Author: kannadanewsnow57

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಲಬುರಗಿಯಲ್ಲಿ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡಲು, ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಳೆದ ಎರಡು ವರ್ಷದಿಂದ ‘ಅಕ್ಷರ ಆವಿಷ್ಕಾರ’ ಕಾರ್ಯಕ್ರಮ ರೂಪಿಸಿ, ಇದುವರೆಗೆ 6,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ವರ್ಷದಿಂದ 10ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿಗಳನ್ನು ಪ್ರಾರಂಭಿಸುತ್ತಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ನಿರ್ಮಿಸುವ ಗುರಿ…

Read More

ಕಲಬುರಗಿ : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣನವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನವರ ಹೆಸರು ನಾಮಕರಣ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುರುಬ ಜನಾಂಗವನ್ನು ಎಸ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಕೇಂದ್ರವೇ ನಿರ್ಧರಿಸಬೇಕು. ರಾಜ್ಯ ಕೇವಲ ಶಿಫಾರಸು ಮಾಡಬಹುದು. ಅಲ್ಲದೆ ‘ಸೆ.22ರಿಂದ ಅ.7ರವರೆಗೆ ನಡೆವ ಜಾತಿ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಕಾಲಂನಲ್ಲಿ ಬರೆಯಿಸಿ’ ಎಂದ ಕುರುಬರಿಗೆ ಕರೆ ನೀಡಿದ್ದಾರೆ. ಕುರುಬ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಹಿಂದೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಅದನ್ನು ಕೇಂದ್ರ ಸರ್ಕಾರ ವಾಪಾಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿ ಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಲಾಗುವುದು.  ರಾಯಣ್ಣ ಜನ್ಮದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ…

Read More

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಿಪಿಎಲ್ ಕಾರ್ಡ್ ಪರಿಷ್ಕರಣಿ ನಡೆಸಲಾಗುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಯಾವ ಕಾರ್ಡನ್ನೂ ರದ್ದು ಮಾಡುವುದಿಲ್ಲ. ಅನರ್ಹರ ಕಾರ್ಡ್ ಗಳನ್ನು ಪರಿಷ್ಕರಿಸಿ ಎಪಿಎಲ್ ಗೆ ಸೇರ್ಪಡೆ ಮಾಡಲಾಗುವುದು, ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಶೇಕಡ 70ರಿಂದ 75ರಷ್ಟು ಬಿಪಿಎಲ್ ಕಾರ್ಡ್ ಗಳು ಇದ್ದು, ಬರೋಬ್ಬರಿ 1.17…

Read More

ನವದೆಹಲಿ :  ಕೇಂದ್ರ ಸರ್ಕಾರವು ದೇಶದ ರೈತರಿಗೆ ಒಂದು ಪ್ರಮುಖ ಉಡುಗೊರೆಯನ್ನು ನೀಡಿದೆ. ಇತ್ತೀಚೆಗೆ, ಸೆಪ್ಟೆಂಬರ್ 3, 2025 ರಂದು ನವದೆಹಲಿಯಲ್ಲಿ ನಡೆದ 56 ನೇ GST ಕೌನ್ಸಿಲ್ ಸಭೆಯಲ್ಲಿ, ರೈತರು ಮತ್ತು ಕೃಷಿ ವಲಯದ ಹಿತಾಸಕ್ತಿಗಾಗಿ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಸಾಮಾನ್ಯ ಜನರು, ಕಾರ್ಮಿಕ-ತೀವ್ರ ಕೈಗಾರಿಕೆಗಳು ಮತ್ತು ಕೃಷಿ ವಲಯವನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆಗಳನ್ನು ಮಾಡಲಾಗಿದೆ. ಕೃಷಿ ಯಂತ್ರೋಪಕರಣಗಳು ಮತ್ತು ಸಲಕರಣೆಗಳ ಮೇಲಿನ ಪ್ರಮುಖ ತೆರಿಗೆ ವಿನಾಯಿತಿ ರೈತರ ವೆಚ್ಚವನ್ನು ಕಡಿಮೆ ಮಾಡಲು, ಸರ್ಕಾರವು ಕೃಷಿಯಲ್ಲಿ ಬಳಸುವ ಯಂತ್ರೋಪಕರಣಗಳು ಮತ್ತು ಸಲಕರಣೆಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (GST) ದರಗಳನ್ನು ಗಣನೀಯವಾಗಿ ಕಡಿಮೆ ಮಾಡಿದೆ. ಈಗ, ಟ್ರ್ಯಾಕ್ಟರ್ಗಳು, ಥ್ರೆಷರ್ಗಳು, ಕೊಯ್ಲು ಯಂತ್ರಗಳು, ಹುಲ್ಲು ಮತ್ತು ಮೇವು ಕತ್ತರಿಸುವ ಮತ್ತು ಪ್ಯಾಕಿಂಗ್ ಯಂತ್ರಗಳು, ಹುಲ್ಲು ತಯಾರಿಸುವ ಯಂತ್ರಗಳು ಮತ್ತು ಗೊಬ್ಬರ ಯಂತ್ರಗಳು ಸೇರಿದಂತೆ ಎಲ್ಲಾ ಅಗತ್ಯ ಕೃಷಿ ಉಪಕರಣಗಳ ಮೇಲೆ ಕೇವಲ 5% GST ವಿಧಿಸಲಾಗುತ್ತದೆ. ಹಿಂದೆ, ಇವುಗಳಿಗೆ…

Read More

ನೆಲ್ಲೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಂಗಮ್ ಮಂಡಲದ ಪೆರಮಾನ ಬಳಿ ಈ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅಪಘಾತದಲ್ಲಿ ಮೃತಪಟ್ಟವರನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಕರಣ ದಾಖಲಿಸಲಾಗಿದೆ. ಏತನ್ಮಧ್ಯೆ.. ಅಪಘಾತದಲ್ಲಿ ಮೃತಪಟ್ಟವರ ವಿವರಗಳು ಮತ್ತು ಅಪಘಾತದ ಬಗ್ಗೆ ಸಂಪೂರ್ಣ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಬಿಪಿಎಲ್ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಡ್ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ

Read More

ಹೈದರಾಬಾದ್ : ಖಾಸಗಿ ಆಸ್ಪತ್ರೆಯಲ್ಲಿ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆಗೆ ಒಳಗಾದ ಯುವತಿ ಸಾವನ್ನಪ್ಪಿದ್ದು, ಯುವತಿ ಸಾವಿಗೆ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವೈದ್ಯರು ಸರಿಯಾಗಿ ಶಸ್ತ್ರಚಿಕಿತ್ಸೆ ಮಾಡಿಲ್ಲ ಎಂದು ಆರೋಪಿಸಿ ಕುಟುಂಬ ಸದಸ್ಯರು ಆಸ್ಪತ್ರೆಯ ಮುಂದೆ ಶವದೊಂದಿಗೆ ಪ್ರತಿಭಟನೆ ನಡೆಸಿದರು. ವಿವರಗಳ ಪ್ರಕಾರ.. ಯದಾದ್ರಿ ಜಿಲ್ಲೆಯ ಸುಳ್ಳೂರಿನ ಶೈಲಜಾ (22) ಅವರನ್ನು ಈ ತಿಂಗಳ 13 ರಂದು ನಾಚಾರಂ ಸ್ನೇಹಪುರಿ ಕಾಲೋನಿಯ ಶ್ರೀ ಸತ್ಯ ಲ್ಯಾಪರೊಸ್ಕೋಪಿಕ್ ಆಸ್ಪತ್ರೆಗೆ ದಾಖಲಿಸಲಾಯಿತು, ಶೈಲಜಾ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಡಾ. ಶ್ರೀನಿವಾಸ್ ಗೌಡ್ ಅವರಿಗೆ ಅಪೆಂಡಿಸೈಟಿಸ್ ಇರುವುದು ಪತ್ತೆ ಹಚ್ಚಿದರು. ಮರುದಿನ ಬೆಳಿಗ್ಗೆ 11 ಗಂಟೆಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು. ಅದೇ ದಿನ ರಾತ್ರಿ 8 ಗಂಟೆಗೆ, ಶೈಲಜಾ ಅವರ ಸ್ಥಿತಿ ಹದಗೆಟ್ಟಿತು ಮತ್ತು ಅವರನ್ನು ಉಪ್ಪಳದ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಅಲ್ಲಿನ ವೈದ್ಯರ ಸಲಹೆಯ ಮೇರೆಗೆ, ಸೋಮವಾರ ಬೆಳಿಗ್ಗೆ ಅವರನ್ನು ಸಿಕಂದರಾಬಾದ್ನ ಮತ್ತೊಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಅದೇ ದಿನ…

Read More

ಬೆಂಗಳೂರು : ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾಗುವ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025” ಕರ್ನಾಟಕ ರಾಜ್ಯದಲ್ಲಿ ಗುರುತಿಸಿರುವ ಜಾತಿ-ಉಪಜಾತಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.…

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 137 ಶಿರಸ್ತೇದಾರ್ / ಉಪತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಶಿರಸ್ತೇದಾರ್/ಉಪತಹಶೀಲ್ದಾರ್ ವೃಂದದ ನೌಕರರುಗಳನ್ನು ಅವರುಗಳ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.

Read More

ಬೆಂಗಳೂರು : ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾಗುವ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025” ಕರ್ನಾಟಕ ರಾಜ್ಯದಲ್ಲಿ ಗುರುತಿಸಿರುವ ಜಾತಿ-ಉಪಜಾತಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.…

Read More