Author: kannadanewsnow57

ಬೆಂಗಳೂರು : ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ, “ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ತಿರುಗೇಟು ನಿಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವೇ, ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು ಎಂದು ಹೇಳಿದ್ದಾರೆ. ನಿಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಾರೆ, ಮೇಕೆದಾಟು ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಕೂರುತ್ತಾರೆ, ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್‌ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು. ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ…

Read More

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲು ಬಳ್ಳಾರಿ ಜಿಲ್ಲಾ ಟಾಸ್ಕ್‍ಫೋರ್ಸ್ ಸಮಿತಿ ತೀರ್ಮಾನಿಸಿದ್ದು, ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ 5,99,392 ಮೆ.ಟನ್ ರಾಗಿಯನ್ನು ರೈತರಿಂದ ಖರೀದಿಸಲು ಸರ್ಕಾರ ಮುಂದಾಗಿದೆ. ಖರೀದಿ ಪ್ರಕ್ರಿಯೆಯಲ್ಲಿ ಖರೀದಿ ಮಿತಿಯು ಪ್ರತಿ ರೈತರಿಂದ ಪ್ರತಿ ಎಕರೆಗೆ 10 ಕ್ವಿಂ ನಂತೆ ಗರಿಷ್ಠ 20 ಕ್ವಿಂಟಾಲ್ ಗರಿಷ್ಠ ಮಿತಿ ಇದ್ದು, ಜಿಲ್ಲೆಯ ರೈತರು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ನೋಂದಣಿ ಮತ್ತು ಖರೀದಿ ಅವಧಿ: 2023-24 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಖರೀದಿಸಲು ತೀರ್ಮಾನಿಸಿರುವ ಕೃಷಿ ಉತ್ಪನ್ನ, ರೈತರ ನೋಂದಣಿ, ಖರೀದಿ ಪ್ರಾರಂಭದ ದಿನದ ವಿವರ ಇಂತಿದೆ. ಮುಂಗಾರು/ಹಿಂಗಾರು ಋತುವಿನ ಖರೀದಿಸುವ ಕೃಷಿ ಉತ್ಪನ್ನಗಳು: ರಾಗಿ, ಜೋಳ. ಮುಂಗಾರು/ಹಿಂಗಾರು ಋತುವಿನ ರೈತರ ನೋಂದಣಿ ಅವಧಿ:…

Read More

ಮಾಸ್ಕೋ: ಯುದ್ಧ ಸಮವಸ್ತ್ರ ಧರಿಸಿದ ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಶುಕ್ರವಾರ ರಾತ್ರಿ ಮಾಸ್ಕೋ ಬಳಿಯ ಸಂಗೀತ ಕಚೇರಿ ಸಭಾಂಗಣದಲ್ಲಿ ಗುಂಡು ಹಾರಿಸಿದ್ದರಿಂದ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಮತ್ತು 145 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವಿಸ್ (ಎಫ್ಎಸ್ಬಿ) ಉಲ್ಲೇಖಿಸಿ ಮಾಸ್ಕೋ ಟೈಮ್ಸ್ ವರದಿ ಮಾಡಿದೆ. ರಷ್ಯಾದ ಸುದ್ದಿ ವರದಿಗಳ ಪ್ರಕಾರ, ಭಯೋತ್ಪಾದಕರು ಸ್ಫೋಟಕಗಳನ್ನು ಎಸೆದರು, ಇದು ಮಾಸ್ಕೋದ ಪಶ್ಚಿಮ ತುದಿಯಲ್ಲಿರುವ ಕ್ರೋಕಸ್ ಸಿಟಿ ಹಾಲ್ನಲ್ಲಿ ಭಾರಿ ಬೆಂಕಿಗೆ ಕಾರಣವಾಯಿತು. ಸೋಷಿಯಲ್ ಮೀಡಿಯಾದಲ್ಲಿನ ವೀಡಿಯೊಗಳು ಕಟ್ಟಡದ ಮೇಲೆ ಭಾರಿ ಕಪ್ಪು ಹೊಗೆ ಏಳುತ್ತಿರುವುದನ್ನು ತೋರಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. https://twitter.com/AricToler/status/1771231360255983754?ref_src=twsrc%5Etfw%7Ctwcamp%5Etweetembed%7Ctwterm%5E1771231360255983754%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪು ಈ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ ಎಂದು ಗುಂಪಿನ ಟೆಲಿಗ್ರಾಮ್ ಚಾನೆಲ್ ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, ಇದು ಇತ್ತೀಚಿನ ವರ್ಷಗಳಲ್ಲಿ ರಷ್ಯಾದಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ…

Read More

ನವದೆಹಲಿ: ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್ಸ್ (ಎಫ್ಡಿಟಿಎಲ್) ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣಾ ವ್ಯವಸ್ಥೆ (ಎಫ್ಎಂಎಸ್) ಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) 80 ಲಕ್ಷ ರೂ.ಗಳ ದಂಡವನ್ನು ವಿಧಿಸಿದೆ. ವಾಯುಯಾನದಲ್ಲಿ ಉನ್ನತ ಮಟ್ಟದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಎಫ್ಡಿಟಿಎಲ್ ಮತ್ತು ಎಫ್ಎಂಎಸ್ ನಿಯಮಗಳಿಗೆ ಸಂಬಂಧಿಸಿದಂತೆ ಆಪರೇಟರ್ನಿಂದ ನಿಯಂತ್ರಕ ಅನುಸರಣೆಯನ್ನು ಪರಿಶೀಲಿಸಲು ಈ ವರ್ಷದ ಜನವರಿ ತಿಂಗಳಲ್ಲಿ ಏರ್ ಇಂಡಿಯಾ ಲಿಮಿಟೆಡ್ನ ಸ್ಪಾಟ್ ಆಡಿಟ್ ನಡೆಸಲಾಯಿತು ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ. ಲೆಕ್ಕಪರಿಶೋಧನೆಯ ಸಮಯದಲ್ಲಿ, ಏರ್ ಇಂಡಿಯಾ ವಿಮಾನ ನಿಯಮಗಳು, 1937 ರ ನಿಯಮ 28 ಎ ಯ ಉಪ ನಿಯಮ (2) ಅನ್ನು ಉಲ್ಲಂಘಿಸಿ ವಿಮಾನಗಳನ್ನು ನಿರ್ವಹಿಸುತ್ತಿರುವುದು ಕಂಡುಬಂದಿದೆ. ಮಾರ್ಚ್ 1, 2024 ರಂದು ಪ್ರತಿಕ್ರಿಯೆ ಸಲ್ಲಿಸಲು ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಡಿಜಿಸಿಎ ತಿಳಿಸಿದೆ. ವಿಮಾನಯಾನ ನಿಯಂತ್ರಕವು ಅದರ ಪ್ರತಿಕ್ರಿಯೆ ತೃಪ್ತಿಕರವಾಗಿಲ್ಲ ಎಂದು ಗಮನಿಸಿದೆ.…

Read More

ಬೆಂಗಳೂರು : ಸೋಮವಾರದಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಸಿಬ್ಬಂದಿಯ ಸಂಭಾವನೆಯನ್ನು ಶೇ. 5 ರಷ್ಟು ಹೆಚ್ಚಿಸಲಾಗಿದೆ. ಮಾರ್ಚ್/ಏಪ್ರಿಲ್-2024 ರ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದನ್ನು ನಡೆಸಲು ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸಾದಿಲ್ವಾರು ಹಾಗೂ ಸಂಭಾವನೆಯ ಪೂರ್ಣ ಹಣದ ಮೊತ್ತವನ್ನು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ಉಳಿತಾಯ ಖಾತೆಗೆ ನೆಫ್ಟ್ ಮೂಲಕ ಜಮಾ ಮಡಲಾಗಿದೆ. ಅನಿವಾರ್ಯ ಸಂದರ್ಭದಲ್ಲಿ ನಮೂದಿಸಿರುವ ಹೆಸರಿನ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಬದಲಾವಣೆಯಾಗಿದ್ದಲ್ಲಿ, ಬದಲಿ ನಿಯೋಜಿತ ಮುಖ್ಯ ಅಧೀಕ್ಷಕರು ಮಂಡಳಿಯಿಂದ ನೆಫ್ಟ್ ಮುಖಾಂತರ ರವಾನಿಸಿದ ಹಣವನ್ನು ಬದಲಾದ ಮುಖ್ಯ ಅಧಿಕ್ಷಕರಿಗೆ ಹಸ್ತಾಂತರಿಸುವುದು, ಹಾಗೂ ಮಂಡಳಿಗೆ ವರದಿ ಮಾಡುವುದು. ಸಾದಿಲ್ವಾರು ಹಣ ಸ್ವೀಕೃತಿ ವ್ಯತ್ಯಯಾವಾಗಿರುವ ಬಗ್ಗೆ ಮನವಿಗಳನ್ನು ಪರೀಕ್ಷೆ ಮುಗಿದ ಒಂದು ತಿಂಗಳೊಳಗೆ ಮಂಡಲಿಗೆ ಪತ್ರ ಮುಖೇನ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳುವುದು. ಪರೀಕ್ಷೆ ಮುಗಿದ 30 ದಿನಗಳ ನಂತರ ಬರುವ ಯಾವುದೇ ಮನವಿಯನ್ನು ಪರಿಗಣಿಸಲಾಗುವುದಿಲ್ಲ. 1. ಸಾದಿಲ್ವಾರು ಬಿಲ್ಲುಗಳನ್ನು…

Read More

ಬೆಂಗಳೂರು : ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 50 ಕೋಟಿ ರೂ. ಆಫರ್ ಮಾಡಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನ ಮುಂದುವರೆಸಿದ್ದು, ನಮ್ಮಶಾಸಕರಿಗೆ 50 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸಲು ನಮ್ಮ ಶಾಸಕರಿಗೆ 50 ಕೋಟಿ ರೂ. ಆಫರ್ ನೀಡಲಾಗುತ್ತಿದೆ. ಉಚುನಾವಣೆಗೆ ಖರ್ಚು ನೀಡುತ್ತೇವೆ ಎಂದು ಆಮಿಷ ಒಡ್ಡುತ್ತಿದ್ದಾರೆ. ಈ ಮೂಲಕ ಬಿಜೆಪಿಯವರು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನೇ ನಾಶ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

Read More

ಬೆಂಗಳೂರು : ಇಂಧನ ಇಲಾಖೆಯ ಸಾಫ್ಟ್ ವೇರ್ ವ್ಯವಸ್ಥೆ ಉನ್ನತೀಕರಣ ಪ್ರಯುಕ್ತ ಸ್ಥಗಿತಗೊಂಡಿದ್ದ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಆನ್ ಲೈನ್ ಬಿಲ್ ಪಾವತಿ ಸೇರಿ ವಿವಿಧ ಸೇವೆಗಳು ಪುನಾರಂಭಗೊಂಡಿವೆ. ಸಾಫ್ಟ್ ವೇಲ್ ಅಪ್ ಡೇಟ್ ಕಾರಣದಿಂದಾಗಿ ಎಸ್ಕಾಂ ಆನ್ ಲೈನ್ ಸೇವೆ ಸ್ಥಗಿತಗೊಂಡಿತ್ತು. ಈ ಹಿನ್ನಲೆಯಲ್ಲಿ ವಿದ್ಯುತ್ ಗ್ರಾಹಕರು ಬಿಲ್ ಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ವಿಳಂಬ ವಿದ್ಯುತ್ ಬಿಲ್ ಪಾವತಿಗೆ ಬಡ್ಡಿ ವಿಧಿಸೋದಿಲ್ಲ ಎಂಬುದಾಗಿ ಎಸ್ಕಾಂ ಮಾಹಿತಿ ನೀಡಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಸಲುವಾಗಿ ಮಾರ್ಚ್ 10 ರಿಂದ 19ರವರೆಗೆ ಎಲ್ಲಾ 5 ಎಸ್ಕಾಂಗಳ ನಗರ ಪ್ರದೇಶಗಳ (RAPDRP) ಸ್ಥಗಿತಗೊಂಡಿದ್ದ ಆನ್ ಲೈನ್ ವಿದ್ಯುತ್ ಸೇವೆಗಳು ಇದೀಗ ಪುನಾರಂಭಗೊಂಡಿದ್ದು, ಈ ತಿಂಗಳ 30ರೊಳಗೆ ಎಲ್ಲಾ ಆನ್ ಲೈನ್ ಸೇವೆಗಳು ಯಥಾಸ್ಥಿತಿಗೆ ಬರಲಿವೆ ಎಂದು ತಿಳಿಸಿದೆ. ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಬಿಲ್ ವಿಳಂಬ ಪಾವತಿಗೆ…

Read More

ಬೆಂಗಳೂರು : ರಾಜ್ಯಾದ್ಯಂತ ಮಾ.25 ರಿಂದ ಏ.06 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್‍ಗಳುಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ. ಈ ಆದೇಶವು ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ. ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ,…

Read More

ಬೆಂಗಳೂರು : ಲೊಕಸಭೆ ಚುನಾವಣೆ ಘೊಷಣೆ ಬಳಿಕ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ನಿನ್ನೆ ಒಂದೇ ದಿನ ಬರೋಬ್ಬರಿ 36ಕೋಟಿ ರೂ. ಮೌಲ್ಯದ ವಸ್ತುಗಳನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಕ್ರಮ ತಡೆಗೆ ಕಾರ್ಯನಿರ್ವಹಿಸುತ್ತಿರುವ ತನಿಖಾ ತಂಡಗಳು ರಾಜ್ಯಾದ್ಯಂತ ಶುಕ್ರವಾರ ಒಂದೇ 9.56  ಕೋಟಿ ರೂ. ನಗದು ಸೇರಿದಂತೆ 36.41 ಕೋಟಿ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯಾದ್ಯಂತ ಶುಕ್ರವಾರ ಒಂದೇ 9 ಲಕ್ಷ ರೂ. ಮೌಲ್ಯದ ವಜ್ರವನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ 16.67 ಲಕ್ಷ ರೂ. ಉಚಿತ ಉಡುಗೊರೆ, 1.63 ಕೋಟಿ. ರೂ. ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Read More

ಮಾಸ್ಕೋ: ಮಾಸ್ಕೋದಲ್ಲಿ ಉಗ್ರರು ಅಟ್ಟಹಾಸ ನಡೆಸಿದ್ದು, ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ. 100 ಜನರು ಗಾಯಗೊಂಡಿದ್ದಾರೆ. ರಷ್ಯಾದ ರಾಜಧಾನಿ ಮಾಸ್ಕೋ ಬಳಿಯ ಸಂಗೀತ ಕಚೇರಿ ಸಭಾಂಗಣದಲ್ಲಿ ದೊಡ್ಡ ಸ್ಫೋಟ ಸಂಭವಿಸಿದೆ. ಮಾಹಿತಿಯ ಪ್ರಕಾರ, ಮಾಸ್ಕೋ ಬಳಿಯ ಸಂಗೀತ ಕಚೇರಿ ಸಭಾಂಗಣದಲ್ಲಿ ಸ್ಫೋಟ ಮತ್ತು ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದೇ ಸಮಯದಲ್ಲಿ, ಜನರನ್ನು ಸ್ಥಳಾಂತರಿಸುವ ಕಾರ್ಯ ಮುಂದುವರೆದಿದೆ. ಶುಕ್ರವಾರ (ಮಾರ್ಚ್ 22) ಸಂಜೆ, ಕೆಲವು ಅಪರಿಚಿತ ದಾಳಿಕೋರರು ಗುಂಡಿನ ದಾಳಿ ಮತ್ತು ಸ್ಫೋಟಗಳನ್ನು ನಡೆಸಿದರು. ಮಾಧ್ಯಮ ವರದಿಯ ಪ್ರಕಾರ, ಗುಂಡಿನ ದಾಳಿಯಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕ್ರೋಕಸ್ ಸಿಟಿ ಹಾಲ್ ಬಳಿಯೂ ಹೆಲಿಕಾಪ್ಟರ್ ಗಳು ಕಂಡುಬಂದಿವೆ. ವಿಶೇಷ ಪಡೆಗಳ ಸಿಬ್ಬಂದಿ ಕೂಡ ಕ್ರೋಕಸ್ ಸಿಟಿ ಹಾಲ್ ತಲುಪಿದರು ಮತ್ತು ಗುಂಡಿನ ಸದ್ದು ಕೇಳಿಸಿತು. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ…

Read More