Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಒಳ ಮೀಸಲಾತಿ ನಿಗದಿ ನಂತರ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಬಿಜೆಪಿಯ ಕೆ.ವಿವೇಕಾನಂದ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಳಮೀಸಲಾತಿ ನಿಗದಿಯಾಗದ ಕಾರಣ ಯಾವುದೇ ಇಲಾಖೆಗಳಲ್ಲೂ ನೇಮಕಾತಿ ಮಾಡುತ್ತಿಲ್ಲ, ಶಿಕ್ಷಣ ಇಲಾಖೆ ಯಲ್ಲಿ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಸರ್ಕಾರ ಅನುಮತಿ ನೀಡಿದ ನಂತರ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಶಾಲಾ ದಾಖ ಲಾತಿ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶೈಕ್ಷಣಿಕ ಹಿಂದು ಳಿದ ತಾಲೂಕುಗಳಲ್ಲಿ 6-10ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಕೇಂದ್ರೀಯ ವಿದ್ಯಾಲಯ ಮಾದರಿ ಯಲ್ಲಿ ಆದರ್ಶ ಶಾಲೆ ಆರಂಭಿಸಲಾಗಿದೆ. 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯ ಮದ ಜೊತೆ 8,538 ಆಂಗ್ಲ ಮಾಧ್ಯಮದ ತರಗತಿ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಸೋಮವಾರ ವಿಧಾನಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದ್ದು, ಸದನ ಅಂಗೀಕಾರ ಮಾಡಿತು. ವಿಧೇಯಕವನ್ನು ಮಂಡಿಸಿದ ಬಳಿಕ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ತಡೆಗಟ್ಟಲು ಇದುವರೆಗೂ ಸಾಧ್ಯವಾಗಿಲ್ಲ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ ತಿದ್ದುಪಡಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು. 2024-25ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ 1828 ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 1260 ಪ್ರಕರಣಗಳನ್ನು ತಡೆಯಲಾಗಿದ್ದು, ಇಂಥ ಕಠಿಣ ಕಾನೂನಿನ ಮಧ್ಯೆ 369 ಬಾಲ್ಯವಿವಾಹ ಪ್ರಕರಣಗಳು ನಡೆದಿವೆ. ಬಾಲ್ಯವಿವಾಹ ನಡೆದ ಪ್ರಕರಣಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.. ಹೊಸ ಕಾಯ್ದೆ ನಿಯಮದ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ…
ಬೆಂಗಳೂರು: ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸುವುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಪ್ರತಾಪ ಸಿಂಹ ನಾಯಕ್, ಕಾಂಗ್ರೆಸ್ ನ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಧಿವೇಶನ ಮುಗಿದ ನಂತರ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಅನರ್ಹರನ್ನು ಪತ್ತೆ ಮಾಡಿ ಎಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಲಾಗುವುದು, ಅನರ್ಹ ಪಡಿತರ ಚೀಟಿ ರದ್ದತಿ ನಂತರ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ತಿಳಿಸಿದರು. ಈ ಹಿಂದೆ 15 ಲಕ್ಷ ಅನರ್ಹ ಪಡಿತರ ಚೀಟಿ ರದ್ದು ಮಾಡಲು ಮುಂದಾದಾಗ ಗೊಂದಲ ಉಂಟಾಗಿದ್ದರಿಂದ ಪಡಿತರ ಚೀಟಿ ರದ್ದು ಪ್ರಕ್ರಿಯೆ ನಿಲ್ಲಿಸಬೇಕಾಯಿತು ಎಂದು. ಆದರೆ ಎಲ್ಲ ಜನಪ್ರತಿ ನಿಧಿಗಳ ಸಹಕಾರದಿಂದ ಅನರ್ಹ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದರು. ಎಪಿಎಲ್ ಕಾರ್ಡ್ ನೀಡಿಕೆ ಸಹ ನಿಲ್ಲಿಸಲಾಗಿದೆ. ಸುಮಾರು ಒಂದು ಲಕ್ಷ ಪಡಿತರ ಚೀಟಿ ದಾರರು ಪಡಿತರ…
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಆಗಸ್ಟ್ 19 ರ ಇಂದು ಮಹತ್ವದ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 19-08-2025ರ ಮಂಗಳವಾರ ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣ ವಾಗಿ ರುವ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ವಿಚಾರ ಮಂಗಳವಾರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದ್ದು, ನ್ಯಾ.ನಾಗಮೋಹನ್‌ದಾಸ್ ಆಯೋಗದ ವರದಿಯಲ್ಲಿನ ಮೀಸಲಾತಿ ವರ್ಗೀಕರಣದ ಕುರಿತು ಅಪಸ್ವರ ಕೇಳಿ ಬಂದಿರುವ ಹಿನ್ನೆಲೆ ಯಲ್ಲಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆ ಕುತೂಹಲ ಉಂಟಾಗಿದೆ. ನಿವೃತ್ತ ನ್ಯಾ.ನಾಗಮೋಹನ್‌ದಾಸ್ ಅವರ ಆಯೋಗವು ತನ್ನ ವರದಿಯಲ್ಲಿ 101 ಪರಿಶಿಷ್ಟ ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಣ ಮಾಡಿ ಶೇ.17 ರಷ್ಟು ಮೀಸಲಾತಿ ಹಂಚಿಕೆ ಮಾಡಿದೆ.
ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ಮಂಗಳವಾರ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ, ಭಟ್ಕಳ, ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಬೆಳಾಗವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ತಾಲ್ಲೂಕಿನ…
ಆಟೋ ಚಾಲಕರಿಗೆ ಚಾಲನಾ ಪರವಾನಗಿ, ನವೀಕರಣ, ಫಿಟ್ ನೆಸ್ ಸರ್ಟಿಫೆಕೇಟ್, ಪರ್ಮಿಟ್, ಆಟೋ ವರ್ಗಾವಣೆ ಈ ಸೌಲಭ್ಯಗಳಿಗಾಗಿ ಪ್ರತ್ಯೇಕ ಸೇವಾ ಕೇಂದ್ರ ತೆರೆಯುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಟೋ ಚಾಲಕರ ಕುಂದು ಕೊರತೆ ಸಭೆ ನಡೆಸಿ ಮಾತನಾಡಿದ ಅವರು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಆಟೋ ನಿಲ್ದಾಣಕ್ಕೆ ನಿಗದಿತ ಸ್ಥಳಗಳನ್ನು ಗುರುತಿಸುವಂತೆ ಸೂಚಿಸಿದರು. ಆಟೋ ಚಾಲಕರಿಗೆ ಎಬಿಆರ್ಕೆ ಕಾರ್ಡ್, ಇ-ಶ್ರಮ್ ಕಾರ್ಡ್, ಪಿಎಂಜೆಜೆಎಂ, ಎಪಿವೈ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆಟೋ ಚಾಲಕರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸಬೇಕು. ಮಾದಕ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು ಎಂದ ಅವರು ಅವರ ಕುಟುಂಬದ ಭವಿಷ್ಯ ಉತ್ತಮವಾಗಬೇಕು ಎಂದರು. ನಗರವ್ಯಾಪ್ತಿಯಲ್ಲಿ ವಾಹನಗಳನ್ನು ಕ್ರಮಬದ್ಧವಾಗಿ ನಿಲುಗಡೆ ಮಾಡದೆ ಅಡ್ಡದಿಡ್ಡಿಯಾಗಿ ನಿಲ್ಲಿಸುತ್ತಾರೆ, ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಿಸ್ತು ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್…
2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 291340 ಹೆ. ಕ್ಷೇತ್ರದಲ್ಲಿ ಬಿತ್ತನೆಯಾಗಿರುತ್ತದೆ. ಜಿಲ್ಲೆಯಾದ್ಯಂತ ಪೀಡೆ ಸರ್ವೇಕ್ಷಣಾ ಸಮೀಕ್ಷೆ ಕೈಗೊಂಡಿದ್ದು, ಮುಂಗಾರು ಮುಖ್ಯ ಬೆಳೆಗಳಾದ ಹೆಸರು, ಗೋವಿನಜೋಳ, ಶೇಂಗಾ, ಸೋಯಾಬಿನ್ ಇತ್ಯಾದಿಗಳಲ್ಲಿ ಕೀಟ ಅಥವಾ ರೋಗ ಬಾಧೆ ಕಂಡುಬಂದಿದ್ದು, ಈ ಬೆಳೆಗಳ ಸಂರಕ್ಷಣೆ ಅಗತ್ಯವಿರುವುದರಿಂದ ರೈತ ಬಾಂಧವರು ಬೆಳೆ ನಿರ್ವಹಣಾ ಕ್ರಮಗಳನ್ನು ಅನುಸರಿಸಲು ತಿಳಿಸಿದೆ. ಸೋಯಾ ಮತ್ತು ಅವರೆ ಸೋಯಾ ಅವರೆ ಬೆಳೆಯು 60 ರಿಂದ 70 ದಿವಸದ ಬೆಳೆಯಿದ್ದು ಸ್ಪೊಡಾಪ್ಟರಾ ಮತ್ತು ಹೆಲಿಕೋವರ್ಪಾ ಕೀಟಗಳ ಬಾಧೆಯು ಹೆಚ್ಚಾಗಿದ್ದು, ಎಲೆಗಳನ್ನು ತಿಂದು ಹಾನಿ ಮಾಡುವುದಲ್ಲದೆ ಎಳೆ ಕಾಯಿಗಳನ್ನು ಹಾನಿ ಮಾಡುತ್ತಿದೆ. ಕಾರಣ ಕೂಡಲೇ ನಿರ್ವಹನಾ ಕ್ರಮಗಳನ್ನು ಅನುಸರಿಸಬೇಕು. ನಿರ್ವಹಣೆ – ಎಲೆ ತಿನ್ನುವ ಕೀಡೆಗಳ ಹತೋಟಿಗೆ ಕ್ವಿನಾಲ್ಫಾಸ್ 25 ಇಸಿ ಅಥವಾ 0.5 ಮಿ.ಲೀ. ಲ್ಯಾಂಬ್ಡಾಸೈಲೋಥ್ರಿನ್ 5 ಇ.ಸಿ ಅಥವಾ 0.3 ಗ್ರಾಂ ಇಮಾಮೆಕ್ಟಿನ್ ಬೆಂಝೊಯೆಟ್ 5 ಎಸ್.ಜಿ ಅಥವಾ 0.5 ಮಿ.ಲೀ. ಫ್ಲೂಬೇಂಡಿಮೈಡ್ 20% ಡಬ್ಲೂಜಿ ಅಥವಾ…
ಬೆಂಗಳೂರು : ರಾಜ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಣ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಇವರು 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-110ರಲ್ಲಿ ಘೋಷಿಸಿರುವಂತೆ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿ, ಉನ್ನತೀಕರಿಸಲು ಅರ್ಹವಿರುವ ಶಾಲೆಗಳ ಬಗ್ಗೆ ವರದಿ ಪಡೆದು ಉನ್ನತೀಕರಿಸಲು ಉದ್ದೇಶಿಸಿರುವ ಶಾಲೆಗಳಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಷ್ಟು ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಬೇಕೆಂಬ ಬಗ್ಗೆ ಸೂಕ್ತ ನಿರ್ಣಯ ಕೈಗೊಂಡು ಅರ್ಹ ಶಾಲೆಗಳ ಪಟ್ಟಿಯನ್ನು ತಯಾರಿಸಿ (KPS ಶಾಲೆಗಳ ಪಟ್ಟಿಯಲ್ಲಿರುವ ಶಾಲೆಗಳನ್ನು ಹೊರತುಪಡಿಸಿ) ಸಲ್ಲಿಸುವಂತೆ ಹಾಗೂ ಮೂಲಭೂತ ಸೌಲಭ್ಯಗಳ ವಿವರ, 8 ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವಿವರ, 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಉನ್ನತೀಕರಿಸುವ ಶಾಲೆಗಳಿಗೆ ಅವಶ್ಯವಿರುವ ಆವರ್ತಕ ಹಾಗೂ ಅನಾವರ್ತಕ ವೆಚ್ಚಗಳ ವಿವರ ಮತ್ತು…
ಪ್ರತಿಯೊಬ್ಬ ಅರ್ಹ ಮಗುವಿಗೂ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಮಗು ಜನಿಸಿದ 24 ಗಂಟೆಯೊಳಗೆ ಹಾಕಬೇಕಾದ ಕಡ್ಡಾಯ ಲಸಿಕೆಗಳು, ಮಗುವಿನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಹಾಕಬೇಕಾದ ಲಸಿಕೆಗಳಿಂದ ಜಿಲ್ಲೆಯ ಯಾವುದೇ ಮಗು ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಲಸಿಕೆಯಿಂದ ಮಗುವಿಗೆ ಆಗುವ ಆರೋಗ್ಯ ಪ್ರಯೋಜನೆಗಳು ಮತ್ತು ಲಸಿಕೆ ಹಾಕಿಸದೇ ಇರುವುದರಿಂದ ಆಗುವ ತೊಂದರೆಗಳು ಸೇರಿದಂತೆ ನಾನಾ ವಿಷಯಗಳ ಕುರಿತು ಎಲ್ಲಾ ತಾಯಂದಿರಿಗೆ ಗೊತ್ತಿರಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಮಗುವಿನ ಆರೋಗ್ಯದ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸಲು ಮತ್ತು…
ಬೆಂಗಳೂರು : ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರಲ್ಲಿ ಗಣತಿ ಕಾರ್ಯನಿರ್ವಹಿಸಿದ ಸಮೀಕ್ಷಾದಾರರಿಗೆ ಗೌರವಧನ ಪಾವತಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖ (1) ರ ಸರ್ಕಾರದ ಆದೇಶಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ಸಲ್ಲಿಸಲು ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿರುತ್ತದೆ. ಈ ಸಂಬಂಧ ಸದರಿ ಆಯೋಗವು ದಿನಾಂಕ:27-03-2025 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿರುತ್ತದೆ. ಸದರಿ ಮಧ್ಯಂತರ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಕುಟುಂಬಗಳ ಮನೆ-ಮನೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಲಾಗಿರುತ್ತದೆ. ಗೌರವಾನ್ವಿತ ಹೆಚ್. ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ…












