Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆದರೆ ನಾನು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2028ರಲ್ಲಿ ನಮ್ಮ ಪಕ್ಷವೇ ಮತ್ತೆ ಅಧಿಕಾರಕ್ಕೆಬರುತ್ತದೆ. ಇದು ನೂರಕ್ಕೆ ನೂರ ರಷ್ಟು ಸತ್ಯ. ಆದರೆ, ಮುಂದಿನ ಅವಧಿಗೆ ನಾನು ಮುಖ್ಯ ಮಂತ್ರಿ ಆಗುವುದಿಲ್ಲ. ಇನ್ನು ಜೆಡಿಎಸ್ 2-3 ಸ್ಥಾನ ಬಂದರೆ ಅದೇ ಹೆಚ್ಚು. ಹೀಗಾಗಿ ಜೆಡಿಎಸ್ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಲಿ ಎಂದು ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ, ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಯತ್ನಾಳ್ ಅವರಾಗಲಿ ಅಧಿಕಾರಕ್ಕೆ ಬರುವುದಿಲ್ಲ. ಯತ್ನಾಳ್ ಹೊಸ ಪಕ್ಷ ಮಾಡಿದರೆ ಆ ಸಾಧ್ಯತೆ ಇದ್ದರೂ ಇರಬಹುದು ಎಂದು ಹೇಳಿದರು. https://twitter.com/siddaramaiah/status/1958874340205695163
ಬೆಂಗಳೂರು : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ ಅವರ ಏಕ ವ್ಯಕ್ತಿ ಅಭಿನಯದ “ಶರ್ಮಿಷ್ಠೆ” ನಾಟಕ ವೀಕ್ಷಿಸಿದ್ದಾರೆ. ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಜನಸೇವೆ ಮಾಡುವ ಜೊತೆಗೆ ಆಗಾಗ್ಗೆ ಧಾರವಾಹಿ, ಚಲನಚಿತ್ರ, ನಾಟಕಗಳಲ್ಲಿ ಅಭಿನಯಿಸುತ್ತಾ ಕಲಾಸೇವೆ ಮಾಡುವ ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ.ಇಂದಿನ ಶರ್ಮಿಷ್ಠೆ ನಾಟಕದಲ್ಲಿ ಅವರ ಅಭಿಯನ ಮನೋಜ್ಞವಾಗಿತ್ತು. ಕಲಾಸರಸ್ವತಿಯ ಒಲವು ಅವರ ಮೇಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಜನಸೇವೆಯ ಜೊತೆಗೆ ಕಲಾಸೇವೆಯ ಅವರ ಕಾರ್ಯ ಯಾವ ಅಡೆತಡೆಗಳಿಲ್ಲದೆ ಸಾಗಲಿ ಎಂದು ಹಾರೈಸಿದ್ದಾರೆ. ಬೇಲೂರು ರಘುನಂದನ್ ಅವರ ಈ ನಾಟಕಕ್ಕೆ ಚಿದಂಬರರಾವ್ ಜಂಬೆ ವಿನ್ಯಾಸ, ನಿರ್ದೇಶನವಿದೆ. ಅನೂಪ್ ಶೆಟ್ಟಿ ಸಂಗೀತ ವಿನ್ಯಾಸ, ಶಿವಲಿಂಗ ಪ್ರಸಾದ್ ಸಂಗೀತ ನಿರ್ವಹಣೆ, ಪ್ರಮೋದ್ ಶಿಗ್ಗಾಂವ್ ರಂಗಸಜ್ಜಿಕೆ, ವಸ್ತ್ರವಿನ್ಯಾಸವಿದೆ. ಕನ್ನಡ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆ ಕ್ಷೇತ್ರದ ಅಭಿಜಾತ ಕಲಾವಿದೆ ಉಮಾಶ್ರೀ ಅವರು 4 ದಶಕಕ್ಕೂ ಹೆಚ್ಚು ಕಾಲದಿಂದ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸುತ್ತಿರುವ ಉಮಾಶ್ರೀ ಅವರು…
ಬೆಂಗಳೂರು : ಇಂದಿನಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರುಗಳು ಎಲ್ಲ ಮನೆಗಳನ್ನು ಜಿಯೋಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷರಾದ ಮಧುಸೂಧನ್ ಆರ್ ನಾಯ್ಕ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ಮನೆಗಳ ಆರ್.ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ…
ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ ಬಾವಿಗಳನ್ನು ಮುಚ್ಚಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಂತರ್ಜಲ ಅಭಿವೃದ್ದಿ ಮತ್ತು ಅತಿ ಬಳಕೆ ನಿಯಂತ್ರಣ ಅಧಿನಿಯಮದಡಿ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ವಿಫಲ ಕೊಳವೆ ಬಾವಿಗಳಲ್ಲಿ ಚಿಕ್ಕ ಮಕ್ಕಳು ಬಿದ್ದು ಸಾವಿಗೀಡಾಗುವ ಅವಘಡಗಳನ್ನು ತಪ್ಪಿಸಲು ಮುಂಜಾಗ್ರತೆವಹಿಸಿ ಮಣ್ಣು ಮತ್ತು ಕಲ್ಲುಗಳಿಂದ ಸಂಪೂರ್ಣವಾಗಿ ಮುಚ್ಚಿ ಗಿಡನೆಟ್ಟು ಸುರಕ್ಷಿತವಾಗಿಡಬೇಕು ಎಂದರು. ಸ್ಥಳೀಯ ಪ್ರಾಧಿಕಾರ (ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ, ಮಹಾನಗರ ಪಾಲಿಕೆಗಳು) ನಿರಾಪೇಕ್ಷಣಾ ಪತ್ರವನ್ನು ನೀಡುವಾಗ 15 ದಿನ ಮುಂಚಿತವಾಗಿ ಅರ್ಜಿ ಪಡೆದು ಸ್ವೀಕೃತಿ ನೀಡಬೇಕು. ಸಾರ್ವಜನಿಕ ಕುಡಿಯುವ ನೀರಿನ ಮೂಲಗಳಿಂದ 500 ಮೀಟರ್ ದೂರ ಇರುವ ಬಗ್ಗೆ ಪಿ.ಡಿ.ಓ ರವರಿಂದ ದೃಡೀಕರಿಸಿಕೊಳ್ಳಬೇಕು. ಮುಚ್ಚಳಿಕೆ ಪತ್ರ ಪಡೆಯಬೇಕು ಎಂದರು. ಸಫಲ/ವಿಫಲ ಕೊಳವೆ ಬಾವಿಗಳ ಬಗ್ಗೆ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ನೊಂದಾಯಿಸತಕ್ಕದ್ದು, ಪ್ರತಿ ತಿಂಗಳ ಮೊದಲನೆ…
ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ “ಧರ್ಮಯುದ್ಧ” ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಎಸ್ಐಟಿ ತನಿಖೆಯ ನೆಪದಲ್ಲಿ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಹಾಗೂ ಇದಕ್ಕೆ ಬೆಂಬಲವಾಗಿ ನಿಂತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಧರ್ಮದ ಉಳಿವಿಗಾಗಿ “ಧರ್ಮಯುದ್ಧ” ಹೆಸರಿನಲ್ಲಿ ಪ್ರತಿಭಟನೆ ನಡೆಯಲಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರ ಷಡ್ಯಂತ್ರದ ವಿರುದ್ಧ ಸಮಾಜವೂ ಜಾಗೃತಗೊಳ್ಳಬೇಕಾಗಿದೆ. ಹಿಂದೂ ಶ್ರದ್ಧಾ ಕೇಂದ್ರಗಳನ್ನು ಅನುಮಾನಿಸುವ, ಅವಮಾನಿಸುವ ಪ್ರವೃತ್ತಿ ಇಂದು ನಿನ್ನೆಯದಲ್ಲ, ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಎಸ್ಐಟಿ ರಚಿಸಬೇಕೆಂದು ಹೇಳಿದ್ದೇ ನಗರ ನಕ್ಸಲರು. ನಂತರದಲ್ಲಿ ನಡೆದ ಪುಣ್ಯಕ್ಷೇತ್ರದ ತೇಜೋವಧೆ, ಅಪಪ್ರಚಾರಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣ. ಇದರ ವಿರುದ್ಧ ಬಿಜೆಪಿ ಎಲ್ಲಾ ಕ್ಷೇತ್ರದಲ್ಲೂ ಪ್ರತಿಭಟನೆ ನಡೆಸಲಿದೆ…
ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ಸ್ವಯಂ ಉದ್ಯೋಗ ಯೋಜನೆ , ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಭೋವಿ ಜನಾಂಗದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಸೇವಾ ಸಿಂಧು https://sevasindhu.karnataka.gov.in ಪೋರ್ಟಲ್ ನಲ್ಲಿ ಸೆಪ್ಟೆಂಬರ್ 10,2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ನಂ 29/19 ರಾಜಾಜಿನಗರ 1ನೇ ಬ್ಲಾಕ್, 12ನೇ ಮೈನ್ ನವರಂಗ್ ಥಿಯೇಟರ್ ಮುಂಭಾಗ, ನಳಪಾಕ ಹೋಟೆಲ್, ಬೆಂಗಳೂರು -560 010 ರಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಭಾರತ ಮೂಲದ ಬ್ರಿಟಿಷ್ ಕೈಗಾರಿಕೋದ್ಯಮಿ ಲಾರ್ಡ್ ಸ್ವರಾಜ್ ಪಾಲ್ ಗುರುವಾರ ಸಂಜೆ ಲಂಡನ್ನಲ್ಲಿ ನಿಧನರಾದರು. ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಲ್ ಅವರಿಗೆ 94 ವರ್ಷ ವಯಸ್ಸಾಗಿತ್ತು. ಪಾಲ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಪಾಲ್ ಬ್ರಿಟನ್ನ ಕ್ಯಾಪರೊ ಗ್ರೂಪ್ ಆಫ್ ಇಂಡಸ್ಟ್ರೀಸ್ನ ಸ್ಥಾಪಕರಾಗಿದ್ದರು. ಪಾಲ್ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಾಮಾಜಿಕ ಮಾಧ್ಯಮದಲ್ಲಿ, ‘ಸ್ವರಾಜ್ ಪಾಲ್ ಅವರ ನಿಧನದಿಂದ ನನಗೆ ತುಂಬಾ ದುಃಖವಾಗಿದೆ. ಬ್ರಿಟನ್ನಲ್ಲಿ ಕೈಗಾರಿಕೆ, ಲೋಕೋಪಕಾರ ಮತ್ತು ಸಾರ್ವಜನಿಕ ಸೇವೆಗೆ ಅವರ ಕೊಡುಗೆ ಮತ್ತು ಭಾರತದೊಂದಿಗಿನ ನಿಕಟ ಸಂಬಂಧಗಳಿಗೆ ಅವರ ಅಚಲ ಬೆಂಬಲ ಯಾವಾಗಲೂ ಸ್ಮರಣೀಯವಾಗಿರುತ್ತದೆ. ನಮ್ಮ ಅನೇಕ ಸಭೆಗಳನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ.’ ಪ್ರಧಾನಿ ಮೋದಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಜಲಂಧರ್ನಲ್ಲಿ ಜನಿಸಿದ ಪಾಲ್ಗೆ ಶತಕೋಟಿ ಮೌಲ್ಯದ ಆಸ್ತಿ…
ಬೆಂಗಳೂರು : ರೋಗವು ಮುಂದುವರಿಯುವ ಮೊದಲು ಸರಿಯಾದ ಸಮಯದಲ್ಲಿ ಔಷಧಿ ತೆಗೆದುಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ, ನಿಮ್ಮ ಆರೋಗ್ಯ ಮತ್ತಷ್ಟು ಹಾಳಾಗಬಹುದು ಅಥವಾ ಅದು ನಿಮ್ಮ ಜೀವಕ್ಕೆ ಅಪಾಯಕಾರಿಯಾಗಬಹುದು. ಮನೆಯಲ್ಲಿ ಮಕ್ಕಳು ಅಥವಾ ವೃದ್ಧರು ಇದ್ದರೂ, ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆ ಆಗಾಗ್ಗೆ ಉದ್ಭವಿಸುತ್ತದೆ. ಯಾವಾಗ ಅಥವಾ ಯಾವ ತುರ್ತು ಪರಿಸ್ಥಿತಿ ಉದ್ಭವಿಸುತ್ತದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ. ನಿಮ್ಮ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ ಹಠಾತ್ ತುರ್ತು ಪರಿಸ್ಥಿತಿ ಉದ್ಭವಿಸಬಹುದು. ಅಂತಹ ಸಂದರ್ಭಗಳಲ್ಲಿ, ವೈದ್ಯರನ್ನು ಸಂಪರ್ಕಿಸಲು ಸಾಕಷ್ಟು ಸಮಯವಿರುವುದಿಲ್ಲ. ಆದ್ದರಿಂದ, ಪ್ರತಿಯೊಬ್ಬರೂ ಈ 4 ಔಷಧಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು. 1. ನೋವು ನಿವಾರಕಗಳು (ಪ್ಯಾರಸಿಟಮಾಲ್ ಅಥವಾ ಆಸ್ಪಿರಿನ್): ಕೆಲವೊಮ್ಮೆ, ಊಟದ ನಂತರ ಅನೇಕ ಜನರು ಇದ್ದಕ್ಕಿದ್ದಂತೆ ಅಸ್ವಸ್ಥರಾಗುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಕೆಲವೊಮ್ಮೆ ಹೊರಗೆ ಹೋಗುವುದು ಸ್ವಲ್ಪ ಕಷ್ಟವಾಗುತ್ತದೆ. ಆ ಸಮಯದಲ್ಲಿ ಪ್ಯಾರಸಿಟಮಾಲ್ ಅಥವಾ ಆಸ್ಪಿರಿನ್ ತುಂಬಾ ಉಪಯುಕ್ತವಾಗಬಹುದು. ಇದು ನೋವನ್ನು ತಡೆಯಲು ಮತ್ತು ಅಧಿಕ ಜ್ವರವನ್ನು ಕಡಿಮೆ ಮಾಡಲು ಸಹಾಯ…
ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್ಟೆಪೆಕ್ಟರ್ ನೀಡಿದ ದೂರಿನ ಮೇರೆಗೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರು : ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗುರುವಾರ ಆರ್ ಎಸ್ ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಆನ್ಲೈನ್ನಲ್ಲಿ ವ್ಯಾಪಕವಾಗಿ ವೀಡಿಯೋ ವೈರಲ್ ಆಗಿದೆ.ಇತ್ತೀಚೆಗೆ ಆರ್ಸಿಬಿ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದ ಕುರಿತಾದ ಚರ್ಚೆಗಳ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿತು. ಬಿಜೆಪಿ ಶಾಸಕ ಆರ್. ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ ಪ್ರಶ್ನಿಸಿದ್ದಾರೆ ಇದಕ್ಕೆ ಪ್ರತಿಕ್ರಿಯೆಯಾಗಿ, ಉಪಮುಖ್ಯಮಂತ್ರಿ ಅವರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಗೀತೆಯನ್ನು ಪಠಿಸುವ ಮೊದಲು ವಿರೋಧ ಪಕ್ಷವು ಹಳೆಯ ವಾದಗಳನ್ನು ಪುನರಾವರ್ತಿಸುತ್ತಿದೆ ಎಂದು ಆರೋಪಿಸಿದರು. ಈ ಘಟನೆಯ 73 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಬಿಜೆಪಿ ಸದಸ್ಯರ ಸ್ಪಷ್ಟ ಪ್ರತಿಕ್ರಿಯೆಗಳ ನಡುವೆ ಶಿವಕುಮಾರ್ ಅವರ ವಾಚನವನ್ನು ತೋರಿಸುತ್ತದೆ. https://twitter.com/PTI_News/status/1958736166968336455?ref_src=twsrc%5Etfw%7Ctwcamp%5Etweetembed%7Ctwterm%5E1958736166968336455%7Ctwgr%5E91bd9e5524ee2ac014ee29fa086294692ecc8e46%7Ctwcon%5Es1_c10&ref_url=https%3A%2F%2Fkannadadunia.com%2Fdcm-d-k-shivakumar-attracts-attention-by-singing-rss-song-in-the-assembly-video-goes-viral-watch-video%2F ಶಿವಕುಮಾರ್ ಅವರ ಆರ್ಎಸ್ಎಸ್ ಬಗ್ಗೆ ಹಿಂದಿನ…













