Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ. 1) ಶಾಲಾ ಕೊಠಡಿಗಳ ನಿರ್ಮಾಣ 2) ಕಾಂಪೌಂಡ್ ಗೋಡೆಗಳ ನಿರ್ಮಾಣ 3) ಆಟದ ಮೈದಾನಗಳ ಅಭಿವೃದ್ಧಿ 4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ 5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ 6) ಬಯಲು ರಂಗಮಂದಿರಗಳ ನಿರ್ಮಾಣ 7) ಸೈಕಲ್ ಸ್ಟ್ಯಾಂಡ್‌ಗಳ ನಿರ್ಮಾಣ 8) ಶಾಲೆಗಳ ಹತ್ತಿರ ಶಿಕ್ಷಕರಿಗೆ ವಸತಿ ಗೃಹಗಳ ನಿರ್ಮಾಣ 9) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು. 10) ಗಣಕಯಂತ್ರ ಮತ್ತು ಪ್ರಿಂಟರ್ ಇತ್ಯಾದಿಗಳನ್ನು ಒದಗಿಸುವುದು. 11) ಬೋಧನೋಪಕರಣಗಳು ಹಾಗೂ ಆಟೋಪಕರಣಗಳನ್ನು ಒದಗಿಸುವುದು. 2. ಉನ್ನತ ಶಿಕ್ಷಣ ಸರ್ಕಾರಿ ಕಾಲೇಜುಗಳು, ಸರ್ಕಾರಿ ಕೈಗಾರಿಕಾ ತರಬೇತಿ…
ಬೆಂಗಳೂರು : ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಹತ್ತಿರದ ಲಸಿಕಾ ಕೇಂದ್ರ ಪತ್ತೆಗೆ ‘Nearby Vaccination centre Karnataka’ ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು, ಕೇಂದ್ರ ಹುಡುಕಬಹುದು…
ಬೆಂಗಳೂರು : ಆಸ್ತಿ ಮಾಲೀಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಮ್ಮ ಮನೆಯಲ್ಲೇ ಕುಳಿತು ಇ – ಖಾತಾವನ್ನು ಪಡೆದುಕೊಳ್ಳಿ. ಸಾರ್ವಜನಿಕ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತವಾಗಿದೆ. ಬೇಕಾದ ದಾಖಲಾತಿಗಳು ಮಾಲೀಕರ ಭಾವಚಿತ್ರ ಮತ್ತು ಆಧಾರ್ ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುವುದು) ವಿದ್ಯುತ್ ಆರ್ ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ) ಸ್ವತ್ತಿನ ಛಾಯಾಚಿತ್ರ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ-ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗುವುದು. www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು. ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು. K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಇ-ಖಾತಾ ಪಡೆಯುವ ಮೂಲಕ…
ರಾಜ್ಯ ಸರ್ಕಾರ ಬಿ.ಪಿ.ಎಲ್.ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ.ಸಿ.ಎನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಿ.ಪಿ.ಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ರೂ.1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ರೂ.500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ರೂ.1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿ.ಪಿ.ಎಲ್ ಹಾಗೂ 1.25 ಲಕ್ಷ ಎ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ…
ಬೆಳಗಾವಿ : ರೈತರು ಪೂರೈಸುವ ಕಬ್ಬು ತೂಕದಲ್ಲಿ ಮೋಸ ಮಾಡಿದ್ದು ಸಾಬೀತಾದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಅಲ್ಲಿ ಡಿಜಿಟಲ್ ವೇ ಬ್ರಿಡ್ಜ್ಗಳಿವೆ. ಸರ್ಕಾರದಿಂದಲೇ ಈ ವರ್ಷ 12 ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವ ಯಂತ್ರದಲ್ಲಿ ಮೋಸ ಆಗುತ್ತಿರುವ ಬಗ್ಗೆ ಯಾವುದೇ ರೈತರು ಇದುವರೆಗೂ ದೂರು ಸಲ್ಲಿಸಿಲ್ಲ. ರೈತರು ದೂರು ಸಲ್ಲಿಸಿ, ಬಳಿಕ ಇದು ಸಾಬೀತಾದಲ್ಲಿ ಅಂತಹ ರೈತರಿಗೆ 2 ಲಕ್ಷ ರೂ. ಬಹುಮಾನ ಕೊಡುತ್ತೇವೆ ಎಂದು ಸರ್ಕಾರ ಘೋಷಿಸಿತ್ತು. ಇದೀಗ ಈ ಬಹುಮಾನ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಒಂದು ವೇಳೆ ತೂಕದಲ್ಲಿ ಮೋಸ ಮಾಡುವ…
ಬೆಳಗಾವಿ :ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು / ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್ಐಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆಂಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಪೊಲೀಸರು / ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಇಂತಹ…
ಬೆಳಗಾವಿ :ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು / ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್ಐಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆಂಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಪೊಲೀಸರು / ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ. ಇಂತಹ…
ಬೆಳಗಾವಿ: ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿ, ಒಳ ಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್ಐ ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ 167 ಗೃಹರಕ್ಷಕ ದಳದ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇನ್ನೂ ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವಾಗ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂದರ್ಭ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ ಸಂದರ್ಭ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲಿ, ವಾರಸುದಾರರು ಯಾರೂ ಇಲ್ಲದೇ ಇರುವ ಪ್ರಕರಣಗಳಲ್ಲಿ, ದ್ವೇಷಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ಸಂದರ್ಭಗಳಲ್ಲಿ, ಕೆಲವು ಪ್ರಕರಣಗಳಲ್ಲಿ…
ಬೆಂಗಳೂರು : ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ ಎಂದು ಸಚಿವ ದಿನೇಶ್ಯ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ ಬೇಡ, ನಿಯಮ ಪಾಲಿಸಿ- ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ. https://twitter.com/dineshgrao/status/2001513646212681966?s=20
ಬೆಳಗಾವಿ : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದೊಳಗೆ 11ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಉತ್ತರಿಸಿದ್ದು, ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದರು. ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000…














