Author: kannadanewsnow57

ಮಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದಿದೆ. ಇನ್ ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡ ಓರ್ವ ಆರೋಪಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಒಬ್ಬನಿಂದ ಅತ್ಯಾಚಾರ ನಡೆಸಲಾಗಿದೆ. ಅತ್ಯಾಚಾರದ ದೃಶ್ಯವನ್ನು ಮತ್ತೊಬ್ಬ ಆರೋಪಿ ವಿಡಿಯೋ ಮಾಡಿದ್ದ. ನಂತರ ಬಾಲಕಿಯನ್ನು ಮತ್ತೋರ್ವ ಆರೋಪಿಯೂ ಅತ್ಯಾಚಾರವೆಸಗಿದ್ದಾನೆ. ಬಳಿಕ ಬಾಲಕಿ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋ ಸ್ನೇಹಿತರಿಗೆ ದುಷ್ಕರ್ಮಿಗಳು ಶೇರ್ ಮಾಡಿದ್ದಾರೆ. ಅತ್ಯಾಚಾರದ ವಿಡಿಯೋವನ್ನು ಆರೋಪಿಗಳ ಸ್ನೇಹಿತರು ವೈರಲ್ ಮಾಡಿದ್ದಾರೆ. ಗ್ಯಾಂಗ್ ರೇಪ್ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ ನಲ್ಲಿ ಈ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್ ಠಾಣೆಗೆ ಸಂತ್ರಸ್ತ ಬಾಲಕಿ ದೂರು ನೀಡಿದ್ದಾಳೆ.

Read More

ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ನೊಂದಣಿಯಾಗಿ 18 ವರ್ಷ ಪೂರ್ಣಗೊಂಡ ಫಲಾನುಭವಿಗಳು 2024-25ನೇ ಸಾಲಿನ ಪರಿಪಕ್ವ ಮೊತ್ತ ಪಡೆಯಲು ಅರ್ಹರಾಗಿರುತ್ತಾರೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅರ್ಹ ಫಲಾನುಭವಿಗಳು ಎಲ್.ಐ.ಸಿ ಭಾಗ್ಯಲಕ್ಷ್ಮೀ ಫಾರಂ ಭರ್ತಿ ಮಾಡಿ, ಫಾರಂನೊಂದಿಗೆ, ಮೂಲ ಬಾಂಡ್, ಮಗುವಿನ ಜನನ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಮಾಕ್ರ್ಸ್ ಕಾರ್ಡ, ಶಾಲಾ ಧೃಡೀಕರಣ, ಮಗುವಿನ ಬ್ಯಾಂಕ್ ಖಾತೆ, ಮಗು,ತಂದೆ ಮತ್ತು ತಾಯಿ ಆಧಾರ್, ಅಪರೇಷನ್ ಕಾರ್ಡ್, ಚುಚ್ಚುಮದ್ದು ಕಾರ್ಡ್, ಅಂಗನವಾಡಿ ಕಾರ್ಯಕರ್ತೆ ಹಾಗೂ ಪೊಷಕರ ದೃಢೀಕರಣ ಲಗತ್ತಿಸಿ ಚಿತ್ರದುರ್ಗ ನಗರದ ಒನಕೇ ಓಬವ್ವ ಕ್ರೀಡಾಂಗಣದ ಹತ್ತಿರದ ಬಾಲ ಭವನ ಆವರಣದ ಕಚೇರಿಯಲ್ಲಿ ನೊಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

Read More

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗೆ 3ನೇ ಬ್ಯಾಚ್ ಪ್ರಾರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳು (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆ ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1ರ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ರ ರೂ.1 ಲಕ್ಷ ಇರಬೇಕು. ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತಿರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕ ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಭ್ಯರ್ಥಿಯ ವಯೋಮಿತಿ 17 ರಿಂದ 20 ವರ್ಷದೊಳಗಿರಬೇಕು. ಸೆಪ್ಟಂಬರ್-01 2025ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು…

Read More

ಅಲಿಗಢ್ : ವರದಕ್ಷಿಣೆ ಕಿರುಕುಳದಿಂದ ಮಹಿಳೆಯೊಬ್ಬರು ಮನೆಯ ಮೇಲಿಂದ ಜಿಗಿದಿದ್ದು, ಈ ವೇಳೆ ಮಹಿಳೆ ಮೇಲೆ ಅತ್ತೆ ಮಾವ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ಎರಡು ಅಂತಸ್ತಿನ ಮನೆಯ ಮೇಲ್ಛಾವಣಿಯಿಂದ ಹಾರಿ ಬಿದ್ದು ಗಾಯಗೊಂಡ ಮಹಿಳೆಯನ್ನು ಆಕೆಯ ಅತ್ತೆ-ಮಾವ ಥಳಿಸುತ್ತಿರುವುದನ್ನು ತೋರಿಸುವ ಆತಂಕಕಾರಿ ವಿಡಿಯೋವೊಂದು ವೈರಲ್ ಆಗಿದೆ. ವರದಿಗಳ ಪ್ರಕಾರ, ಅಲಿಗಢ ಜಿಲ್ಲೆಯ ಇಗ್ಲಾಸ್ ತೆಹಸಿಲ್ ವ್ಯಾಪ್ತಿಯ ದಮ್ಕೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ, ಒಬ್ಬ ಮಹಿಳೆ ಛಾವಣಿಯ ಅಂಚಿನಲ್ಲಿ ನಿಂತಿರುವುದನ್ನು ತೋರಿಸಲಾಗಿದೆ, ಆಕೆಯ ಅತ್ತೆ-ಮಾವಂದಿರು ಪದೇ ಪದೇ ಅವಳನ್ನು ಕೆಳಗೆ ಹಾರುವಂತೆ ಒತ್ತಾಯಿಸುತ್ತಿದ್ದಾರೆ. ಅರ್ಚನಾ ಎಂದು ಗುರುತಿಸಲಾದ ಮಹಿಳೆ, ವರದಕ್ಷಿಣೆಗಾಗಿ ತನ್ನ ಅತ್ತೆ-ಮಾವಂದಿರಿಂದ ಕಿರುಕುಳ ಅನುಭವಿಸುತ್ತಿದ್ದಳು ಎಂದು ವರದಿಯಾಗಿದೆ, ಅಪ್ರಾಪ್ತ ಮಕ್ಕಳ ಸಮ್ಮುಖದಲ್ಲಿ ಛಾವಣಿಯಿಂದ ಮಹಿಳೆ ಹಾರಿದಳು. ಮಹಿಳೆ ನೆಲಕ್ಕೆ ಬಿದ್ದ…

Read More

ಶಿವಮೊಗ್ಗ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 18, 500 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13000ಶಿಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೇ ಶೀಘ್ರದಲ್ಲಿ 18500 ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸರ್ವರಲ್ಲೂ ಸಮಾನತೆ ಕಾಣುವ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಜಾತಿಗಣತಿಯನ್ನು ಅಕ್ಟೋಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಗೆ ಅಡಚಣೆಯಾಗದಂತೆ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ಸಂಖ್ಯೆಯನ್ನು 500 ರಿಂದ 800ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯ ಶಾಲೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ.…

Read More

ಬೆಂಗಳೂರು : : ಭಾರತದ 3ನೇ ಅತಿ ದೊಡ್ಡ ಗ್ರಾಮೀಣ ಬ್ಯಾಂಕ್ ಆದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಕಂಡ 1425 ಹುದ್ದೆಗಳಿಗೆ ಅರ್ಹ ಪದವೀಧರರಿಂದ ಆನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ: ಹುದ್ದೆಗಳ ಸಂಖ್ಯೆ ಆಫೀಸ್ ಅಸಿಸ್ಟಂಟ್ (ಕ್ಲರ್ಕ್ )- 800 ಸಹಾಯಕ ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 1)- 500 ವ್ಯವಸ್ಥಾಪಕ (ಆಫೀಸರ್ ಸ್ಕೆಲ್ – 2)- 125 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.09.2025 ನೇಮಕಾತಿ ಪ್ರಕ್ರಿಯೆ ಹಾಗೂ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು www.ibps.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ನನ್ನ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ನಡೆದ ಸಭೆಯ ಮುಖ್ಯಾಂಶಗಳು: * ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ. * ಈ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಈ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ…

Read More

ಬೆಂಗಳೂರು : ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಹುತೇಕ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆಯೂ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಮಲ್ಲೇಶ್ವರಂ, ಮೆಜೆಸ್ಟಿಕ್, ರಾಜಾಜಿನಗರ, ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಾರ್ಪೋರೇಷನ್ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್. ವೃತ್ತ, ಕಾರ್ಪೋರೇಷನ್ ವೃತ್ತ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಹಡ್ಸನ್ ವೃತ್ತ, ಬಳ್ಳಾರಿ ರಸ್ತೆ, ಶಿವಾನಂದ ವೃತ್ತ, ಶಾಂತಿನಗರ, ಗುಟ್ಟಹಳ್ಳಿ, ಕಬ್ಬನ್ ಪಾರ್ಕ್, ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಾರೀ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು, ಪಾದಚಾರಿಗಳ ಪರದಾಟ ನಡೆಸಿದ್ದಾರೆ.

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆಯಿಂದ ಮತ್ತೆ ಭಾರೀ ಮಳೆಯಾಗುತ್ತಿದ್ದು, ಹಲವಡೆ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಇಂದು ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು ಮಲ್ಲೇಶ್ವರಂ, ಮೆಜೆಸ್ಟಿಕ್, ರಾಜಾಜಿನಗರ, ಶಾಂತಿನಗರ, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಾರ್ಪೋರೇಷನ್, ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದೆ. ವಿಧಾನಸೌಧ, ಕೆ.ಆರ್. ವೃತ್ತ, ಕಾರ್ಪೋರೇಷನ್ ವೃತ್ತ, ಟೌನ್ ಹಾಲ್, ಕೆ.ಆರ್. ಮಾರ್ಕೆಟ್, ಹಡ್ಸನ್ ವೃತ್ತ, ಬಳ್ಳಾರಿ ರಸ್ತೆ, ಶಿವಾನಂದ ವೃತ್ತ, ಶಾಂತಿನಗರ, ಗುಟ್ಟಹಳ್ಳಿ, ಕಬ್ಬನ್ ಪಾರ್ಕ್, ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಾರೀ ಮಳೆಯಾಗಿದೆ. ಮಳೆಯಿಂದ ವಾಹನ ಸವಾರರು, ಪಾದಚಾರಿಗಳ ಪರದಾಟ ನಡೆಸಿದ್ದಾರೆ.

Read More

2025-26 ನೇ ಸಾಲಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ ಜೋಡಣೆ ಮಾಡಿಸಬೇಕು. ನಂತರ ವಿದ್ಯಾರ್ಥಿಯು ಅರ್ಜಿ ಸಲ್ಲಿಸಬೇಕು. ಆಧಾರ್ ಸೀಡಿಂಗ್ ಆಗಿರುವ ಕುರಿತು www.npci.org.in ಪೋರ್ಟಲ್ ನಲ್ಲಿ ಖಚಿತಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440194 ಗೆ ಸಂಪರ್ಕಿಸಬಹುದು ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More