Subscribe to Updates
Get the latest creative news from FooBar about art, design and business.
Author: kannadanewsnow57
ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದೆ. ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿ ಜಿಲ್ಲಾ ಕೋರ್ಟ್ ನಿಂದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕೋಟಾ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ 16 ವರ್ಷದ ಅಪ್ರಾಪ್ತ ವಯಸ್ಕನೊಬ್ಬ 25 ವರ್ಷದ ಯುವತಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ ಎಂಬ ಆರೋಪವಿದೆ. ಇದಷ್ಟೇ ಅಲ್ಲ, ಈ ಆರೋಪದ ಮೇಲೆ ಹುಡುಗಿಯ ಕುಟುಂಬವು ಅಪ್ರಾಪ್ತ ವಯಸ್ಕನಿಗೆ ಕಠಿಣ ಶಿಕ್ಷೆಯನ್ನೂ ನೀಡಿದೆ. ಮಾಹಿತಿಯ ಪ್ರಕಾರ, ಹುಡುಗಿಯ ಕುಟುಂಬವು ಅಪ್ರಾಪ್ತ ಗೆಳೆಯನನ್ನು 8 ದಿನಗಳ ಕಾಲ ಒತ್ತೆಯಾಳಾಗಿಟ್ಟು ಅವನ ಕೈಗಳನ್ನು ಹಗ್ಗದಿಂದ ಕಟ್ಟಿ ಹಾಕಿ ಬೆಲ್ಟ್ನಿಂದ ಹೊಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಅದೇ ಸಮಯದಲ್ಲಿ, ಈ ಘಟನೆಯ ತನಿಖೆ ನಡೆಸಿದಾಗ, ಜನವರಿ 19 ರಂದು ಮಧ್ಯಪ್ರದೇಶದ ದಾಟಿಯ ಅಪ್ರಾಪ್ತ ಬಾಲಕನೊಬ್ಬ ಕೋಟಾ ಜಿಲ್ಲೆಯ ಹಿರಾಯಖೇಡಿ ಗ್ರಾಮದಿಂದ ತನಗಿಂತ ದೊಡ್ಡವಳಾದ ಹುಡುಗಿಯನ್ನು ಕರೆದುಕೊಂಡು ಹೋಗಿದ್ದಾನೆ ಎಂದು ತಿಳಿದುಬಂದಿದೆ. ಆದಾಗ್ಯೂ, ಹುಡುಗಿ ತನ್ನ ಸ್ವಂತ ಇಚ್ಛೆಯಂತೆ ಹೋಗಿದ್ದಾಳೆ ಎಂದು ಅವರು ಹೇಳುತ್ತಾರೆ. ಹುಡುಗಿಯ ಕುಟುಂಬದವರ ವರದಿಯ ಮೇರೆಗೆ, ಪೊಲೀಸರು ದಾಟಿಯಾದಿಂದ ಹುಡುಗಿಯನ್ನು ಹಿಡಿದು ಕರೆತಂದರು.…
ಹಿಂದೂ ಸಂಸ್ಕೃತಿಯಲ್ಲಿ, ಪಿತೃಪಕ್ಷದ ಅವಧಿಯು ಬಹಳ ಮಹತ್ವದ್ದಾಗಿದೆ. ಇದು 15-16 ದಿನಗಳ ಅವಧಿಯಾಗಿದ್ದು, ಈ ಅವಧಿಯಲ್ಲಿ ಪಿತೃಗಳು ಎಂದೂ ಕರೆಯಲ್ಪಡುವ ಪೂರ್ವಜರ ಆತ್ಮಗಳ ಶಾಂತಿ ಮತ್ತು ವಿಮೋಚನೆಗಾಗಿ ಶ್ರದ್ಧಾ (ಶ್ರಾದ್ಧ) ಮತ್ತು ತರ್ಪಣ ಆಚರಣೆಗಳನ್ನು ನಡೆಸಲಾಗುತ್ತದೆ. 2025 ರಲ್ಲಿ ಪಿತೃ ಪಕ್ಷ ಯಾವಾಗ? ವೈದಿಕ ಕ್ಯಾಲೆಂಡರ್ ಪ್ರಕಾರ, ಈ ವರ್ಷದ ಭಾದ್ರಪದ ಮಾಸದ ಹುಣ್ಣಿಮೆ ಸೆಪ್ಟೆಂಬರ್ 7 ರಂದು ಬರುತ್ತದೆ ಮತ್ತು ತಡರಾತ್ರಿ 1:41 ಕ್ಕೆ ಪ್ರಾರಂಭವಾಗುತ್ತದೆ. ಅದೇ ದಿನ ರಾತ್ರಿ 11:38 ಕ್ಕೆ ಅವಧಿ ಕೊನೆಗೊಳ್ಳುತ್ತದೆ. ಪಿತೃ ಪಕ್ಷವು ಭಾನುವಾರ, 7ನೇ ಸೆಪ್ಟೆಂಬರ್ 2025 ರಂದು ಪ್ರಾರಂಭವಾಗುತ್ತದೆ. ಮತ್ತು ಇದು 21ನೇ ಸೆಪ್ಟೆಂಬರ್ 2025 ರಂದು ಸರ್ವಪಿತ್ರಿ ಅಮಾವಾಸ್ಯೆಯೊಂದಿಗೆ ಕೊನೆಗೊಳ್ಳುತ್ತದೆ. ಎಲ್ಲಾ ಪ್ರಮುಖ ದಿನಾಂಕಗಳು ಪೂರ್ಣಿಮಾ ಶ್ರಾದ್ಧ: ಸೆಪ್ಟೆಂಬರ್ 7, 2025, ಭಾನುವಾರ ಭಾದ್ರಪದ, ಶುಕ್ಲ ಪೂರ್ಣಿಮಾ ಪ್ರತಿಪದ ಶ್ರಾದ್ಧ: ಸೆಪ್ಟೆಂಬರ್ 8, 2025, ಸೋಮವಾರ ಅಶ್ವಿನ್, ಕೃಷ್ಣ ಪ್ರತಿಪದ ದ್ವಿತೀಯ ಶ್ರದ್ಧ: ಸೆಪ್ಟೆಂಬರ್ 9, 2025, ಮಂಗಳವಾರ ಅಶ್ವಿನ್,…
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ನಿನ್ನೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಎಂಬುವರು ವಕೀಲ ಜಗದೀಶ್ ವಿರುದ್ಧ ದೂರು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಜಾತಿ ಆಧಾರಿತ ಪ್ರಚೋದನಕಾರಿ ಮಾತುಗಳನ್ನಾಡಿ ಸಮಾಜದಲ್ಲಿ ಅಶಾಂತಿ ಮೂಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಈ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196 ಮತ್ತು 299 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರಲದಲ್ಲಿರುವ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಗುರುವಾರ ನೋಟಿಸ್ ನೀಡಲು ಜಗದೀಶ್ ಅವರ ಮನೆಗೆ ಪೊಲೀಸರು ಹೋದಾಗ ಬಾಗಿಲು ತೆಗೆಯದೆ ನೊಟೀಸ್ ಪಡೆದುಕೊಳ್ಳಲು ನಿರಾಕರಿಸಿದ್ದರು. ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಪೊಲೀಸರು ಜಗದೀಶ್ ಅವರನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಜಗದೀಶ್ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲಾಗಿತ್ತು. ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹಿರಿಯಡ್ಕ ಸಬ್ ಜೈಲಿನಲ್ಲಿರುವ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಕೋರ್ಟ್ ಆದೇಶದ ಹಿನ್ನೆಲೆ ಮಹೇಶ್ ತಿಮರೋಡಿ ಈಗ ಹಿರಿಯಡ್ಕ ಸಬ್ ಜೈಲು ನಲ್ಲಿದ್ದಾರೆ. ಇಂದು ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ ಅಂತ ತಿಳಿದು ಬಂದಿದೆ. ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ಬೆಂಗಳೂರು : ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕುಸುಮಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ನಿನ್ನೆ ಸಂಜೆ 6:30ಕ್ಕೆ ಕುಸುಮಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಮು ಹಾಗೂ ಶೋಭಾ ದಂಪತಿಯ ಕುಸುಮಾ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು : ಮಹಿಳೆಯೊಬ್ಬಳು ಲವರ್ ಗಾಗಿ ಸ್ವಂತ ಅತ್ತೆಯನ್ನೇ ಮುದ್ದೆಯಲ್ಲಿ ವಿಷ ಹಾಕಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ತಡಗ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ ಎಂಬ ಮಹಿಳೆ ಅತ್ತೆ ದೇವೀರಮ್ಮ(75) ಅವರನ್ನು ಕೊಲೆ ಮಾಡಿದ್ದಾಳೆ. ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದಾಳೆ. ಅಶ್ವಿನಿ ಪ್ರಿಯಕರ ಆಂಜನೇಯ ಎಂಬನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇದಕ್ಕೆ ಅತ್ತೆ ದೇವೀರಮ್ಮ ಅಡ್ಡಿಯಾಗಿದ್ದಳು. ಪ್ರಿಯಕರನಿಗಾಗಿ ಅಶ್ವಿನಿ ಮನೆಯಲ್ಲಿ ಚಿನ್ನಾಭರಣ ಹಾಗೂ ಕಳುವು ಮಾಡುತ್ತಿದ್ದಳು. ಕದ್ದ ಹಣ ಹಾಗೂ ಚಿನ್ನಾಭರಣವನ್ನು ಪ್ರಿಯಕರ ಆಂಜನೇಯನಿಗೆ ಕೊಡುತ್ತಿದ್ದಳು. ಈ ವಿಷಯ ಗೊತ್ತಾದ ಬಳಿಕ ಅತ್ತೆಯನ್ನೇ ಸೊಸೆ ಅಶ್ವಿನಿ ವಿಷ ಹಾಕಿ ಕೊಂದಿದ್ದಾಳೆ. ಬಳಿಕ ಮನೆಯವರಿಗೆ ದೇವಿರಮ್ಮ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ ಎಂದು ನಂಬಿಸಿದ್ದಳು. ಮನೆಯಲ್ಲಿ 100 ಗ್ರಾಂ ಚಿನ್ನ ಹಾಗೂ 50 ಸಾವಿರ ಹಣ ಕಳುವಾಗಿದ್ದರಿಂದ ಅಶ್ವಿನಿ ನಾದಿನಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಕಳ್ಳತನದ ಪ್ರಕರಣದ ತನಿಖೆ ನಡೆಸಿದಾಗ ಹತ್ಯೆಯ ಹಿಂದಿನ ರಹಸ್ಯ ಬಯಲಾಗಿದೆ. ಪೊಲೀಸರು ವಿಚಾರಣೆ…
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಗೆ ವಿಚಾರಣೆಗೆ ಹಾಜರಾಗುಂತೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ. ಯೂಟ್ಯೂಬರ್ ಸಮೀರ್ ಗೆ ಆಗಸ್ಟ್ 24 ರಂದು ವಿಚಾರಣೆಗೆ ಹಾಜರಾಗುಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುಂತೆ ನೋಟಿಸ್ ನೀಡಿದ್ದಾರೆ. ಎಐ ವೀಡಿಯೋ ಸೃಷ್ಠಿಸಿ ಗಲಭೆಗೆ ಪ್ರಚೋದನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣವು ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್.19ರಂದು ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ನವದೆಹಲಿ : ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕ್ಯಾನ್ಸರ್ ಗೆ ಔಷಧ ಕಂಡುಹಿಡಿಯುವ ನಿಟ್ಟಿನಲ್ಲಿ ಫ್ಲೋರಿಡಾ ವಿವಿಯು ಮಹತ್ವದ ಸಂಶೋಧನೆಯನ್ನು ನಡೆಸಿದೆ. ಇದುವರೆಗೂ ಎಲ್ಲಾ ರೀತಿಯ ಸಂಶೋಧನೆಗಳು ಕ್ಯಾನ್ಸರ್ ಗಡ್ಡೆಯನ್ನು ನಾಶ ಮಾಡುವ ಉದ್ದೇಶದೊಂದಿಗೆ ನಡೆಸಲಾಗು ತ್ತಿತ್ತು. ಆದರೆ ಫ್ಲೋರಿಡಾ ವಿವಿಯ ವಿಜ್ಞಾನಿಗಳ ತಂಡ ನೇರವಾಗಿ ಟ್ಯೂಮರ್ ನಿಯಂತ್ರಣದ ಬದಲಾಗಿ ಟ್ಯೂಮರ್ ವಿರುದ್ಧ ದೇಹದಲ್ಲಿ ಪ್ರತಿಕಾಯ ಶಕ್ತಿಯನ್ನು ಪ್ರಚೋದಿಸುವ ಮತ್ತು ಟ್ಯೂಮರ್ ಚಿಕಿತ್ಸೆಗೆ ಸ್ಪಂದಿಸುವ ರೀತಿಯಲ್ಲಿ ಉತ್ತೇಜಿಸುವ ಆಧಾರದಲ್ಲಿ ಸಂಶೋಧನೆ ನಡೆಸಿದೆ. ಕೋವಿಡ್ ಲಸಿಕೆಯಲ್ಲಿ ಬಳಸಲಾದ ಎಂಆರ್ ಎನ್ಎ ಪದ್ಧತಿ ಆಧರಿಸಿ ಲಸಿಕೆಯನ್ನು ಇಲಿಗಳ ಮೇಲೆ ಪ್ರಯೋಗಿಸಲಾಗಿದ್ದು, ಈ ವೇಳೆ ಅದು ಕ್ಯಾನ್ಸರ್ ಟ್ಯೂಮರ್ ವಿರುದ್ಧ ದೇಹದ ಪ್ರತಿಕಾಯಗಳು ಹೋರಾಡಲು ಪ್ರಚೋದಿಸಿದ್ದು, ಟ್ಯೂಮರ್ ಗುಣಪಡಿಸಿದ್ದು ಕಂಡುಬಂದಿದೆ.ಈ ಮೂಲಕ ಇದು ಭವಿಷ್ಯದಲ್ಲಿ ಎಲ್ಲಾ ರೀತಿಯ ಕ್ಯಾನ್ಸರ್ ಗೆ ದಿವ್ಯೌಷಧ ಆಗಬಹುದು ಎಂಬ ನಿರೀಕ್ಷೆ ಹುಟ್ಟುಹಾಕಿದೆ.
ಬೆಂಗಳೂರು: ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಲಾಗಿದೆ. ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡುವುದು ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ33(ಎ) ರನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದು…













