Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ದಿನಾಂಕ 19.08.2025 (ಮಂಗಳವಾರ) ಬೆಳಿಗ್ಗೆ 10:30 ಗಂಟೆಯಿAದ ಮದ್ಯಾಹ್ನ 17:00 ಗಂಟೆಯವರೆಗೆ ‘66/11ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲುö್ಯ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ರಿö್ಟ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ…
ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ ಅನ್ಯಾಯವಾಗಿದ್ದರೆ ನಮ್ಮ ಗಮನಕ್ಕೆ ತನ್ನಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಭರವಸೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ಪ್ರಶ್ನಾವಳಿ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. ಹೀಗಾಗಿ ಅಧಿಕಾರಿಗಳು ಅನರ್ಹ ಅರ್ಜಿಗಳನ್ನು ಆರಂಭಿಕ ಹಂತದಲ್ಲೇ ತ್ಯಜಿಸಿಬಿಡುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳೂ ಕಾನೂನಿನಲ್ಲೇ ಇದ್ದು, ಕಾನೂನು ಮೀರಿ ಏನೂ ಮಾಡಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಒಂದೆರಡು ರೈತರಿಗೆ ಅನ್ಯಾಯ ಆಗಿದ್ದರೆ ಶಾಸಕರು ನನ್ನ ಗಮನಕ್ಕೆ ತನ್ನಿ, ಸಮಸ್ಯೆಯನ್ನು ನಾನು ಸರಿಪಡಿಸುತ್ತೇನೆ” ಎಂದು ಆಶ್ವಾಸನೆ ನೀಡಿದರು. ಇದೇ ವೇಳೆ ಬಗರ್ ಹುಕುಂ ಹೆಸರಿನಲ್ಲಿ ಭೂ ಮಂಜೂರಾತಿಗೆ ಯಾವ್ಯಾವ ರೀತಿಯ ಅನರ್ಹ ಅರ್ಜಿಗಳು ಸಲ್ಲಿಕೆಯಾಗುತ್ತವೆ ಎಂದೂ…
ಬೆಂಗಳೂರು : ಜಗಳದ ಸಂದರ್ಭದಲ್ಲಿ ಹೋಗಿ ಸಾಯಿ ಎಂದು ಹೇಳಿರುವ ಮಾತು ಆತ್ಮಹತ್ಯೆಗೆ ಪ್ರಚೋದನೆ ನೀಡಿದಂತಾಗದು ಎಂದು ಹೈಕೋರ್ಟ್ ತೀರ್ಪು ನೀಡಿದ್ದು, ಪತಿಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಡಿ ಮಹಿಳೆ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ತನ್ನ ಪತಿಯ ಆತ್ಮಹತ್ಯೆಗೆ ಪ್ರಚೋದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೂರು ಮತ್ತು ಪ್ರಥಮ ಮಾಹಿತಿ ವರದಿ (‘ಎಫ್ಐಆರ್’) ರದ್ದುಗೊಳಿಸುವಂತೆ ಕೋರಿ ಹುಬ್ಬಳ್ಳಿ ಮೂಲದ ಫಿಬಿ ಗೌತಮ್ ಅವರು ಸಲ್ಲಿಸಿದ್ದ ಸಲ್ಲಿಸಿದ ಕ್ರಿಮಿನಲ್ ಅರ್ಜಿಯಲ್ಲಿ, ಎಸ್. ವಿಶ್ವಜಿತ್ ಶೆಟ್ಟಿ, ಜೆ. ಅವರ ಏಕಸದಸ್ಯ ಪೀಠವು ಆತ್ಮಹತ್ಯೆಗೆ ಪ್ರಚೋದನೆಗಾಗಿ ಎಫ್ಐಆರ್ ಅನ್ನು ರದ್ದುಗೊಳಿಸಿತು ಮತ್ತು ಪತ್ನಿಯ ಆಪಾದಿತ ಚಿತ್ರಹಿಂಸೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ‘ಹೋಗಿ ಸಾಯಿ’ ಎಂಬ ಹೇಳಿಕೆಯು ಭಾರತೀಯ ನ್ಯಾಯ ಸಂಹಿತಾ, 2023 (‘ಬಿಎನ್ಎಸ್’) ನ ಸೆಕ್ಷನ್ 108 ರ ಅಡಿಯಲ್ಲಿ ಅಪರಾಧವನ್ನು ಸ್ಥಾಪಿಸಲು ಅಗತ್ಯವಾದ ನೇರ ಪ್ರಚೋದನೆಯ ಕೃತ್ಯವಲ್ಲ ಎಂದು ತೀರ್ಪು ನೀಡಿತು. ಸುಪ್ರೀಂ ಕೋರ್ಟ್ನ ವಿವಿಧ ತೀರ್ಪುಗಳನ್ನು ಉಲ್ಲೇಖಿಸಿದ ನ್ಯಾಯಾಲಯವು,…
ಬೆಂಗಳೂರು : ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸಿ ವಾಸ ಯೋಗ್ಯ ಪ್ರಮಾಣ ಪತ್ರ ಪಡೆಯಬೇಕು. ಓಸಿ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡಬಾರದು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 4 ಲಕ್ಷ ಸಂಪರ್ಕಗಳನ್ನು ನಿಲ್ಲಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಆದೇಶದಂತೆ ವಾಸ ಯೋಗ್ಯ ಪ್ರಮಾಣ ಪತ್ರ(ಓಸಿ) ಪಡೆದುಕೊಳ್ಳದ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರು ನಿಲ್ಲಿಸಲಾಗಿದೆ. ಇವುಗಳಲ್ಲಿ 30X40 ಅಳತೆಯ ಎರಡು ಮಹಡಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಕುರಿತಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ಹೆಚ್ಚಾಗಿದೆ. ನಗರದಲ್ಲಿ ಶೇಕಡ 70ರಷ್ಟು ಕಟ್ಟಡ ನಿರ್ಮಾಣ ಅಕ್ರಮವಾಗಿದೆ. ಸಾಮರ್ಥ್ಯಕ್ಕಿಂತ ಹೆಚ್ಚು ಮಹಡಿ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಸುಪ್ರೀಂಕೋರ್ಟ್ ಆದೇಶ ಮಾಡಿದ್ದು, ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸಿ ವಾಸ ಯೋಗ್ಯ ಪ್ರಮಾಣ ಪತ್ರ ಪಡೆಯಬೇಕು.…
ಬೆಂಗಳೂರು : ರಾಜ್ಯದಲ್ಲಿ ಕಳೆದ ಐದಾರು ವರ್ಷಗಳ ಅಂಕಿ-ಅಂಶಗಳನ್ನು ಹೋಲಿಸಿದರೆ ಹೃದಯಾಘಾತದಿಂದ ಮರಣ ಹೊಂದಿದವರ ಪ್ರಮಾಣ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿಲ್ಲ. ಶೇ. 5ರಿಂದ 6 ರಷ್ಟು ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಕಾಂಗ್ರೆಸ್ಸಿನ ದಿನೇಶ್ ಗೂಳಿಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ವಿವಿಧ ಕಡೆಗಳಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಡಿ ಉಪಘಟಕಗಳ ಶಾಖೆಗಳನ್ನು ತೆರೆಯಲಾಗಿದೆ. ಹುಬ್ಬಳ್ಳಿಆಸ್ಪತ್ರೆ ಕಾಮಗಾರಿ ಶೇ.80 ರಷ್ಟು ಮುಗಿದಿದ್ದು, ಇನ್ನೆಂಟು ತಿಂಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಕೊಪ್ಪಳ, ಬಳ್ಳಾರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲು ಉದ್ದೇಶಿಸಿದ್ದು, ಬಳ್ಳಾರಿಯಲ್ಲಿ ಮೂರು ತಿಂಗಳಲ್ಲಿ ಉದ್ಘಾಟನೆಯಾಗಲಿದೆ, 5 ವರ್ಷಗಳಲ್ಲಿ ಪ್ರತಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನರ್‌ಚಿಕಿತ್ಸಾ ಆಸ್ಪತ್ರೆ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದರು. https://twitter.com/KarnatakaVarthe/status/1957433421187412115
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಇಂದು,ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ದಕ್ಷಿಣಕನ್ನಡಜಿಲ್ಲೆಗಳಲ್ಲೂ ಭಾರೀಮಳೆಯಾಗಲಿದ್ದು ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗುವ ನಿರೀಕ್ಷೆ ಇದೆ. ನಾಳೆ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಒಳ ಮೀಸಲಾತಿ ನಿಗದಿ ನಂತರ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಬಿಜೆಪಿಯ ಕೆ.ವಿವೇಕಾನಂದ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಳಮೀಸಲಾತಿ ನಿಗದಿಯಾಗದ ಕಾರಣ ಯಾವುದೇ ಇಲಾಖೆಗಳಲ್ಲೂ ನೇಮಕಾತಿ ಮಾಡುತ್ತಿಲ್ಲ, ಶಿಕ್ಷಣ ಇಲಾಖೆ ಯಲ್ಲಿ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಸರ್ಕಾರ ಅನುಮತಿ ನೀಡಿದ ನಂತರ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಶಾಲಾ ದಾಖ ಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶೈಕ್ಷಣಿಕ ಹಿಂದು ಳಿದ ತಾಲೂಕುಗಳಲ್ಲಿ 6-10ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಕೇಂದ್ರೀಯ ವಿದ್ಯಾಲಯ ಮಾದರಿ ಯಲ್ಲಿ ಆದರ್ಶ ಶಾಲೆ ಆರಂಭಿಸಲಾಗಿದೆ. 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯ ಮದ ಜೊತೆ 8,538 ಆಂಗ್ಲ ಮಾಧ್ಯಮದ ತರಗತಿ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಸೋಮವಾರ ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದು, ಸದನ ಅಂಗೀಕಾರ ಮಾಡಿತು. ವಿಧೇಯಕವನ್ನು ಮಂಡಿಸಿದ ಬಳಿಕ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ತಡೆಗಟ್ಟಲು ಇದುವರೆಗೂ ಸಾಧ್ಯವಾಗಿಲ್ಲ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ ತಿದ್ದುಪಡಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು. 2024-25ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ 1828 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 1260 ಪ್ರಕರಣಗಳನ್ನು ತಡೆಯಲಾಗಿದ್ದು, ಇಂಥ ಕಠಿಣ ಕಾನೂನಿನ ಮಧ್ಯೆ 369 ಬಾಲ್ಯವಿವಾಹ ಪ್ರಕರಣಗಳು ನಡೆದಿವೆ. ಬಾಲ್ಯವಿವಾಹ ನಡೆದ ಪ್ರಕರಣಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.. ಹೊಸ ಕಾಯ್ದೆ ನಿಯಮದ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ…
ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸುವುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಪ್ರತಾಪ ಸಿಂಹ ನಾಯಕ್, ಕಾಂಗ್ರೆಸ್ ನ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಧಿವೇಶನ ಮುಗಿದ ನಂತರ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಅನರ್ಹರನ್ನು ಪತ್ತೆ ಮಾಡಿ ಎಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು, ಅನರ್ಹ ಪಡಿತರ ಚೀಟಿ ರದ್ದತಿ ನಂತರ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ತಿಳಿಸಿದರು. ಈ ಹಿಂದೆ 15 ಲಕ್ಷ ಅನರ್ಹ ಪಡಿತರ ಚೀಟಿ ರದ್ದು ಮಾಡಲು ಮುಂದಾದಾಗ ಗೊಂದಲ ಉಂಟಾಗಿದ್ದರಿಂದ ಪಡಿತರ ಚೀಟಿ ರದ್ದು ಪ್ರಕ್ರಿಯೆ ನಿಲ್ಲಿಸಬೇಕಾಯಿತು ಎಂದು. ಆದರೆ ಎಲ್ಲ ಜನಪ್ರತಿ ನಿಧಿಗಳ ಸಹಕಾರದಿಂದ ಅನರ್ಹ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದರು. ಎಪಿಎಲ್ ಕಾರ್ಡ್ ನೀಡಿಕೆ ಸಹ ನಿಲ್ಲಿಸಲಾಗಿದೆ. ಸುಮಾರು ಒಂದು ಲಕ್ಷ ಪಡಿತರ ಚೀಟಿ ದಾರರು ಪಡಿತರ…
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಆಗಸ್ಟ್ 19 ರ ಇಂದು ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 19-08-2025ರ ಮಂಗಳವಾರ ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿ ರುವ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರ ಮಂಗಳವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದ್ದು, ನ್ಯಾ.ನಾಗಮೋಹನ್‌ದಾಸ್ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗೀಕರಣದ ಕುರಿತು ಅಪಸ್ವರ ಕೇಳಿ ಬಂದಿರುವ ಹಿನ್ನೆಲೆ ಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆ ಕುತೂಹಲ ಉಂಟಾಗಿದೆ. ನಿವೃತ್ತ ನ್ಯಾ.ನಾಗಮೋಹನ್‌ದಾಸ್ ಅವರ ಆಯೋಗವು ತನ್ನ ವರದಿಯಲ್ಲಿ 101 ಪರಿಶಿಷ್ಟ ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಣ ಮಾಡಿ ಶೇ.17 ರಷ್ಟು ಮೀಸಲಾತಿ ಹಂಚಿಕೆ ಮಾಡಿದೆ.