Author: kannadanewsnow57

2025-26 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಹಾಗೂ ಸ್ಥಳ ನಿರ್ದಿಷ್ಟ ವಿಕೋಪಗಳಿಂದ ಬೆಳೆ ನಷ್ಟ ಪರಿಹಾರಕ್ಕೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಕೈಗೊಳ್ಳುವ ಎರಡು ವಾರದೊಳಗಾಗಿ ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ರೈತರು ನೇರವಾಗಿ ವಿಮಾ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬೇಕು. ಅದೇ ರೀತಿ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಅತಿಯಾದ ಮಳೆ, ಬೆಳೆ ಮುಳುಗಡೆ, ಆಲಿಕಲ್ಲು ಮಳೆ, ಭೂ ಕುಸಿತ ಇಂತಹ ಅವಘಡಗಳಿಂದ ಬೆಳೆ ನಷ್ಟವಾದರೆ ಅವಗಡ ಸಂಭವಿಸಿದ 72 ಗಂಟೆಯೊಳಗಾಗಿ ರೈತರು…

Read More

ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸಲು ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನ ನೀಡಲು 6 ನೇ ತರಗತಿಯಿಂದ 9 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಎಸ್ಪಿಎಆರ್ಎಸ್ಹೆಚ್(ಸ್ಪರ್ಶ್) ಅಂಚೆ ಚೀಟಿಗಳನ್ನು ಸಂಗ್ರಹಿಸುವ ಸಾಮರ್ಥ್ಯ ಮತ್ತು ಸಂಶೋಧನೆಯನ್ನು ಉತ್ತೇಜಿಸಲು ನೀಡುವ ವಿಧ್ಯಾರ್ಥಿವೇತನವಾಗಿದೆ. ಪಠ್ಯಕ್ರಮವನ್ನು ಬಲಪಡಿಸುವುದು ಮತ್ತು ವಿದ್ಯಾಭ್ಯಾಸಕ್ಕೆ ಪೂರಕವಾಗುವಂತೆ ಚಿಕ್ಕವಯಸ್ಸಿನ ಮಕ್ಕಳಲ್ಲಿ ಅಂಚೆಚೀಟಿ ಸಂಗ್ರಹವನ್ನು ಉತ್ತೇಜಿಸುವುದೇ ಈ ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಈ ಹವ್ಯಾಸವು ಅವರಿಗೆ ಜ್ಞಾನಾರ್ಜನೆ, ವಿಶ್ರಾಂತಿ ಮತ್ತು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. 2025 ರ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಅಂಕಗಳನ್ನು ಹೊಂದಿರುವ, ಅಂಚೆ ಚೀಟಿ ಸಂಗ್ರಹಣಾ ಠೇವಣಿ ಖಾತೆಯನ್ನು ಹೊಂದಿರುವ, ಕ್ಲಬ್ ಅಂಚೆ ಚೀಟಿ ಸಂಗ್ರಹಣಾ ಸದಸ್ಯತ್ವ ಹೊಂದಿರುವ ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಅನುಸರಿಸುವ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ರೂ. 6000/- ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. ಮೊದಲ ಹಂತದಲ್ಲಿ ಅಂಚೆ ಚೀಟಿ ಸಂಗ್ರಹಣಾ ರಸಪ್ರಶ್ನೆ…

Read More

ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು…

Read More

ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್, ಬೆಂಗಳೂರು ಇಲ್ಲಿ ಯುಹೆಚ್ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್ ನೇಮಕಾತಿ ನಡೆಯಲಿದೆ. 17 1/2 ವರ್ಷದಿಂದ 21 ವರ್ಷದೊಳಗಿನ (2004 ರ ಅಕ್ಟೋಬರ್ 01 ರಿಂದ 2008 ರ ಏಪ್ರಿಲ್ 01 ರ ನಡುವೆ ಜನಿಸಿರುವ) ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಕ್ಟೋಬರ್ 06 ರಿಂದ ಅಗ್ನಿವೀರ್(ಜನರಲ್ ಡ್ಯೂಟಿ, ಟೆಕ್ನಿಕಲ್), ಅಗ್ನಿವೀರ್(ಟ್ರೇಡ್ಸ್ಮನ್ 8ನೇ ಮತ್ತು 10 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮೆನ್(ಓಪೆನ್ ಕೆಟಗರಿ) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮದ್ರಾಸ್ ಗ್ರೂಪ್ ಇಂಜಿನಿಯರಿAಗ್ ಮತ್ತು ಸೆಂಟರ್, ಬೆಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು(ಪ್ರ) ಇವರು ಪ್ರಕಟಣೆಯಲ್ಲಿ ತಿಳಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆದರೆ ನಾನು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2028ರಲ್ಲಿ ನಮ್ಮ ಪಕ್ಷವೇ ಮತ್ತೆ ಅಧಿಕಾರಕ್ಕೆಬರುತ್ತದೆ. ಇದು ನೂರಕ್ಕೆ ನೂರ ರಷ್ಟು ಸತ್ಯ. ಆದರೆ, ಮುಂದಿನ ಅವಧಿಗೆ ನಾನು ಮುಖ್ಯ ಮಂತ್ರಿ ಆಗುವುದಿಲ್ಲ. ಇನ್ನು ಜೆಡಿಎಸ್ 2-3 ಸ್ಥಾನ ಬಂದರೆ ಅದೇ ಹೆಚ್ಚು. ಹೀಗಾಗಿ ಜೆಡಿಎಸ್ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಲಿ ಎಂದು ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ, ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಯತ್ನಾಳ್ ಅವರಾಗಲಿ ಅಧಿಕಾರಕ್ಕೆ ಬರುವುದಿಲ್ಲ. ಯತ್ನಾಳ್ ಹೊಸ ಪಕ್ಷ ಮಾಡಿದರೆ ಆ ಸಾಧ್ಯತೆ ಇದ್ದರೂ ಇರಬಹುದು ಎಂದು ಹೇಳಿದರು. https://twitter.com/siddaramaiah/status/1958874340205695163

Read More

ಬೆಂಗಳೂರು : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ ಅವರ ಏಕ ವ್ಯಕ್ತಿ ಅಭಿನಯದ “ಶರ್ಮಿಷ್ಠೆ” ನಾಟಕ ವೀಕ್ಷಿಸಿದ್ದಾರೆ. ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಜನಸೇವೆ ಮಾಡುವ ಜೊತೆಗೆ ಆಗಾಗ್ಗೆ ಧಾರವಾಹಿ, ಚಲನಚಿತ್ರ, ನಾಟಕಗಳಲ್ಲಿ ಅಭಿನಯಿಸುತ್ತಾ ಕಲಾಸೇವೆ ಮಾಡುವ ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ.ಇಂದಿನ ಶರ್ಮಿಷ್ಠೆ ನಾಟಕದಲ್ಲಿ ಅವರ ಅಭಿಯನ ಮನೋಜ್ಞವಾಗಿತ್ತು. ಕಲಾಸರಸ್ವತಿಯ ಒಲವು ಅವರ ಮೇಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಜನಸೇವೆಯ ಜೊತೆಗೆ ಕಲಾಸೇವೆಯ ಅವರ ಕಾರ್ಯ ಯಾವ ಅಡೆತಡೆಗಳಿಲ್ಲದೆ ಸಾಗಲಿ ಎಂದು ಹಾರೈಸಿದ್ದಾರೆ. ಬೇಲೂರು ರಘುನಂದನ್ ಅವರ ಈ ನಾಟಕಕ್ಕೆ ಚಿದಂಬರರಾವ್ ಜಂಬೆ ವಿನ್ಯಾಸ, ನಿರ್ದೇಶನವಿದೆ. ಅನೂಪ್ ಶೆಟ್ಟಿ ಸಂಗೀತ ವಿನ್ಯಾಸ, ಶಿವಲಿಂಗ ಪ್ರಸಾದ್ ಸಂಗೀತ ನಿರ್ವಹಣೆ, ಪ್ರಮೋದ್ ಶಿಗ್ಗಾಂವ್ ರಂಗಸಜ್ಜಿಕೆ, ವಸ್ತ್ರವಿನ್ಯಾಸವಿದೆ. ಕನ್ನಡ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆ ಕ್ಷೇತ್ರದ ಅಭಿಜಾತ ಕಲಾವಿದೆ ಉಮಾಶ್ರೀ ಅವರು 4 ದಶಕಕ್ಕೂ ಹೆಚ್ಚು ಕಾಲದಿಂದ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸುತ್ತಿರುವ ಉಮಾಶ್ರೀ ಅವರು…

Read More

ಬೆಂಗಳೂರು : ಇಂದಿನಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯ್ಕ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ಮನೆಗಳ ಆರ್.ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ…

Read More

ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ ಬಾವಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಂತರ್ಜಲ ಅಭಿವೃದ್ದಿ ಮತ್ತು ಅತಿ ಬಳಕೆ ನಿಯಂತ್ರಣ ಅಧಿನಿಯಮದಡಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ವಿಫಲ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬಿದ್ದು ಸಾವಿಗೀಡಾಗುವ ಅವಘಡಗಳನ್ನು ತಪ್ಪಿಸಲು ಮುಂಜಾಗ್ರತೆವಹಿಸಿ ಮಣ್ಣು ಮತ್ತು ಕಲ್ಲುಗಳಿಂದ ಸಂಪೂರ್ಣವಾಗಿ ಮುಚ್ಚಿ ಗಿಡನೆಟ್ಟು ಸುರಕ್ಷಿತವಾಗಿಡಬೇಕು ಎಂದರು. ಸ್ಥಳೀಯ ಪ್ರಾಧಿಕಾರ (ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆಗಳು) ನಿರಾಪೇಕ್ಷಣಾ ಪತ್ರವನ್ನು ನೀಡುವಾಗ 15 ದಿನ ಮುಂಚಿತವಾಗಿ ಅರ್ಜಿ ಪಡೆದು ಸ್ವೀಕೃತಿ ನೀಡಬೇಕು. ಸಾರ್ವಜನಿಕ ಕುಡಿಯುವ ನೀರಿನ ಮೂಲಗಳಿಂದ 500 ಮೀಟರ್ ದೂರ ಇರುವ ಬಗ್ಗೆ ಪಿ.ಡಿ.ಓ ರವರಿಂದ ದೃಡೀಕರಿಸಿಕೊಳ್ಳಬೇಕು. ಮುಚ್ಚಳಿಕೆ ಪತ್ರ ಪಡೆಯಬೇಕು ಎಂದರು. ಸಫಲ/ವಿಫಲ ಕೊಳವೆ ಬಾವಿಗಳ ಬಗ್ಗೆ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ನೊಂದಾಯಿಸತಕ್ಕದ್ದು, ಪ್ರತಿ ತಿಂಗಳ ಮೊದಲನೆ…

Read More

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ  ಬಿಜೆಪಿ ರಾಜ್ಯಾಧ್ಯಕ್ಷರಾದ  ಬಿ.ವೈ ವಿಜಯೇಂದ್ರ  ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ “ಧರ್ಮಯುದ್ಧ” ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.  ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಎಸ್ಐಟಿ ತನಿಖೆಯ ನೆಪದಲ್ಲಿ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಹಾಗೂ ಇದಕ್ಕೆ ಬೆಂಬಲವಾಗಿ ನಿಂತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ  ಅವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ “ಧರ್ಮಯುದ್ಧ” ಹೆಸರಿನಲ್ಲಿ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರ ಷಡ್ಯಂತ್ರದ ವಿರುದ್ಧ ಸಮಾಜವೂ ಜಾಗೃತಗೊಳ್ಳಬೇಕಾಗಿದೆ. ಹಿಂದೂ ಶ್ರದ್ಧಾ ಕೇಂದ್ರಗಳನ್ನು ಅನುಮಾನಿಸುವ, ಅವಮಾನಿಸುವ ಪ್ರವೃತ್ತಿ ಇಂದು ನಿನ್ನೆಯದಲ್ಲ, ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಎಸ್ಐಟಿ ರಚಿಸಬೇಕೆಂದು ಹೇಳಿದ್ದೇ ನಗರ ನಕ್ಸಲರು. ನಂತರದಲ್ಲಿ ನಡೆದ ಪುಣ್ಯಕ್ಷೇತ್ರದ ತೇಜೋವಧೆ, ಅಪಪ್ರಚಾರಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣ. ಇದರ ವಿರುದ್ಧ ಬಿಜೆಪಿ ಎಲ್ಲಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಿದೆ…

Read More

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆ , ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಭೋವಿ ಜನಾಂಗದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಸೇವಾ ಸಿಂಧು https://sevasindhu.karnataka.gov.in ಪೋರ್ಟಲ್ ನಲ್ಲಿ ಸೆಪ್ಟೆಂಬರ್ 10,2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ನಂ 29/19 ರಾಜಾಜಿನಗರ 1ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್, ಬೆಂಗಳೂರು -560 010 ರಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More