Subscribe to Updates
Get the latest creative news from FooBar about art, design and business.
Author: kannadanewsnow57
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು, ಶಾಸಕ ಮುನಿರತ್ನ ಮೇಲೆ ಹಲ್ಲೆಯಾಗಿದೆ. ಗೂಂಡಾಗಳ ಮೂಲಕ ಹಲ್ಲೆ ಮಾಡಿಸಿದ್ದಾರೆ. ಇದು ಗೂಂಡಾ ರಾಜ್ಯವಾಗಲು ಬಿಡುವುದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಠನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ ಗ್ರೂಪ್-ಬಿ ಕ್ಲಿನಿಕಲ್ ಇನ್ ಸ್ಟ್ರಕ್ಟರ್ – 01 ಸಹಾಯಕ ಕೀಟಶಾಸ್ತ್ರಜ್ಞರು – 07 ಮೈಕ್ರೋಬಯಾಲಜಿಸ್ಟ್ – 12…
ಬೆಂಗಳೂರು : ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಹೇಳಿದ್ದಾರೆ. https://twitter.com/CMofKarnataka/status/1871807337809227979?t=3ONS22P_Oc-65WbDSVEeTA&s=19 ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ…
ಪಾಟ್ನಾ: ಬಿಹಾರದ ಶಿಕ್ಷಣ ಇಲಾಖೆ ಆಗಾಗ ಸುದ್ದಿಯಲ್ಲಿದೆ. ಶಿಕ್ಷಣ ಇಲಾಖೆ ಪುರುಷ ಬಿಪಿಎಸ್ಸಿ ಶಿಕ್ಷಕನನ್ನು ಗರ್ಭಿಣಿಯನ್ನಾಗಿ ಮಾಡಿ ಹೆರಿಗೆ ರಜೆಯನ್ನೂ ನೀಡಿದೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಇದೀಗ ಬಿಹಾರ ಶಿಕ್ಷಣ ಇಲಾಖೆ ಎಡವಟ್ಟು ಹೊರಬಿದ್ದಿದೆ. ಶಿಕ್ಷಣ ಇಲಾಖೆಯು ಹಾಜಿಪುರ್ ಮಹುವಾ ಬ್ಲಾಕ್ ಪ್ರದೇಶದ ಹಸನ್ಪುರ ಒಸಟಿ ಪ್ರೌಢಶಾಲೆಗೆ ಸಂಬಂಧಿಸಿದೆ. ಇಲ್ಲಿ ನೇಮಕಗೊಂಡಿರುವ ಬಿಪಿಎಸ್ಸಿ ಶಿಕ್ಷಕ ಜಿತೇಂದ್ರ ಕುಮಾರ್ ಸಿಂಗ್ ಅವರು ಗರ್ಭಿಣಿ ಎಂದು ಹೆರಿಗೆ ರಜೆ ಮಾಡಿದೆ. ಜಿತೇಂದ್ರ ಕುಮಾರ್ ಸಿಂಗ್ ಅವರಿಗೆ ಶಿಕ್ಷಣ ಇಲಾಖೆಯ ಪೋರ್ಟಲ್ ಇ-ಶಿಕ್ಷಾ ಕೋಶ್ನಲ್ಲಿ ಹೆರಿಗೆ ರಜೆ ನೀಡಲಾಗಿದೆ. ಶಿಕ್ಷಣ ಇಲಾಖೆಯ ದೃಷ್ಟಿಯಲ್ಲಿ ಮತ್ತು ಅಧಿಕೃತ ವೆಬ್ಸೈಟ್ ಪ್ರಕಾರ, ಶಿಕ್ಷಕ ಜಿತೇಂದ್ರ ಕುಮಾರ್ ಸಿಂಗ್ ಗರ್ಭಿಣಿಯಾಗಿದ್ದು, ರಜೆಯಲ್ಲಿದ್ದಾರೆ ಎಂದು ನಮೂದಾಗಿದೆ. ಹೆರಿಗೆ ರಜೆ ಮಹಿಳಾ ಶಿಕ್ಷಕರಿಗೆ ಮಾತ್ರ ಎಂಬುದು ಗಮನಿಸಬೇಕಾದ ಸಂಗತಿ. ಮಹಿಳಾ ಶಿಕ್ಷಕರು ಗರ್ಭಿಣಿಯಾಗಿದ್ದಾಗ ಮತ್ತು ಮಗುವಿಗೆ ಜನ್ಮ ನೀಡುವ ಸಮಯದಲ್ಲಿ ಈ ರಜೆಯನ್ನು ಪಡೆಯುತ್ತಾರೆ. ಆದರೆ ಹಾಜಿಪುರದಲ್ಲಿ ಪರಿಸ್ಥಿತಿ ಬದಲಾಗಿದೆ. ಇಲ್ಲಿ…
ಬೆಳಗಾವಿ : ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಕೇಸ್ ನಲ್ಲಿ ಇದೀಗ ಮೊದಲ ತಲೆದಂಡವಾಗಿದ್ದು, ಖಾನಾಪುರದ ಸಿಪಿಐ ಮಂಜುನಾಥ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಖಾನಾಪುರ ಸಿಪಿಐ. ಕರ್ತವ್ಯ ಲೋಪ ಆರೋಪದಲ್ಲಿ ಸಿಪಿಐ ಮಂಜುನಾಥ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬಿಜೆಪಿ ನಾಯಕರನ್ನು ಖಾನಾಪುರ ಠಾಣೆಯೊಳಗೆ ಬಿಟ್ಟು, ಬಿಜೆಪಿ ನಾಯಕರು ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಖಾನಪುರ ಪೊಲೀಸ್ ಠಾಣೆಯ ಸಿಪಿಐ ಮಂಜುನಾಥ್ ನಾಯ್ಕ್ ಅವರನ್ನು ಐಜಿಪಿ ವಿಕಾಸ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ನವದೆಹಲಿ : ಆಸ್ಪತ್ರೆಗೆ ದಾಖಲಾದಾಗಿನಿಂದ ಹಿಡಿದು ದೊಡ್ಡ ವೈದ್ಯಕೀಯ ವೆಚ್ಚಗಳನ್ನು ಭರಿಸಲು ನೀವು ವೈದ್ಯಕೀಯ ವಿಮೆಯನ್ನು ಸಹ ಪಡೆದಿರಬಹುದು. ನೀವು ತುಂಬಾ ಚಿಂತನಶೀಲವಾಗಿ ಮತ್ತು ಎಲ್ಲಾ ಅಂಶಗಳನ್ನು ಮನಸ್ಸಿನಲ್ಲಿಟ್ಟುಕೊಂಡು ನಿಮಗಾಗಿ ವೈದ್ಯಕೀಯ ವಿಮೆಯನ್ನು ಆಯ್ಕೆ ಮಾಡಿಕೊಳ್ಳುತ್ತೀರಿ. ಆದರೆ ಕೆಲವೊಮ್ಮೆ ಇದು ಅಗತ್ಯವಿದ್ದಾಗ, ವಿಮಾ ಕಂಪನಿಗಳು ನಿಮ್ಮ ಕ್ಲೈಮ್ ಅನ್ನು ತಿರಸ್ಕರಿಸುತ್ತವೆ. ನಿಮ್ಮ ಮೆಡಿಕ್ಲೈಮ್ ಪಾಲಿಸಿಯು ತಿರಸ್ಕರಿಸಲ್ಪಟ್ಟಾಗ ಮತ್ತು ನಿಮ್ಮ ಸ್ವಂತ ಜೇಬಿನಿಂದ ಚಿಕಿತ್ಸೆಯ ವೆಚ್ಚವನ್ನು ನೀವು ಭರಿಸಬೇಕಾದಾಗ ನೀವು ಎಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಈಗ ಊಹಿಸಿ. ಇದು ಯಾರಿಗಾದರೂ ಭಯಾನಕ ಸತ್ಯವಾಗಬಹುದು. ಇದರಿಂದ ಒತ್ತಡ ಉಂಟಾಗುವುದಲ್ಲದೆ ಆರ್ಥಿಕ ಹೊರೆಯನ್ನೂ ಹೊರಬೇಕಾಗುತ್ತದೆ. IRDAI ಅಂಕಿಅಂಶಗಳ ಪ್ರಕಾರ, ಮಾರ್ಚ್ 2024 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ, ವಿಮಾ ಕಂಪನಿಗಳು 26000 ಕೋಟಿ ಮೌಲ್ಯದ ಆರೋಗ್ಯ ನೀತಿ ಕ್ಲೈಮ್ಗಳನ್ನು ತಿರಸ್ಕರಿಸಿದವು. ಪ್ರತಿ ವರ್ಷ ಈ ಅಂಕಿ ಅಂಶ ಹೆಚ್ಚುತ್ತಿದೆ. 2022-23ರ ಅವಧಿಯಲ್ಲಿ ಈ ಅಂಕಿ ಅಂಶವು ಶೇ.19.10ರಷ್ಟಿತ್ತು. ಆರೋಗ್ಯ ವಿಮಾ ಕಂಪನಿಗಳು ಕ್ಲೈಮ್ಗಳನ್ನು ಏಕೆ…
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಐವರು ಯೋಧರು ಹುತಾತ್ಮರಾಗಿದ್ದು, ಇದರಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಕರ್ನಾಟಕದ ಮೂವರು,ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ
ಮೈಸೂರು : ಮೈಸೂರಿನ ಪ್ರಮುಖ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಹೆಸರಿಟ್ಟು ಮರುನಾಮಕರಣ ಮಾಡಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಈ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮೈಸೂರಿನ ಸುಪುತ್ರ. ಎರಡು ಬಾರಿ ಸಿಎಂ ಆಗಿದ್ದಾರೆ. ಮೈಸೂರಿಗೆ ಶಾಶ್ವತ ಕೊಡುಗೆ ನೀಡಿದ್ದಾರೆ. ಅವರ ಹೆಸರಿಡುವುದು ತಪ್ಪಲ್ಲ, ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೀಮಿತ ಮಾಡಬಾರದು. ಇದಕ್ಕೆ ವಿರೋಧ ಮಾಡುವುದು ಮೊಸರಲ್ಲಿ ಕಲ್ಲು ಹುಡುಕಿದಂತೆ ಎಂದು ಹೇಳಿದ್ದಾರೆ. ರಾಜಕೀಯವಾಗಿ ಸಿ.ಟಿ. ರವಿ ಅವರನ್ನು ಮುಗಿಸುವ ಯತ್ನ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಇಂತಹ ಕೆಲಸಗಳಿಗೆ ಅವಕಾಶ ನೀಡಬಾರದು. ಸದನದಲ್ಲಿ ನಡೆದ ಘಟನೆ ಬಗ್ಗೆ ಸಭಾಪತಿ ನಿರ್ಧಾರ ಕೈಗೊಳ್ಳಬೇಕು. ಸದನದಲ್ಲಿ ನಡೆದ ಘಟನೆಗಳ ಬಗ್ಗೆ ನ್ಯಾಯ ಕೇಳುವುದು ತಪ್ಪಲ್ಲ. ಸದನದಲ್ಲಿ ಸಮಸ್ಯೆಗೆ ಸ್ಪೀಕರ್ ಬಳಿ ದೂರು ನೀಡಬೇಕು. ಆಣೆ ಪ್ರಮಾಣ ಬಗ್ಗೆ ಮಾತನಾಡುವುದಲ್ಲ. ಯಾರ ಯಾರ ಯೋಗ್ಯತೆ ಏನು ಎಂಬುದು ರಾಜ್ಯದ ಜನರಿಗೆ ಗೊತ್ತಾಗಿದೆ ಎಂದು…