Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜೊತೆಗೆ ಪೌಷ್ಠಿಕ ಧಾನ್ಯ ಒಳಗೊಂಡ ಕಿಟ್ ಒದಗಿಸಲು ಮುಂದಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಸಭೆಯ ಮುಖ್ಯಾಂಶಗಳು ಹೀಗಿವೆ; • ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. • ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ…
ವಾಷಿಂಗ್ಟನ್ : ಅಮೆರಿಕದ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಪ್ರದಾಯವಾದಿ ಯುವ ನಾಯಕ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಹಾಯಕ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ಗುಂಡು ಹಾರಿಸಲಾಯಿತು. ಚಾರ್ಲಿ ಕಿರ್ಕ್ ಹತ್ಯೆಯಲ್ಲಿ ಶಂಕಿತನನ್ನು ಬಂಧಿಸಲಾಯಿತು, ಆದರೆ ಹಲವಾರು ಗಂಟೆಗಳ ವಿಚಾರಣೆಯ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ. ಭದ್ರತಾ ಸಂಸ್ಥೆಗಳು ಕೊಲೆಗಾರನನ್ನು ಹುಡುಕುತ್ತಿವೆ. ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚಾರ್ಲಿ ಕಿರ್ಕ್ ಭಾಷಣ ಮಾಡುತ್ತಿದ್ದಾಗ ಅವರ ಕುತ್ತಿಗೆಗೆ ಗುಂಡು ಹಾರಿಸಲಾಗಿದೆ. ಟ್ರಂಪ್ ಮಾತ್ರವಲ್ಲದೆ ಕಮಲಾ ಹ್ಯಾರಿಸ್, ಜೋ ಬಿಡೆನ್ ಮತ್ತು ಬರಾಕ್ ಒಬಾಮಾ ಕೂಡ ಈ ಘಟನೆಯಿಂದ ದುಃಖಿತರಾಗಿದ್ದಾರೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ಟ್ರೂತ್ ಸೋಶಿಯಲ್ನಲ್ಲಿ ಚಾರ್ಲಿ ಕಿರ್ಕ್ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅದೇ ಸಮಯದಲ್ಲಿ, ಎಫ್ಬಿಐ ನಿರ್ದೇಶಕ ಕಾಶ್ ಪಟೇಲ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ಚಾರ್ಲಿ ಕಿರ್ಕ್ಗೆ ಸಂಬಂಧಿಸಿದ…
ಬೆಂಗಳೂರು : ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮಕ್ಕೆ ರಾಜ್ಯ ಸರ್ಕಾರವು ಬ್ರೇಕ್ ಹಾಕಿದ್ದು, ಇನ್ಮುಂದೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ…
ನೇಪಾಳ: ಬುಧವಾರ, ಸೆಪ್ಟೆಂಬರ್ 10, 2025 ರಂದು ಸೇನಾ ಹೆಲಿಕಾಪ್ಟರ್ಗಳ ಸಹಾಯದಿಂದ ನೇಪಾಳ ಸರ್ಕಾರದ ರಾಜಕಾರಣಿಗಳು ಮತ್ತು ಅಧಿಕಾರಿಗಳು ತಪ್ಪಿಸಿಕೊಳ್ಳುವ ವೈರಲ್ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿರುವ ಜನರು ಹಂಚಿಕೊಂಡಿದ್ದಾರೆ. ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಪ್ರತಿಭಟನಾಕಾರರು ಅವರನ್ನು ಹಿಡಿದು ಹೊಡೆಯಲು ಧಾವಿಸಿದಾಗ, ಹಗ್ಗಗಳಿಗೆ ಅಂಟಿಕೊಂಡಿದ್ದ ಸರ್ಕಾರಿ ಅಧಿಕಾರಿಗಳನ್ನು ರಕ್ಷಿಸಲು ನೇಪಾಳಿ ಸೇನೆಯು ಹೆಲಿಕಾಪ್ಟರ್ಗಳನ್ನು ಹೇಗೆ ಬಳಸುತ್ತಿದೆ ಎಂಬುದನ್ನು ವೀಡಿಯೊಗಳು ಎತ್ತಿ ತೋರಿಸಿವೆ. ಹಿಂಸಾಚಾರದ ಬಗ್ಗೆ ಉದ್ವಿಗ್ನತೆ ಹೆಚ್ಚುತ್ತಿರುವಾಗ, ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ವಿಮಾನದಲ್ಲಿ ಎತ್ತುವ ನೇಪಾಳ ಸೇನೆಯ ಪ್ರಯತ್ನಗಳನ್ನು ಜೀವಗಳನ್ನು ಉಳಿಸುವ ಒಂದು ಮಾರ್ಗವೆಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿರುವ ಜನರು ಕರೆದಿದ್ದಾರೆ. https://twitter.com/NetramDefence/status/1965713524229038356?ref_src=twsrc%5Etfw%7Ctwcamp%5Etweetembed%7Ctwterm%5E1965713524229038356%7Ctwgr%5E437a8e031771e1a9bf929c57de94909f57dfb89f%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fnews%3Fmode%3Dpwaaction%3Dclick https://twitter.com/Mazhar4justice/status/1965653116050964654?ref_src=twsrc%5Etfw%7Ctwcamp%5Etweetembed%7Ctwterm%5E1965653116050964654%7Ctwgr%5E437a8e031771e1a9bf929c57de94909f57dfb89f%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fnews%3Fmode%3Dpwaaction%3Dclick https://twitter.com/SGnepal/status/1965424082775933288?ref_src=twsrc%5Etfw%7Ctwcamp%5Etweetembed%7Ctwterm%5E1965424082775933288%7Ctwgr%5E437a8e031771e1a9bf929c57de94909f57dfb89f%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fnews%3Fmode%3Dpwaaction%3Dclick
ಧರ್ಮಸ್ಥಳ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ವಿವಿಧ ಪಕ್ಷಗಳಿಂದ ಧರ್ಮಸ್ಥಳ ಚಲೋ ಬೆನ್ನಲ್ಲೇ ಇದೀಗ ಧರ್ಮಸ್ಥಳದ ಪರ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಿಂತಿದ್ದಾರೆ. ಹೌದು, ಆಂಧ್ರ ಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಇಂದ ಸಂಜೆ 5 ಗಂಟೆ ಪವನ್ ಕಲ್ಯಾಣ್ ನೇತೃತ್ವದಲ್ಲಿ ಅಪಪ್ರಚಾರದ ವಿರುದ್ಧ ಪೂಜೆ ಸಲ್ಲಿಸಲಿದ್ದಾರೆ. ಧರ್ಮಸ್ಥಳದ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಡಿಸಿಎಂ ಪವನ್ ಕಲ್ಯಾಣ್ ಹಾಗೂ ಅವರನ್ನೊಳಗೊಂಡ ತಂಡ ಕ್ಷೇತ್ರದಲ್ಲಿ ವಿಶೇಷ ಆರತಿ ಪೂಜೆ ನೆರವೇರಿಸಲಿದ್ದಾರೆ.
ಬೆಂಗಳೂರು : ರಾಜ್ಯಾದ್ಯಂತ ಸೆ. 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದ್ದು, ಈ ಕುತಿತು ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಾಗರಿಕರು ಬೆಂಬಲ ಕೊಟ್ಟು ಸಹಕರಿಸಬೇಕು. ಆಯೋಗದ ಸಿಬ್ಬಂದಿಗಳು ರಾಜ್ಯದ ಪ್ರತಿ ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ, ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕಾಗಿ ತಮ್ಮಲ್ಲಿ ಕೋರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ…
ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 111(v)ರ ಘೋಷಣೆಯಂತೆ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ 2024-25ನೇ ಸಾಲಿನ ಆಯವ್ಯಯ ಘೋಷಿತ ಕಂಡಿಕೆ 96(c) ರಂತೆ ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ರಾಜ್ಯದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳಲ್ಲಿ 6 & 7 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಉತ್ತಮಪಡಿಸಲು “ಮರು ಸಿಂಚನ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಭಾಷಣದ ಕಂಡಿಕೆ 111 (v)ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ಒಂದು ರೂ. 1 ಲಕ್ಷ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷ ಮಿತಿಯೊಳಗಿರಬೇಕು. ಸಾಮಾನ್ಯ ವರ್ಗದ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವಿರಬೇಕು.ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ…
ಬೆಂಗಳೂರು: 2025-26ನೇ ಸಾಲಿನಲ್ಲಿ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ(ದ್ರಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ. ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಮತ್ತು 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ…
ಬೆಂಗಳೂರು :2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಿದೆ. 2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ನೀಡುವಂತೆ, ಉಲ್ಲೇಖಿತ ಸುತ್ತೋಲೆಯಲ್ಲಿ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕಗಳನ್ನು ಶಾಲಾ ಮುಖ್ಯ ಶಿಕ್ಷಕರ ಲಾಗಿನ್ಗೆ ಲಭ್ಯಗೊಳಿಸಲಾಗುವುದು. ಅದರಂತೆ, 2025-26 ಸಾಲಿನ 2.2.2. ಅರ್ಧವಾರ್ಷಿಕ ಪರೀಕ್ಷೆಯನ್ನು ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ www.kseab.karnataka.gov.in ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ…












