Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ. ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
ಬೆಂಗಳೂರು : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 4.30 ಕೋಟಿ ಅಂದಾಜು ಮೌಲ್ಯದ ಒಟ್ಟು 3 ಎಕರೆ 0.01 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು. ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸ್ಮಶಾನ, ಕಾಲುದಾರಿ, ಸರ್ಕಾರಿ ಕೆರೆ, ಸರ್ಕಾರಿ ಗುಂಡು ತೋಪು ಮತ್ತು ಸರ್ಕಾರಿ ಗೋಮಾಳ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು. ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಕುಂಬಾರನಹಳ್ಳಿ ಗ್ರಾಮದ ಸ.ನಂ. 107 ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.10 ಲಕ್ಷಗಳಾಗಿರುತ್ತದೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರಕೆರೆ ಹೋಬಳಿಯ ಪುರದಪಾಳ್ಯ ಗ್ರಾಮದ ಸ.ನಂ. 19/5 ಕಾಲುದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.08 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.20 ಲಕ್ಷಗಳಾಗಿರುತ್ತದೆ. ಬೇಗೂರು ಹೋಬಳಿಯ…
ಮೈಸೂರು: ಅಸಮಾನತೆಗಳನ್ನು ತೊಡೆಯುವ ಉದ್ದೇಶದಿಂದ, ಕಳೆದ ಬಾರಿ ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಪ್ರಥಮ ಹೆಜ್ಜೆಯಾಗಿ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದು. ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಉದ್ದೇಶವೂ ಕೂಡಾ ಇದೇ ಆಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ ಕಳೆದ ಎರಡು ವರ್ಷ ಮೂರು ತಿಂಗಳಲ್ಲಿ 1 ಲಕ್ಷ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಮೈಸೂರು ಇವರ ವತಿಯಿಂದ ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ ಕಚೇರಿ ಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ದರು. ಜೆಎಸ್ಎಸ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ಸೇರಿ ಗೃಹ ನಿರ್ಮಾಣ ಸಂಘವನ್ನು ಸ್ಥಾಪಿಸಿದ್ದಾರೆ. ಸಂಘದ ಮೂಲಕ ನಿವೇಶನಗಳನ್ನು ಹಂಚಿಕೆ ಮಾಡುವ ಕೆಲಸವನ್ನು ಮಾಡಿದ್ದಾರೆ.…
ಬೆಂಗಳೂರು : ಸರ್ಕಾರದಿಂದ ನೇರವಾಗಿ /ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ‘ಎ’ ಗುಂಪಿನ ಅರ್ಹ ಅಧಿಕಾರಿಗಳು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಹೆಚ್ಚುವರಿ 15 ದಿನಗಳ ಕಾಲಾವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ ‘ಎ’ ಗುಂಪಿನ ಅಧಿಕಾರಿಗಳಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.09.2025ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಆದರೆ, ‘ಎ’ ಗುಂಪಿನ ಅಧಿಕಾರಿಗಳು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಗುಂಪಿನ ಅಧಿಕಾರಿಗಳಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ:30.09.2025ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ಮಂಡ್ಯ : ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ಮುಚ್ಚುವುದು ಸಾಧ್ಯವಿಲ್ಲ. ಆದರೆ ಅದನ್ನು ಲಾಭದಾಯಕವಾಗಿಸಲು ಮಾಡಬೇಕಾದ ಕೆಲಸಗಳೇನು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚರ್ಚೆ ಮಾಡಬೇಕು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವ -2025 ರಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 113 ಕೋಟಿಗಳನ್ನು ಒದಗಿಸಿದೆ. ಅಧಿಕಾರಕ್ಕೆ ಬಂದ ಕೂಡಲೇ 50 ಕೋಟಿಗಳನ್ನು ಒದಗಿಸಿ, ನಂತರ 52 ಕೋಟಿ ರೂ.ಗಳ ವಿದ್ಯುತ್ ಶಕ್ತಿಯ ಬಾಕಿ ಬಿಲ್ ಅನ್ನು ಮನ್ನಾ ಮಾಡಲಾಯಿತು. ಇದಲ್ಲದೆ 10 ಕೋಟಿಯನ್ನು ಮತ್ತೆ ಒದಗಿಸಲಾಗಿದೆ. ಮಂಡ್ಯ ಸಕ್ಕರೆ ಕಾರ್ಖಾನೆಯನ್ನು ನಷ್ಟವಿಲ್ಲದ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ಇದಕ್ಕೆ ಅಗತ್ಯವಿರುವ ಬಾಯ್ಲಿಂಗ್ ಹೌಸ್ ವ್ಯವಸ್ಥೆಯನ್ನು ಒದಗಿಸಲಾಗುವುದು ಎಂದರು. ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಪ್ರಕೃತಿ ಸೌಂದರ್ಯವನ್ನು ಜನರು ಕಾಣಲು ಬರಬೇಕು ಎಂಬ ಉದ್ದೇಶದಿಂದ ಸರ್ಕಾರವೇ ಜಲಪಾತೋತ್ಸವವನ್ನು ಆಚರಿಸುತ್ತಾ ಬಂದಿದೆ. ಕರ್ನಾಟಕದಲ್ಲಿ ಅನೇಕ ನದಿಗಳಿವೆ. ಕಾವೇರಿ, ಕೃಷ್ಣಾ, ತುಂಗಭದ್ರೆ, ಶರಾವತಿ ನದಿಗಳು…
ಮೈಸೂರು : ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಜಾತಿ ಗಣತಿಯಲ್ಲಿ ಹೊಸ ಜಾತಿಗಳನ್ನು ಸರಕಾರ ಸೇರ್ಪಡೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಯಾರಾದರೂ ಮತಾಂತರಗೊಂಡಿದ್ದರೆ ಅವರ ಈಗಿನ ಜಾತಿಯನ್ನೇ ಪರಿಗಣಿಸಲಾಗುವುದು. ಮತಾಂತರವಾಗುವುದು ಬೇಡ ಎಂದರೂ ವ್ಯವಸ್ಥೆಯ ಪರಿಣಾಮವಾಗಿ ಮತಾಂತರಗೊಳ್ಳುತ್ತಾರೆ. ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಸಮಾನ ಅವಕಾಶಗಳಿದ್ದರೆ, ಏಕೆ ಮತಾಂತರಗೊಳ್ಳುತ್ತಾರೆ? ಅಸ್ಪೃಶ್ಯತೆ ಏಕೆ ಬಂತು, ಅದನ್ನು ನಾವು ಹುಟ್ಟುಹಾಕಿದ್ದೇವೆಯೇ? ಎಂದರು. ಅಸಮಾನತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಧರ್ಮದಲ್ಲಿ ಇದ್ದರೂ ಮತಾಂತರವಾಗಿದ್ದಾರೆ. ಅದು ಅವರ ಹಕ್ಕು ಎಂದರು. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ.…
ಬೆಂಗಳೂರು: ಸೆಪ್ಟೆಂಬರ್.15ರಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ಅದರ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಪುಜಾಪ್ರಭುತ್ವದ ಆಡಳಿತ, ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮದ ಮೌಲ್ಯಗಳನ್ನು ಬಲಪಡಿಸಲು 2007 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ವಿದ್ಯುತ್ ಸರಬರಾಜು…
ದಾವಣಗೆರೆ : ಹೊಸ ಪಡಿತರ ಚೀಟಿ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿ, ಅರ್ಹರಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ದಾವಣಗೆರೆಯಲ್ಲಿ ಜಿಲ್ಲಾಮಟ್ಟದ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶೀಘ್ರವೆ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದು. ಅನಧಿಕೃತ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚಿ, ಅರ್ಹರಿಗೆ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ತೂಕ ಮತ್ತು ಅಳತೆಯ ಗುಣಮಟ್ಟವನ್ನು ಕಾಪಾಡುವಲ್ಲಿ ಗಮನ ವಹಿಸಬೇಕು. ಪೆಟ್ರೋಲ್ ಬಂಕ್ ಗಳಲ್ಲಿ ನಾಗರಿಕರಿಗೆ ಯಾವುದೇ ಮೋಸವಾಗದಂತೆ ನಿಗಾವಹಿಸ ಬೇಕು. ಹಾಗೆಯೇ ಅಂಗಡಿಗಳಲ್ಲಿ ತೂಕದ ಮೆಷಿನ್ ಗಳನ್ನು ತಪಾಸಣೆ ಮಾಡಿ ಸತ್ಯಾಪಣ ಮತ್ತು ಮುದ್ರೆ ಮಾಡಿ ಪ್ರಮಾಣಪತ್ರ ವಿತರಿಸಬೇಕು ಎಂದು ಸೂಚಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿನ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರೌಢ ಶಾಲಾ ಶಿಕ್ಷಕರಾಗಿ ಹಾಗೂ ಪ್ರೌಢ ಶಾಲಾ ಶಿಕ್ಷಕರು ಪ್ರೌಢ ಶಾಲಾ ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದುವ ಪ್ರಯುಕ್ತ ಆಗುವ ವೇತನ ವ್ಯತ್ಯಾಸದ ಕುರಿತು ಪರಿಶೀಲಿಸುವ ಸಂಬಂಧ ಮಾಹಿತಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ರಾಜ್ಯದಲ್ಲಿನ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರೌಢ ಶಾಲಾ ಶಿಕ್ಷಕರಾಗಿ ಬಡ್ತಿಹೊಂದಿ / ಹೊಂದದೆ ಹಾಗೂ ಪ್ರೌಢ ಶಾಲಾ ಶಿಕ್ಷಕರು ಪ್ರೌಢ ಶಾಲಾ ಮುಖ್ಯ ಶಿಕ್ಷಕರಾಗಿ ಬಡ್ತಿಹೊಂದಿ / ಹೊಂದದೆ ಇರುವ ಸಂದರ್ಭದಲ್ಲಿ ಆಗುವ ವೇತನ ವ್ಯತ್ಯಾಸದ ಕುರಿತು ಪರಿಶೀಲಿಸುವ ಸಂಬಂಧ ವರದಿ ಸಲ್ಲಿಸಲು ವಿಧಾನ ಪರಿಷತ್ತಿನ ಮಾನ್ಯ ಶಾಸಕರಾದ ಶ್ರೀ ಪುಟ್ಟಣ್ಣ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ವಿಶೇಷ ಸದನ ಸಮಿತಿಯು ದಿನಾಂಕ:16.09.2025ರಂದು ನಡೆಯುವ ಸಭೆಗೆ ಮಾಹಿತಿ ಸಲ್ಲಿಸಲು ಸೂಚಿಸಿದ್ದು. ಈ ಸಂಬಂಧ ತಮ್ಮ ಜಿಲ್ಲಾ ವ್ಯಾಪ್ತಿಗೆ ಸಂಬಂಧಿಸಿದ…
ದುಬೈ: ಏಷ್ಯಾಕಪ್ ಟಿ20 ಟೂರ್ನಿಯ ಮಹತ್ವದ ಪಂದ್ಯದಲ್ಲಿ ಇಂದು ಭಾರತ-ಪಾಕಿಸ್ತಾನ ಮುಖಾಮುಖಿಯಾಗಲಿವೆ. ಪಂದ್ಯಕ್ಕೆ ಯುಎಇ ದೇಶದ ದುಬೈ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಏಷ್ಯಾಕಪ್ ಇತಿಹಾಸದಲ್ಲಿ ಈ ಎರಡೂ ತಂಡಗಳು 18 ಬಾರಿ ಮುಖಾಮುಖಿಯಾಗಿವೆ. ಇವುಗಳಲ್ಲಿ ಭಾರತ ತಂಡವು ಮೇಲುಗೈ ಸಾಧಿಸಿದೆ. ಈ ಪೈಕಿ 10 ಪಂದ್ಯಗಳಲ್ಲಿ ಭಾರತ ತಂಡ ಗೆದ್ದಿದ್ದರೆ, ಮತ್ತೊಂದೆಡೆ, ಪಾಕಿಸ್ತಾನ ತಂಡ ಕೇವಲ 6 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಏಷ್ಯಾಕಪ್ ಅನ್ನು ಟಿ20 ಸ್ವರೂಪದಲ್ಲಿ ಇದುವರೆಗೆ ಎರಡು ಬಾರಿ ಮಾತ್ರ ಆಡಲಾಗಿದೆ, ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮೂರು ಪಂದ್ಯಗಳು ನಡೆದಿವೆ. ಈ ಮೂರು ಪಂದ್ಯಗಳಲ್ಲಿ, ಭಾರತ ಎರಡು ಬಾರಿ ಗೆದ್ದಿದೆ ಮತ್ತು ಒಮ್ಮೆ ಸೋಲನ್ನು ಎದುರಿಸಿದೆ. ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ (IND vs PAK ಏಷ್ಯಾ ಕಪ್ 2025 ಪಂದ್ಯದ ಸಮಯ) ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವು ಭಾರತೀಯ ಸಮಯ…













