Author: kannadanewsnow57

ಬೆಂಗಳೂರು : ಅಶ್ಲೀಲ ಕಮೆಂಟ್ ಮಾಡಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ, ಇನ್ನೂ ಬಹಳಷ್ಟು ಜನ ಅರೆಸ್ಟ್ ಆಗೋದು ಬಾಕಿಯಿದೆ ಎಂದು ನಟಿ ರಮ್ಯಾ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿದ 7 ಜನರು ಅರೆಸ್ಟ್ ಆಗಿದ್ದಾರೆ. ಇನ್ನೂ ಬಹಳಷ್ಟು ಜನರು ಅರೆಸ್ಟ್ ಆಗೋದು ಬಾಕಿ ಇದೆ. ಈ ಅಶ್ಲೀಲ ಕಮೆಂಟ್ ಬರೋದು ಕಡಿಮೆಯಾಗಿದೆ. ಕೆಟ್ಟದಾಗಿರೋ ಮೆಸೇಜ್ ಗಳು ನನಗೆ ಬರುತ್ತಿಲ್ಲ ಎಂದು ಹೇಳಿದ್ದಾರೆ. ಯಾವ ಮಹಿಳೆಗೂ ಈ ರೀತಿ ಆಗಬಾರದು, ಸದ್ಯ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರು ಅರೆಸ್ಟ್ ಆಗುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕನಕರಾಜ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಇಂದು “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿ, ಚಿತ್ರ ಯಶಸ್ವಿಯಾಗಲಿ ಎಂದು ಮನದುಂಬಿ ಹಾರೈಸಿದ್ದಾರೆ. https://twitter.com/siddaramaiah/status/1957316710119412099 ಮಾಜಿ ಸಚಿವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಮೈಸೂರು : ಮೈಸೂರಿನಲ್ಲಿ ಭೀಕರ ಹತ್ಯೆಯೊಂದು ನಡೆದಿದ್ದು, ಮದ್ಯ ಸೇವಿಸಲು ಹಣ ನೀಡದಿದ್ದಕ್ಕೆ ಪತಿಯೋರ್ವ ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ಮೈಸೂರಿನ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ಗಾಯತ್ರಿ ಎಂದು ಗುರುತಿಸಲಾಗಿದೆ. ಕುಡಿತದ ಚಟಕ್ಕೆ ದಾಸನಾಗಿದ್ದ ಪಾಪಣ್ಣ ಕುಡಿದ ಮತ್ತಿನಲ್ಲಿ ಈ ಕೃತ್ಯ ಎಸಗಿದ್ದಾನೆ. ಹಣಕ್ಕಾಗಿ ಪತ್ನಿ ಹಾಗೂ ಮಕ್ಕಳನ್ನು ಪೀಡಿಸುತ್ತಿದ್ದ ಪತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿ ಗಾಯತ್ರಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ತನಿಖೆ ಕೈಗೊಂಡಿದ್ದು, ಸದ್ಯ ಪಾಪಣ್ಣನನ್ನ ಪೊಲೀಸರು ಬಂಧಿಸಿದ್ದಾರೆ.

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತವಾಗಿದೆ.  ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಶಿರಾಡಿಘಾಟ್ ನ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ತಡೆಗೋಡೆ ಕುಸಿತವಾಗಿದೆ.

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ & ಗ್ಯಾಂಗ್ ನ ಸ್ಥಳಾಂತರಕ್ಕೆ ಕೋರಿ ಪ್ರಾಸಿಕ್ಯೂಷನ್ ಪರ ಅಭಿಯೋಜಕರಿಂದ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹೌದು, ನಟ ದರ್ಶನ್ ಸೇರಿ ಇತರೆ ಆರೋಪಿಗಳನ್ನು ಜಾಮೀನಿಗೂ ಮುಂಚಿನ ಜೈಲುಗಳಿಗೆ ವರ್ಗಾವಣೆ ಮಾಡುವಂತೆ ಕೋರ್ಟ್ ಗೆ ಮನವಿ ಮಾಡಲಾಗಿದೆ. ಈ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರಿನ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಜಾಮೀನಿಗೂ ಮುಂಚೆ ಇದ್ದ ಜೈಲಿಗೆ ದರ್ಶನ್ ಸೇರಿ ಇತರೆ ಆರೋಪಿಗಳನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಮೂಲಕ ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ದಾರೆ.

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿರುವ ನಟ ದರ್ಶನ್ 7 ಗ್ಯಾಂಗ್ ನ ಸ್ಥಳಾಂತರಕ್ಕೆ ಕೋರಿ ಪ್ರಾಸಿಕ್ಯೂಷನ್ ಪರ ಅಭಿಯೋಜಕರಿಂದ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಹೌದು, ನಟ ದರ್ಶನ್ ಸೇರಿ ಇತರೆ ಆರೋಪಿಗಳನ್ನು ಜಾಮೀನಿಗೂ ಮುಂಚಿನ ಜೈಲುಗಳಿಗೆ ವರ್ಗಾವಣೆ ಮಾಡುವಂತೆ ಕೋರ್ಟ್ ಗೆ ಮನವಿ ಮಾಡಲಾಗಿದೆ. ಈ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬೆಂಗಳೂರಿನ ಜೈಲಿನಲ್ಲಿ ರಾಜಾತಿಥ್ಯ ಹಿನ್ನೆಲೆಯಲ್ಲಿ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಜಾಮೀನಿಗೂ ಮುಂಚೆ ಇದ್ದ ಜೈಲಿಗೆ ದರ್ಶನ್ ಸೇರಿ ಇತರೆ ಆರೋಪಿಗಳನ್ನು ವರ್ಗಾವಣೆ ಮಾಡುವಂತೆ ಮನವಿ ಮಾಡಲಾಗಿದೆ. ಈ ಮೂಲಕ ನಟ ದರ್ಶನ್ ಮತ್ತೆ ಬಳ್ಳಾರಿ ಜೈಲಿಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

Read More

ಬೆಂಗಳೂರು : ರಾಜ್ಯಾದ್ಯಂತ ಭಾರೀ ಕುತೂಹಲಕ್ಕೆ ಕಾರಣವಾಗಿರುವ ಧರ್ಮಸ್ಥಳದ ಪ್ರಕರಣದ ಎಸ್ಐಟಿ ತನಿಖೆ ಪ್ರಗತಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ವಿಧಾನ ಸಭೆಯಲ್ಲಿ ಉತ್ತರ ನೀಡಲಿದ್ದಾರೆ. ‘ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರುವವರ ಹೆಸರು ಬಹಿರಂಗಪಡಿಸಬೇಕು. ಮುಸುಕುಧಾರಿಯನ್ನು ಬಂಧಿಸಿ ಎಸ್ಐಟಿ ತನಿಖಾ ವರದಿಯನ್ನು ಸದನದಲ್ಲಿ ಮಂಡಿಸ ಬೇಕು ಎಂದು ಪ್ರತಿಪಕ್ಷ ಬಿಜೆಪಿ ಪಟ್ಟು ಹಿಡಿವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದಿನ ಕಲಾಪ ತೀವ್ರ ಕುತೂಹಲ ಮೂಡಿಸಿದೆ. ಅನಾಮಧೇಯ ವ್ಯಕ್ತಿ ನೀಡಿದ ದೂರಿನ ಮೇಲೆ ಎಸ್ಐಟಿ ರಚನೆ ಮಾಡಿರುವುದು, ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟಿರುವ ಶವಗಳಿಗಾಗಿ 15 ದಿನಕ್ಕೂ ಹೆಚ್ಚು ದಿನಗಳಿಂದ ಗುಂಡಿ ತೋಡುತ್ತಿದ್ದರೂ ಏನೂ ದೊರೆಯದ ವಿಚಾರವಾಗಿ ಬಿಜೆಪಿ ನಾಯಕರು ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಸುವ ನಿರೀಕ್ಷೆಯಿದೆ. ಧರ್ಮಸ್ಥಳ ಕೇಸಿನ ಬಗ್ಗೆ ಸೋಮವಾರ ವಿಧಾನಸಭೆಯಲ್ಲಿ ಪೂರ್ಣ ಉತ್ತರ ನೀಡುವೆ. ಯಾರೂ ರಾಜಕೀಯ ಮಾಡಬಾರದು. ಇದು ಕಾನೂನಾತ್ಮಕ ಕೇಸಾ ಗಿದ್ದು, ಪೊಲೀಸರು ಎಫ್ ಐಆರ್ ಹಾಕಿ ತನಿಖೆ ಮಾಡ್ತಾರೆ. ತಪ್ಪು ಇದ್ದರೆ ಮಾತ್ರ ಕೇಸ್…

Read More

ಬೆಂಗಳೂರು : ಧರ್ಮಸ್ಥಳದಲ್ಲಿರುವ ಶ್ರೀಮಂಜುನಾಥನ ರಕ್ಷಿಸಿ ಎಂದು ಧರ್ಮಸ್ಥಳದ ಪೋಸ್ಟರ್ ಹಿಡಿದು ಜೆಡಿಎಸ್ ಶಾಸಕ ಕಂದಕೂರ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನಸೌಧಕ್ಕೆ ಇಂದು ಜೆಡಿಎಸ್ ಶಾಸಕ ಕಂದಕೂರ್ ಸ್ವಾಮಿ ಮಂಜುನಾಥನನ್ನು ರಕ್ಷಿಸಿ, ಅಪಪ್ರಚಾರಿಗಳನ್ನು ಶಿಕ್ಷಿಸಿ, ಸತ್ಯ ಮೇವ ಜಯತೆ ಎಂಬ ಪೋಸ್ಟರ್ ಹಿಡಿದು ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂದು ಧರ್ಮಸ್ಥಳ ಪ್ರಕರಣದ ಬಗ್ಗೆ ಗೃಹ ಸಚಿವರು ಉತ್ತರ ಕೊಡಲಿದ್ದಾರೆ. ಧರ್ಮಸ್ಥಳವನ್ನು ರಕ್ಷಿಸುವ ಕೆಲಸ ಸರ್ಕಾರ ಮಾಡದೇ ಇದ್ದರೆ, ಯಾರು ಪಿತೂರಿ ಮಾಡುತ್ತಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಇಲ್ಲದಿದ್ದರೆ ಮಂಜುನಾಥನೇ ಸರ್ಕಾರಕ್ಕೆ ಶಿಕ್ಷೆ ಕೊಡುವ ದಿನ ದೂರವಿಲ್ಲ ಎಂದು ಹೇಳಿದ್ದಾರೆ.

Read More

ನವದೆಹಲಿ: ಉತ್ತರ ಪ್ರದೇಶದ ಮೀರತ್ನಲ್ಲಿ ಭಾನುವಾರ ರಾತ್ರಿ ಟೋಲ್ ಪ್ಲಾಜಾದ ಕಾರ್ಮಿಕರು ಸೇನಾ ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ.ಆ ಯೋಧನನ್ನು ಕಪಿಲ್ ಕವಡ್ ಎಂದು ಗುರುತಿಸಲಾಗಿದೆ. ತನ್ನ ಸೋದರಸಂಬಂಧಿಯೊಂದಿಗೆ ಕರ್ತವ್ಯಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಗಲಾಟೆ ಸಂಭವಿಸಿದೆ. ಮೀರತ್-ಕರ್ನಾಲ್ ಹೆದ್ದಾರಿಯಲ್ಲಿರುವ ಭುನಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವೀಡಿಯೊ ದೃಶ್ಯಾವಳಿಗಳಲ್ಲಿ ಹಲವಾರು ಟೋಲ್ ನೌಕರರು ಕವಡ್ ಅವರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವುದು ತೋರಿಸಲಾಗಿದೆ. ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ ಮತ್ತು ತನಿಖೆಯ ಭಾಗವಾಗಿ ಟೋಲ್ ಪ್ಲಾಜಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. https://twitter.com/JaipurDialogues/status/1957166917191676343?ref_src=twsrc%5Etfw%7Ctwcamp%5Etweetembed%7Ctwterm%5E1957166917191676343%7Ctwgr%5Ead3bedd088b55b2a91c9d42930efb86ff114d72d%7Ctwcon%5Es1_c10&ref_url=https%3A%2F%2Fkannadadunia.com%2Ffour-toll-plaza-employees-arrested-for-tying-a-soldier-to-a-pole-and-beating-him-video-goes-viral-watch-video%2F https://twitter.com/meerutpolice/status/1957252403729998263?ref_src=twsrc%5Etfw%7Ctwcamp%5Etweetembed%7Ctwterm%5E1957252403729998263%7Ctwgr%5Ead3bedd088b55b2a91c9d42930efb86ff114d72d%7Ctwcon%5Es1_c10&ref_url=https%3A%2F%2Fkannadadunia.com%2Ffour-toll-plaza-employees-arrested-for-tying-a-soldier-to-a-pole-and-beating-him-video-goes-viral-watch-video%2F

Read More

ಬೆಂಗಳೂರು: ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಈ ರಾಂಪ್ ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ಸರ್ಕಲ್ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್ನಲ್ಲಿ ತಿಳಿದುಬಂದಿದೆ. 700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರೀ ಸರ್ಕಲ್ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.

Read More