Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ. ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನ, ಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ. ರಾಜ್ಯದಲ್ಲಿ 2023ಕ್ಕೆ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ ಕೆಎಸ್ಆರ್ಪಿ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಅಭಿವೃದ್ಧಿಯು , ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ. ರಾಜ್ಯದಲ್ಲಿ ಅಪರಾಧಗಳ ಸಂಖ್ಯೆಯನ್ನು ಮತ್ತಷ್ಟು ಕಡಿಮೆಗೊಳಿಸುವತ್ತ ಪೊಲೀಸರು ಹೆಚ್ಚಿನ ಗಮನ ನೀಡಬೇಕು. ಸಮಾಜದಲ್ಲಿ ಅಶಾಂತಿ, ಹಿಂಸೆ, ಕ್ರೌರ್ಯ, ದ್ವೇಷಪೂರಿತ ಭಾಷಣದಿಂದ ಪ್ರಚೋದನೆಗಳು ಹೆಚ್ಚುತ್ತಿರುವುದನ್ನು ಕಾಣಲಾಗುತ್ತಿದೆ.…
ರಾಯಚೂರ : ಕರ್ನಾಟಕ ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ಜುಲೈ 15ರಂದು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿ ಅವರ ದರ್ಶನದ ಪಡೆದು, ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಸಭಾಂಗಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂತ್ರಾಲಯಕ್ಕೆ ಪ್ರತಿ ದಿನ ಅಂದಾಜು 200 ಬಸ್ಸಗಳು ರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುತ್ತವೆ. ರೈಲಿನ ಮೂಲಕವು ಜನರು ಮಂತ್ರಾಲಯಕ್ಕೆ ಬರುತ್ತಾರೆ. ಆಂಧ್ರಕ್ಕೆ ಹೋಲಿಸಿದರೆ ಶೇ.60ರಷ್ಟು ಜನರು ಕರ್ನಾಟಕ ರಾಜ್ಯದಿಂದಲೇ ಮಂತ್ರಾಲಯಕ್ಕೆ ಆಗಮಿಸುತ್ತಾರೆ. ಈ ಬಗ್ಗೆ ಮಂತ್ರಾಲಯದ ಸ್ವಾಮೀಜಿ ಅವರೊಂದಿಗೆ ಚರ್ಚಿಸಿದಾಗ, ಕರ್ನಾಟಕದಿಂದ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಸೂಕ್ತವಾದ ಜಾಗದ…
ಬೆಂಗಳೂರು : ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಕೃತಕ ಬುದ್ಧಿಮತ್ತೆ ಆಧಾರಿತ ಆನ್ಲೈನ್ ಹಾಜರಾತಿಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಶಾಲಾ ಶಿಕ್ಷಣ ಇಲಾಖೆ ಸಿಬ್ಬಂದಿಗೂ ಆನ್ಲೈನ್ ಹಾಜರಾತಿಗೆ ಆದೇಶ ಹೊರಡಿಸಿದೆ. ಈ ಸಂಬಂಧ ಕೂಡಲೇ ಆಧಾರ್ ಸಂಖ್ಯೆ ಅಪ್ಡೇಟ್ ಮಾಡಬೇಕು, ಇಲ್ಲವಾದಲ್ಲಿ ಮುಂದಿನ ತಿಂಗಳ ವೇತನ ಪಾವತಿ ಮಾಡುವುದಿಲ್ಲ ಎಂಬ ಎಚ್ಚರಿಕೆ ನೀಡಿದೆ. ಕರ್ನಾಟಕ ಸರ್ಕಾರದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಹಾಜರಾತಿ ನಿರ್ವಹಣೆ ವ್ಯವಸ್ಥೆಯಲ್ಲಿ ಅನುಸರಿಸುತ್ತಿರುವ ರಿಜಿಸ್ಟರ್ ಆಧಾರಿತ ದಾಖಲಾತಿ ಮತ್ತು ಹಸ್ತಚಾಲಿತ ಸಹಿಗಳನ್ನೊಳಗೊಂಡ ಹಾಜರಾತಿಯನ್ನು ಸೆರೆಹಿಡಿಯುವ ಸಾಂಪ್ರದಾಯಿಕ ವಿಧಾನಗಳ ದೃಢಿಕರಣದ ಕುರಿತು ಸವಾಲುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಹಾಜರಾತಿ ನಿರ್ವಹಣ ವ್ಯವಸ್ಥೆ ಎಂಬ ವಿನೂತನ ತಂತ್ರಾಂಶವನ್ನು (ಮೊಬೈಲ್ ಆಧಾರಿತ ಅಪ್ಲಿಕೇಶನ್ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆಯ ಇ-ಆಡಳಿತ ಕೇಂದ್ರವು ಅಭಿವೃದ್ಧಿಪಡಿಸಿರುತ್ತಾರೆ ಹಾಗೂ ಸದರಿ ತಂತ್ರಾಂಶವು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ face recognistion ಮತ್ತು geographical information system (GIS) ಆಧಾರಿತ ಆಧುನಿಕ ತಂತ್ರಜ್ಞಾನಗಳೊಂದಿಗೆ ಸರಳೀಕರಿಸಲಾಗಿರುತ್ತದೆ. ಆಡಳಿತ…
ವೆಸ್ಟ್ ಇಂಡೀಸ್ ಆಲ್ರೌಂಡರ್ ಆಂಡ್ರೆ ರಸೆಲ್ ಬುಧವಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದರು. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅವರು ವೆಸ್ಟ್ ಇಂಡೀಸ್ ಜೆರ್ಸಿಯಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ. ಭಾನುವಾರ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ವೈಟ್-ಬಾಲ್ ಸರಣಿಗೆ ರಸೆಲ್ ಅವರನ್ನು ಆಯ್ಕೆ ಮಾಡಿದ ಸ್ವಲ್ಪ ಸಮಯದ ನಂತರ ಈ ಬೆಳವಣಿಗೆ ಸಂಭವಿಸಿದೆ. 37 ವರ್ಷದ ರಸೆಲ್ ಜುಲೈ 20 ಮತ್ತು 22 ರಂದು ತಮ್ಮ ತವರು ಮೈದಾನವಾದ ಜಮೈಕಾದ ಸಬೀನಾ ಪಾರ್ಕ್ನಲ್ಲಿ ಪಂದ್ಯದ ಆರಂಭಿಕ ಎರಡು ಪಂದ್ಯಗಳನ್ನು ಆಡಲಿದ್ದಾರೆ ಮತ್ತು ನಂತರ ಅವರ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ತೆರೆ ಎಳೆಯಲಿದ್ದಾರೆ. ರಸೆಲ್ ಅವರ ಸೇರ್ಪಡೆ ಸಂಪೂರ್ಣವಾಗಿ “ಪ್ರದರ್ಶನದ ಅರ್ಹತೆಯ ಆಧಾರದ ಮೇಲೆ ಆಗಿದೆ, ಏಕೆಂದರೆ ಅವರು ವಿಶ್ವ ಕ್ರಿಕೆಟ್ನಲ್ಲಿ ಅತ್ಯಂತ ಪ್ರಭಾವಶಾಲಿ ಟಿ20 ಆಟಗಾರರಲ್ಲಿ ಒಬ್ಬರಾಗಿದ್ದಾರೆ” ಎಂದು ವೆಸ್ಟ್ ಇಂಡೀಸ್ ದೃಢಪಡಿಸಿದೆ. ಜಮೈಕಾದ ಕ್ರಿಯಾಶೀಲ ಆಲ್ರೌಂಡರ್ ವೆಸ್ಟ್ ಇಂಡೀಸ್ ಅನ್ನು ಪ್ರತಿನಿಧಿಸಿದ್ದಕ್ಕಾಗಿ ತಮ್ಮ ಕೃತಜ್ಞತೆ ಮತ್ತು ಹೆಮ್ಮೆಯನ್ನು ವ್ಯಕ್ತಪಡಿಸಿದರು,…
ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಸಿಗದವರು ಹಾಗೂ ಸ್ವಯಂ ಉದ್ಯೋಗ ಮಾಡದವರು, ಉನ್ನತ ವ್ಯಾಸಂಗ ಮುಂದುವರೆಸದೇ ಇರುವವರು ನೋಂದಣಿ ಮಾಡಿಕೊಳ್ಳುವುದು. ಮಾಹೆಯಾನ ನಿರುದ್ಯೋಗ ಭತ್ಯೆ ಪದವೀಧರರಿಗೆ ರೂ. 3000/- ಮತ್ತು ಡಿಪ್ಲೋಮಾ ಪದವೀದರರಿಗೆ ರೂ. 1500/- ಗಳನ್ನು ಖಾತೆಗೆ ನೇರ ನಗದು ಮೂಲಕ ನೀಡಲಾಗುವುದು. ಆರ್ಹ ಯುವಜನರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ಆಗಸ್ಟ್ 07 ರೊಳಗಾಗಿ ನೋಂದಾಯಿಸಿಕೊಳ್ಳುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ. ದೂ.ಸಂ.: 08182-255293/ 9380663606 ಇವರುಗಳನ್ನು ಸಂಪರ್ಕಿಸುವುದು.
ಕಂದಾಯ ಇಲಾಖೆಯು ಕೈಬರಹದಲ್ಲಿ ಭೂದಾಖಲೆ ನೀಡುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದ್ದು, ಡಿಜಿಟಲ್ ರೂಪದಲ್ಲಿ ವಿತರಿಸುವುದನ್ನು ಕಡ್ಡಾಯಗೊಳಿಸಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಈಗಾಗಲೇ ಡಿಜಿಟಲ್ ಭೂದಾಖಲೆಗಳ ವಿತರಣೆ ಶುರುವಾಗಿದೆ. ಇನ್ನೂ ಮುಂದೆ “ಎ” ಹಾಗೂ “ಬಿ” ವರ್ಗದ ಭೂ ದಾಖಲೆಗಳನ್ನು ಸಂಪ್ರದಾಯಕ ದೃಢೀಕೃತ ನಕಲು ಪ್ರತಿ ಅಥವಾ ಕೈಬರಹದ ಮೂಲಕ ನೀಡುವ ಬದಲಾಗಿ ಡಿಜಿಟಲ್ ರೂಪದಲ್ಲಿಯೇ ನೀಡಲಿದೆ. ಸದ್ಯ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಚೇರಿಗಳಲ್ಲಿ ಡಿಜಿಟಲ್ ದಾಖಲೆ ನೀಡಲಾಗುತ್ತಿದೆ. ಅರ್ಜಿದಾರರು ಕೋರುವ ಭೂ ದಾಖಲೆ ಈಗಾಗಲೇ ಸ್ಕ್ಯಾನ್ ಆಗಿ ದೃಢೀಕರಣಗೊಂಡಿದ್ದರೆ ಒಂದೇ ದಿನದಲ್ಲಿ ಡಿಜಿಟಲ್ ದಾಖಲೆ ವಿತರಣೆ ಆಗಲಿದೆ. ಒಂದೊಮ್ಮೆ ಸ್ಕ್ಯಾನಿಂಗ್ ಪ್ರಕ್ರಿಯೆ ಆಗಿರದಿದ್ದರೇ 07 ದಿನಗಳೊಳಗೆ ಡಿಜಿಟಲ್ ದಾಖಲೆ ವಿತರಣೆ ಆಗಲಿದೆ. ಇದರಿಂದ ಭೂದಾಖಲೆಗಳನ್ನು ಯಾವುದೇ ಅಡಚಣೆ ವಿಳಂಬವಿಲ್ಲದಂತೆ ಪಡೆಯಲು ಅನುಕೂಲವಾಗಲಿದೆ. ಭೂದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸುವ ಉದ್ದೇಶದಿಂದ ಕಂದಾಯ ಇಲಾಖೆ ಈಗಾಗಲೇ ಭೂ ಸುರಕ್ಷಾ ಯೋಜನೆ ಜಾರಿಗೊಳಿಸಿದೆ. ಈ ಬಗ್ಗೆ ರೈತರು ಹಾಗೂ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು…
ಬೆಂಗಳೂರು : ಎಐಸಿಸಿಯ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ. ನ್ಯಾಯ ಯೋಧ ರಾಹುಲ್ ಗಾಂಧಿ ಅವರ ಸಾಮಾಜಿಕ ನ್ಯಾಯದ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊದಲ ಸಭೆಯ “ಬೆಂಗಳೂರು ಘೋಷಣೆಗಳು” ಈ ಕೆಳಕಂಡಂತಿವೆ; * ಸಮಾಜದ ನಿರ್ಲಕ್ಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ತೋರಿರುವ ಧೈರ್ಯ ಹಾಗೂ ವಿಶೇಷವಾಗಿ ಹಿಂದುಳಿದ ವರ್ಗಗಳ ಬಗ್ಗೆ ತೋರಿರುವ ಕಾಳಜಿಗೆ ಎಐಸಿಸಿ ಒಬಿಸಿ ವಿಭಾಗದ ಸಲಹಾ ಸಮಿತಿಯು, ನ್ಯಾಯ ಯೋಧರಾದ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳನ್ನು ಅರ್ಪಿಸುತ್ತದೆ. ರಾಹುಲ್ ಗಾಂಧಿಯವರ ದೃಢ ನಿಶ್ಚಯದಿಂದಾಗಿ ಮನುವಾದಿ ಮೋದಿ ಸರ್ಕಾರವನ್ನು ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಯಾಗಿದ್ದ ಜಾತಿ ಗಣತಿಯನ್ನು ಭಾರತದಲ್ಲಿ ಕೈಗೊಳ್ಳುವಂತೆ ಮಾಡಿತು. ಈ ಐತಿಹಾಸಿಕ ಸಾಧನೆಗಾಗಿ ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಹೃತ್ಪೂರ್ವಕವಾಗಿ ರಾಹುಲ್ ಗಾಂಧಿಯವರನ್ನು ಶ್ಲಾಘಿಸುತ್ತದೆ. ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ…
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಗೆ 1 ವರ್ಷ ಜೈಲೇ ಗತಿಯಾಗಿದೆ. ಆರೋಪಿಗಳು 1 ವರ್ಷ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾಫಿ ಪೋಸಾ ಅಡ್ವೈಸರಿ ಬೋರ್ಡ್ ನಿಂದ ಆದೇಶ ಹೊರಡಿಸಲಾಗಿದೆ.ಈ ರನ್ಯಾ ರಾವ್ ಸೇರಿದಂತೆ ಮೂವರು ಆರೋಪಿಗಳಿಗೆ 1 ವರ್ಷ ಜೈಲೇ ಗತಿಯಾಗಿದೆ. ಕಾಫಿ ಪೋಸಾ ಅಡ್ವೈಸರಿ ಬೋರ್ಡ್ ನಿಂದ ಡಿಆರ್ ಐಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಡಿಆರ್ ಐಯಿಂದ ಜೈಲು ಅಧೀಕ್ಷಕರಿಗೆ ಮಾಹಿತಿ ರವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ. ರಾಜ್ಯದಲ್ಲಿ 2023ಕ್ಕೆ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ ಕೆಎಸ್ಆರ್ಪಿ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ. ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ, ಮಾನ, ಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ. ರಾಜ್ಯದಲ್ಲಿ 2023ಕ್ಕೆ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ ಎಂದರು. ರಾಜ್ಯದ ಅಭಿವೃದ್ಧಿಯು , ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ. ರಾಜ್ಯದಲ್ಲಿ ಅಪರಾಧಗಳ…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು, ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿಗೆ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಬರಲಿದೆ. ಇದರೊಂದಿಗೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅರಬ್ಬಿ ಸಮುದ್ರ ಭಾಗದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿ ರುವ ಕಾರಣ ಮುಂದಿನ ಮೂರುದಿನ ಗಳಲ್ಲಿ ಒಳನಾಡು ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ. ಜುಲೈ 17 ಮತ್ತು 18 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬರಲಿದ್ದು, ಎರಡು ದಿನ ‘ಆರೆಂಜ್…