಿಗೆ ಅತ್ಯಂತ ಕಡಿಮೆ ದರದಲ್ಲಿ ಪಡಿತರವನ್ನೂ ನೀಡಲಾಗುತ್ತದೆ. ಪಡಿತರ ಚೀಟಿಯ ಪ್ರಯೋಜನಗಳು ಪಡಿತರ ಚೀಟಿಯು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಪಡೆಯುವ ಮಾಧ್ಯಮ ಮಾತ್ರವಲ್ಲ, ಅದರ ಮೂಲಕ ಹಲವಾರು ಸೌಲಭ್ಯಗಳನ್ನು ಸಹ ಪಡೆಯಬಹುದು. ಪಡಿತರ ಚೀಟಿದಾರರು ಈ ಕೆಳಗಿನ 8 ಪ್ರಯೋಜನಗಳನ್ನು ಪಡೆಯುತ್ತಾರೆ: ಉಚಿತ ಪಡಿತರ: ನಿರ್ಗತಿಕರಿಗೆ ವಿವಿಧ ರೀತಿಯ ಆಹಾರ ಪದಾರ್ಥಗಳ ಉಚಿತ ವಿತರಣೆ. ಕೈಗೆಟುಕುವ ದರದಲ್ಲಿ ಪಡಿತರ: ಪಡಿತರ ಚೀಟಿದಾರರಿಗೆ ಸರ್ಕಾರ ನಿಗದಿಪಡಿಸಿದ ಕೈಗೆಟುಕುವ ದರದಲ್ಲಿ ಆಹಾರ ಪದಾರ್ಥಗಳು ಸಿಗುತ್ತವೆ. ಸರ್ಕಾರದ ಯೋಜನೆಗಳಲ್ಲಿ ಭಾಗಿ: ಪಡಿತರ ಚೀಟಿ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಬಹುದು. ಗುರುತಿನ…

Read More