Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಕಾರು ಡಿಕ್ಕಿಯಾಗಿ ಫ್ಲೈಓವರ್ ಮೇಲಿಂದು ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಚ್ಚಳ್ಳಿ ಗೇಟ್ ಫ್ಲೈಓವರ್ ಮೇಲೆ ಘಟನೆ ನಡೆದಿದೆ. ಒನ್ ವೇನಲ್ಲಿ ಬಂದ ಕಾರು ಚಾಲಕನಿಂದ ಭೀಕರ ಅಪಘಾತವಾಗಿದ್ದು, ಫ್ಲೈಓವರ್ ಮೇಲಿಂದ ಬಿದ್ದು ನೇತ್ರಾವತಿ (31) ಮೃತಪಟ್ಟಿದ್ದಾರೆ. ಮೃತ ನೇತ್ರಾವತಿ ಬೆಂಗಳೂರಿನ ಬಾಣಸವಾಡಿ ಮೂಲದವರಾಗಿದ್ದು, ಡಿಕ್ಕಿ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ.ಬೈಕ್ ನ ಎಡಭಾಗಕ್ಕೆ ಬಿದ್ದ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತವೆಸಗಿ ಕಾರು ಚಾಲಕ ಪರಾರಿಯಾಗಿದ್ದಾನೆ.
ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆ.28ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆ.19ರವರೆಗೆ ಅವಕಾಶವಿರುತ್ತದೆ. ಅ.24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ. ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೆಸೆಟ್-2025 ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 18.09.2015 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 19.09.2025, ಪ್ರವೇಶ ಪತ್ರ (Hall Ticketh ಬಿಡುಗಡೆ ದಿನಾಂಕ 24.10.2025 ಪರೀಕ್ಷಾ ದಿನಾಂಕ : 02.11.2025 ಅಭ್ಯರ್ಥಿಗಳು ಕೆಸೆಟ್-2025ಕ್ಕೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು, ಯಾವುದೇ ಇತರ ಮನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಕೆಲ ವೆಬ್‌ಸೈಟ್ https:/lettininkarnataka.gov.in/kol ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು…
BIG NEWS : ಮಾಲೀಕನ ಹೆಸರಿನಲ್ಲಿರುವ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ : ಡಿಸಿಎಂ ಡಿಕೆಶಿ
ಬೆಂಗಳೂರು : ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಅವರು, 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ‘ನಂಬಿಕೆ ನಕ್ಷೆ’ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ. ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ. 7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ‘ಅಭಿವೃದ್ದಿ ಹೊಂದಿದ ಜಮೀನು ’ ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1959189818963099928
ಬೆಂಗಳೂರು : ಬೆಂಗಳೂರಿನಲ್ಲಿ ಗೌರಿ-ಗಣೇಶ ಹಬ್ಬಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ದಿನಾಂಕ: 27-08-2025 ರಿಂದ ಬೆಂಗಳೂರು ನಗರದಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸಲಿದ್ದು, ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಬಗ್ಗೆ ಸಂಬಂಧಪಟ್ಟವರಿಂದ ಅನುಮತಿ ಅರ್ಜಿಗಳನ್ನು ಪಡೆದುಕೊಳ್ಳುವುದು. 2023 ಮತ್ತು 2024ನೇ ಸಾಲಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ವಿಗ್ರಹಗಳ ಆಧಾರದ ಮೇಲೆ ಯಾವ ಯಾವ ಸ್ಥಳಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರತಿಷ್ಠಾಪಿಸಬಹುದು ಎಂಬುದನ್ನು ಗುರುತಿಸಿಕೊಳ್ಳುವುದು. ಸಂಘ-ಸಂಸ್ಥೆಗಳು ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಜಾಗ, ದಿನ, ಮುಂತಾದವುಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ, ಮುಂಚಿತವಾಗಿ ಏಕ ಗವಾಕ್ಷಿ ವ್ಯವಸ್ಥೆ ((Single window System) ಮೂಲಕ ಪರವಾನಗಿ ಪಡೆದುಕೊಳ್ಳುವಂತೆ ಸೂಚಿಸುವುದು. ಸಾರ್ವಜನಿಕ ರಸ್ತೆ ಹಾಗೂ ಸಾರ್ವಜನಿಕರು ಓಡಾಡುವ ಜಾಗಗಳಲ್ಲಿ ವಾಹನ ಮತ್ತು ಪಾದಚಾರಿಗಳ ಓಡಾಟಕ್ಕೆ ಅಡಚಣೆಯಾಗುವ ರೀತಿಯಲ್ಲಿ ಪೆಂಡಾಲ್, ಚಪ್ಪರ ಹಾಕಿ ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸಲು…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆ.27 ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಚುರುಕುಗೊಳ್ಳಲಿದ್ದು, ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಬಿರುಸುಗೊಳ್ಳಲಿದೆ. ಆ.24ಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು : ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜಿನ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು “ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಗರಿಷ್ಟ 06 ತಿಂಗಳುಗಳ ಮಿತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಮಂಜೂರು ಮಾಡಿರುವಂತೆಯೇ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ಸ್ವಯಂ ಚಾಲಿತವಾಗಿ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಲಭ್ಯವಿರುವ ಅಸಾಧಾರಣ ರಜೆಗಳನ್ನು ಒಳಗೊಂಡಂತೆ ಎಲ್ಲಾ ರಜೆಗಳನ್ನು ಮೊದಲು ಬಳಸಿಕೊಂಡು ನಂತರ ಅಗತ್ಯವಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದು ವಿಶೇಷ…
ಬೆಂಗಳೂರು : ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ 1,500 ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲಿದೆ. ಆಗಸ್ಟ್ 25 ಮತ್ತು 26ರಂದು ಬೆಂಗಳೂರಿನಿಂದ ವಿಶೇಷ ಬಸ್ ಸೇವೆ ಇರಲಿದೆ. ದಿನಾಂಕ: 26.08.2025 ರಂದು ಸ್ವರ್ಣಗೌರಿ ವ್ರತ, ದಿನಾಂಕ 27.08.2025ರಂದು ಗಣೇಶ ಚತುರ್ಥಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:25.08.2025 ಹಾಗೂ 26.08.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:27.08.2025 ಹಾಗೂ 31.08.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. https://twitter.com/KarnatakaVarthe/status/1959225292607865075 • ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ. • ಮೈಸೂರು ರಸ್ತೆ…
ಬೆಂಗಳೂರು : 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ‘ನಂಬಿಕೆ ನಕ್ಷೆ’ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇದ್ದ ಅನೇಕ ಪ್ರಕರಣಗಳಿದ್ದವು. ಈ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ. 7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ‘ಅಭಿವೃದ್ದಿ ಹೊಂದಿದ ಜಮೀನು ’ ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1959189818963099928
ತುಮಕೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತುಮಕೂರಿನಲ್ಲಿ ಹೃದಯಾಘಾತದಿಂದ ಕರ್ತವ್ಯನಿರತ ನರ್ಸ್ ಬಲಿಯಾಗಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಕುಸಿದುಬಿದ್ದು ನರ್ಸ್ ಲತಾ (37) ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ಪಾಳಿ ಕರ್ತವ್ಯಕ್ಕೆ ಹಾಜರಾಗಿದ್ದ ಲತಾ ಅವರು ಊಟ ಮುಗಿಸಿಕೊಂಡು ವಾಶ್ ರೂಂ ಬಳಿ ಹೋದಾಗ ಸುಸ್ತಾಗಿದ್ದರು. ಈ ವೇಳೆ ಚಿಕಿತ್ಸೆ ನೀಡುತ್ತಿದ್ದಂತೆಯೇ ಮೃತಪಟ್ಟಿದ್ದಾರೆ. ನರ್ಸ್ ಲತಾ ತುಮಕೂರು ತಾಲೂಕಿನ ಹಿರೇಹಳ್ಳಿ ನಿವಾಸಿಯಾಗಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪಣಜಿ : ಐದು ವರ್ಷದ ಮಗುವಿನ ಪೋಷಕರು ಒಂದನೇ ತರಗತಿಗೆ ಪ್ರವೇಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗೋವಾ ಹೈಕೋರ್ಟ್ ವಜಾಗೊಳಿಸಿದೆ. ಗೋವಾ ರಾಜ್ಯ ಸರ್ಕಾರವು ಡಿಸೆಂಬರ್ 13, 2022 ರ NEP, 2020 ಮತ್ತು RTE ಕಾಯ್ದೆ, 2009 ರ ಸುತ್ತೋಲೆಯನ್ನು 2025-26 ರಿಂದ ಜಾರಿಗೆ ತರಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ವಜಾಗೊಳಿಸಲಾಗಿದೆ. NEP ಪ್ರಕಾರ, ಮಗುವು 1 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಲು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಆರು ವರ್ಷಗಳನ್ನು ಪೂರ್ಣಗೊಳಿಸಬೇಕು ಎಂದು ಮಗುವಿನ ತಂದೆ ಹೈಕೋರ್ಟ್ಗೆ ಸಲ್ಲಿಸಿದರು. ಅರ್ಜಿದಾರರ ಮಗನಿಗೆ 5 ವರ್ಷ ಮತ್ತು 11 ತಿಂಗಳು. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ, ಮೊದಲ ತರಗತಿಗೆ ಪ್ರವೇಶಕ್ಕೆ ವಯಸ್ಸಿನ ಮಿತಿ ಆರು ವರ್ಷ ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು. ಆದ್ದರಿಂದ, ಅರ್ಜಿದಾರರ ಮಗನನ್ನು ಕಾನ್ವೆಂಟ್ ಒಂದನೇ ತರಗತಿಗೆ ಸೇರಿಸಲಿಲ್ಲ. ಇದನ್ನು ವಿರೋಧಿಸಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಸರ್ಕಾರಕ್ಕೆ ಈ ವಿಷಯವನ್ನು ಸ್ಪಷ್ಟಪಡಿಸುವಂತೆ ಕೇಳಿತ್ತು.…













